Connect with us

DAKSHINA KANNADA

ಉಡುಪಿ ರಾ.ಹೆದ್ದಾರಿಯಲ್ಲಿ ಅಂಬುಲೆನ್ಸ್‌ಗೆ ಅಡ್ಡಲಾಗಿ ಕಾರು ಚಲಾಯಿಸಿ ಹುಚ್ಚಾಟ..!

Published

on

ಮಂಗಳೂರು: ಗಂಭೀರ ಸ್ಥಿತಿಯಲ್ಲಿದ್ದ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್‌ಗೆ ಅಡ್ಡಲಾಗಿ ಸುಮಾರು 30 ಕಿಲೋ ಮೀಟರ್ ತನಕ ದಾರಿ ಬಿಡದೇ ಕಾರು ಚಾಲಕನೋರ್ವ ಸತಾಯಿಸಿದ ಘಟನೆ ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ನಗರದ ಖಾಸಗಿ ಆಸ್ಪತ್ರೆಯಿಂದ ಭಟ್ಕಳಕ್ಕೆ ರೋಗಿಯನ್ನು ಕರೆದೊಯ್ಯುತ್ತಿದ್ದ ವೇಳೆ ಈ ಘಟನೆ ನಡೆದಿದ್ದು ಪಾರ್ಕಿಂಗ್ ಲೈಟ್ ಹಾಕುತ್ತಾ ಮುಂದಿನಿಂದ ವೇಗವಾಗಿ ಸಂಚರಿಸುತ್ತಾ ಪದೇ ಪದೇ ಅಡ್ಡಿಪಡಿಸುತ್ತಾ ತೆರಳುತ್ತಿದ್ದ ಕಾರಿನಲ್ಲಿ ಇಬ್ಬರು ಯುವಕರು ಕೈ ಸನ್ನೆ ಮಾಡುತ್ತಾ ವಿಚಿತ್ರವಾಗಿ ವರ್ತಿಸುತ್ತಿದ್ದರು ಎನ್ನಲಾಗಿದೆ.

ಕಾರಿನಲ್ಲಿದ್ದ ಯುವಕರು ಸುಮಾರು 30 ಕಿಲೋ ಮೀಟರ್ ತನಕವೂ ತನ್ನ ಹುಚ್ಚಾಟ ತೋರಿಸಿದರೂ ಐಸಿಯು ಆಂಬುಲೆನ್ಸ್ ನಲ್ಲಿ ವೆಂಟಿಲೇಟರ್ ನಲ್ಲಿದ್ದ ರೋಗಿಯನ್ನು 1 ಗಂಟೆ 40 ನಿಮಿಷದಲ್ಲಿ ಭಟ್ಕಳಕ್ಕೆ ತಲುಪಿಸುವಲ್ಲಿ ಆಂಬುಲೆನ್ಸ್ ಚಾಲಕ ಯಶಸ್ವಿಯಾಗಿದ್ದಾರೆ.

“ಕಾರು ಚಾಲಕ ಉದ್ಧಟತನ ತೋರುತ್ತಿದ್ದರೂ ರೋಗಿ ಹಾಗೂ ಅವರ ಕುಟುಂಬಿಕರ ಸುರಕ್ಷತೆ ದೃಷ್ಟಿಯಿಂದ ಆಂಬುಲೆನ್ಸ್ ಅನ್ನು ಜಾಗರೂಕವಾಗಿಯೇ ಚಲಾಯಿಸಬೇಕಿರುವುದು ನಮ್ಮ ಕರ್ತವ್ಯ” ಎಂದು ಆಂಬುಲೆನ್ಸ್ ಚಾಲಕ ಅಯ್ಯೂಬ್ ತಿಳಿಸಿದ್ದಾರೆ.

ಈ ಘಟನೆ ನಿನ್ನೆ ಸಾಯಂಕಾಲ ವೇಳೆಗೆ ನಡೆದರೆ, ತಡರಾತ್ರಿ ಉಡುಪಿಯ ಇನ್ನೊಂದು ಖಾಸಗಿ ಆಂಬುಲೆನ್ಸ್ ಚಾಲಕರಿಗೂ ಇದೇ ಕಾರು ಅಡ್ಡಿಪಡಿಸಿತ್ತು ಎಂದು ನಗರದ ಮತ್ತೋರ್ವ ಆಂಬುಲೆನ್ಸ್ ಚಾಲಕ ಆರೋಪಿಸಿದ್ದಾರೆ.

ಅಲ್ಲದೇ, ಇಂತಹ ಉದ್ಧಟತನದ ವಿರುದ್ಧ ಕ್ರಮಕ್ಕೆ ಆಂಬುಲೆನ್ಸ್ ಚಾಲಕರು ಒತ್ತಾಯಿಸಿದ್ದಾರೆ.

DAKSHINA KANNADA

ನಾಲ್ಕು ತಿಂಗಳ ಮಗುವಿಗೆ ಹಾಲಿನಲ್ಲಿ ಆಲ್ಕೋಹಾಲ್ ಬೆರೆಸಿದ ಅಜ್ಜಿ..! ಅಜ್ಜಿ ಮಾಡಿದ ಎಡವಟ್ಟಿಗೆ ಕೋಮಾಗೆ ಜಾರಿದ ಮಗು !!

