ಉಡುಪಿ: ಕಾರ್ ಪಲ್ಟಿ ಹೊಡೆದು ನಜ್ಜುಗುಜ್ಜಾದ ಘಟನೆ ಉಡುಪಿಯ ಕಾಪುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಿನ್ನೆ ಬೆಳಿಗ್ಗೆ ನಡೆದಿದೆ.
ಉಡುಪಿಯಿಂದ ಉಚ್ಚಿಲದ ಕಡೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಪಲ್ಟಿ ಹೊಡೆದಿದ್ದು ಬಳಿಕ ಅದು ಹೊಟೇಲ್ ಬಳಿ ಪಾರ್ಕಿಂಗ್ ಏರಿಯಾದಲ್ಲಿ ನಿಲ್ಲಿಸಿದ್ದ ಎರಡು ಕಾರುಗಳಿಗೆ ಢಿಕ್ಕಿ ಹೊಡೆದಿದೆ.
ಅಪಘಾತದಿಂದಾಗಿ ಮೂರು ಕಾರುಗಳಿಗೆ ಹಾನಿಯುಂಟಾಗಿದ್ದು, ಕಾರಿನಲ್ಲಿದ್ದವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.