Connect with us

    DAKSHINA KANNADA

    24 ಗಂಟೆ ಒಳಗಡೆ ಕುಖ್ಯಾತ ಸರಕಳ್ಳರಿಬ್ಬರ ಸೆರೆಹಿಡಿದ ಸಿಸಿಬಿ ಪೊಲೀಸರು !!

    Published

    on

    ಮಂಗಳೂರು : ಬೈಕ್ ನಲ್ಲಿ ತೆರಳಿ ಮಹಿಳೆಯರ ಕುತ್ತಿಗೆಯಿಂದ ಚಿನ್ನದ ಸರವನ್ನು ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾದ ಕುಖ್ಯಾತ ಸರಕಳ್ಳರಿಬ್ಬರನ್ನು ಕೃತ್ಯ ನಡೆದ 24 ಗಂಟೆ ಒಳಗಡೆ ಮಂಗಳೂರು ಪೊಲೀಸ್‌ ಕಮಿಷನರೆಟ್ ವ್ಯಾಪ್ತಿಯಲ್ಲಿ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ ಚಿನ್ನದ ಸರ ಹಾಗೂ ಕಳವುಗೈದ ಬೈಕ್ ನ್ನು ವಶಪಡಿಸಿಕೊಂಡು ಪ್ರಕರಣವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

    ಸುರತ್ಕಲ್‌ ಕೃಷ್ಣಾಪುರ ಮೂಲದವನಾಗಿದ್ದು, ಪ್ರಸ್ತುತ ತೊಕ್ಕೋಟು ಸಮೀಪದ ಚೆಂಬುಗುಡ್ಡೆಯಲ್ಲಿ ವಾಸವಾಗಿರುವ ಹಬೀಬ್ ಹಸನ್ ಯಾನೆ ಚೊಂಬುಗುಡ್ಡೆ ಹಬೀಬ್ ಯಾನೆ ಅಬ್ಬಿ (43)ಮತ್ತು  ಬಂಟ್ವಾಳ ಬಿ. ಮೂಡ ಗ್ರಾಮದ ಪರ್ಲಿಯಾ ಕ್ರಾಸ್ ನಿವಾಸಿ ಉಮ್ಮರ್ ಶಿಯಾಫ್ (29)ಬಂಧಿತ ಆರೋಪಿಗಳು.

    ಉಡುಪಿ ಜಿಲ್ಲೆಯ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ಬೋಳ ಗ್ರಾಮದ ಸುಂಕಮಾರು- ಮಂಜರಪಲ್ಕೆ ಎಂಬಲ್ಲಿ ಡಿಸೆಂಬರ್ 9 ರಂದು  ವಸಂತಿ ಎಂಬವರು ರಸ್ತೆಯಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ  ಬೈಕಿನಲ್ಲಿ ಯುವಕ ಮತ್ತು ಯುವತಿ ಬಂದು ಭಾಸ್ಕರ್ ಎಂಬವರ ಮನೆಗೆ ಹೋಗುವ ದಾರಿ ಯಾವುದೆಂದು ಕೇಳಿ ಬೈಕ್ ಸವಾರನು ವಸಂತಿಯವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಸುಲಿಗೆ ಮಾಡಿ ಬಳಿಕ ಇಬ್ಬರೂ ಪರಾರಿಯಾಗಿದ್ದರು. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಇನ್ನೊಂದು ಪ್ರಕರಣ ಡಿಸೆಂಬರ್‌ 6 ರಂದು ಉಳ್ಳಾಲ ತಾಲೂಕಿನಲ್ಲಿ ನಡೆದಿತ್ತು. ನರಿಂಗಾನ ಗ್ರಾಮದ ತೌಡುಗೋಳಿ ಅಂಗನವಾಡಿ ಕೇಂದ್ರದಲ್ಲಿ ಅಡುಗೆ ಸಹಾಯಕರಾಗಿ ಕೆಲಸ ಮಾಡಿಕೊಂಡಿದ್ದ ಸುಜಿನಾ ಡಿ’ಸೊಜಾ  ಅವರು ಮಧ್ಯಾಹ್ನ ಅಂಗನವಾಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ ಬೈಕಿನಲ್ಲಿ ಬಂದ ಇಬ್ಬರಲ್ಲಿ ಒಬ್ಬಾತ ಇಳಿದು ಮಂಜನಾಡಿಗೆ ಹೋಗುವ ದಾರಿಯ ಬಗ್ಗೆ ವಿಚಾರಿಸಿದ್ದಾನೆ. ಸುಜಿನಾ ಅವರು ಮಂಜನಾಡಿಗೆ ಹೋಗುವ ದಾರಿಯನ್ನು ಹೇಳಿ, ಅಂಗನವಾಡಿಯ ಬಾಗಿಲನ್ನು ಹಾಕುವಷ್ಟರಲ್ಲಿ ಬಾಗಿಲನ್ನು ದೂಡಿ ಅಂಗನವಾಡಿಯ ಒಳಗೆ ಪ್ರವೇಶಿಸಿ, ಆಕೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಸುಲಿಗೆ  ಮಾಡಿ ಆರೋಪಿಗಳು ಬೈಕ್ ನಲ್ಲಿ ಪರಾರಿಯಾಗಿದ್ದರು. ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿದ್ದರು.  ಈ ಪ್ರಕರಣದ ಬಗ್ಗೆ ಮಂಗಳೂರು ಸಿಸಿಬಿ ಪೊಲೀಸರು ಸಿಸಿ ಟಿವಿ ಫೂಟೇಜ್ ಗಳನ್ನು ಸಂಗ್ರಹಿಸಿ ಮಾಹಿತಿ ಸಂಗ್ರಹಿಸುತ್ತಿದ್ದಾಗ ಈ ಹಿಂದೆ ಹಲವು ಸರಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ಸುಮಾರು 4 ದಿನಗಳ ಹಿಂದೆ ಜೈಲ್ ನಿಂದ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ ಹಬೀಬ್ ಹಸನ್ ಮತ್ತು ಆತನ ಸಹಚರನು ಭಾಗಿಯಾಗಿರ ಬಹುದೆಂದು ಖಚಿತ ಪಡಿಸಿಕೊಂಡು ಅವರ ಪತ್ತೆಗಾಗಿ ಮಾಹಿತಿ ಸಂಗ್ರಹಿಸಲಾರಂಭಿಸಿದ್ದರು.

