Wednesday, May 18, 2022

ಮಂಗಳೂರು: ರಸ್ತೆ ದಾಟುತ್ತಿದ್ದಾಗ ಕಾರು ಢಿಕ್ಕಿ- ಹೋಟೆಲ್‌ ಉದ್ಯಮಿ ಸಾವು

ಮಂಗಳೂರು: ರಸ್ತೆ ದಾಟುತ್ತಿದ್ದಾಗ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಹೊಟೇಲ್‌ ಉದ್ಯಮಿ ಸಾವನ್ನಪ್ಪಿರುವ ಘಟನೆ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿ 66 ಬಳಿ ಬುಧವಾರ ನಡೆದಿದೆ.

ಮೃತ ವ್ಯಕ್ತಿಯನ್ನು ಪುನರೂರಿನ ಭಾಸ್ಕರ್ ಶೆಟ್ಟಿ (64) ಎಂದು ಗುರುತಿಸಲಾಗಿದ್ದು, ಇವರು ಮುಂಬೈನ ಹೋಟೆಲ್‌ ಉದ್ಯಮಿಯಾಗಿದ್ದರು.


ಕೆಲ ದಿನಗಳ ಹಿಂದೆ ಊರಿಗೆ ಬಂದಿದ್ದ ಭಾಸ್ಕರ ಶೆಟ್ಟಿ ಬುಧವಾರ ರಾತ್ರಿ ಹಳೆಯಂಗಡಿ ಜಂಕ್ಷನ್‌ ಬಳಿ ಹೊಟೇಲ್‌ನಲ್ಲಿ ಊಟ ಮಾಡಿ ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ವೇಗವಾಗಿ ಬಂದು ಇವರಿಗೆ ಡಿಕ್ಕಿ ಹೊಡೆದಿದ್ದು,

ತಕ್ಷಣವೇ ಹಳೆಯಂಗಡಿ ಸಮೀಪದ ಮುಕ್ಕ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಈ ಘಟನೆ ಸಂಬಂಧಿಸಿ ಮಂಗಳೂರು ಉತ್ತರ ಸಂಚಾರಿ ಠಾಣೆ ಪೊಲೀಸರು ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಬಂಟ್ವಾಳ: ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿನಿ ಸಾವು

ಬಂಟ್ವಾಳ: 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದಾಗಿ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಅಳಿಕೆ ಎಂಬಲ್ಲಿ ಇಂದು ನಡೆದಿದೆ.ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.ಮೃತಳನ್ನು ವಿಠಲ್ ಜೇಸೀಸ್ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ...

ಬಂಟ್ವಾಳದಲ್ಲಿ ಬೈಕ್ ಕಳವು ಪ್ರಕರಣ: ಮೂವರು ಆರೋಪಿಗಳ ಬಂಧನ

ಬಂಟ್ವಾಳ: ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸ್ ಠಾಣೆಯ ‌ಇನ್ಸ್‌ಪೆಕ್ಟರ್ ವಿವೇಕಾನಂದ ಅವರ ನೇತೃತ್ವದ ತಂಡ ಬಂಧಿಸಿದೆ.ಅಕ್ಬರ್, ಸಿದ್ದೀಕ್, ಸಮೀರ್ ಬಂಧಿತ ಆರೋಪಿಗಳು. ಇತ್ತೀಚೆಗೆ ಬಂಟ್ವಾಳ ನಗರ...

SSLC ಪಠ್ಯಪುಸ್ತಕದಲ್ಲಿ ನಾರಾಯಣ ಗುರುಗಳ ಪಾಠಕ್ಕೆ ಕತ್ತರಿ: ಬಿಲ್ಲವ ಸಮುದಾಯದ ಆಕ್ರೋಶ

ಮಂಗಳೂರು: ಎಸ್ಎಸ್‌ಎಲ್‌ಸಿ ಶಾಲಾ ಪಠ್ಯದಲ್ಲಿ ಆರೆಸ್ಸೆಸ್‌ ಸಂಸ್ಥಾಪಕ ಕೆಬಿ ಹೆಡ್ಗೆವಾರ್ ಭಾಷಣ ಸೇರಿಸಿರುವ ವಿವಾದ ಹಸಿಯಾಗಿರುವಾಗಲೇ ಈ ಮಧ್ಯೆ ದಕ್ಷಿಣ ಭಾರತದ ಆದರ್ಶವಾಗಳು ಹಾಗೂ ಸಮಾಜ ಸುಧಾರಕರಾದ ನಾರಾಯಣ ಗುರುಗಳ ಪಠ್ಯಕ್ಕೆ ಕೊಕ್‌...