ಶ್ರೀ ವೆಂಕಟರಮಣ ದೇವಸ್ಥಾನದ ರಥೋತ್ಸವದಲ್ಲಿ ಸಂಭ್ರಮದ ಓಕುಳಿ ಉತ್ಸವ
Published
5 years agoon
By
Adminಮಂಗಳೂರು : ನಗರದ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಮಂಗಳೂರು ರಥೋತ್ಸವ ಪ್ರಯುಕ್ತ ಆದಿತ್ಯವಾರ ಶ್ರೀ ದೇವರ ಅವಭ್ರತ ಓಕುಳಿ ಮಹೋತ್ಸವ ಸಮಾಜದ ಸಾವಿರಾರು ಅಬಾಲ ವೃದ್ಧ ಭಜಕರ ಹಾಗೂ ಕಾಶೀಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ವಿಜೃಂಭಣೆಯಿಂದ ಜರಗಿತು.
ಪ್ರಾರಂಭದಲ್ಲಿ ಸರ್ವಾಭರಣ ಭೂಷಿತ ಶ್ರೀ ವೀರ ವೆಂಕಟೇಶ್ ಹಾಗೂ ಶ್ರೀನಿವಾಸ ದೇವರನ್ನು ಸ್ವರ್ಣ ಪಲ್ಲಕಿಯಲ್ಲಿ ವಸಂತ ಮಂಟಪಕ್ಕೆ ತರಲಾಯಿತು ಬಳಿಕ ವಸಂತ ಮಂಟಪದಲ್ಲಿ ವಿಶೇಷ ಪೂಜೆ , ಅಷ್ಟಾವಧಾನ ಸೇವೆ , ನೆರೆದ ಸಮಾಜ ಬಾಂಧವರಿಂದ ಮಡೆಸ್ನಾನ ಸೇವೆ ನಂತರ ಶ್ರೀ ಗಳವರಿಂದ ಪ್ರವಚನ ನಡೆಯಿತು .ಶ್ರೀ ದೇವರನ್ನು ಸ್ವರ್ಣ ಪಲ್ಲಕಿಯಲ್ಲಿರಿಸಿ ಐದು ಪೇಟೆ ಉತ್ಸವ ಭಾವುಕ ಭಗವತ್ ಭಕ್ತರ ಭುಜ ಸೇವೆ ಯೊಂದಿಗೆ ನೆರವೇರಿತು.
ಸಮಾಜದ ಪುರುಷರು ಮತ್ತು ಮಕ್ಕಳು ಅವಭ್ರತ ಮಹೋತ್ಸವದಲ್ಲಿ ಗುಲಾಬಿ ,ಅರಸಿನ ಬಣ್ಣದ ನೀರಿನೊಂದಿನಿಗೆ ಆಟವಾಡುತ್ತಿರುವ ದ್ರಶ್ಯ ರಥಬೀದಿಯಲ್ಲಿ ಕಂಡು ಬರುತಿತ್ತು . ಶ್ರೀ ದೇವರ ಪೇಟೆ ಉತ್ಸವ ರಥಬೀದಿ , ನಂದ ದೀಪ , ಉಮಾ ಮಹೇಶ್ವರ ದೇವಸ್ಥಾನ ರಸ್ತೆ , ಕೆಳಗಿನ ರಥ ಬೀದಿ , ಡೋಂಗೇರಕೇರಿ , ಚಾಮರಗಲ್ಲಿ ಮೂಲಕ ವಿ ಟಿ ರಸ್ತೆಯ ಮೂಲಕ ಟ್ಯಾಂಕ್ ಕಾಲೋನಿ ಯಲ್ಲಿರುವ ಶ್ರೀ ಶ್ರೀನಿವಾಸ ನಿಗಮಗಮ ಪಾಠಶಾಲೆಯಲ್ಲಿರುವ ಪುಷ್ಕರಣಿಯಲ್ಲಿ ಶ್ರೀ ದೇವರ ಅವ್ಬ್ರತ ಸ್ನಾನ ನಡೆಯಿತು . ಶ್ರೀ ದೇವಳಕ್ಕೆ ಉತ್ಸವ ಮರಳಿದ ಬಳಿಕ ಧ್ವಜಾಅವರೋಹಣ ಬಳಿಕ ಮಹೋತ್ಸವ ಸಮಾಪನ ಗೊಂಡಿತು .
ವಿಡಿಯೋಗಾಗಿ..
