Connect with us

DAKSHINA KANNADA

ಮಂಗಳೂರು ಅಡ್ಯಾರ್ ಹೈವೇಯಲ್ಲಿ ಕಾರು ಡಿಕ್ಕಿ : ಸೆಲೂನ್ ಮಾಲೀಕ ಮೃತ್ಯು..!

Published

on

ಡಿಸೆಂಬರ್ 4 ರಂದು ಮಂಗಳೂರು ನಗರದ ಹೊರ ಭಾಗದ ಅಡ್ಯಾರಿನಲ್ಲಿ ನಡೆದ ಅಪಘಾತದಲ್ಲಿ ತೀವ್ರಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಅಡ್ಯಾರ್ ಬಾಳಿಕೆ ಮನೆ ನಿವಾಸಿ ಕೊರಗಪ್ಪ ಸಾಲ್ಯಾನ್ (65) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.

ಮಂಗಳೂರು :ಡಿಸೆಂಬರ್ 4 ರಂದು ಮಂಗಳೂರು ನಗರದ ಹೊರ ಭಾಗದ ಅಡ್ಯಾರಿನಲ್ಲಿ ನಡೆದ ಅಪಘಾತದಲ್ಲಿ ತೀವ್ರಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಅಡ್ಯಾರ್ ಬಾಳಿಕೆ ಮನೆ ನಿವಾಸಿ ಕೊರಗಪ್ಪ ಸಾಲ್ಯಾನ್ (65) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.

ಅಡ್ಯಾರ್ ಸಹ್ಯಾದ್ರಿ ಕಾಲೇಜು ಮುಂಭಾಗ ಡಿ. 4 ರಂದು ಸಂಜೆ ವೇಳೆ ಈ ದುರ್ಘಟನೆ ಸಂಭವಿಸಿತ್ತು.

ಅಡ್ಯಾರ್ ಗಾರ್ಡನ್ ಎದುರುಗಡೆಯ ಸಂತೋಷ್ ಹೇರ್ ಡ್ರೆಸ್ಸಸ್೯ ಎಂಬ ಸೆಲೂನಿನ ಮಾಲಕರಾಗಿದ್ದ ಇವರು ಸೈಕಲ್ ಮೂಲಕ ರಸ್ತೆ ದಾಟುವಾಗ ಬಿ.ಸಿ.ರೋಡ್ ಕಡೆಯಿಂದ ಅಮಿತ ವೇಗದಲ್ಲಿ ಬಂದ ಸ್ವಿಫ್ಟ್ ಕಾರು ಢಿಕ್ಕಿ ಹೊಡೆದಿದೆ.

ಢಿಕ್ಕಿಯ ರಭಸಕ್ಕೆ ದೂರಕ್ಕೆ ಎಸೆಯಲ್ಪಟ್ಟು, ತಲೆಗೆ ಗಂಭೀರ ರೀತಿಯಲ್ಲಿ ಗಾಯಗೊಂಡಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮೃತರು ಯುವ ವಯಸ್ಸಿನಲ್ಲಿ ಕಬ್ಬಡ್ಡಿ ಆಟಗಾರರೂ ಹಾಗೂ ತಾಲೀಮಿನಲ್ಲಿ ಸಕ್ರಿಯವಾಗಿ ತನ್ನನ್ನು ತಾನು ತೊಡಗಿಸಿಕೊಂಡಿದ್ದವರು. ಮೃತರು ಪತ್ನಿ ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ.

ಮಂಗಳೂರು ದಕ್ಷಿಣ ಸಂಚಾರಿ‌ ಪೊಲೀಸ್ ಠಾಣೆಯಲ್ಲಿ ಕಾರು ಚಾಲಕ ಬೆಳ್ತಂಗಡಿಯ ಮಹಮ್ಮದ್ ಆಶೀಕ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.

