Thursday, March 23, 2023

ಹೊನ್ನಾವರ: ಕಂಟೈನರ್‌ ಗೆ ಕಾರು ಡಿಕ್ಕಿ- ಉಡುಪಿ ಬಂಟಕಲ್‌ ಕಾಲೇಜಿನ ಪ್ರಾಧ್ಯಾಪಕ ಸ್ಥಳದಲ್ಲೇ ಮೃತ್ಯು..!

ಕಂಟೈನರ್ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಚಲಾಯಿಸುತ್ತಿದ್ದ ಉಡುಪಿ ಕಾಲೇಜು ಪ್ರಾಧ್ಯಾಪಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಸಂಭವಿಸಿದೆ,

ಹೊನ್ನಾವರ : ಕಂಟೈನರ್ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಚಲಾಯಿಸುತ್ತಿದ್ದ ಉಡುಪಿ ಕಾಲೇಜು ಪ್ರಾಧ್ಯಾಪಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಸಂಭವಿಸಿದೆ,


ಬಂಟಕಲ್ಲು ಶ್ರಿ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನ ಮೆಕ್ಯಾನಿಕಲ್‌ ವಿಭಾಗದ ಹಿರಿಯ ಸಹಾಯಕ ಪ್ರಾಧ್ಯಾಪಕ ಅನಂತೇಶ ರಾವ್‌ (40) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.

ಅನಂತೇಶ ರಾವ್‌ ಉಡುಪಿಯಿಂದ ಸೋದೆ ಮೂಲ ಮಠಕ್ಕೆ ತೆರಳುತ್ತಿದ್ದ ವೇಳೆ ಅವರ ಕಾರು ಹೊನ್ನಾವರದ ಬಳಿ ಕಂಟೈನರ್‌ಗೆ ಢಿಕ್ಕಿ ಹೊಡೆದಿದ್ದು, ಈ ಪರಿಣಾಮ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮಂಗಳೂರು ನಿವಾಸಿಯಾದ ಅವರು ಪತ್ನಿ ಮಂಗಳೂರು ಎಂ.ವಿ.ಶೆಟ್ಟಿ ಎಲೈಡ್‌ ಹೆಲ್ತ್‌ ಸೈನ್ಸಸ್‌ ಕಾಲೇಜಿನ ಪ್ರಾಂಶುಪಾಲೆ ಶ್ರೀಪ್ರಿಯಾ ಅನಂತೇಶ್‌ ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ.

ಮೃತರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಸೋದೆ ಮಠಾಧೀಶ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು, ಕಾರ್ಯದರ್ಶಿ ರತ್ನಕುಮಾರ್‌ ಮತ್ತು ಪ್ರಾಂಶುಪಾಲ ಡಾ| ತಿರುಮಲೇಶ್ವರ ಭಟ್‌, ಉಪ ಪ್ರಾಂಶುಪಾಲ ಡಾ| ಗಣೇಶ್‌ ಐತಾಳ್‌ ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಓಮನ್‌ನಲ್ಲಿ ಹೃದಯಾಘಾತದಿಂದ ಅನಿವಾಸಿ ಭಾರತೀಯ ಮಹಿಳೆ ಮೃತ್ಯು..!

ಓಮನ್‌ ನಲ್ಲಿ ಭಾರತೀಯ ಮೂಲದ ಮಹಿಳೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕೇರಳ ಕೊಟ್ಟಾಯಂನ ಮಹಿಳೆ ಸೈಮಾ ಬಾಲಕೃಷ್ಣ ಮೃತ ಮಹಿಳೆಯಾಗಿದ್ದಾಳೆ.ಓಮನ್ : ಓಮನ್‌ ನಲ್ಲಿ ಭಾರತೀಯ ಮೂಲದ ಮಹಿಳೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕೇರಳ ಕೊಟ್ಟಾಯಂನ...

ಕಲಬುರಗಿಯಲ್ಲಿ ಹಾಡು ಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ..!

ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ ಮಾಡಲಾದ ಘಟನೆ ಕಲಬುರಗಿಯ ಹಾಗರಗಾ ಕ್ರಾಸ್ ಬಳಿ ನಡೆದಿದೆ. ಮಜತ್ ಸುಲ್ತಾನ್ (35) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಕಲಬುರಗಿ : ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ...

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದಿದ್ದ ಕುಮಟಾದ ಯುವತಿ ಡಿಡೀರ್ ನಾಪತ್ತೆ..! 

ಕುಟುಂಬಸ್ಥರ ಜೊತೆ ಉತ್ತರ ಕನ್ನಡದಿಂದ ದಕ್ಷಿಣ ಕನ್ನಡದ ಶ್ರೀ ಕ್ಷೇತ್ರಗಳನ್ನು ಸಂದರ್ಶಿಸಲು ಬಂದಿದ್ದ ಹದಿ ಹರೆಯದ ಯುವತಿ ನಾಪತ್ತೆಯಾಗಿದ್ದಾಳೆ.ಬೆಳ್ತಂಗಡಿ : ಕುಟುಂಬಸ್ಥರ ಜೊತೆ ಉತ್ತರ ಕನ್ನಡದಿಂದ ದಕ್ಷಿಣ ಕನ್ನಡದ ಶ್ರೀ ಕ್ಷೇತ್ರಗಳನ್ನು...