Thursday, August 11, 2022

ಮಂಗಳೂರು: 12ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕಾರ್ಟಿ ವ್ಯಾಕ್ಸ್‌ ಲಸಿಕೆ ಅಭಿಯಾನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದಲ್ಲಿ ಆಯೋಜನೆ ಮಾಡಲಾಗಿರುವ ಕಾರ್ಟಿ ವ್ಯಾಕ್ಸ್‌ ಲಸಿಕೆ ಅಭಿಯಾನದ ಉದ್ಘಾಟನಾ ಸಮಾರಂಭ ಇಂದು ನಡೆಯಿತು.


12ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕಾರ್ಟಿ ವ್ಯಾಕ್ಸ್‌ ಲಸಿಕೆ ಮತ್ತು 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಮುನ್ನೆಚ್ಚರಿಕಾ ಲಸಿಕಾ ಅಭಿಯಾನವನ್ನು ನಗರದ ಸರಕಾರಿ ವೆನ್ಲಾಕ್‌ ಆಸ್ಪತ್ರೆಯಲ್ಲಿ ಆಯೋಜನೆ ಮಾಡಲಾಗಿತ್ತು.


ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ ಅವರು ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಮಾಧ್ಯಮಗಳ ಜೊತೆಗೆ ಮಾತನಾಡಿದ ಜಿಲ್ಲಾಧಿಕಾರಿ ರಾಜೇಂದ್ರ, “ಕೊರೊನಾ ಸೋಂಕು ಕಡಿಮೆಯಾಗಿದೆ ಎಂದು ಯಾರೂ ಕೂಡಾ ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ. ಎಲ್ಲರಿಗೂ ಮಾಸ್ಕ್ ಧರಿಸುವುದು, ಅಂತರ ಪಾಲನೆ ಮಾಡುವುದು ಉತ್ತಮ” ಎಂದರು.

ಈ ಸಂದರ್ಭದಲ್ಲಿ ಹಲವು ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ವ್ಯಾಕ್ಸಿನೇಶನ್‌ ಹಾಕಿಸಲಾಯಿತು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

ಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ 20 ಮಂದಿ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಯಿತು.

LEAVE A REPLY

Please enter your comment!
Please enter your name here

Hot Topics

ತೊಕ್ಕೊಟ್ಟು ಕಾಪಿಕಾಡಿನಲ್ಲಿ ಬೈಕಿಗೆ ಕಾರು ಡಿಕ್ಕಿ : ಸವಾರರಿಗೆ ಗಾಯ – ಕಾರು ಕಮರಿಗೆ ..!

ಉಳ್ಳಾಲ : ರಾಷ್ಟ್ರೀಯ ಹೆದ್ದಾರಿ66ರ ತೊಕ್ಕೊಟ್ಟು ಕಾಪಿಕಾಡ್ ಬಳಿ ವಿರುದ್ಧ ದಿಕ್ಕಿನಲ್ಲಿ ಬಂದ ಬೈಕ್‍ಗೆ ಕಾರು ಡಿಕ್ಕಿ ಯಾಗಿ ಬೈಕ್ ಸವಾರರಿಬ್ಬರು ಗಾಯಗೊಂಡ ಘಟನೆ ಬುಧವಾರ ಸಂಜೆ ನಡೆದಿದ್ದು ಕಾರು ಮತ್ತು ಬೈಕ್...

ಪಿ.ಯು.ಸಿ ಪೂರಕ ಪರೀಕ್ಷೆ: ಆ.12ರಿಂದ ಆ.25ರವರೆಗೆ ನಿಷೇಧಾಜ್ಞೆ

ಮಂಗಳೂರು: ದ್ವಿತೀಯ ಪಿ.ಯು.ಸಿ ಪೂರಕ ಪರೀಕ್ಷೆ ಹಿನ್ನೆಲೆ ಜಿಲ್ಲಾ ಪೊಲೀಸ್‌ ಘಟಕ ವ್ಯಾಪ್ತಿಯ 4 ಪರೀಕ್ಷಾ ಕೇಂದ್ರಗಳಲ್ಲಿ ಆ.12ರಿಂದ ಆ.25ರ ವರೆಗೆ ನಿಷೇಧಾಜ್ಞೆ ಹೊರಡಿಸಲಾಗಿದೆ.ಪರೀಕ್ಷೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ...

ಟಿ.ವಿ ನೋಡಲು ಬರುತ್ತಿದ್ದ ಯುವತಿಗೆ ಲೈಂಗಿಕ ದೌರ್ಜನ್ಯ-ವ್ಯಕ್ತಿ ಬಂಧನ

ತೀರ್ಥಹಳ್ಳಿ: ಟಿ.ವಿ ನೋಡಲು ಬರುತ್ತಿದ್ದ ಪಕ್ಕದ ಮನೆಯ ಯುವತಿಗೆ ಲೈಂಗಿಕ ದೌರ್ಜನ್ಯ ನೀಡಿ ಗರ್ಭವತಿಯನ್ನಾಗಿ ಮಾಡಿದ ಆರೋಪದ ಅಡಿಯಲ್ಲಿ ಶಿವಮೊಗ್ಗದ ತೀರ್ಥ ಹಳ್ಳಿಯಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.ಮುರುಳೀಧರ್ ಭಟ್ ಬಂಧನಕ್ಕೊಳಗಾದ ವ್ಯಕ್ತಿ.ತೀರ್ಥಹಳ್ಳಿಯ ನಾಲೂರಿನಲ್ಲಿ...