DAKSHINA KANNADA

ಜಾನುವಾರು ಸಾಗಾಟಗಾರರ ಕೊಲೆಗೆ ಸಂಚು ರೂಪಿಸುತ್ತಿದ್ದ ಇಬ್ಬರ ಬಂಧನ..!

Published

on

ಮಂಗಳೂರು: ಜಾನುವಾರು ಅಕ್ರಮ ಸಾಗಾಟದ ತಂಡವೊಂದರ ಸದಸ್ಯರ ಕೊಲೆಗೆ ಸಂಚು ರೂಪಿಸಿದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಮಂಗಳೂರು ನಗರ ಹೊರವಲಯದ ಅಡ್ಯಾರ್ ನಲ್ಲಿ ನಡೆದಿದೆ.

ಫರಂಗಿಪೇಟೆ ಸಮೀಪದ ಅಮೆಮಾರ್‌ನ ನಿವಾಸಿಗಳು ತಸ್ಲೀಮ್ ಯಾನೆ ಗರುಡ ತಸ್ಲೀಮ್ (34) ಮತ್ತು ಹೈದರಾಲಿ ಯಾನೆ ಹೈದು (26) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.

ಗುರುವಾರದಂದು ತಸ್ಲೀಮ್ ಮತ್ತು ಆತನ ಗುಂಪಿನ ಸದಸ್ಯರು ಇನ್ನೊಂದು ತಂಡದ ಕೊಲೆಗೆ ಸಂಚು ರೂಪಿಸಿ ತಲವಾರಿನೊಂದಿಗೆ ಹೊಂಚು ಹಾಕುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ ಕೊಲೆ ಸಂಚನ್ನು ವಿಫಲಗೊಳಿಸಿರುವುದಾಗಿ ಮಾಹಿತಿ ನೀಡಿದ್ದಾರೆ.

ಈ ಕೃತ್ಯದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ತಿಳಿಸಿದ್ದಾರೆ.

ಆರೋಪಿಗಳ ಪೈಕಿ ತಸ್ಲೀಮ್ ಈ ಹಿಂದೆ ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆಯತ್ನ ಹಾಗೂ ದರೋಡೆ ಪ್ರಕರಣ, ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣ, ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ, ಜಾನುವಾರು ಕಳ್ಳತನ ಪ್ರಕರಣ, ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣ ಗಳು, ರೈಲ್ವೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣ ಸಹಿತ 14 ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ.

ಈತನು 10 ದಿನಗಳ ಹಿಂದೆ ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಗೊಂಡಿದ್ದ.

ಇನ್ನೋರ್ವ ಆರೋಪಿ ಹೈದರಾಲಿಯು ಈ ಹಿಂದೆ ಮೂಡುಬಿದಿರೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆಯತ್ನ ಪ್ರಕರಣ, ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಜಾನುವಾರು ಕಳ್ಳತನ ಪ್ರಕರಣ ಹಾಗೂ ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ನಡೆದ ಜಾನುವಾರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

BANTWAL

ವಿಟ್ಲ: ವಿದ್ಯಾರ್ಥಿನಿಗೆ ಕಿರುಕುಳ-ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

Published

on

ಬಂಟ್ವಾಳ: ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ವಿಚಾರದಲ್ಲಿ ಪೆರುವಾಯಿ ಮೂಲದ ಯುವಕನ ವಿರುದ್ಧ ವಿಟ್ಲ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

ಕೇಪು ಗ್ರಾಮದ 9ನೇ ತರಗತಿ ವಿದ್ಯಾರ್ಥಿಯೊಬ್ಬಳನ್ನು ಯುವಕ ಕೆಲವು ದಿನಗಳಿಂದ ಹಿಂಬಾಲಿಸುತ್ತಿದ್ದು, ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡಿದ್ದಾನೆ. ಶಾಲೆ ಸಮೀಪ ಬಂದು ಬೈಕ್ ನಲ್ಲಿ ಕೂರುವಂತೆ ಹೇಳಿದ್ದಾನೆ.

