Wednesday, February 1, 2023

ಭಟ್ಕಳದಲ್ಲಿ ಕಾರು ಸೇತುವೆಗೆ ಢಿಕ್ಕಿ : ಚಾಲಕ ಸ್ಥಳದಲ್ಲೇ ಸಾವು..!!

ಭಟ್ಕಳ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ದನವೊಂದು ಅಡ್ಡ ಬಂದ ಕಾರು ಸೇವೆಗೆ ಢಿಕ್ಕಿ ಹೊಡೆದು,ಕಾರು ಚಾಲಕ ಸಾವನ್ನಪ್ಪಿದ ಘಟನೆ ಸಂಭವಿಸಿದೆ.
ಮೃತನನ್ನು ಜೋಸೆಫ್ ಕುಟ್ಟಿ ಜೋರ್ಜ (46) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇವರ ಪುತ್ರಿ ಅನು ಮರಿಯಾ (16) ಗಾಯಗೊಂಡಿದ್ದು ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತ ಜೋಸೆಫ್ ಮಗಳ ನೀಟ್ ಪರೀಕ್ಷೆಗೋಸ್ಕರ ಮಂಗಳೂರಿಗೆ ಹೋಗಿ ವಾಪಾಸಾಗುತ್ತಿದ್ದಾಗ ಭಾರೀ ಮಳೆಯಿಂದ ಬೆಳಕೆ ಸೇತುವೆಯ ಹತ್ತಿರ ದನವೊಂದು ಅಡ್ಡಬಂದ ಪರಿಣಾಮ ತಪ್ಪಿಸಲು ಹೋಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿಯಾಗಿದೆ ಎನ್ನಲಾಗಿದೆ.
ಕಾರಿನ ಚಾಲಕನ ಎಡಗೆನ್ನೆಗೆ ತೀವ್ರವಾಗಿ ಪೆಟ್ಟು ತಗುಲಿದ್ದು ತಕ್ಷಣ ಗಾಯಾಳುಗಳನ್ನು ಸರಕಾರಿ ಆಸ್ಪತ್ರೆಗೆ ತರಲಾಯಿತಾದರೂ ಆಸ್ಪತ್ರೆಗೆ ಬರುವ ಮೊದಲೇ ಜೋಸೆಫ್ ನಿಧನರಾಗಿದ್ದಾರೆನ್ನಲಾಗಿದೆ.
ಸುದ್ದಿ ತಿಳಿದ ತಕ್ಷಣ ನೂರಾರು ಜನರು ಆಸ್ಪತ್ರೆಯ ಆವರಣಕ್ಕೆ ಆಗಮಿಸಿದ್ದು ಆಕ್ರಂದನ ಮುಗಿಲು ಮುಟ್ಟಿತ್ತು. ಮೃತರು ವಿದ್ಯುತ್ ಗುತ್ತಿಗೆದಾರರ ಕೆಲಸ ಮಾಡಿಕೊಂಡಿದ್ದು ಕಳೆದ ಹಲವಾರು ವರ್ಷಗಳಿಂದ ಭಟ್ಕಳದ ಜನರ ಪ್ರೀತಿ ಗಳಿಸಿದ್ದಲ್ಲದೇ ಎಲ್ಲರಲ್ಲಿಯೂ ಉತ್ತಮ ಬಾಂಧವ್ಯ ಹೊಂದಿ ಜನಾನುರಾಗಿಗಳಾಗಿದ್ದರು.

LEAVE A REPLY

Please enter your comment!
Please enter your name here

Hot Topics

ಉಳ್ಳಾಲ ಕೊಲ್ಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ : ಕೊಲೆ ಶಂಕೆ..!

ಉಳ್ಳಾಲ: ಯುವತಿ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿ ಬಾಡಿಗೆ ಮನೆಯಲ್ಲಿ ನಡೆದಿದ್ದು, ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದರೂ ಬಾಯಿಗೆ ಬಟ್ಟೆಯನ್ನು...

ಮಂಗಳೂರು ನ್ಯಾಯಾಲಯದ ಆವರಣದಲ್ಲೇ ವಕೀಲೆಗೆ ಕೊಲೆ ಬೆದರಿಕೆ ಹಾಕಿದ ಆರೋಪಿ..!

ಮಂಗಳೂರು: ಯುವ ವಕೀಲೆಯೊಬ್ಬರಿಗೆ ಮಂಗಳವಾರ ಅಪರಾಹ್ನ ನ್ಯಾಯಾಲಯದ ಆವರಣದಲ್ಲೇ ಅವಾಚ್ಯ ಶಬ್ದದಿಂದ ‌ಬೈದು ಕೊಲೆ ಬೆದರಿಕೆಯೊಡ್ಡಿದ ಘಟನೆ ಮಂಗಳೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದಿದೆ.ಜೀವ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಆರೋಪಿ ವಿರುದ್ದ ಬಂದರು...

ಶಿಷ್ಯೆಯ ಮೇಲೆ ಅತ್ಯಾಚಾರ ಪ್ರಕರಣ: ಆಸಾರಾಂ ಬಾಪುಗೆ 2ನೇ ಪ್ರಕರಣದಲ್ಲೂ ಜೀವಾವಧಿ ಶಿಕ್ಷೆ..

2013ರಲ್ಲಿ ತನ್ನ ಶಿಷ್ಯೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಆಸಾರಾಂ ಬಾಪು ಅವರಿಗೆ ಗುಜರಾತ್‌ನ ಗಾಂಧಿನಗರದ ನ್ಯಾಯಾಲಯ ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ.ಅಹಮದಾಬಾದ್:‌ 2013ರಲ್ಲಿ ತನ್ನ...