    ಇಬ್ಬರೂ ಮಂಗಳೂರಿನ ಕಾರ್ ಸ್ಟ್ರೀಟ್ ಬಳಿಯಲ್ಲಿದ್ದಾರೆ ಎಂಬ ಮಾಹಿತಿ ಬಂದ ಮೇರೆಗೆ ನಿನ್ನೆ ಕಾರ್ಯಾಚರಣೆ ನಡೆಸಿ ಇಬ್ಬರನ್ನೂ ಬಂಧಿಸಿದ್ದಾರೆ. ಆರೋಪಿಗಳಿಬ್ಬರು 2 ತಿಂಗಳ ಹಿಂದೆ ಮೂ ಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2 ಕಡೆ ಮಹಿಳೆಯರ ಕುತ್ತಿಗೆಯಿಂದ ಸರಕಳ್ಳತನ ಮಾಡಿ ದಸ್ತಗಿರಿಯಾಗಿ ಮಂಗಳೂರು ಜೈಲಿನಲ್ಲಿದ್ದವರು ಡಿಸೆಂಬರ್‌ 6 ರಂದು ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದರು. ಅದೇ ದಿನ ಜೈಲ್ ರಸ್ತೆಯ ಪರಿಸರದಲ್ಲಿ ಬೈಕ್ ಕಳ್ಳತನ ಮಾಡಿ ಮರುದಿನ  ತೌಡುಗೋಳಿಯಲ್ಲಿ ಮಹಿಳೆಯ ಸರ ಕಳ್ಳತನ, 2 ದಿನ ಬಿಟ್ಟು ಮಂಗಳೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಪರಿಸರದಲ್ಲಿ ನಿಲ್ಲಿಸಿದ್ದ ಇನ್ನೊಂದು ಬೈಕ್ ನ್ನು ಕಳವು ಮಾಡಿ ಅದೇ ಬೈಕ್ ನಲ್ಲಿ ಆರೋಪಿ ಹಬೀಬ್ ತನ್ನ ಸ್ನೇಹಿತೆ ಮಹಿಳೆಯ ಜತೆಗೂಡಿ ಕಾರ್ಕಳದಲ್ಲಿ ಮಹಿಳೆಯೋರ್ವರ ಕುತ್ತಿಗೆಯಿಂದ ಚಿನ್ನದ ಸರವನ್ನು ಸುಲಿಗೆ ಮಾಡಿದ್ದನು.

