Friday, August 19, 2022

ಜೈಲಿನ ಮೇಲೆ ಸಿಸಿಬಿ ದಾಳಿ: ಗಾಂಜಾ ಸೇದುವ ಚಿಲುಮೆ ಪತ್ತೆ

ಬೆಂಗಳೂರು: ನಗರದ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಅಧಿಕಾರಗಳು ಇಂದು ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದ್ದಾರೆ.

ದಾಳಿ ವೇಳೆ ಗಾಂಜಾ ಮತ್ತು ಗಾಂಜಾ ಸೇದುವ ಚಿಲುಮೆ ಪತ್ತೆಯಾಗಿದೆ.

ಬೆಳಗ್ಗೆ 6 ಗಂಟೆಯಿಂದಲೂ ಸಿಸಿಬಿ ಪೊಲೀಸರು ಪರಿಶೀಲನೆ ನಡೆಯುತ್ತಿದ್ದಾರೆ.

ಈ ಹಿಂದೆ ದಾಳಿ ನಡೆಸಿದಾಗಲೂ ಗಾಂಜಾ ಪತ್ತೆಯಾಗಿತ್ತು. ಆದರೆ ಗಾಂಜಾ ಸೇದುವ ಚಿಲುಮೆ ಪತ್ತೆ ಆಗಿರಲಿಲ್ಲ. ಸದ್ಯ ಸಿಸಿಬಿ ಪೊಲೀಸರು ಮತ್ತಷ್ಟು ಹುಡುಕಾಟವನ್ನ ಮುಂದುವರಿಸಿದ್ದಾರೆ.

ಆನೇಕಲ್ ಸಮೀಪದ ಪರಪ್ಪನ ಅಗ್ರಹಾರದಲ್ಲಿ ಸಿಸಿಬಿ ಪರಿಶೀಲನೆ ಮುಂದುವರಿದಿದೆ. ಸಿಸಿಬಿ ಪೊಲೀಸರು ಕಳೆದ ಮೂರು ಗಂಟೆಗಳಿಂದ ಜೈಲಿನಲ್ಲಿ ಪರಿಶೀಲನೆ‌ ಮಾಡುತ್ತಿದ್ದಾರೆ.

ಗಾಂಜಾ, ಮೊಬೈಲ್ ಸೇರಿದಂತೆ ಇನ್ನಿತರ ಅಕ್ರಮ ವಸ್ತುಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೈದಿಗಳು ಜೈಲಿನಲ್ಲಿಯೇ ಕೂತು ಅನೇಕ ಅಪರಾಧ ಕೃತ್ಯದಲ್ಲಿ ತೊಡಗಿರುವುದು ಸಹ ಪತ್ತೆಯಾಗಿದೆ.

LEAVE A REPLY

Please enter your comment!
Please enter your name here

Hot Topics

ಸಿದ್ದರಾಮಯ್ಯಗೆ ಮೊಟ್ಟೆ ಎಸೆತ ಪ್ರಕರಣ: 9 ಮಂದಿಯ ಬಂಧನ

ಕುಶಾಲನಗರ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಕೋಳಿ ಮೊಟ್ಟೆ ಎಸೆದ ಘಟನೆ ಕುರಿತು ವಶಕ್ಕೆ ತೆಗೆದುಕೊಳ್ಳಲಾದ 9 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿರುವ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು...

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದನ್ನು ಖಂಡಿಸಿ ಆ.26 ರಂದು ಮಡಿಕೇರಿ ಎಸ್‌ಪಿ ಕಚೇರಿಗೆ ಮುತ್ತಿಗೆ

ಬೆಂಗಳೂರು: ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಮಡಿಕೇರಿ ಭೇಟಿ ವೇಳೆ ಮೊಟ್ಟೆ ಎಸೆದ ಪ್ರಕರಣವನ್ನು ಕಾಂಗ್ರೆಸ್‌ ಖಂಡಿಸಿದ್ದು, ಆ.26 ರಂದು ಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್‌ ಕಾರ್ಯಕರ್ತರು ನಿರ್ಧರಿಸಿದ್ದಾರೆ.ಈ...

ಇಂದು & ನಾಳೆ ಮಂಗಳೂರಿನಲ್ಲಿ ಮೂಡುಬಿದ್ರೆ ಸೇರಿದಂತೆ ಹಲವೆಡೆ ವಿದ್ಯುತ್ ವ್ಯತ್ಯಯ

ಮಂಗಳೂರು: ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆ.ವಿ ವಿವೇಕ್ ಮೋಟಾರ್ ಫೀಡರ್ ಮತ್ತು 11ಕೆ.ವಿ ಮಾರ್ಕೆಟ್ ಫೀಡರ್‍ಗಳಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ.ಆದ ಕಾರಣ ಇಂದು ಬೆಳಿಗ್ಗೆ 10...