ಮಂಗಳೂರು: ಕೇರಳದಿಂದ ಮಂಗಳೂರಿಗೆ ಬರುತ್ತಿದ್ದ ಇನ್ನೋವಾ ಕಾರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಎಕ್ಕೂರು ಬಳಿ ನಿನ್ನೆ ತಡರಾತ್ರಿ ನಡೆದಿದೆ.
ನಿನ್ನೆ ಮಧ್ಯರಾತ್ರಿ 12.30ರ ಸುಮಾರಿಗೆ ಕೇರಳ ಕಡೆಯಿಂದ ಮಂಗಳೂರಿಗೆ ಬರುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ಎಕ್ಕೂರು ಬಳಿ ತಲುಪುತ್ತಿದ್ದಂತೆ ಇನ್ನೋವಾ ಕಾರು ಹೆದ್ದಾರಿ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಮೂವರು ವೈದ್ಯಕೀಯ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಘಟನೆಗೆ ವೇಗದ ಚಾಲನೆ ಕಾರಣ ಎಂದು ಸ್ಥಳೀಯರು ತಿಳಿಸಿದ್ದು, ದೂರು ದಾಖಲಾಗಿಲ್ಲ ಎಂದು ತಿಳಿದು ಬಂದಿದೆ. ಇನ್ನೋವಾ ಕಾರನ್ನು ಮಂಗಳೂರು ನಗರ ಪಶ್ಚಿಮ ಟ್ರಾಫಿಕ್ ಪೊಲೀಸರು ವಶಪಡಿಸಿಕೊಂಡಿದ್ದಾರೆ.