Connect with us

    DAKSHINA KANNADA

    ರಸ್ತೆ ಬದಿಯಲ್ಲಿ ಮಲಗಿದ್ದ ದನಗಳಿಗೆ ಇಂಜೆಕ್ಷನ್‌ ನೀಡಿ ಕಾರಿನಲ್ಲಿ ಸಾಗಾಟ..! ಸಿಸಿಟಿವಿಯಲ್ಲಿ ಕೃತ್ಯ ಸೆರೆ

    Published

    on

    ಸುಳ್ಯ: ಸಂಪಾಜೆ ಗ್ರಾಮದ ಗಡಿಕಲ್ಲಿನಲ್ಲಿ ರಸ್ತೆ ಬದಿಯಲ್ಲಿ ಮಲಗಿದ್ದ ದನಗಳಿಗೆ ಅಮಲು ಬರುವ ಇಂಜೆಕ್ಷನ್‌ ನೀಡಿದ ಬಳಿಕ ಕಿಡಿಗೇಡಿಗಳು ಅವುಗಳನ್ನು ಬಲವಂತವಾಗಿ ಹಿಡಿದು ಸ್ಕಾರ್ಪಿಯೋ ವಾಹನದಲ್ಲಿ ತುಂಬಿ ಸಾಗಾಟ ಮಾಡುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

    ಗಡಿಕಲ್ಲು ಮಸೀದಿ ಪಕ್ಕದಲ್ಲಿ ಪ್ರತಿನಿತ್ಯ 10ಕ್ಕೂ ಅಧಿಕ ಜಾನುವಾರುಗಳು ಮಲಗುತ್ತಿದ್ದು, ಜೂನ್‌ 7ರಂದು ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಸುಳ್ಯ ಭಾಗದಿಂದ ಬಂದ ಸ್ಕಾರ್ಪಿಯೋ ಕಾರಿನಲ್ಲಿದ್ದ ಕಿಡಿಗೇಡಿಗಳು ಎರಡು ದನಗಳಿಗೆ ಅಮಲು ಬರುವ ಇಂಜೆನ್ ಕೊಟ್ಟು ಬಳಿಕ ಬಲವಂತವಾಗಿ ಇವುಗಳನ್ನು ಹಿಡಿದು ಕಾರಿನಲ್ಲಿ ತುಂಬಿ ಸಾಗಾಟ ಮಾಡಿದ್ದಾರೆ.

    ಮುಂದೆ ಓದಿ..; ಕೆಟ್ಟು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಗೂಡ್ಸ್ ಲಾರಿ; ಚಾಲಕ ಗಂಭೀರ

    ಮಸೀದಿ ಬಳಿ ಅನ್ವರ್ ಎಂಬವರ ಮನೆ ಇದ್ದು, ಮನೆ ಮುಂಭಾಗದಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾದಲ್ಲಿ ಈ ದೃಶ್ಯಗಳು ಸೆರೆಯಾಗಿವೆ. ಮೂವರು ವ್ಯಕ್ತಿಗಳು ಆಗಮಿಸಿ ಈ ಕೃತ್ಯ ಎಸಗುತ್ತಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ.

    ಇನ್ನು ದನಗಳನ್ನು ಕಾರಿಗೆ ಸಾಗಿಸುತ್ತಿದ್ದ ವೇಳೆ ನಾಯಿ ಬೊಗಳಲು ಆರಂಭಿಸಿದೆ. ನಾಯಿಗಳ ಬೊಬ್ಬೆ ಕೇಳಿ ಅನ್ವರ್ ಮನೆಯಿಂದ ಹೊರಗೆ ಬಂದಿದ್ದಾರೆ. ಆ ವೇಳೆಗೆ ಮೂವರು ಕಿಡಿಗೇಡಿಗಳು ದನಗಳನ್ನು ಸಾಗಿಸುತ್ತಿರುವುದು ಕಂಡು ಬಂದಿದೆ. ಅನ್ವರ್ ಜೋರು ಬೊಬ್ಬೆ ಹೊಡೆಯುತ್ತಿದ್ದಂತೆ ಕಾರನ್ನು ಸುಳ್ಯ ಕಡೆಗೆ ವೇಗವಾಗಿ ಚಲಾಯಿಸಿಕೊಂಡು ಹೋಗಿದ್ದಾರೆ ಎಂದು ಹೇಳಲಾಗಿದೆ.

    DAKSHINA KANNADA

    ಮೈಸೂರು ದಸರಾದಲ್ಲಿ ತುತ್ತೂರಿ ಬ್ಯಾನ್

    Published

    on

    ಮಂಗಳೂರು/ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದೆ. ಜಂಬೂ ಸವಾರಿ ನೋಡಲು ಜನರು ಕಾಯುತ್ತಿದ್ದಾರೆ. ಈ ಹಿಂದೆ ದಸರಾ ಆನೆಗಳೊಂದಿಗೆ ಫೋಟೋ, ರೀಲ್ಸ್ ಗೆ ಸರ್ಕಾರ ಬ್ರೇಕ್ ಹಾಕಿತ್ತು. ಈಗ ತತ್ತೂರಿ ಬ್ಯಾನ್ ಮಾಡಲಾಗಿದೆ.