    DAKSHINA KANNADA

    ತುಳುವರ ಬದುಕು, ಸಂಸ್ಕೃತಿ, ಸಂಘರ್ಷದ ಕಥಾನಕದ ದಸ್ಕತ್‌ ಚಲನಚಿತ್ರ ತೆರೆಗೆ !!

    Published

    on

    ಉಡುಪಿ: ಮಾಜಿ ಸಚಿವ ಕೃಷ್ಣ ಜೆ ಪಾಲೇಮಾರ್ ಅರ್ಪಿಸುವ ತುಳು ಚಲನಚಿತ್ರ ‘ದಸ್ಕತ್’ ಡಿಸೆಂಬರ್ 13ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಿರ್ದೇಶಕ ಕಾಮಿಡಿ ಕಿಲಾಡಿಗಳು ಖ್ಯಾತಿಯ ಅನೀಶ್ ಪೂಜಾರಿ ವೇಣೂರು ತಿಳಿಸಿದ್ದಾರೆ.

    ಉಡುಪಿ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ತುಳುವರ ಬದುಕು, ಸಂಸ್ಕೃತಿ, ಸಂಘರ್ಷದ ಕಥಾನಕವನ್ನು ಚಿತ್ರಿಸುವ ‘ದಸ್ಕತ್’ ನೈಜ ಘಟನೆಯನ್ನಾಧರಿಸಿದ ಚಿತ್ರವಾಗಿದ್ದು, ಬೆಳ್ತಂಗಡಿ ತಾಲೂಕಿನ ವೇಣೂರು, ನಾರಾವಿ, ಅಂಡಿಂಜೆ, ಕೊಕ್ರಾಡಿ ಮುಂತಾದ ಪ್ರದೇಶಗಳಲ್ಲಿ ಚಿತ್ರಿತವಾಗಿದೆ ಎಂದು ಚಿತ್ರಕಥೆಯನ್ನು ಬರೆದಿರುವ ಅನೀಶ್ ಪೂಜಾರಿ ತಿಳಿಸಿದರು. ರಾಘವೇಂದ್ರ ಕುಡ್ವ ಚಿತ್ರದ ನಿರ್ಮಾಪಕರಾಗಿದ್ದು, ಸಂತೋಷ್ ಆಚಾರ್ಯ ಗುಂಪಲಾಜಿ ಅವರ ಛಾಯಾಗ್ರಹಣವಿದೆ. ಸಮರ್ಥನ ಎಸ್.ರಾವ್ ಚಿತ್ರದ ಸಂಗೀತ ನಿರ್ದೇಶಕರಾಗಿದ್ದಾರೆ.

    ಚಿತ್ರದ ತಾರಾಗಣದಲ್ಲಿ ದೀಕ್ಷಿತ್ ಕೆ.ಅಂಡಿಂಜೆ, ನೀರಜ್ ಕುಂಜರ್ಪ, ಮೋಹನ್ ಶೇಣಿ, ಮಿಥುನ್ ರಾಜ್, ಭವ್ಯ ಪೂಜಾರಿ, ಚಂದ್ರಹಾಸ ಉಲ್ಲಾಳ್, ನವೀನ್ ಬೋಂದೇಲ್, ಯೋಗೀಶ್ ಶೆಟ್ಟಿ ಚೇತನ್ ಪೀಲಾರ್, ತಿಮ್ಮಪ್ಪ ಕುಲಾಲ್ ಮುಂತಾದವರು ನಟಿಸಿದ್ದಾರೆ ಎಂದರು. ಡಿ.13ರಂದು ಉಡುಪಿ, ಮಂಗಳೂರು, ಪುತ್ತೂರು, ಕಾರ್ಕಳ, ಬೆಳ್ತಂಗಡಿಗಳ ಸುಮಾರು 15 ಸಿಂಗಲ್ ಥಿಯೇಟರ್ ಹಾಗೂ ಮಲ್ಟಿಫ್ಲೆಕ್ಸ್ ಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ನಟ ಅರ್ಜುನ್ ಕಾಪಿಕಾಡ್, ಚಿತ್ರ ವಿತರಕ ಸಚಿನ್ ಉಪ್ಪಿನಂಗಡಿ, ನಿರ್ಮಾಫಕ ರಾಘವೇಂದ್ರ ಪುತ್ರ ರಾಹುಲ್ ಕುಡ್ವ, ನಟ ದೀಕ್ಷಿತ್‌ , ನಟಿ ಭವ್ಯಾ ಪೂಜಾರಿ, ಕಾರ್ಯಕಾರಿ ನಿರ್ಮಾಪಕ ಪ್ರಜ್ಞೇಶ್‌ ಶೆಟ್ಟಿ ಮೊದಲಾದವರಿದ್ದರು.

