Connect with us

DAKSHINA KANNADA

ಮಂಗಳೂರು ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು MDMA ಹೊಂದಿದ ನಾಲ್ವರ ಸೆರೆ..!

Published

on

ಮಂಗಳೂರು ನಗರದ ಸಾರ್ವಜನಿಕರಿಗೆ ಮಾದಕ ವಸ್ತುವಾದ (Methylene dioxy methamphetamine) MDMA ನ್ನು ಬೆಂಗಳೂರಿನಿಂದ ಯಿಂದ ಖರೀದಿಸಿ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದವರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ 4 ಆರೋಪಿಗಳನ್ನು ದಸ್ತಗಿರಿ ಮಾಡಿರುತ್ತಾರೆ.

ಮಂಗಳೂರು : ಮಂಗಳೂರು ನಗರದ ಸಾರ್ವಜನಿಕರಿಗೆ ಮಾದಕ ವಸ್ತುವಾದ (Methylene dioxy methamphetamine) MDMA ನ್ನು ಬೆಂಗಳೂರಿನಿಂದ ಯಿಂದ ಖರೀದಿಸಿ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದವರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ 4 ಆರೋಪಿಗಳನ್ನು ದಸ್ತಗಿರಿ ಮಾಡಿರುತ್ತಾರೆ.

ನಿಷೇಧಿತ ಮಾದಕ ವಸ್ತು MDMA ವನ್ನು ಬೆಂಗಳೂರಿನಿಂದ ಅಕ್ರಮವಾಗಿ ಖರೀದಿಸಿ ಮಂಗಳೂರಿಗೆ ಕಾರೊಂದರಲ್ಲಿ ತರುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಪಿಎಸ್ಐ ಪ್ರದೀಪ್ ಟಿ ಆರ್ ರವರ ನೇತ್ರತ್ವದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರಿನ ಪಡೀಲ್ ಬಳಿ ಕಾರನ್ನು ತಪಾಸಣೆ ಮಾಡಿದಾಗ MDMA ಎಂಬ ನಿಷೇದಿತ ಮಾದಕ ವಸ್ತುವನ್ನು ಹೊಂದಿದ ಆರೋಪದ ಮೇಲೆ ಕಾಸರಗೋಡು ಉಪ್ಪಳದ ಮಹಮ್ಮದ್ ರಮೀಝ್, ಮೊಹಿದ್ದಿನ್ ರಶೀದ್, ಅಬ್ದುಲ್ ರಾವೂಫ್, ಮತ್ತು ಬೆಂಗಳೂರಿನ ಸಬಿತಾ @ ಚಿಂಚು @ ಸಮೀರಾರನ್ನು ಅರೆಸ್ಟ್ ಮಾಡಿದ್ದಾರೆ.

ಬಂಧಿತರಿಂದ ಒಟ್ಟು 125 ಗ್ರಾಂ ತೂಕದ ರೂ. 6 ಲಕ್ಷ ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು, 6 ಮೊಬೈಲ್ ಫೋನ್ ಗಳು, ಡಿಜಿಟಲ್ ತೂಕ ಮಾಪನ ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಮಾರುತಿ ರಿಡ್ಜ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

ವಶಪಡಿಸಿಕೊಂಡ ನಿಷೇದಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್ ಗಳು ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಕಾರಿನ ಒಟ್ಟು ಮೌಲ್ಯ 9,82,000/-ಲಕ್ಷ ಆಗಬಹುದು.

ಆರೋಪಿಗಳು ಬೆಂಗಳೂರಿನಿಂದ ಅಕ್ರಮವಾಗಿ ಮಾದಕ ವಸ್ತುಗಳನ್ನು ಖರೀದಿಸಿ ಸಾರ್ವಜನಿಕರಿಗೆ ಮಾರಾಟ ಮಾಡಿ ಹಣ ಗಳಿಸಲು ಮಂಗಳೂರು ಕಡೆಗೆ ಬರುತ್ತಿದ್ದರು.

ಆರೋಪಿಗಳ ಪೈಕಿ ಮೊಹಮ್ಮದ್ ರಮೀಝ್ ಎಂಬಾತನ ವಿರುದ್ಧ ಈ ಹಿಂದೆ 2021 ನೇ ಇಸವಿಯಲ್ಲಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತುವನ್ನು ಹೊಂದಿದ ಬಗ್ಗೆ 2 ಪ್ರಕರಣ ದಾಖಲಾಗಿರುತ್ತದೆ.

ಈತನು 6 ತಿಂಗಳ ಹಿಂದೆ ಜೈಲ್ ನಿಂದ ಬಿಡುಗಡೆಗೊಂಡಿದ್ದನು. ಆರೋಪಿ ಅಬ್ದುಲ್ ರವೂಫ್ ಎಂಬಾತನ ವಿರುದ್ದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2018 ನೇ ಇಸವಿಯಲ್ಲಿ ಮಾದಕ ವಸ್ತುಗಳ ಸಾಗಾಟ ಮತ್ತು ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಪ್ರಕರಣ ದಾಖಲಾಗಿರುತ್ತದೆ.

ಹಾಗೂ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿರುತ್ತದೆ.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿರುತ್ತದೆ. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

DAKSHINA KANNADA

Surathkal: ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ- ವಿದ್ಯಾರ್ಥಿನಿಯರು ಗಂಭೀರ..!

Published

on

ಸುರತ್ಕಲ್: ರಸ್ತೆ ದಾಟುತ್ತಿದ್ದ ವೇಳೆ ರಾಂಗ್‌ ಸೈಡ್‌ನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗೊಂಡ ಘಟನೆ ಸುರತ್ಕಲ್‌ ಜಂಕ್ಷನ್‌ ಬಳಿ ನಡೆದಿದೆ.

ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿನಿ  ಗಾಯಗೊಂಡವರು ಎಂದು ತಿಳಿದು ಬಂದಿದೆ. ಇನ್ನೋರ್ವಳ ಸ್ಥಿತಿ ಚಿಂತಾಜನಕವಾಗಿದ್ದು. ಇನ್ನೊಬ್ಬಳಿಗೆ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಅಗಮಿಸಿದ ಸುರತ್ಕಲ್‌ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

Continue Reading

BANTWAL

ವೈನ್ ಶಾಪ್ ಗೆ ಬಂದಿದ್ದ ಆಸಾಮಿ ಮೊಬೈಲ್ ಕದ್ದು ಎಸ್ಕೇಪ್..!!

Published

on

ಪುತ್ತೂರು: ವೈನ್ ಶಾಪ್ ಗೆ ಬಂದಿದ್ದ ವ್ಯಕ್ತಿಯೋರ್ವ ಮೊಬೈಲ್ ಎಗರಿಸಿ ಪರಾರಿಯಾದ ಘಟನೆ ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಶ್ರೀರಾಮ್ ವೈನ್ ಶಾಪ್ ನಲ್ಲಿ ನಡೆದಿದೆ.

ವ್ಯಕ್ತಿಯೋರ್ವ ಗ್ರಾಹಕರ ಸೋಗಿನಲ್ಲಿ ವೈನ್ ಶಾಪ್ ಗೆ ಬಂದಿದ್ದ. ಮೊದಲಿಗೆ ಗ್ರಾಹಕರಂತೆ ಬಂದು ಮದ್ಯ ಖರೀದಿಗೆ ಆರ್ಡರ್ ಮಾಡಿ ಟೇಬಲ್ ನಲ್ಲಿದ್ದ ಮೊಬೈಲ್ ಗೆ ಕನ್ನ ಹಾಕಿದ್ದಾನೆ. ಬಳಿಕ ಶಾಪ್ ನವರು ಬೇರೆ ಕಡೆ ತಿರುಗುವಾಗ ಈಚೆಯಿಂದ ಈ ಕದೀಮ ಮೊಬೈಲ್ ಅನ್ನು ಎಗರಿಸಿ ಬ್ಯಾಗ್ ಗೆ ಹಾಕಿಕೊಂಡು ಪರಾರಿಯಾಗಿದ್ದಾನೆ.


ವೈನ್ ಶಾಪ್ ನಲ್ಲಿರುವ ರಾಜೇಶ್ ಎಂಬವರ ಮೊಬೈಲ್ ಕಳವು ಆಗಿತ್ತು. ಕೂಡಲೇ ಅವರು ಸಿಸಿ ಕ್ಯಾಮರಾ ಚೆಕ್ ಮಾಡಿದ್ದಾರೆ. ಆಗ ಮೊಬೈಲ್ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BELTHANGADY

ದ.ಕ ದಲ್ಲಿ ಭಾರಿ ಮಳೆ: ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿದ್ದ ಅಂಗಡಿಗಳಿಗೆ ಹಾನಿ..!!

Published

on

ಧರ್ಮಸ್ಥಳ: ಧರ್ಮಸ್ಥಳದಲ್ಲಿ 3ನೇ ದಿನದ ಲಕ್ಷ ದೀಪೋತ್ಸವದ ವೈಭವ ಒಂದು ಕಡೆಯಾದರೆ, ಇನ್ನೊಂದೆಡೆ ಗುಡುಗು ಸಹಿತ ಬಾರಿ ಮಳೆ ಅವಾಂತರ ತಂದಿದೆ.

ಕೆಲವು ಅಂಗಡಿಗಳಿಗೆ ಬಹಳ ಹಾನಿ ಆಗಿದೆ. ಮಳೆ ಅಂಗಡಿ ಮಾಲೀಕರಿಗೆ ನಷ್ಟವನ್ನುಂಟು ಮಾಡಿದೆ. ಮಳೆಗೆ ಅಂಗಡಿಯೊಳಗಿದ್ದ ಕೆಲವು ವಸ್ತುಗಳು ಮಳೆಗೆ ಕೊಚ್ಚಿಕೊಂಡು ಹೋಗಿದೆ.

ಧರ್ಮಸ್ಥಳ ಶಾಲಾ ಮೈದಾನದಲ್ಲಿ ನಡೆಯುತ್ತಿದ್ದ ವಸ್ತು ಪ್ರದರ್ಶನಕ್ಕೆ ಬಹಳ ಸಮಸ್ಯೆ ಆಗಿದೆ. ಸಭಾಂಗಣದ ಬಳಿ ಹಾಕಿದ್ದ ಕುರ್ಚಿಗಳು ಒದ್ದೆಯಾಗಿದೆ.

Continue Reading

LATEST NEWS

Trending