ಈ ಎಲ್ಲಾ ವಿಚಾರವನ್ನು ಬೇರೆ ಕಡೆ ಹೇಳಬಾರದೆಂದು ಬೆದರಿಸುವ ಕಾರ್ಯ ಮಾಡಿದ್ದಾನೆ. ಇದರಿಂದ ಭಯಗೊಂಡ ಬಾಲಕಿ ಶಾಲೆಯ ಶಿಕ್ಷಕರಲ್ಲಿ ತಿಳಿಸಿದ್ದು, ಅವರು ಪೋಷಕರಿಗೆ ಮಾಹಿತಿ ನೀಡಿ, ನಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Continue Reading

DAKSHINA KANNADA

ಇಂದು ಕರ್ನಾಟಕ ಬಂದ್‌: ಕರಾವಳಿಗರಿಂದ ನೈತಿಕ ಬೆಂಬಲ-ಬಸ್‌, ಹೊಟೇಲ್‌, ಶಾಲೆಗಳು ಎಂದಿನಂತೆ

Published

on

ಮಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಹಲವು ಸಂಘಟನೆಗಳು ಕರೆ ನೀಡಿರುವ ಇಂದಿನ (ಶುಕ್ರವಾರ) ಕರ್ನಾಟಕ ಬಂದ್ ಗೆ ಕರಾವಳಿಯಲ್ಲಿ ನೈತಿಕ ಬೆಂಬಲ ವ್ಯಕ್ತವಾಗಿದೆ.

ಖಾಸಗಿ ಬಸ್ ಸಂಘಟನೆಯು ಕರ್ನಾಟಕ ಬಂದ್ ಗೆ ನೈತಿಕ ಬೆಂಬಲ ನೀಡಿದೆ. ಆದರೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳು ಎಂದಿನಂತೆ ಓಡಾಟ ನಡೆಸಲಿದೆ.

ಕಾವೇರಿ ವಿಚಾರವಾಗಿ ನಮ್ಮ ಸಹಾನುಭೂತಿಯಿದೆ. ಆದರೆ ಬಸ್ ಸಂಚಾರ ಬಂದ್ ಮಾಡುವುದರಿಂದ ವಿದ್ಯಾರ್ಥಿಗಳು, ಉದ್ಯೋಗಿಗಳು ಸೇರಿ ಸಾರ್ವಜನಿಕ ಜೀವನಕ್ಕೆ ಕಷ್ಟವಾಗುವ ಕಾರಣ ನಾವು ನೈತಿಕ ಬೆಂಬಲ ಸೂಚಿಸುತ್ತೇವೆ. ಬಸ್ ಓಡಾಟ ಎಂದಿನಂತೆ ಇರಲಿದೆ ಎಂದು ಖಾಸಗಿ ಬಸ್ ಒಕ್ಕೂಟ ತಿಳಿಸಿದೆ.

ಜೊತೆಗೆ ಕರಾವಳಿ ಹೋಟೆಲ್ ಉದ್ಯಮವು ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲ ಮಾತ್ರ ನೀಡಿದೆ. ಹೀಗಾಗಿ ಉಡುಪಿ- ಮಂಗಳೂರಿನಲ್ಲಿ ಹೋಟೆಲ್ ಗಳು ತೆರೆದಿರಲಿವೆ.

ಇಂದು ಕರ್ನಾಟಕ ಬಂದ್ ಇದ್ದರೂ, ಕರಾವಳಿ ಜಿಲ್ಲೆಗಳಲ್ಲಿ ಜನ ಜೀವನ ಎಂದಿನಂತೆ ಇರಲಿದೆ. ಜೊತೆಗೆ ಶಾಲಾ-ಕಾಲೇಜುಗಳು ಎಂದಿನಂತೆ ಕಾರ್ಯ ನಿರ್ವಹಿಸಲಿದೆ.

Continue Reading

LATEST NEWS

Trending