You may like
ಮಂಗಳೂರು/ಶಬರಿಮಲೆ: ಕಾಲ್ನಡಿಗೆಯಲ್ಲಿ ಅರ್ಣ್ಯ ಮಾರ್ಗವಾಗಿ ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ತೆರಳುವ ಭಕ್ತರಿಗೆ ನೀಡಲಗಿದ್ದ ವಿಶೇಷ ಪಾಸ್‌ಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ತಿರುವಾಂಕೂರು ದೇವಸ್ವಂ ಮಂಡಳಿ (TDB) ಪ್ರಕಟಿಸಿದೆ.
ದೇವಸ್ವಂ ಮಂಡಳಿ ಸದಸ್ಯ ಎ.ಅಜಿಕುಮಾರ್ “ವರ್ಚುವಲ್ ಸರತಿ ವ್ಯವಸ್ಥೆ ಮತ್ತು ಸ್ಪಾಟ್ ಬುಕ್ಕಿಂಗ್ ಮಾಡಿ ಪಂಪಾ ಮೂಲಕ ಆಗಮಿಸುವ ಭಕ್ತರು ದರ್ಶನಕ್ಕಾಗಿ ದೀರ್ಘಾವಧಿ ಕಾಯುವ ಸಮಯವನ್ನು ತಡೆಯಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು” ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಹಿಂದೆ ಅರಣ್ಯ ಮಾರ್ಗದಲ್ಲಿ ಸಂಚರಿಸುವ 5,000 ಭಕ್ತರಿಗೆ ವಿಶೇಷ ಪಾಸ್ ನೀಡುವ ವ್ಯವಸ್ಥೆ ಮಾಡಲಾಗಿತ್ತು.ಆದರೆ, ಅರಣ್ಯ ಮಾರ್ಗವಾಗಿ ಆಗಮಿಸುವ ಭಕ್ತರ ಸಂಖ್ಯೆ ಐದು ಪಟ್ಟು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ವಿಶೇಷ ಪಾಸ್ ನೀಡುವುದಕ್ಕೆ ನಿರ್ಬಂಧ ಹೇರಲಾಗಿದೆ. ಮುಂದಿನ ಸೂಚನೆ ಬರುವವರೆಗೂ ವಿಶೇಷ ಪಾಸ್‌ಗಳನ್ನು ನೀಡದಿರಲು ಮಂಡಳಿ ನಿರ್ಧರಿಸಿದೆ .ಸಾಂಪ್ರದಾಯಿಕ ಅರಣ್ಯ ಮಾರ್ಗಗಳ ಮೂಲಕ ಪಾದಯಾತ್ರೆ ಮಾಡುವ ಯಾತ್ರಾರ್ಥಿಗಳಿಗೆ ವಿಶೇಷ ದರ್ಶನ ವ್ಯವಸ್ಥೆಗಳನ್ನು ಕಳೆದ ತಿಂಗಳು ಪರಿಚಯಿಸಲಾಗಿತ್ತು. ಅಂತಹ ಯಾತ್ರಾರ್ಥಿಗಳಿಗೆ ಅರಣ್ಯ ಇಲಾಖೆಯಿಂದ ವಿಶೇಷ ಟ್ಯಾಗ್‌ಗಳನ್ನು ನೀಡಲಾಗಿದ್ದು, ದರ್ಶನಕ್ಕೆ ಪ್ರತ್ಯೇಕ ಸರತಿ ಸಾಲು ಸೇರಿದಂತೆ ಸವಲತ್ತುಗಳನ್ನು ನೀಡಲಾಗುತ್ತಿತ್ತು.
LATEST NEWS
ನಿನ್ನೆ ಒಂದೇ ದಿನ 513 ಡ್ರಿಂಕ್ & ಡ್ರೈವ್ ಕೇಸ್‌ಗಳು ದಾಖಲು
Published
12 minutes agoon
01/01/2025By
NEWS DESK2ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆ ಕುಡಿದು ವಾಹನ ಚಾಲನೆ ಮಾಡದಂತೆ ಬೆಂಗಳೂರು ಸಂಚಾರಿ ಪೊಲೀಸರು ಎಚ್ಚರಿಕೆ ನೀಡಿದ್ದರು. ಆದರೂ ಕೂಡ ಜನರು ಕ್ಯಾರೇ ಎನ್ನದೇ ಮದ್ಯ ಸೇವಿಸಿ ವಾಹನ ಚಲಾಯಿಸಿ ಪೊಲೀಸರಿಗೆ ಸಿಕ್ಕಿ ಹಾಕಿಕೊಂಡಿದ್ದಾರೆ.
