Monday, July 4, 2022

ಅಂಗಡಿ ಬಾಗಿಲಲ್ಲಿ ವಿರಮಿಸುತ್ತಿದ್ದವರ ಮೇಲೆ ಹರಿದ ಕಾರು : ಒರ್ವ ಸಾವು – ಇಬ್ಬರು ಗಂಭೀರ..!

ಕಾಸರಗೋಡು : ಕಾರೊಂದು‌ ನಿಯಂತ್ರಣ ತಪ್ಪಿ ಅಂಗಡಿ ಬಳಿ ಕುಳಿತುಕೊಂಡಿದ್ದವರ ಮೇಲೆ ಹರಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾಸರಗೋಡಿನ ಬೇಕಲ ಕೋಟಿಕುಳದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.

ಸಾವನ್ನಪ್ಪಿದ ಯುವಕ ವಿಷ್ಣು ಪ್ರಸಾದ್(20) ಎಂದು ತಿಳಿದು ಬಂದಿದೆ.

ಈ ಘಟನೆಯಲ್ಲಿ ನಿತಿನ್ ಮತ್ತು ಶ್ರೀಲಾಲ್ ಎಂಬವರು ಗಾಯಗೊಂಡಿದ್ದಾರೆ .ಈ ಮೂವರು ಯುವಕರು ಅಂಗಡಿ ಬಳಿ ವಿರಮಿಸಿಕೊಂಡಿದ್ದಾಗ ಅತೀ ವೇಗದಿಂದ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಯುವಕರ ಮೇಲೆ ಹರಿದ ಪರಿಣಾಮ ಈ ಘಟನೆ ನಡೆದಿದೆ.

ಗಾಯಗೊಂಡ ಯುವಕರನ್ನು ಆಸ್ಪತ್ರೆಗೆ ದಾಖಲಿಸಿ‌ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.

 

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಗೋಕರ್ಣನಾಥೇಶ್ವರ ಕಾಲೇಜಿನ NSS ಘಟಕದಿಂದ ರಕ್ತದಾನ

ಮಂಗಳೂರು: ಶ್ರೀ ಗೋಕರ್ಣನಾಥೇಶ್ವರ ಕಾಲೇಜು ಮಂಗಳೂರು ಇದರ ರಾಷ್ಟೀಯ ಸೇವಾ ಯೋಜನಾ ಘಟಕ ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಇದರ ಜಂಟಿ ಆಶ್ರಯದಲ್ಲಿ ರಕ್ತದಾನ ಶಿಬಿರವನ್ನು ಜುಲೈ 2 ರಂದು ಆಯೋಜಿಸಲಾಗಿತ್ತು.ಈ...

ಡಿಸಿಪಿ ಹರಿರಾಂ ಶಂಕರ್‌ಗೆ ಮಂಗಳೂರು ನಗರ ಪೊಲೀಸರ ಹೃದಯಸ್ಪರ್ಶಿ ಬೀಳ್ಕೊಡುಗೆ

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್‌ನಿಂದ ಹಾಸನ ಜಿಲ್ಲೆಗೆ ಎಸ್ಪಿಯಾಗಿ ವರ್ಗಾವಣೆಗೊಂಡ ಡಿಸಿಪಿ ಹರಿರಾಂ ಶಂಕರ್‌ ಅವರನ್ನು ಇಂದು ಮಂಗಳೂರು ನಗರ ಪೊಲೀಸರು ಬೀಳ್ಕೊಟ್ಟರು.ಸನ್ಮಾನ ಸ್ವೀಕರಿಸಿ ಮಾತನಾಡಿದ ಹರಿರಾಂ ಶಂಕರ್‌, ಮಂಗಳೂರಿನಲ್ಲಿ ವಿವಿಧ...

ಮಂಗಳೂರು: ದೋಣಿ ಮೇಲೆತ್ತುವಾಗ ನೇತ್ರಾವತಿ ನದಿಗೆ ಬಿದ್ದ ಓರ್ವ ನಾಪತ್ತೆ ಮತ್ತಿಬ್ಬರ ರಕ್ಷಣೆ

ಬಂಟ್ವಾಳ: ದೋಣಿ ಮೇಲೆತ್ತುವಾಗ ಪ್ರವಾಹದ ರಭಸಕ್ಕೆ ದೋಣಿ ಸಮೇತ ನದಿಗೆ ಬಿದ್ದು ಓರ್ವ ನಾಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ಅರ್ಕುಳ ಗ್ರಾಮದ ಶಶಿರಾಜ್ ಧಕ್ಕೆಯಲ್ಲಿ ನಿನ್ನೆ ಸಂಜೆ ನಡೆದಿದೆ.ನಾಪತ್ತೆಯಾದ ಯುವಕನನ್ನು ರಾಜು ಸಾಹ್...