    Continue Reading

    DAKSHINA KANNADA

    ಅನುಪಮ್ ಅಗರ್ವಾಲ್ ವರ್ಗಾವಣೆಗೆ ಒತ್ತಾಯಿಸಿ ಕಾವೂರಿನಲ್ಲಿ ಪ್ರತಿಭಟನೆ !!

    Published

    on

    ಕಾವೂರು: ಜನಪರ ಹೋರಾಟಗಳಿಗೆ ಅವಕಾಶ ನಿರಾಕರಣೆ, ಪ್ರತಿಭಟನಕಾರರ ಮೇಲೆ‌ ಕೇಸು ದಾಖಲಿಸುವ ಸರ್ವಾಧಿಕಾರಿ ಪ್ರವೃತ್ತಿಯ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ರನ್ನು ವರ್ಗಾಯಿಸಬೇಕೆಂದು ಒತ್ತಾಯಿಸಿ ಕಾವೂರು ಜಂಕ್ಷಣ್‌ನಲ್ಲಿ ಸಮಾನ ಮನಸ್ಕ ಸಂಘಟನೆಗಳ ವೇದಿಕೆಯಿಂದ ಪ್ರತಿಭಟನಾ ಪ್ರದರ್ಶನ ನಡೆಯಿತು.

    ಸಭೆಯನ್ನು ಉದ್ದೇಶಿಸಿ ಸುರತ್ಕಲ್ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕರಾದ ಮಾಜಿ‌ ಉಪಮೇಯರ್ ಕೆ. ಮಹಮ್ಮದ್ ಮಾತನಾಡಿ ಪೋಲಿಸ್ ಆಯುಕ್ತ ಅನುಪಮ್ ಅಗರ್ವಾಲ್‌ಗೆ ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ಹೋರಾಡುವವರ ಬಗ್ಗೆ ಅಲರ್ಜಿ ಇದೆ. ಒಬ್ಬ ಉನ್ನತ ಮಟ್ಟದ ಪೋಲೀಸ್ ಅಧಿಕಾರಿಗೆ ಇಂತಹ ಮನಸ್ಥಿತಿ ಸರಿಯಲ್ಲ, ಜನಪರ ಹೋರಾಟಗಳಿಗೆ ಕಡಿವಾಣ ಹಾಕುವ ಹೊಸ ಸಂಪ್ರದಾಯ ಪೋಲೀಸ್ ಇಲಾಖೆ ಸೃಷ್ಟಿಸುತ್ತಿರುವುದು ಖಂಡನೀಯ ಕಮಿಷನರ್ ವರ್ಗಾವಣೆ ಆಗುವವರೆಗೆ ಸಮಾನ ಮನಸ್ಕ ಹೋರಾಟಗಾರರು ನಿರಂತರ ಪ್ರತಿಭಟನೆ ಮುಂದುವರಿಸುವುದಾಗಿ ಎಚ್ಚರಿಸಿದರು.

    ಮಾಜಿ ಕಾರ್ಪೊರೇಟರ್ ದಯಾನಂದ ಶೆಟ್ಟಿ ಮಾತನಾಡಿ ಬಂಡವಾಳಶಾಹಿ ಆಡಳಿತ ವ್ಯವಸ್ಥೆಯಲ್ಲಿ ಜನಸಾಮಾನ್ಯರ ಸಮಸ್ಯೆಗಳು ಹೆಚ್ಚಳವಾಗುತ್ತಿವೆ. ಇವುಗಳ ಪರಿಹಾರಕ್ಕೆ ಹೋರಾಟವಲ್ಲದೆ ಬೇರೆ ದಾರಿಯಿಲ್ಲ. ಪೋಲೀಸ್ ಆಯುಕ್ತರು ಇಂತಹ ಅನಿವಾರ್ಯ ಹೋರಾಟಗಳಿಗೆ ಕಡಿವಾಣ ಹಾಕಲು ಹೊರಟಿರಿವುದು ಸಂವಿಧಾನ ಬದ್ದ ಹಕ್ಕನ್ನು ಕಿತ್ತುಕೊಂಡಂತೆ.ಆಯುಕ್ತರ ಗೊಡ್ಡು ಬೆದರಿಕೆಗಳಿಗೆ ನಾವು ಹಿಂಜರಿಯುವುದಿಲ್ಲ. ಜೈಲಿಗೆ ಹೋದರೂ ಸರಿ ಹೋರಾಟ ನಿಲ್ಲುವುದಿಲ್ಲ ಎಂದು ಹೇಳಿದರು.

