ನವದೆಹಲಿ: ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂಗೆ ಸಿಬಿಐ ಅಧಿಕಾರಿಗಳು ಶಾಕ್ ನೀಡಿದ್ದು ಪಿ ಚಿದಂಬರಂ ಅವರಿಗೆ ಸೇರಿರುವ ಮುಂಬೈ, ದೆಹಲಿ, ತಮಿಳುನಾಡಿನಲ್ಲಿನ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಇವರ ಪುತ್ರ ಕಾರ್ತಿ ಚಿದಂಬರಂ ವಿರುದ್ಧ ವಿದೇಶಕ್ಕೆ ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆ ರೈಡ್ ನಡೆಸಲಾಗಿದೆ ಎಂಬ ಮಾಹಿತಿ ಲಭಿಸಿದೆ.
ಕಾರ್ತಿ ಚಿದಂಬರಂ ವಿರುದ್ಧ 2010-2014 ರ ಅವಧಿಯಲ್ಲಿ ವಿದೇಶಕ್ಕೆ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವ ಆರೋಪದಡಿ ಹೊಸ ಪ್ರಕರಣವನ್ನು ದಾಖಲಿಸಲಾಗಿದೆ ಎನ್ನಬಲಾಗಿದೆ.