Monday, July 4, 2022

ಮಂಗಳೂರು ನಗರದಲ್ಲಿ ಕಾರುಗಳ ಮಧ್ಯೆ ದ್ವಿಚಕ್ರ ವಾಹನ ಅಪ್ಪಚ್ಚಿ- ಮಹಿಳೆ ಗಂಭೀರ

ಮಂಗಳೂರು: ಎರಡು ಕಾರುಗಳ ಮಧ್ಯೆ ದ್ವಿಚಕ್ರ ವಾಹನ ಸಿಲುಕಿ ಮಹಿಳೆಯೋರ್ವಳು ಗಂಭೀರ ಗಾಯಗೊಂಡ ಘಟನೆ ಮಂಗಳೂರು ನಗರದ ಎಂ.ಜಿ ರಸ್ತೆಯ ಬಲ್ಲಾಳ್‌ಬಾಗ್‌ ಬಳಿ ಇಂದು ಮಧ್ಯಾಹ್ನ ನಡೆದಿದೆ.


ಪಿವಿಎಸ್‌ ಕಡೆಯಿಂದ ಲಾಲ್‌ಭಾಗ್‌ ಕಡೆಗೆ ಅತೀ ವೇಗದಿಂದ ತೆರಳುತ್ತಿದ್ದ ಬಿಎಂಡಬ್ಲ್ಯೂ ಕಾರು ರಸ್ತೆ ವಿಭಜಕ್ಕೆ ಢಿಕ್ಕಿ ಹೊಡೆದು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಸ್ಕೂಟಿಗೆ ಢಿಕ್ಕಿ ಹೊಡೆದಿದೆ.

ಕಾರು ಹೊಡೆದ ರಭಸಕ್ಕೆ ಸ್ಕೂಟಿ ಚಲಾಯಿಸುತ್ತಿದ್ದ ಮಹಿಳೆ ರಸ್ತೆಗೆ ಬಿದ್ದ ಸಂದರ್ಭ ಸ್ಕೂಟಿಯ ಹಿಂದಿನಿಂದ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮತ್ತೆ ಮಹಿಳೆಗೆ ಢಿಕ್ಕಿ ಹೊಡೆದಿದೆ.

ಎರಡೂ ಕಾರುಗಳ ನಡುವೆ ಅಪಚ್ಚಿಯಾದ ಸ್ಕೂಟಿ ಮಧ್ಯೆ ಸಿಲುಕಿದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು,

ಸದ್ಯ ಮಹಿಳೆಯನ್ನು ನಗರದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ. ಮಂಗಳೂರು ಪೂರ್ವ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗುತ್ತಿದೆ.

LEAVE A REPLY

Please enter your comment!
Please enter your name here

Hot Topics

ಪೌರಕಾರ್ಮಿಕರ ಬೆಂಬಲಕ್ಕೆ ನಿಂತ ವಿರೋಧ ಪಕ್ಷದ ಉಪನಾಯಕ ಖಾದರ್

ಮಂಗಳೂರು: ರಾಜ್ಯದಾದ್ಯಂತ ನಡೆಯುತ್ತಿರುವ ಪೌರ ಕಾರ್ಮಿಕರ ಮುಷ್ಕರ ನಾಳೆ ಐದನೇ ದಿನಕ್ಕೆ ಕಾಲಿರಿಸಲಿದೆ. ರಾಜ್ಯ ಘಟಕದ ಸೂಚನೆಯನ್ವಯ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಪ್ರತಿಭಟನೆ ಮುಂದುವರಿದಿದೆ.ಸ್ವಚ್ಛತಾ ಕೆಲಸವನ್ನು ಸಂಪೂರ್ಣ ಸ್ಥಗಿತಗೊಳಿಸಿ ಪೌರ ಕಾರ್ಮಿಕರು ಮಂಗಳೂರಿನಲ್ಲಿ...

ಬೆಳ್ತಂಗಡಿ: ಭಾರೀ ಮಳೆ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ದ.ಕ ಡಿಸಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ನಿನ್ನೆ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದ್ದು ಇಲ್ಲಿನ ಸ್ಥಿತಿಗತಿಗಳನ್ನು ಗಮನಿಸಿ ಕ್ಷೇತ್ರ ಶಿಕ್ಷಣಾಧಿಕಾರಿಯವರಿಂದ ಮಾಹಿತಿಯನ್ನು ಪಡೆದುಕೊಂಡು ಜಿಲ್ಲಾಧಿಕಾರಿಯವರು ತಾಲ್ಲೂಕಿನ ಎಲ್ಲ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಿದ್ದಾರೆ.ಗ್ರಾಮೀಣ...

ಹೆಬ್ರಿ: ಕೆಲಸ ಮಾಡುತ್ತಿದ್ದಾಗ ಯುವ ಕೃಷಿಕ ಜಾರಿ ಬಿದ್ದು ಕೊನೆಯುಸಿರು

ಉಡುಪಿ: ಹೊಲದಲ್ಲಿ ಕೆಲಸ ಮಾಡುತ್ತಿರುವ ವೇಳೆ ಯುವ ಕೃಷಿಕನೊಬ್ಬ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಬೈರಂಪಳ್ಳಿಯ ದೂಪದಕಟ್ಟೆ ನಿನ್ನೆ ನಡೆದಿದೆ.ಮೃತ ಯುವಕನನ್ನು ಉಮೇಶ್‌ ಕುಲಾಲ್‌ (35) ಎಂದು...