    ಸಿಪಿಐಎಂ ಜಿಲ್ಲಾ ಮುಖಂಡ ಸುನೀಲ್ ಕುಮಾರ್ ಬಜಾಲ್, ಡಿವೈಎಫ್‌ಐ ಮುಖಂಡರಾದ ನವೀನ್ ‌ಕೊಂಚಾಡಿ, ಸಾಮಾಜಿಕ ಮುಂದಾಳು ರಿಯಾಝ್ ಹುಸೈನ್ ಮಾತನಾಡಿದರು. ಅನಿಲ್‌ ಡಿಸೋಜ, ನೌಶಾದ್, ರೆಹೆಮಾನ್ ಕುಂಜತ್ತಬೈಲ್, ಮುಸ್ತಾಫ, ಪ್ರಮೀಳಾ, ಆಶಾ ಗಣೇಶ್, ಚರಣ್ ಶೆಟ್ಟಿ, ಸೌಮ್ಯ ಮುಂತಾದವರು ಹೋರಾಟದ ಸಮಯ ಉಪಸ್ಥಿತರಿದ್ದರು.

     

    Continue Reading

    DAKSHINA KANNADA

    ಕಡಬ: ಪ್ಯಾಚ್‌ ವರ್ಕ್‌ ಮಾಡಿ ಜನತೆ ಕಣ್ಣಿಗೆ ಮಣ್ಣೆರೆಚುವ ತಂತ್ರ

    Published

    on

    ಕಡಬ: ಬರೇ ಪ್ಯಾಚ್‌ ವರ್ಕ್‌ ಮಾಡಿ ಜನರ ಕಣ್ಣೀಗೆ ಮಣ್ಣೇರೆಚುತ್ತಿರುವ, ಹಲವಾರು ವರ್ಷಗಳಿಂದ ಕುಂಟು ನೆಪ ಹೇಳಿ ರಸ್ತೆ ದುರಸ್ತಿ ಮಾಡದಿರುವ ಲೋಕೋಪಯೋಗಿ ಇಲಾಖೆ ವಿರುದ್ಧ ಸಾರ್ವಜನಿಕರು ತಮ್ಮ ಆಕ್ರೋಶವನ್ನು ಬಹಿರಂಗವಾಗಿ ಹೊರಹಾಕಿದ್ದಾರೆ.

    ಕಡಬ – ಕೋಡಿಂಬಾಳ ರಾಜ್ಯ ಹೆದ್ದಾರಿಗೆ ರಸ್ತೆ ತೇಪೆ ಹಚ್ಚುವ ಕಾಮಗಾರಿಯನ್ನು ಗ್ರಾಮಸ್ಥರು ತಡೆದಿದ್ದಾರೆ. ಕಳೆದ ವರ್ಷವೂ ಬರೇ ಪ್ಯಾಚ್‌ವರ್ಕ್ ಕಾಮಗಾರಿಯನ್ನು ನಡೆಸಲಾಗಿತ್ತು. ಆದರೆ ಆ ಕಾಮಗಾರಿ ಅದೇ ವರ್ಷ ಕಿತ್ತು ಹೋಗಿದೆ. ಈ ವರ್ಷವೂ ಮತ್ತೆ ಕಳಪೆ ಕಾಮಗಾರಿ ನಡೆಸಲಾಗುತ್ತಿದೆ. ದಿನಂಪ್ರತಿ ಸುಳ್ಯ ಎಂಎಲ್‌ಎ ಸಂಚರಿಸುವ ಪ್ರಮುಖ ರಸ್ತೆ ಇದಾಗಿದ್ದು, ಕಡಬ ತಾಲೂಕಿನ ಕೋಡಿಂಬಾಳ ಕಲ್ಲಂತಡ್ಕ ಎಂಬಲ್ಲಿ ರಸ್ತೆಯನ್ನು ದುರಸ್ತಿ ಪಡಿಸಲಾಗಿದೆ.

    ಸ್ಥಳಕ್ಕೆ ಲೋಕೋಪಯೋಗಿ ಇಂಜಿನಿಯರ್, ಗುತ್ತಿಗೆದಾರರು ಬರಬೇಕೆಂದು ಗ್ರಾಮಸ್ಥರು ಪಟ್ಟು ಹಿಡಿದರು.

     

    Continue Reading

    LATEST NEWS

    Trending