Sunday, November 27, 2022

ಉಳ್ಳಾಲದಲ್ಲಿ ಹೆದ್ದಾರಿ ಕಾಯುತ್ತಿದ್ದ ಹೈವೇ ಪೆಟ್ರೋಲ್ ಸಿಬಂದಿಗೆ ಕಾರು ಡಿಕ್ಕಿ : ಪೊಲೀಸ್ ಗಂಭೀರ..!

ಉಳ್ಳಾಲ : ಹೈವೇ ಪೆಟ್ರೊಲ್ ಸ್ವಾಡ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬಂದಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದ್ದು ಡಿವೈಡರ್ ಮೇಲೆ ಎಸೆಯಲ್ಪಟ್ಟ ಪೊಲೀಸ್ ಸಿಬ್ಬಂದಿ ಗಂಭೀರ ಗಾಯಗೊಂಡ ಘಟನೆ ಉಳ್ಳಾಲ ತೊಕ್ಕೊಟ್ಟು ಓವರ್ ಬ್ರಿಜ್ ಬಳಿ ಭಾನುವಾರ ಸಂಜೆ ನಡೆದಿದೆ.

ಪೊಲೀಸ್ ಸಿಬಂದಿ ತಲೆಗೆ ಗಂಭೀರಗಾಯಗಳಾಗಿದ್ದು ಮನಗರದ ಖಾಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಢಿಕ್ಕಿ ಹೊಡೆ ಕಾರು ಚಾಲಕ ಕಾರಿನೊಂದಿಗೆ ಪರಾರಿಯಾಗಿದ್ದಾನೆ.

ಗಾಯಗೊಂಡ ಸಿಬಂದಿಯನ್ನು ಲೋಕೇಶ್ ನಾಯ್ಕ್ ಎಂದು ಗುರುತ್ತಿಸಲಾಗಿದ್ದು ನಾಯ್ಕ್ ಮತ್ತು ಎಎಸ್ಐ ಮಂಜುಳಾ ಹೈವೇ ಪೆಟ್ರೋಲ್ ವಾಹನದಲ್ಲಿ ಗಸ್ತಿನಲ್ಲಿದ್ದ ಸಂದರ್ಭ ಈ ದುರ್ಘಟನೆ ನಡೆದಿದೆ.

ತೊಕ್ಕೊಟ್ಟಿನಿಂದ ಉಳ್ಳಾಲ ಕಡೆಗೆ ವೇಗವಾಗಿ ಹೋಗುತ್ತಿದ್ದ ಸ್ವಿಫ್ಟ್ ಕಾರನ್ನ ಲೋಕೇಶ್ ಅವರು ತಪಾಸಣೆಗಾಗಿ ತಡೆದು ನಿಲ್ಲಿಸು ಯತ್ನ ಮಾಡಿದಾಗ ಈ ದುರ್ಘಟನೆ ನಡೆದಿದೆ.

 

ಬದಿಗೆ ಬಂದಿದ್ದ ಕಾರು ಏಕಾಏಕಿ ಲೋಕೇಶ್ ನನ್ನು ಹೊಡೆದುರುಳಿಸಿ ಪರಾರಿಯಾಗಿದೆ.

ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡಸಿದ್ದು , ಪರಾರಿಯಾಗಿದ್ದ ಕಾರಿನ ಪತ್ತೆಯಾಗಿದೆ ಎಂದು ತಿಳಿದುಬಂದಿದೆ..

LEAVE A REPLY

Please enter your comment!
Please enter your name here

Hot Topics

ಇನ್ಮುಂದೆ ಬಾಡಿಗೆ ಮನೆ ಪಡೆಯಲು ಕ್ಲಿಯರೆನ್ಸ್‌ ಸರ್ಟಿಫಿಕೇಟ್‌ ಅಗತ್ಯ-ಮೈಸೂರು ನಗರ ಪೊಲೀಸ್ ಕಮಿಷನರ್ ಹೊಸ ಸುತ್ತೋಲೆ

ಮಂಗಳೂರು: ಮಂಗಳೂರಿನಲ್ಲಿ ಬಾಂಬ್‌ ಬ್ಲಾಸ್ಟ್ ಆಗಿರುವ ಘಟನೆ ಬೆನ್ನಲ್ಲೇ ಆರೋಪಿ ವಾಸವಾಗಿದ್ದ ಮೈಸೂರಿನ ಬಾಡಿಗೆ ಮನೆಯಲ್ಲಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈ ನಡುವೆ ಬಾಡಿಗೆ ಮನೆ ನೀಡುವ ಮಾಲಕರು ಯಾರೂ ಗುರುತು ಪರಿಚಯ...

ಉಡುಪಿ: ಹೊಟೇಲ್‌ನಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ….

ಉಡುಪಿ: ಹೊಟೇಲ್‌ವೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ ಸಂಭವಿಸಿದ್ದು, ಅಗ್ನಿಶಾಮಕದಳದ ಸಿಬ್ಬಂದಿ ಸಕಾಲಿಕ ಕಾರ್ಯಾಚರಣೆಯಿಂದ ಸಂಭಾವ್ಯ ಅವಘಡವೊಂದು ತಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.ಇಲ್ಲಿನ ಸಿಟಿ ಬಸ್ ನಿಲ್ದಾಣ ಸಮಿಪದಲ್ಲಿರುವ ಟಾಪ್ ಟೌನ್...

ವಿಶ್ವದಲ್ಲೇ ಬೃಹತ್ ಗಾತ್ರದ ಮೂತ್ರಕೋಶದ ಕಲ್ಲು ಹೊರತೆಗೆದ ಮಣಿಪಾಲ ವೈದ್ಯರು..!

ಉಡುಪಿ: ವ್ಯಕ್ತಿಯೋರ್ವರ 11.5 x 7.5 ಸೆಂಮೀ ಅಳತೆಯ 672 ಗ್ರಾಂ ತೂಕದ ಮೂತ್ರಕೋಶದ ಕಲ್ಲನ್ನು ಮಣಿಪಾಲದ ಕಸ್ತೂರಿ ಬಾ ಆಸ್ಪತ್ರೆಯಲ್ಲಿ ಶಸ್ತ್ರಕ್ರಿಯೆ ನಡೆಸಿ ಹೊರೆ ತೆಗೆದಿರುವ ಘಟನೆ ನಡೆದಿದೆ. ಇದು ವಿಶ್ವದಲ್ಲಿ ಇಲ್ಲಿಯವರೆಗೆ...