Connect with us

LATEST NEWS

ಜಿಲ್ಲೆಯ ಎಲ್ಲಾ ಅಂಗಡಿಗಳಲ್ಲಿ ಸಿಸಿಟಿವಿ, ಥರ್ಮಲ್ ಸ್ಕ್ಯಾನರ್ ಆಳವಡಿಸಿ – ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ

Published

on

ಮಂಗಳೂರು : ದಕ್ಷಿಣ ಜಿಲ್ಲೆಯಲ್ಲಿ ಕೋರೋನಾ ವೈರಸ್ ಸೋಂಕು ಹರಡದಂತೆ ಮುಂಜಾಗೃತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಡಾ. ರಾಜೇಂದ್ರ ಕೆ.ವಿ ಅವರು ಆದೇಶ ಹೊರಡಿಸಿರುತ್ತಾರೆ.

ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಗ್ರಾಮಾಂತರ, ನಗರ ಸ್ಥಳೀಯ ಸಂಸ್ಥೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವ್ಯವಹಾರ ನಡೆಯುವ ಎಲ್ಲಾ ಹೋಟೆಲ್, ರೆಸ್ಟೋರೆಂಟ್‍ಗಳು ವಾಣಿಜ್ಯ ಸಂಕೀರ್ಣಗಳು, ಮಾಲ್‍ಗಳು ಜನಸಂದಣಿ ಸೇರುವ ಪ್ರದೇಶಗಳಲ್ಲಿ ಎಲ್ಲಾ ಅಂಗಡಿ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಕಡ್ಡಾಯವಾಗಿರುತ್ತದೆ.

ಪತ್ರಿಯೊಬ್ಬಅಂಗಡಿ ಮಾಲೀಕರು ಸಾಮಾಜಿಕಅಂತರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಹಾಗೂ ನಿಯಮ ಉಲ್ಲಂಘನೆಯಾಗದಂತೆ ಸಾಕಷ್ಟು ಮುಂಜಾಗೃತಾಕ್ರಮವಹಿಸಬೇಕು. ನಗರ ಸ್ಥಳೀಯ ಸಂಸ್ಥೆ ಹಾಗೂ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಪ್ರತಿಯೊಬ್ಬ ವರ್ತಕರುತಮ್ಮಅಂಗಡಿಯಲ್ಲಿ ಸಾರ್ವಜಿನಿಕರು ಹೆಚ್ಚಿನ ಸಂಖ್ಯೆಯಲ್ಲಿ ಏಕಕಾಲದಲ್ಲಿ ಸೇರದಂತೆ ಅಂಗಡಿ ಮುಂಗಟ್ಟಿನ ಮುಂಭಾಗದಲ್ಲಿ ಕನಿಷ್ಟ 6×6 ಅಡಿ ಅಂತರವನ್ನು ಗುರುತಿಸಿ ಗ್ರಾಹಕರಲ್ಲಿ ದೈಹಿಕಅಂತರ ಪಾಲಿಸುವುದನ್ನು ಖಚಿತಪಡಿಸಿಕೊಳ್ಳಬೇಕು.


ನಗರ ಸ್ಥಳೀಯ ಸಂಸ್ಥೆ ಹಾಗೂ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವರ್ತಕರು ತಮ್ಮ ಅಂಗಡಿ ಮುಂಗಟ್ಟಿನಲ್ಲಿ ಮುಂದೆ ಇರುವ ಸ್ಥಳದಲ್ಲಿ ವಾಹನ ಸಂಚಾರಕ್ಕೆ ಬಳಸಲ್ಪಡುವ ರಸ್ತೆಯನ್ನು ಹೊರತುಪಡಿಸಿ, ಉಳಿದ ಸ್ಥಳವನ್ನು ಸಾಮಾಜಿಕ ಅಂತರ ಕಾಯ್ದುಕೊಂಡು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಳಸುವುದು.

ಪ್ರತಿ ಅಂಗಡಿ ಮಾಲೀಕರು ತಮ್ಮಅಂಗಡಿ ಮುಂಭಾಗದಲ್ಲಿ ಸ್ವಯಂಚಾಲಿತ ಸ್ಯಾನಿಟೈಸರ್ ವ್ಯವಸ್ಥೆಯನ್ನು ಅಳವಡಿಸುವುದು ಹಾಗೂ ಗ್ರಾಹಕರನ್ನು ಸ್ಯಾನಿಟೈಸರ್ ಬಳಸಲು ಉತ್ತೇಜಿಸುವುದು. ಪ್ರತಿ ಅಂಗಡಿ ಮಾಲೀಕರು ಪ್ರತಿದಿನ ತಮ್ಮತಮ್ಮ ಅಂಗಡಿಗಳಲ್ಲಿ ಕೆಲಸ ನಿರ್ವಹಿಸುವ ಎಲ್ಲಾ ಸಿಬ್ಬಂದಿಗಳ ಆರೋಗ್ಯತಪಾಸಣೆಯನ್ನು ನಡೆಸುವುದು, ಅಲ್ಲದೇ ಪ್ರತಿ ಮೂರು ದಿನಗಳಿಗೊಮ್ಮೆ ತಮ್ಮ ಅಂಗಡಿಗಳನ್ನು ಸ್ಯಾನಿಟೈಸರ್ ಮಾಡಲು ಕ್ರಮವಹಿಸಬೇಕು.

ಅಂಗಡಿ ಮಾಲಿಕರು ತಮ್ಮ ಅಂಗಡಿ ಮುಂಭಾಗದಲ್ಲಿ ಓರ್ವ ಸಿಬ್ಬಂದಿಯನ್ನು ನಿಯೋಜಿಸಿ ದಿನನಿತ್ಯ ಗ್ರಾಹಕರನ್ನು ಥರ್ಮಲ್ ಸ್ಕ್ಯಾನಿಂಗ್ ಮಾಡುವುದು. ಜ್ವರದ ಲಕ್ಷಣಗಳುಳ್ಳ ಗ್ರಾಹಕರ ಹೆಸರು ದೂರವಾಣಿ ಸಂಖ್ಯೆ ಮತ್ತು ವಿಳಾಸವನ್ನು ರಿಜಿಸ್ಟರ್ ನಲ್ಲಿ ನಮೂದಿಸುವುದು ಹಾಗೂ ತಮ್ಮ ವ್ಯಾಪ್ತಿಯಆರೋಗ್ಯಾಧಿಕಾರಿ ಹಾಗೂ ಮಹಾನಗರಪಾಲಿಕೆಗೆ ವರದಿ ನೀಡಬೇಕು.

ಜ್ವರದ ಲಕ್ಷಣಗಳುಳ್ಳ ಗ್ರಾಹಕರ ಕುರಿತು ವರದಿ ಮಹಾನಗರಪಾಲಿಕೆ ಹಾಗೂ ಆರೋಗ್ಯ ಇಲಾಖೆಗೆ ಸ್ವೀಕೃತವಾದ ತಕ್ಷಣವೇ ಮಹಾನಗರಪಾಲಿಕೆಯಿಂದ / ಜಿಲ್ಲಾಡಳಿತದಿಂದ ಆಂಬುಲೆನ್ಸ್ ವ್ಯವಸ್ಥೆಯನ್ನು ಮಾಡಿಕೋವಿಡ್ ಲಕ್ಷಣಗಳುಳ್ಳ ವ್ಯಕ್ತಿಯನ್ನುಕೋವಿಡ್‍ಕೇರ್ ಸೆಂಟರ್ ಗೆ ತಪಾಸಣೆಗೆ ಕಳುಹಿಸಬೇಕು.

ಅಂಗಡಿ ಮುಂಗಟ್ಟುಗಳಲ್ಲಿ ಸಾರ್ವಜಿನಿಕರು ಸಾಮಾಜಿಕ ಅಂತರವನ್ನುಕಾಯ್ದುಕೊಂಡಿರುವ ಬಗ್ಗೆ ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸುತ್ತಿರುವ ಬಗ್ಗೆ ಸಿಸಿಟಿವಿ ಕ್ಯಾಮರಾವನ್ನು ಅಳವಡಿಸಿ ರೆಕಾರ್ಡಿಂಗ್ ಮಾಡವುದು ಸಂಬಂಧಪಟ್ಟ ವರ್ತಕರ ಜವಾಬ್ದಾರಿಯಾಗಿರುತ್ತದೆ. ಸಿಸಿಟಿವಿ ರೆಕಾರ್ಡಿಂಗ್ ದಾಖಲೆಗಳನ್ನು ಸಂಬಂಧಪಟ್ಟ ಆರೋಗ್ಯ ಇಲಾಖಾಧಿಕಾರಿಗೆ ಹಾಗೂ ಆಯುಕ್ತರು ಮಂಗಳೂರು ಮಹಾನಗರಪಾಲಿಕೆ/ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಸಲ್ಲಿಸಬೇಕು. ಮೇಲ್ಕಂಡ ಅಧಿಕಾರಿಗಳು ದಾಖಲೆಗಳನ್ನು ನಿಯಮಿತವಾಗಿ ಪರಿಶೀಲಿಸಿ ಸಾಮಾಜಿಕ ಅಂತರವನ್ನು ಹಾಗೂ ಸರ್ಕಾರಿ ಮಾರ್ಗಸೂಚಿಗಳನ್ನು ಪಾಲಿಸುತ್ತಿರುವ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು. ಉಲ್ಲಂಘಿಸಿದಲ್ಲಿ ದಂಡ ವಿಧಿಸುವುದು/ ಪರವಾನಗಿರದ್ದು ಪಡಿಸುವಂತೆಕ್ರಮ ಕೈಗೊಳಲಾಗುವುದು.
ಯಾವುದೇ ಅಂಗಡಿಗಳಲ್ಲಿ ಮಾಸ್ಕ್‍ಧರಿಸದಿರುವುದು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದಿರುವುದು ಅಥವಾ ಷರತ್ತುಗಳನ್ನು ಉಲ್ಲಂಘನೆ ಮಾಡಿದ್ದಲ್ಲಿ ಮೊದಲ ಬಾರಿಗೆರೂ.1000, ಎರಡನೇ ಮತ್ತು ಮೂರನೇ ಬಾರಿಗೆ ಕ್ರಮವಾಗಿರೂ.2000 ಮತ್ತುರೂ.3000 ದಂಡವನ್ನು ವಿಧಿಸಿ ಎಚ್ಚರಿಗೆ ನೀಡಲು ಹಾಗೂ ಮೂರಕ್ಕಿಂತ ಹೆಚ್ಚು ಬಾರಿ ಷರತ್ತುಗಳನ್ನು ಉಲ್ಲಂಘಸಿದ್ದಲ್ಲಿ ಅಂಗಡಿಗಳ ಪರವಾನಿಗೆಯನ್ನುರದ್ದು ಪಡಿಸಲು ನಗರ ಸ್ಥಳೀಯ ಸಂಸ್ಥೆಗಳು ತಮ್ಮ ಹಂತದಲ್ಲಿ ಸೂಕ್ತ ಉಪನಿಯಮಗಳನ್ನು ರಚಿಸಿ ಅದನ್ನು ಅನಿಷ್ಟಾನಗೊಳಿಸಬೇಕು.

DAKSHINA KANNADA

ಪದ್ಮರಾಜ್ ಪೂಜಾರಿ ಪ್ರಚಾರ ಶೈಲಿ..! ಜನಾರ್ದನ ಪೂಜಾರಿಯನ್ನ ನೆನೆದ ಜನ…!

Published

on

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕೈ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರ ಪ್ರಚಾರ ಶೈಲಿಗೆ ಜನ ಜನಾರ್ದನ ಪೂಜಾರಿಯವರನ್ನು ನೆನಪಿಸಿಕೊಳ್ತಾ ಇದ್ದಾರೆ. ಗುರುವಿನಂತೆ ಶಿಷ್ಯ ಕೂಡಾ ಪ್ರಚಾರ ಮಾಡ್ತಾ ಇರೋದು ನೋಡಿದ ಜನ ಇವರು ನಿಜವಾಗಿಯೂ ಜನಾರ್ದನ ಪೂಜಾರಿ ಅವರಂತೆ ಜನನಾಯಕ ಅಂತಿದ್ದಾರೆ.

ಜನಾರ್ದನ ಪೂಜಾರಿ ಅವರು 2014 ರ ಲೋಕಸಭಾ ಚುನಾವಣೆಯಲ್ಲಿ ತಮ್ಮ ಕೊನೆಯ ಸ್ಪರ್ಧೆಯನ್ನ ನೀಡಿದ್ದರು. ಹತ್ತು ವರ್ಷದ ಬಳಿಕ ಅವರ ಶಿಷ್ಯ ಪದ್ಮರಾಜ್ ಪೂಜಾರಿ ಈಗ ಲೋಕಸಭಾ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ಪದ್ಮರಾಜ್ ಪೂಜಾರಿ ಅವರು ಜನರೊಂದಿಗೆ ಬೆರೆಯುವ ರೀತಿ, ಜನರಿಗೆ ತೋರಿಸುವ ಪ್ರೀತಿ, ಹಾಗೂ ಪ್ರಚಾರದ ವೇಳೆ ಅವರು ವರ್ತಿಸೋ ರೀತಿ ನೋಡಿದ ಸಾಕಷ್ಟು ಜನ ಜನಾರ್ಧನ ಪೂಜಾರಿ ಅವರ ಚುನಾವಣ ಪ್ರಚಾರದ ವೈಖರಿಯನ್ನು ನೆನಪಿಸಕೊಳ್ಳುವಂತೆ ಮಾಡಿದೆ.

ಸಂಸದರಾಗಿ , ಕೇಂದ್ರ ಸಚಿವರಾಗಿ, ಬಡವರ ಬಂಧು ಅಂತ ಕರೆಸಿಕೊಂಡಿದ್ದ ಜನಾರ್ದನ ಪೂಜಾರಿ ಅವರಿಗೆ ಚುನಾವಣೆಯಲ್ಲಿ ಸೋಲಾಗಿದ್ರೂ, ಜನರು ಮಾತ್ರ ಅವರನ್ನು ಮರೆತಿಲ್ಲ. ಜನಾರ್ದನ ಪೂಜಾರಿಯವರು ರಾಜಕೀಯದಿಂದ ದೂರ ಉಳಿದು ವರ್ಷಗಳೇ ಕಳೆದ್ರು ಜನರಿಗೆ ಅವರ ಮೇಲಿರೋ ಪ್ರೀತಿ ಅಭಿಮಾನ ಕಡಿಮೆ ಆಗಿಲ್ಲ. ಚುನಾವಣಾ ಸಮುಯದಲ್ಲಿ ಪ್ರಚಾರಕ್ಕೆ ಇಳಿಯುತ್ತಿದ್ದ ಜನಾರ್ದನ ಪೂಜಾರಿ ಅವರ ಪ್ರಚಾರ ವೈಖರಿಯನ್ನಂತು ಜನ ಮರೆಯೋದೆ ಕಷ್ಟ. ಮುಂಜಾನೆಯಿಂದ ರಾತ್ರಿ ವರೆಗೂ ಅವರು ಮತಯಾಚನೆ ಮಾಡುತ್ತಿದ್ದ ರೀತಿಗೆ ಜನರೇ ದಂಗಾಗಿ ಹೋಗ್ತಾ ಇದ್ರು. ಇನ್ನು ನಡೆದುಕೊಂಡು ಮತಯಾಚಿಸೋ ಜನಾರ್ದನ ಪೂಜಾರಿ ಅವರ ಜೊತೆ ಕಾರ್ಯಕರ್ತರು ಓಡಿಕೊಂಡು ಹೋಗಬೇಕು ಅನ್ನುವಷ್ಟು ವೇಗವಾಗಿ ಸಾಗ್ತಾ ಇದ್ರು. ಅದೇ ಸೇಮ್ ಟು ಸೇಮ್ ಅನ್ನುವಂತೆ ಪದ್ಮರಾಜ್ ಪೂಜಾರಿ ಕೂಡಾ ಪ್ರಚಾರ ಮಾಡ್ತಾ ಇದ್ದಾರೆ.

ಪದ್ಮರಾಜ್ ಪೂಜಾರಿಯವರು ಒಮ್ಮೆ ಬೈಕ್‌ನಲ್ಲಿ ಮತಯಾಚನೆಗೆ ತೆರಳಿದ್ರೆ, ಮತ್ತೊಮ್ಮೆ ಜೀಪ್ ಏರಿ ರೋಡ್ ಶೋ ನಡೆಸ್ತಾರೆ. ಇನ್ನು ಗ್ರಾಮೀಣ ಪ್ರದೇಶದಲ್ಲಿ ಪಾದಯಾತ್ರೆ ಮಾಡಿದ್ರೆ ಅವರ ವೇಗದ ನಡಿಗೆ ಮತ್ತು ಓಡಿಕೊಂಡು ಹೋಗುವ ಅವರ ಶೈಲಿ ಜನಾರ್ದನ ಪೂಜಾರಿ ಅವರನ್ನು ನೆನಪಿಸುತ್ತದೆ. ಎಲ್ಲೇ ಹೋದ್ರು ಜನ ಪದ್ಮರಾಜ್ ಅವರನ್ನು ಮುತ್ತಿಕೊಂಡು ಪ್ರೀತಿಯಿಂದ ಮಾತಾಡಿಸ್ತಾ ಇದ್ದಾರೆ. ಅದೇ ರೀತಿ ಪದ್ಮಾರಾಜ್ ಕೂಡಾ ಜನರಿಗೆ ಬಹಳಷ್ಟು ಹತ್ತಿರವಾಗಿ ಅಭಿಮಾನ ಪ್ರೀತಿಯನ್ನ ಗಳಿಸಿಕೊಂಡಿದ್ದಾರೆ. ಸದ್ಯಕ್ಕಂತು ಜನ ಜನಾರ್ದನ ಪೂಜಾರಿ ಅವರ ಸ್ಥಾನ ತುಂಬಲು ಪದ್ಮರಾಜ್ ಅವರೇ ಸರಿಯಾದ ಅಭ್ಯರ್ಥಿ ಅಂತ ಮಾತನಾಡುತ್ತಿದ್ದು, ಅವರ ಗೆಲುವಿಗೆ ಹಾರೈಸುತ್ತಿದ್ದಾರೆ.

ಇದನ್ನೂ ಓದಿ : ಉಡುಪಿ: ಅನ್ಯಕೋಮಿನವರ ಕೊಬ್ಬಿಗೆ ಸಿದ್ದರಾಮಯ್ಯ ಆಡಳಿತವೇ ಮುಖ್ಯ ಕಾರಣ : ಸುನಿಲ್ ಕುಮಾರ್

Continue Reading

LATEST NEWS

ಉಡುಪಿ: ಅನ್ಯಕೋಮಿನವರ ಕೊಬ್ಬಿಗೆ ಸಿದ್ದರಾಮಯ್ಯ ಆಡಳಿತವೇ ಮುಖ್ಯ ಕಾರಣ : ಸುನಿಲ್ ಕುಮಾರ್

Published

on

ಉಡುಪಿ : ರಾಜ್ಯದಲ್ಲಿ ಅನ್ಯಕೋಮಿನವರು ದೊಡ್ಡ ಪ್ರಮಾಣದಲ್ಲಿ ವಿಜ್ರಂಭಿಸಲು ಆರಂಭ ಮಾಡಿದ್ದಾರೆ. ರಾಜ್ಯದಲ್ಲಿ ಒಂದಾದ ನಂತರ ಒಂದು ಘಟನೆಗಳು ನಡೆಯುತ್ತಿದೆ. ಅನ್ಯಕೋಮಿನವರ ಈ ಪ್ರಮಾಣದ ಕೊಬ್ಬಿಗೆ ಸಿದ್ದರಾಮಯ್ಯ ಆಡಳಿತ ಮತ್ತು ಧೋರಣೆಯೇ ಮುಖ್ಯ ಕಾರಣ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಹೇಳಿದರು.


ಹುಬ್ಬಳ್ಳಿಯ ನೇಹಾ ಹಿರೇಮಠ ಕೊ*ಲೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿಯಲ್ಲಿ ಶನಿವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಸಿದ್ದರಾಮಯ್ಯನವರು ನೇಹಾ ಕುಟುಂಬಕ್ಕೆ ಸಾಂತ್ವನ ಹೇಳುವ ಬದಲು ವೈಯಕ್ತಿಕ ಘಟನೆ ಎಂದು ಹೇಳುತ್ತಾರೆ.

ಇದನ್ನೂ ಓದಿ : ನೇಹಾ ಹ*ತ್ಯೆ ಪ್ರಕರಣ : ಆಕ್ರೋಶ ಹೊರ ಹಾಕಿದ ಸಿನಿತಾರೆಯರು

ಮುಖ್ಯಮಂತ್ರಿಯಾದವರು ಇಂತಹ ಘಟನೆಯಾದಾಗ ಜಾರಿಕೊಂಡರೆ ರಾಜ್ಯದ ರಕ್ಷಣೆ ಯಾರು ಮಾಡಬೇಕು? ರಾಮೇಶ್ವರಂ ಬಾಂಬ್ ಸ್ಫೋಟ, ಪಾಕ್ ಜಿಂದಾಬಾದ್, ಕೊ*ಲೆ ಸಂದರ್ಭದಲ್ಲಿ ಸಿಎಂ ಮಾತನಾಡುವುದಿಲ್ಲ. ಹಾಡು ಹಗಲೇ ಹ*ತ್ಯೆಯಾದಾಗ ಕಠಿಣ ಧೋರಣೆ ವಹಿಸಬೇಕಿತ್ತು. ಲವ್ ಜಿ*ಹಾದ್, ಮತಾಂ*ಧತೆ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಗರಿಗೆದರಿದೆ. ರಾಜ್ಯದ ರಕ್ಷಣೆ ಕಾಂಗ್ರೆಸ್ ನಿಂದ ಅಸಾಧ್ಯ. ಸಮಾಜ ದೊಡ್ಡ ಪ್ರಮಾಣದಲ್ಲಿ ಜಾಗೃತವಾಗ ಬೇಕಾದ ಅನಿವಾರ್ಯತೆ ಇದೆ ಎಂದರು.

 

Continue Reading

FILM

ಸೂಪರ್ ಹಿಟ್ ಚಿತ್ರ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್ ಡೇಟ್ ಫಿಕ್ಸ್!

Published

on

ಮಲಯಾಳಂನ ಮಂಜುಮ್ಮೆಲ್ ಬಾಯ್ಸ್ ಭಾರೀ ಯಶಸ್ಸನ್ನು ಗಳಿಸಿದ ಚಿತ್ರ. ಚಿತ್ರ ನೋಡಿ ಮತ್ತೆ ಮತ್ತೆ ವೀಕ್ಷಿಸಲು ಥಿಯೇಟರ್ ಗೆ ಜನ ಲಗ್ಗೆ ಇಡುತ್ತಿದ್ದಾರೆ. ಮಲಯಾಳಂ ಸಿನಿ ಪ್ರಿಯರು ಚಿತ್ರ ನೋಡಿ ಭಾರೀ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಯಾವುದೇ ಸಿನಿಮಾ ಬಂದ್ರೂ ಅದು ಓಟಿಟಿಯಲ್ಲಿ ಯಾವಾಗ ಬರುತ್ತೆ ಅಂತ ಕಾಯೋದು ಸಹಜ. ಇದೀಗ ‘ಮಂಜುಮ್ಮೆಲ್ ಬಾಯ್ಸ್’ ಸರದಿ.

ಅತಿ ಹೆಚ್ಚು ಗಳಿಕೆ :


‘ಮಂಜುಮ್ಮೆಲ್ ಬಾಯ್ಸ್’ ಸರಳ ಕಥಾಹಂದರ ಹೊಂದಿದ್ದರೂ ಅದ್ಭುತವಾಗಿ ಕಟ್ಟಿಕೊಡಲಾಗಿದೆ. ಚಿತ್ರವನ್ನು ಚಿದಂಬರಂ ಮನೋಜ್ಞವಾಗಿ ಚಿತ್ರಿಸಿದ್ದಾರೆ. ಫೆಬ್ರವರಿ 22 ರಂದು ಈ ಚಿತ್ರ ತೆರೆಕಂಡಿತ್ತು. ಬಾಕ್ಸ್ ಆಫೀಸ್ ನಲ್ಲಿ ಭಾರೀ ಸದ್ದು ಮಾಡುತ್ತಿದೆ. ಈಗಾಗಲೇ ಗ್ರಾಸ್ ಕಲೆಕ್ಷನ್ 200 ಕೋಟಿ ರೂಪಾಯಿ ದಾಟಿದೆ. ಮಲಯಾಳಂನಲ್ಲಿ ಅತಿ ಹೆಚ್ಚು ಗಳಿಕೆ ಕಂಡ ಸಿನಿಮಾ ಎಂಬ ಹೆಗ್ಗಳಿಕೆ ಗಳಿಸಿದೆ.


ಶೌಬಿನ್ ಶಾಹಿರ್, ಶ್ರೀನಾಥ್ ಬಾಸಿ, ಬಾಲು ವರ್ಗೀಸ್, ಗಣಪತಿ ಸೇರಿದಂತೆ ಸಾಕಷ್ಟು ಜನ ಕಲಾವಿದರು ಚಿತ್ರದಲ್ಲಿ ಪಾತ್ರವಾಗಿದ್ದಾರೆ. ಅಂದಾಜು 20 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಾಣವಾಗಿದ್ದ ಸ್ಟಾರ್ ನಟರಿಲ್ಲದ ಈ ಸಿನಿಮಾ 200 ಕೋಟಿ ರೂ. ಕಲೆಕ್ಷನ್ ಮಾಡಿರೋದು ಆಶ್ಚರ್ಯ ಹುಟ್ಟು ಹಾಕಿದೆ.

ಓಟಿಟಿಯಲ್ಲಿ ಯಾವಾಗ ?

‘ಮಂಜುಮ್ಮೆಲ್ ಬಾಯ್ಸ್’ ಸಿನಿಮಾವನ್ನು ಥಿಯೇಟರ್ ಅಂಗಳದಲ್ಲಿ ನೋಡಿ ಎಂಜಾಯ್ ಮಾಡಿದವರು ಅನೇಕ ಮಂದಿ ಇದ್ದಾರೆ. ಇದೀಗ ಸಿನಿಮಾ ಓಟಿಟಿಯಲ್ಲಿ ಯಾವಾಗ ಅನ್ನೋ ಪ್ರಶ್ನೆ ಹುಟ್ಟಿತ್ತು. ಇದಕ್ಕೆ ಉತ್ತರವೂ ಸಿಕ್ಕಿದೆ.

ಡಿಸ್ನಿ ಪ್ಲಸ್ ಹಾಟ್‌ಸ್ಟರ್‌ನಲ್ಲಿ ಮೇ 3 ರಂದು ಸ್ಟ್ರೀಮಿಂಗ್ ಆಗುವುದು ಬಹುತೇಕ ಖಚಿತವಾಗಿದೆ. ಫೆಬ್ರವರಿ 22 ರಂದು ತೆರೆಗೆ ಬಂದಿದ್ದ ಸಿನಿಮಾ ಈಗಾಗಲೇ 50 ದಿನ ಪೂರೈಸಿದೆ. ಸದ್ಯ ತೆಲುಗು, ತಮಿಳು, ಕನ್ನಡಕ್ಕೂ ಸಿನಿಮಾ ಡಬ್ ಆಗಿದ್ದು, ಏಕಕಾಲಕ್ಕೆ ಓಟಿಟಿಯಲ್ಲಿ ಸ್ಕ್ರೀಮಿಂಗ್ ಆಗಲಿದೆಯಾ ಎಂಬುದು ತಿಳಿದು ಬಂದಿಲ್ಲ.

 

Continue Reading

LATEST NEWS

Trending