    ತುತ್ತೂರಿ ಬ್ಯಾನ್ ಮಾಡುವಂತೆ ಸೂಚಿಸಿ ಮೈಸೂರು ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ. ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ತುತ್ತೂರಿ ಕಿರಿಕಿರಿ ಉಂಟುಮಾಡುವ ಹಿನ್ನೆಲೆ ಈ ಆದೇಶ ಹೊರಡಿಸಲಾಗಿದೆ.

    ಕರ್ನಾಟಕ ಪೊಲೀಸ್ ಕಾಯ್ದೆ 1963, ಕಲಂ 35, 36 ಮತ್ತು 92 (Q) ಅಡಿ ವುವುಜೆಲಾ (ತುತ್ತೂರಿ) ಮಾರಾಟ ಮಾಡುವುದು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ. ಕರ್ನಾಟಕ ಪೊಲೀಸ್ ಕಾಯ್ದೆ 1963 ಸೆಕ್ಷನ್ 92 (Q) ಪ್ರಕಾರ ಹಾಗೂ ಭಾರತೀಯ ನ್ಯಾಯ ಸಂಹಿತೆ-2023 ಸೆಕ್ಷನ್ 270ರಲ್ಲಿ ಸಾರ್ವಜನಿಕ ಉಪದ್ರವವನ್ನು ಅಪರಾಧವೆಂದು ಪರಿಗಣಿಸಿದ್ದು, ಸಾರ್ವಜನಿಕ ಆರೋಗ್ಯ, ಸುರಕ್ಷತೆ, ನೈತಿಕತೆಗೆ ಕಿರಿಕಿರಿ ಉಂಟುಮಾಡುತ್ತದೆ ಎಂದು ಪರಿಗಣಿಸಲಾಗಿದೆ.

    ಇದನ್ನೂ ಓದಿ : ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಗೆ ಬಾಂ*ಬ್ ಬೆದರಿಕೆ ಇ-ಮೇಲ್

    ಆದೇಶ ಉಲ್ಲಂಘಿಸುವವರ ವಿರುದ್ಧ ಕಾನೂನಿನನ್ವಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಈ ಘಟಕದ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

    Continue Reading

    DAKSHINA KANNADA

    ಮಂಗಳೂರು : ಅರ್ಚನಾ ಕಾಮತ್ ತ್ಯಾಗ ಸಂಸ್ಮರಣಾ ರಕ್ತದಾನ ಶಿಬಿರ

    Published

    on

    ಮಂಗಳೂರು : ಬದುಕಿರುವಾಗಲೇ ದೇಹದ ಅಂಗವೊಂದನ್ನು ಆಪ್ತ ಸಂಬಂಧಿಗೆ ದಾನ ಮಾಡಿ ವಿಧಿಲೀಲೆಗೆ ಬಲಿಯಾದ ಉಪನ್ಯಾಸಕಿ ಅರ್ಚನಾ ಕಾಮತ್ ಅವರ ದಿವ್ಯಾತ್ಮಕ್ಕೆ ನುಡಿ ನಮನ ಕಾರ್ಯಕ್ರಮ ಮತ್ತು ರಕ್ತದಾ ನ ಶಿಬಿರ ಮಂಗಳೂರಿನ ಟಿ.ವಿ.ರಮಣ್ ಪೈ ಸಭಾಂಗಣದಲ್ಲಿ ನಡೆಯಿತು.

    ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಆಯೋಜಿಸಿದ ಈ ಕಾರ್ಯಕ್ರಮವನ್ನು ಶಾಸಕ ವೇದವ್ಯಾಸ ಕಾಮತ್ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು,  ಶಾಸಕ ಕಾಮತ್ ಬಾಲ್ಯದಿಂದಲೇ ಪರಿಚಯರಾಗಿದ್ದ ಅರ್ಚನಾ ಕಾಮತ್ ಅವರು ಶಿಕ್ಷಕಿಯಾಗಿ ವಿದ್ಯಾರ್ಥಿಗಳ ಅಚ್ಚುಮೆಚ್ಚಿನವರಾಗಿದ್ದರು. ಅವರ ಬದುಕು ನಮಗೆ ಆದರ್ಶವಾಗಿದೆ. ಅವರ ಇಡೀ ಕುಟುಂಬ ನಮಗೆ ಆತ್ಮೀಯವಾಗಿದೆ. ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ರಕ್ತದಾನ ಶಿಬಿರ ಆಯೋಜಿಸಿ ಅರ್ಚನಾ ಅವರ ಆತ್ಮೀಯರನ್ನು ಒಂದುಗೂಡಿಸಿ ಮಾದರಿ ಕಾರ್ಯ ಮಾಡಿದೆ. ಇಷ್ಟು ಚಿಕ್ಕ ವಯಸ್ಸಿನಲ್ಲಿ ನಮ್ಮನ್ನು ಅಗಲಿದ ಅರ್ಚನಾ ‌ಕಾಮತ್ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರ ಬಗ್ಗೆ ಮಾತನಾಡುವುದು ತುಂಬಾ ನೋವಿನ ಸಂಗತಿ ಎಂದು ಭಾವುಕರಾದರು.

    ಈ ಸಂದರ್ಭ ರಥಬೀದಿ ವೆಂಕಟರಮಣ ದೇವಸ್ಥಾನದ ಟ್ರಸ್ಟಿ ಸಿಎ ಜಗನ್ನಾಥ್ ಕಾಮತ್, ಬೆಸೆಂಟ್ ಶಿಕ್ಷಣ ಸಂಸ್ಥೆಯ ಪ್ರಮುಖರಾದ ಮಣೇಲ್ ಅಣ್ಣಪ್ಪ ನಾಯಕ್ ಮೊದಲಾದವರು ಉಪಸ್ಥಿತರಿದ್ದರು. ಬಿಎನ್ ಐ, ಸಹ್ಯಾದ್ರಿ ಶಿಕ್ಷಣ ಸಂಸ್ಥೆ, ಕೆನರಾ ಹೈಸ್ಕೂಲ್ ಅಸೋಸಿಯೇಷನ್, ಕೆಎಂಸಿ ಆಸ್ಪತ್ರೆ, ಬೆಸೆಂಟ್ ಶಿಕ್ಷಣ ಸಂಸ್ಥೆ, ಯೂತ್ ಆಫ್ ಜಿಎಸ್ ಬಿ, ಸಿಎ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು. ರಕ್ತದಾನ ಶಿಬಿರದಲ್ಲಿ 98ಕ್ಕೂ ಅಧಿಕ ನಾಗರಿಕರು ರಕ್ತದಾನ ಮಾಡಿದರು.

    ಇದನ್ನೂ ಓದಿ : ಮುದ್ದಾದ ಮಗಳ ಮುಖ ರಿವೀಲ್ ಮಾಡಿದ ಮಿಲನಾ ದಂಪತಿ

    ಅರ್ಚನಾ ಕಾಮತ್ ಅವರ ಪತಿ, ಸಹೋದರಿ ಹಾಗೂ ಸಂಬಂಧಿಕರು ರಕ್ತದಾನ ಮಾಡಿ ನೋವಿನಲ್ಲಿಯೂ ಹೃದಯ ವೈಶಾಲ್ಯತೆ ಮೆರೆದು ಮಾದರಿಯಾದರು.

    Continue Reading

    DAKSHINA KANNADA

    ಮಂಗಳೂರು : ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು

    Published

    on

    ಮಂಗಳೂರು : ಮಂಗಳೂರಿನ ಹೊರವಲಯದ ಅಡ್ಯಾರ್ ಗಾರ್ಡನ್ ಬಳಿ ಚಲಿಸುತ್ತಿದ್ದ ಕಾರೊಂದು ಹೊತ್ತಿ ಉರಿದಿದೆ. ಕಾರಿನಲ್ಲಿ ಬೆಂ*ಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಕೆಲ ಹೊತ್ತು ಸ್ಥಗಿತಗೊಂಡಿತ್ತು.

    ಏಕಾಏಕಿ ಕಾರಿಗೆ ಬೆಂ*ಕಿ ಹೊತ್ತಿಕೊಂಡಿದ್ದು ಸ್ಥಳೀಯರು ಬೆಂ*ಕಿಯನ್ನು ನಂದಿಸಲು ಯತ್ನಿಸುವ ಮೊದಲೇ ಕಾರು ಸುಟ್ಟು ಸಂಪೂರ್ಣ ಕರಕಲಾಗಿತ್ತು. ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದರು ಅಗ್ನಿಶಾಮಕ ದಳ ತಲುಪುವಷ್ಟರಲ್ಲಿ ಕಾರು ಸಂಪೂರ್ಣ ಭಸ್ಮವಾಗಿದೆ.

    ಈ ಕಾರು ಮಾಲಕ ಬಿಸಿ ರೋಡಿನ ಗುರುದೀಪ್ ಎಂದು ತಿಳಿದು ಬಂದಿದ್ದು, ಕಾರು ಬಿ ಎಂ ಡಬ್ಲ್ಯೂ ಕಂಪೆನಿಗೆ ಸೇರಿದ 2011-12 ಮಾಡೆಲ್‌ನದ್ದಾಗಿದೆ.

     

    Continue Reading

    LATEST NEWS

    Trending