Published

on

ಮಂಗಳೂರು/ಇಟಲಿ: ಇಟಲಿಯಲ್ಲೊಂದು ಆಘಾತಕಾರಿ ಘಟನೆ ನಡೆದಿದೆ. ಅಜ್ಜಿಯೊಬ್ಬರು ನಾಲ್ಕು ತಿಂಗಳ ಮಗುವಿಗೆ ಕುಡಿಯುವ ಹಾಲಿನಲ್ಲಿ ಆಲ್ಕೋಹಾಲ್‌ ಬೆರೆಸಿರುವ ಘಟನೆ ನಡೆದಿದೆ.

feed

ಮೊಮ್ಮಗು ಕುಡಿಯುವ ಹಾಲಿಗೆ ಅಜ್ಜಿ ತಪ್ಪಾಗಿ ಆಲ್ಕೋಹಲ್ ಬೆರೆಸಿದ್ದಾರೆ. ಮಗು ಅರ್ಧ ಹಾಲು ಕುಡಿದ ಬಳಿಕ ಮಗು ಅಳಲು ಆರಂಭಿಸಿದೆ. ಅಜ್ಜಿಗೆ ಅನುಮಾನ ಬಂದು ತಾನು ಕುಡಿಸಿದ ಹಾಲಿನ ವಾಸನೆಯನ್ನು ತೆಗೆದು ಪರಿಶೀಲನೆ ಮಾಡಿದಾಗ ಅದರಲ್ಲಿ ಆಲ್ಕೋಹಾಲ್‌ ಮಿಶ್ರಣ ಹಾಕಿರುವುದು ಬೆಳಕಿಗೆ ಬಂದಿದೆ.  ಇದರಿಂದ ಆಘಾತಕ್ಕೊಳಗಾದ ವೃದ್ಧೆ ಮಗುವನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಮುಂದೆ ಓದಿ..; ಜೀವಾಂತ್ಯವಾದ ಕಾಂತಾಬಾರೆ-ಬೂದಬಾರೆ ಜನ್ಮಕ್ಷೇತ್ರದ ಮರ..! ಇತಿಹಾಸದ ಜೀವಂತ ಸಾಕ್ಷಿಯ ಅಂತ್ಯ..!

ಕೋಮಾಗೆ ಜಾರಿದ ಮಗು:

ಅದಾಗಲೇ ಮಗುವಿನ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಕೋಮ ಸ್ಥಿತಿಗೆ ಜಾರಿತ್ತು. ಬಳಿಕ ವೈದ್ಯರು ಚಿಕಿತ್ಸೆ ನೀಡಿದ ಬಳಿಕ ಚೇತರಿಸಿಕೊಂಡಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಮಗುವಿಗೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಆದರೆ ಮಗುವಿನ ಆರೋಗ್ಯವನ್ನು ಸಂಪೂರ್ಣ ಪರಿಶೀಲಿಸಿದ ಬಳಿಕ ಅಜ್ಜಿ ವಿರುದ್ಧ ಪ್ರಕರಣ ದಾಖಲಿಸಲು ನಿರ್ಧರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

 

 

Continue Reading

DAKSHINA KANNADA

ಚಲಿಸುತ್ತಿದ್ದಾಗ ಒಡೆದ ಬಸ್ಸಿನ ಗಾಜು; ಇಬ್ಬರು ಮಕ್ಕಳು, ಚಾಲಕನಿಗೆ ಗಾ*ಯ

Published

on

ವಿಟ್ಲ : ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ ಗಾಜು ಒಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಸಂಭವಿಸಿದೆ. ಪುತ್ತೂರು ಕಡೆಯಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಅದರ ಮುಂಭಾಗ ಗಾಜು ಹೊಡೆದಿದೆ.

ಇದನ್ನೂ ಓದಿ : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ

ಇದರಿಂದ ಮುಂಭಾಗದಲ್ಲಿದ್ದ ಬಾಲಕ ಗಂಭೀರ ಗಾಯಗೊಂಡಿದ್ದು, ಚಾಲಕ ಮತ್ತು ಮತ್ತೊಂದು ಮಗು ಸಣ್ಣಪುಟ್ಟವಿಗೆ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಬಾಲಕನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡಿರುವ ಬಾಲಕ ಕೇರಳದ ಚೆರ್ಕಳ ನೆಲ್ಲಿಕಟ್ಟೆ ನಿವಾಸಿ ಎಂದು ಸ್ಥಳೀಯರು ತಿಳಿಸಿದ್ದಾರೆ.

ಬಿಸಿಲಿನ ತಾಪಕ್ಕೆ ಈ ಘಟನೆ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

 

Continue Reading

DAKSHINA KANNADA

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ

Published

on

ವಿಟ್ಲ: ನಿಯಂತ್ರಣ ತಪ್ಪಿ ಕ್ರೇಟಾ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ನಡೆದಿದೆ.

accident

accident

ಕಾರು ಪಲ್ಟಿಯಾದ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಪವಾಡ ಎಂಬಂತೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.

ಮುಂದೆ ಓದಿ..; ಪ್ರಾಂಶುಪಾಲೆ, ಶಿಕ್ಷಕಿ ನಡುವೆ ಹೊಯ್‌ ಕೈ..!! ವೀಡಿಯೋ ವೈರಲ್

accident

Continue Reading

LATEST NEWS

Trending