ಮೈಸೂರು: ವಿವಾಹಿತ ಮಹಿಳೆಯ ಜತೆ ಅಕ್ರಮ ಸಂಬಂಧ ಆರೋಪ ಹಿನ್ನೆಲೆ ಬೈಕ್‌ನಲ್ಲಿ ತೆರಳುತ್ತಿದ್ದ ಒಂದೇ ಕುಟುಂಬದ ಮೂವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಡೆದಿದೆ.
ತಂದೆ, ಮಗನಿಗೆ ಗಾಯಗಳಾಗಿದ್ದು ಅದೃಷ್ಟವಶಾತ್ ಮಹಿಳೆ ಪಾರಾಗಿದ್ದಾರೆ. ಹಲ್ಲೆಯಲ್ಲಿ ಶಿವಪ್ಪ (45), ಶರತ್ (20)ಎಂಬವರಿಗೆ ಗಾಯಗಳಾಗಿವೆ.
ಲೋಹಿತ್ ಕುಮಾರ್, ಪರಶಿವಮೂರ್ತಿ ಎಂಬುವವರು ಹಲ್ಲೆ ನಡೆಸಿರುವುದಾಗಿ ತಿಳಿದು ಬಂದಿದೆ. ವಿವಾಹಿತ ಮಹಿಳೆ ಜೊತೆ ಹಲ್ಲೆಗೊಳಗಾದ ಶರತ್‌ಗೆ ಅಕ್ರಮ ಸಂಬಂಧವಿದೆ ಎಂದು ಹಲ್ಲೆ ನಡೆಸಿದ್ದಾರೆ.
ಹಲ್ಲೆಗೊಳಗಾದ ಶರತ್‌ಗೆ ಅದೇ ಗ್ರಾಮದ ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧವಿರುವ ಆರೋಪ ಕೇಳಿ ಬಂದಿದೆ.
ಈ ಹಿನ್ನೆಲೆಯಲ್ಲಿ ಹಲವು ಬಾರಿ ರಾಜಿ ಪಂಚಾಯಿತಿ ಆಗಿತ್ತು. ಆದರೆ ತಂದೆ, ಮಗ, ಮಹಿಳೆ ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದಾಗ ಲೋಹಿತ್ ಕುಮಾರ್, ಪರಶಿವಮೂರ್ತಿ ಎಂಬುವವರು ಹಲ್ಲೆ ನಡೆಸಿದ್ದಾರೆ.
ಈ ವೇಳೆ ಮಚ್ಚಿನಿಂದ ಆರೋಪಿಗಳು ಹಲ್ಲೆ ಮಾಡಿರುವುದರಿಂದ ತಂದೆ, ಮಗನಿಗೆ ಗಾಯಗಳಾಗಿವೆ. ಗಾಯಾಳುಗಳಿಗೆ ಹೆಚ್.ಡಿ.ಕೋಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಹೆಚ್.ಡಿ.ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.