Connect with us

DAKSHINA KANNADA

ಕೈಗಾರಿಕಾ ಲೈಸೆನ್ಸ್ ಪತ್ರ ನೀಡಲು ಲಂಚ ಸ್ವೀಕರಿಸಿದ ಪ್ರಕರಣ-ಫ್ಯಾಕ್ಟರೀಸ್‌ ಆ್ಯಂಡ್‌ ಬಾಯ್ಲರ್ಸ್‌ನ ಅಸಿಸ್ಟೆಂಟ್‌ ಡೈರೆಕ್ಟರ್‌ಗೆ ಶಿಕ್ಷೆ

Published

on

ಮಂಗಳೂರು: ಕೈಗಾರಿಕೆಗಳಿಗೆ ಲಂಚ ಸ್ವೀಕರಿಸಿ ಪರವಾನಿಗೆ ಪತ್ರ ನೀಡಿದ ಪ್ರಕರಣವೊಂದರಲ್ಲಿ ಫ್ಯಾಕ್ಟರೀಸ್‌ ಆ್ಯಂಡ್‌ ಬಾಯ್ಲರ್ಸ್ ಇಲಾಖೆಯ ಅಸಿಸ್ಟೆಂಟ್‌ ಡೈರೆಕ್ಟರ್‌ಗೆ ಮಂಗಳೂರಿನ ನ್ಯಾಯಾಲಯ ಶಿಕ್ಷೆ ವಿಧಿಸಿದೆ.


ಮಂಗಳೂರಿನ ಕೊಟ್ಟಾರದಲ್ಲಿರುವ ಫ್ಯಾಕ್ಟರೀಸ್‌ ಆ್ಯಂಡ್‌ ಬಾಯ್ಲರ್ಸ್ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಉಪವಿಭಾಗ-2 ರಲ್ಲಿ ಸಹಾಯಕ ನಿರ್ದೇಶಕರಾಗಿದ್ದು ಪ್ರಸ್ತುತ ಮೈಸೂರಿನಲ್ಲಿ ಸೇವೆ ಸಲ್ಲಿಸುತ್ತಿರುವ ಎಚ್‌.ಸುರೇಶ್‌ ಶಿಕ್ಷೆಗೊಳಗಾದವರು.

ಮಂಗಳೂರಿನಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ಕಾರ್ಖಾನೆಗಳ ಪರವಾನಿಗೆ ನೀಡುವುದು, ಪರವಾನಿಗೆ ನವೀಕರಣ, ನಿರಾಕ್ಷೇಪಣಾ ಪತ್ರ ನೀಡುವುದು ಮತ್ತಿತರ ಕೆಲಸಗಳನ್ನು ನಿರ್ವಹಿಸಲು ಕಾರ್ಖಾನೆಗಳ ಮಾಲಕರಿಂದ ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಮಂಗಳೂರು ಪೊಲೀಸ್‌ ಠಾಣೆಯಲ್ಲಿ 2016 ರ ನ.30ರಂದು ಪ್ರಕರಣ ದಾಖಲಾಗಿ ಬಳಿಕ ದಾಳಿ ನಡೆಸಲಾಗಿತ್ತು.

ದಾಳಿಯ ಸಂದರ್ಭದಲ್ಲಿ 3, 40,000 ರೂ. ನಗದು ಪತ್ತೆಯಾಗಿತ್ತು. ವಿಚಾರಣೆ ನಡೆಸಿದ ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಬಿ. ಜಕಾತಿ ಅವರು ಡಿ.3ರಂದು ಆರೋಪಿ ಎಚ್‌.ಸುರೇಶ್‌ಗೆ 4 ವರ್ಷಗಳ ಸಾದಾ ಸಜೆ ಹಾಗೂ 4 ಲ.ರೂ. ದಂಡ, ಒಂದು ವೇಳೆ ದಂಡ ತೆರಲು ತಪ್ಪಿದಲ್ಲಿ ಹೆಚ್ಚುವರಿ 6 ತಿಂಗಳ ಸಾದಾ ಸಜೆ ಅನುಭವಿಸ ಬೇಕೆಂದು ತೀರ್ಪು ನೀಡಿದ್ದಾರೆ.

ಈ ಪ್ರಕರಣದಲ್ಲಿ ಲಂಚ ಸ್ವೀಕಾರ ಆರೋಪದ ಬಗ್ಗೆ ಮಂಗಳೂರಿನ ಸಾಮಾಜಿಕ ಕಾರ್ಯಕರ್ತ ಹನುಮಂತ ಕಾಮತ್ ಅವರು ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು. ಅಂದಿನ ಎಸಿಬಿ ಡಿವೈಎಸ್ಪಿ ಸುಧೀರ್ ಎಮ್. ಹೆಗ್ಡೆ ಪ್ರಕರಣ ದಾಖಲಿಸಿಕೊಂಡಿದ್ದರು.

ತನಿಖೆಯನ್ನು ಇನ್ಸ್‌ಪೆಕ್ಟರ್ ಯೋಗೀಶ್ ಕುಮಾರ್ ಬಿಸಿ ಅವರು ಪೂರ್ತಿಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ನ್ಯಾಯಾಲಯದ ವಿಚಾರಣೆ ಸಂದರ್ಭದಲ್ಲಿ ಲೋಕಾಯುಕ್ತ ವಿಶೇಷ ಸಾರ್ವಜನಿಕ ಅಭಿಯೋಜಕ ರವೀಂದ್ರ ಮುನ್ನಿಪಾಡಿ ಸರಕಾರದ ಪರವಾಗಿ ವಾದ ಮಂಡಿಸಿದ್ದರು.

ಇದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಸಿಬಿ ದಾಖಲಿಸಿದ ಪ್ರಕರಣಗಳ ಪೈಕಿ ಆರೋಪಿಗೆ ಶಿಕ್ಷೆಯಾದ ಮೊದಲ ಪ್ರಕರಣವಾಗಿದೆ.

ಇದೀಗ ಭ್ರಷ್ಟಾಚಾರ ನಿಗ್ರಹ ದಳವು ಲೋಕಾಯುಕ್ತ ಜತೆಗೆ ವಿಲಿನಗೊಂಡು ಎಲ್ಲಾ ಪ್ರಕರಣಗಳು ಲೋಕಾಯುಕ್ತಕ್ಕೆ ಹಸ್ತಾಂತರವಾಗಿವೆ.

ಆರೋಪಿ ಸುರೇಶ್‌ನನ್ನು ಲೋಕಯುಕ್ತ ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಿದ್ದು ಇದೀಗ ಜೈಲಿಗೆ ಕಳುಹಿಸಿದ್ದಾರೆ‌.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending