ಚಾರ್ಮಾಡಿ ಘಾಟ್‍ನಲ್ಲಿ ತಡೆಗೋಡೆಗೆ ಕಾರು ಡಿಕ್ಕಿ : ನಾಲ್ವರು ಅಪಾಯದಿಂದ ಪಾರು..!
ಚಿಕ್ಕಮಗಳೂರು: ಕಾರೊಂದು ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‍ನಲ್ಲಿ ನಡೆದಿದೆ.
ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಘಾಟಿ ರಸ್ತೆ ಪಕ್ಕದ ತಡೆಗೋಡೆಗೆ ಡಿಕ್ಕಿ ಹೊಡೆದು ಡಿವೈಡರ್ ಮೇಲೆ ಕೂತಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತಡೆಗೋಡೆ ಇಲ್ಲದಿದ್ದರೆ 300 ಅಡಿ ಪ್ರಪಾತಕ್ಕೆ ಬಿದ್ದು, ದೊಡ್ಡ ಅನಾಹುತವೇ ಸಂಭವಿಸುವ ಸಾಧ್ಯತೆ ಇತ್ತು. ಚಾಲಕನ ನಿಯಂತ್ರಣ ತಪ್ಪಿ ಕಾರು ಚಾರ್ಮಾಡಿ ಘಾಟ್ ರಸ್ತೆಯ ತಡೆಗೋಡೆಗೆ ಡಿಕ್ಕಿ ಹೊಡೆದು ನಿಂತಿದೆ.
ಡಿಕ್ಕಿಯ ರಭಸಕ್ಕೆ ತಡೆಗೋಡೆ ಮುರಿದು ಹೋಗಿದ್ದು, ಕಾರಿನ ಸ್ವಲ್ಪಭಾಗ ಕಾಡಿನ ಕಡೆ ಮುಖಮಾಡಿದೆ. ಒಂದೇ ಕುಟುಂಬದ ನಾಲ್ವರು ಉಡುಪಿಯಿಂದ ಬೆಂಗಳೂರಿಗೆ ಹೋಗುತ್ತಿದ್ದರು. ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಕಲಾಗಿದೆ.