Connect with us

    BELTHANGADY

    ಬೆಳ್ತಂಗಡಿಯಲ್ಲಿ ತಿಮರೋಡಿ ಪರ ವಾಟ್ಸಾಪ್ ಸ್ಟೇಟಸ್ ಹಾಕಿದ ಕಾರಣಕ್ಕೆ ಜಾತಿ ನಿಂದಿಸಿ ಹಲ್ಲೆ: ಇಬ್ಬರ ಬಂಧನ

    Published

    on

    ಬೆಳ್ತಂಗಡಿ: ಹಿಂದೂ ಮುಖಂಡ ಮಹೇಶ್‌ ಶೆಟ್ಟಿ ತಿಮರೋಡಿ ಪರ ವಾಟ್ಸಾಪ್ ಸ್ಟೇಟಸ್ ಹಾಕಿದ ಕಾರಣಕ್ಕೆ ಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಘಟನೆ ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ.

    ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಹಾಗೂ ರಂಜಿತ್ ಮದ್ದಡ್ಕ ನ್ಯಾಯಾಂಗ ಬಂಧನಕ್ಕೆ ಒಳಗಾದ ಆರೋಪಿಗಳು.

    ಮಹೇಶ್‌ ಶೆಟ್ಟಿ ತಿಮರೋಡಿ ಪರ ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರಕ್ಕೆ ಸಂಬಂಧಿಸಿ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಬೆಳ್ತಂಗಡಿ ಕಸಬಾ ಗ್ರಾಮದ ರೆಂಕೆದಗುತ್ತು ಕೆಂಬರ್ಜೆಯ ಶೇಖರ ನಾಯ್ಕ ಎಂಬವರ ಪುತ್ರ ಯಶವಂತ ನಾಯ್ಕ ಅವರು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

    ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 504, 506, 323 ಜತೆಗೆ 34 ಐಪಿಸಿ ಮತ್ತು ಕಲಂ 3(1) (ಎಸ್) ಎಸ್ಸಿ, ಎಸ್ಟಿ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು ಮುಂದಿನ ವಿಚಾರಣೆವರೆಗೂ ಆರೋಪಿಗಳಿಗೆ ಬಂಧನ ವಿಧಿಸಲಾಗಿದೆ.

    BELTHANGADY

    ಅಪ್ರಾಪ್ತ ಬಾಲಕಿಗೆ ಕಿರುಕುಳ; ಆರೋಪಿ ಅರೇಸ್ಟ್

    Published

    on

    ಬೆಳ್ತಂಗಡಿ: ಶಾಲಾ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಕೊಂಡು ಬಂದು ಮೊಬೈಲ್ ನಂಬರ್ ಕೇಳುವ ಮೂಲಕ ಆಕೆಗೆ ಕಿರುಕುಳ ನೀಡುತ್ತಿದ್ದ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

    ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಪುಲ್ಲಾಯಿ ಎನ್ನುವಲ್ಲಿ ಈ ಘಟನೆ ನಡೆದಿದೆ.

    ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ ನಿವಾಸಿ, ಹುಲ್ಲು ಕಟಾವು ಯಂತ್ರದ ಮೆಕ್ಯಾನಿಕ್‌ ಆಗಿರುವ ಜುಮಾರ್‌ (24) ಬಂಧಿತ ಆರೋಪಿ. ಸಂಬಂಧಿ ಹಾಗೂ ನೆರೆಯ ವಿದ್ಯಾರ್ಥಿನಿಯೊಂದಿಗೆ ಬಾಲಕಿ ಕಾಲೇಜಿಗೆ ಹೋಗುತ್ತಿರುವ ವೇಳೆ ಕಳೆದ ಐದು ದಿನಗಳಿಂದ ಆರೋಪಿಯು ಬೈಕಿನಲ್ಲಿ ಹಿಂಬಾಲಿಸಿಕೊಂಡು ಹೋಗುತ್ತಿದ್ದ.

    ಬೈಕ್‌ನಲ್ಲಿ ಜೊತೆಯಾಗಿ ಬರುವಂತೆ ಒತ್ತಾಯಿಸಿದ್ದು ಮಾತ್ರವಲ್ಲದೆ, ಮೊಬೈಲ್‌ ನಂಬರ್ ಕೊಡುವಂತೆ ಕೇಳಿಕೊಳ್ಳುತ್ತಿದ್ದ.

    ಅಂತೆಯೇ ಅ. 15ರಂದು ಬೆಳಗ್ಗೆ 7.45 ಗಂಟೆಗೆ ಎಂದಿನಂತೆ ಕಾಲೇಜಿಗೆ ಹೋಗುತ್ತಿದ್ದ ವೇಳೆ ಅತ ಬೈಕ್‌ ಅನ್ನು ಚಲಾಯಿಸಿಕೊಂಡು ಮುಂದಕ್ಕೆ ಹೋಗಿ ವಾಪಸು ಹಿಂದಕ್ಕೆ ತಿರುಗಿಸಿಕೊಂಡು ಬಂದು ತೊಂದರೆ ನೀಡಿದ್ದಾಗಿ ಆರೋಪಿಸಲಾಗಿದೆ.

    ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ವೇಣೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Continue Reading

    BELTHANGADY

    ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯ ಚರಂಡಿಗೆ ಬಿದ್ದ ಕಾರು

    Published

    on

    ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಚರಂಡಿಗೆ ಬಿದ್ದ ಘಟನೆ ಬೆಳ್ತಂಗಡಿಯ ಕಾಶಿಬೆಟ್ಟುವಿನಲ್ಲಿ ನಡೆದಿದೆ.

    ಉಡುಪಿಯಿಂದ ಮೂವರು ಯುವಕರು ಅರಿಕೋಡಿ ದೇವಸ್ಥಾನಕ್ಕೆ ತೆರಳುತ್ತಿದ್ದರು. ಸುಮಾರು ಬೆಳಗ್ಗೆ 4.45 ರ ವೇಳೆಗೆ ಕಾರು ಚಾಲಕನ ನಿಯಂತ್ರಣ ತಪ್ಪಿ ಕಾಶಿಬೆಟ್ಟು ಬಳಿ ರಾಷ್ಟ್ರೀಯ ಹೆದ್ದಾರಿಯ ಚರಂಡಿಗೆ ಬಿದ್ದಿದೆ.

    ಚಾಲಕ ನಿದ್ದೆಯ ಮಂಪರಿನಲ್ಲಿ ಇದ್ದದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಕ್ರೇನ್ ಸಹಾಯದಿಂದ ಕಾರನ್ನು ಮೇಲೆತ್ತಲಾಗಿದೆ.

    Continue Reading

    BELTHANGADY

    ಬೆಳ್ತಂಗಡಿ: ಪಾದಚಾರಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ

    Published

    on

    ಬೆಳ್ತಂಗಡಿ: ಪಾದಚಾರಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದ ಘಟನೆ ಬುಧವಾರ ನಿಡಿಗಲ್ ಸಮೀಪ ಸಂಭವಿಸಿದೆ.

    ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದ ಪಾದಾಚಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ ತಿಳಿದು ಬಂದಿದೆ.

    ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

    Continue Reading

    LATEST NEWS

    Trending