ಹೌದು, ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ 513 ಡ್ರಿಂಕ್ & ಡ್ರೈವ್ ದಾಖಲಾದರೆ, ಡಿಸೆಂಬರ್ 31ರ ರಾತ್ರಿ ಕೇವಲ 513 ಪ್ರಕರಣಗಳನ್ನು ದಾಖಲು ಮಾಡಲಾಗಿದೆ ಎಂದು ಬೆಂಗಳೂರು ಪೊಲೀಸರು ಮಾಹಿತಿ ನೀಡಿದ್ದಾರೆ.
ಹೊಸ ವರ್ಷ 2025 ರನ್ನು ರಾಜ್ಯದ ಜನರು ಅದ್ದೂರಿಯಾಗಿ ಬರ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಎಂಜಿ ರೋಡ್, ಬ್ರಿಗೇಡ್ ರೋಡ್ ಸೇರಿ ಹಲವು ರಸ್ತೆಗಳಲ್ಲಿ ಜನ ಜಂಗುಳಿ ನೆರೆದಿತ್ತು. ಇನ್ನೂ ಇಯರ್ ಎಂಡ್ ಹಿನ್ನೆಲೆ ರಾಜ್ಯದಲ್ಲಿ ಭರ್ಜರಿ ಮದ್ಯ ಮಾರಾಟವಾಗಿತ್ತು, ಅಬಕಾರಿ ಇಲಾಖೆಗೆ ಭಾರೀ ಆದಾಯ ತಂದುಕೊಟ್ಟಿದೆ.
BIG BOSS
ಮೂರು ತಿಂಗಳು ದೂರ ಇದ್ದ ಅಕ್ಕನ ಗುರುತಿಸಲೇ ಇಲ್ಲ ತಮ್ಮ; ಮೋಕ್ಷಿತಾ ಕಣ್ಣೀರಿಗೆ ಕರುಳು ಕಿವುಚುತ್ತೆ
Published
33 minutes agoon
01/01/2025By
NEWS DESK2ಕಿಚ್ಚ ಸುದೀಪ್ ಅವರು ನಡೆಸಿ ಕೊಡುವ ಕನ್ನಡದ ಬಿಗ್ ರಿಯಾಲಿಟಿ ಶೋ ಕನ್ನಡಿಗರ ಮನ ಗೆದ್ದಿದೆ. ವಾರದಿಂದ ವಾರಕ್ಕೆ ಹೆಚ್ಚು ಹೆಚ್ಚು ಜನರನ್ನು ಸೆಳೆಯುತ್ತ ಯಶಸ್ವಿಯಾಗಿ ಸಾಗುತ್ತಿದೆ. ನ್ಯೂ ಇಯರ್ ಹಿನ್ನೆಲೆಯಲ್ಲಿ ಮನೆಯಲ್ಲಿರುವ ಎಲ್ಲ ಸ್ಪರ್ಧಿಗಳ ಕುಟುಂಬಸ್ಥರು ಬಂದು ನೋಡಿಕೊಂಡು ಹೋಗುತ್ತಿದ್ದಾರೆ. ಇದೇ ರೀತಿ ಮೋಕ್ಷಿತಾಗೆ ಬಿಗ್ಬಾಸ್ ಬಿಗ್ ಸರ್ಪ್ರೈಸ್ ಕೊಟ್ಟಿದ್ದಾರೆ. ಆದರೆ ತಮ್ಮನನ್ನು ನೋಡಿ ಅಕ್ಕ ಮೋಕ್ಷಿತಾ ಕಣ್ಣೀರು ಹಾಕಿರುವುದು ಎಲ್ಲರ ಕರುಳು ಚುರುಕ್ ಅನ್ನುತ್ತೆ.
ಹೊಸ ವರ್ಷ ಬಿಗ್ಬಾಸ್ ಮನೆಯಲ್ಲೂ ಅದ್ಧೂರಿಯಾಗಿ ಸೆಲೆಬ್ರೆಷನ್ ಮಾಡಲಾಗಿದೆ. ಎಲ್ಲ ಸ್ಪರ್ಧಿಗಳು ಸಖತ್ ಆಗಿಯೇ ಕುಣಿದು ಕುಪ್ಪಳಿಸುತ್ತಿದ್ದರು. ಮೋಕ್ಷಿತಾ ಕೂಡ ನಾನೇನು ಕಮ್ಮಿ ಇಲ್ಲ ಎನ್ನುವಂತೆ ಬಿಗ್ಬಾಸ್ಗೆ ಬಂದ ಮೇಲೆ ಪ್ರೀತಿಯ ಸಹೋದರನ್ನು ಮರೆತು ಡ್ಯಾನ್ಸ್ ಮಾಡುತ್ತಿದ್ದರು. ಆದರೆ ಈ ವೇಳೆ ನೋಡಿ ಫುಲ್ ಶಾಕ್ ಆಗಿರೋದು. ಬಿಗ್ಬಾಸ್ ಮನೆಗೆ ಕುಟುಂಬ ಬರುತ್ತಿದ್ದಂತೆ ತಮ್ಮನನ್ನು ನೋಡಿ ಮೋಕ್ಷಿತಾ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.
ಇಷ್ಟು ದಿನ ಬಿಟ್ಟು ಇದ್ದಿದ್ದೆ. ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೆ. ಪುಟಾಣಿ ಎಂದು ಕರೆದರೂ ವೀಲ್ ಚೇರ್ ಮೇಲಿದ್ದ ಸಹೋದರ, ಮೋಕ್ಷಿತಾರನ್ನ ಯಾರೆಂದು ಗುರುತಿಸಲಿಲ್ಲ. ಅದಕ್ಕೆ ನನ್ನನ್ನು ಮರೆತು ಹೋಗಿದ್ದಾನೆ. ಇಷ್ಟು ದಿನ ಮನೆಯಲ್ಲಿ ಇರದಿದ್ದಕ್ಕೆ ನನ್ನನ್ನು ಮರೆತು ಹೋಗಿ ಬಿಟ್ಟಿದ್ದಾನೆ ಎಂದು ಮೋಕ್ಷಿತಾ, ತಮ್ಮನನ್ನು ತಬ್ಬಿಕೊಂಡು ಕಣ್ಣೀರು ಹಾಕಿದ್ದಾರೆ. ಇದೇ ವೇಳೆ ಮೋಕ್ಷಿತಾ ತಂದೆ, ತಾಯಿ ಕೂಡ ಕಣ್ಣೀರು ಹಾಕಿರುವುದು ಎಲ್ಲರನ್ನೂ ಮೂಕವಿಸ್ಮಿತರಾಗಿ ಮಾಡುತ್ತದೆ.
ಮೋಕ್ಷಿತಾ ತಮ್ಮನ ಪರಿಸ್ಥಿತಿಯನ್ನು ನೋಡಿ ಮನೆಯಲ್ಲಿರುವ ಎಲ್ಲ ಸ್ಪರ್ಧಿಗಳು ಬೆರಗಾಗಿದ್ದರು. ಗೌತಮಿಯಂತೂ ದುಃಖಿಸಿರುವುದು ಎಲ್ಲರ ಮನ ಕದಡುವಂತೆ ಇತ್ತು. ಚೈತ್ರಾ, ಮಂಜು, ರಜತ್, ಹನುಮಂತು, ತ್ರಿವಿಕ್ರಮ್, ಧನರಾಜ್ ಎಲ್ಲರ ಮುಖದಲ್ಲಿನ ಭಾವ ಕೂಡ ಏನೋ ಹೇಳುವಂತೆ ಇತ್ತು.
LATEST NEWS
ಭೀ*ಕರ ಅ*ಪಘಾ*ತಕ್ಕೊಳಗಾಗಿ ದ್ವಿಚಕ್ರ ಸವಾರ ಸಾ*ವು
ದೇಶದ ಮೊದಲ ಗಾಜಿನ ಸೇತುವೆ ಲೋಕಾರ್ಪಣೆ
ಮಂಗಳೂರು: ಹೊಸ ವರ್ಷಾಚರಣೆ- ವಾಹನ ಸವಾರರಿಗೆ ಕೇಕ್ ವಿತರಿಸಿದ ಪೊಲೀಸ್ ಸಿಬ್ಬಂದಿ
ಹೊಸ ವರ್ಷಾಚರಣೆ ಹಿನ್ನೆಲೆ: ಧರ್ಮಸ್ಥಳದಲ್ಲಿ ಭಕ್ತ ಸಾಗರ
ಹೊಸ ವರ್ಷಕ್ಕೆ ರಾಜ್ಯದಲ್ಲಿ ಮದ್ಯದ ಹೊಳೆ : ನಿನ್ನೆ ಒಂದೇ ದಿನ ಭರ್ತಿ 308 ಕೋಟಿ ರೂ. ಮದ್ಯ ಸೇಲ್.!
ಸೇನಾ ವಾಹನ ದು*ರಂತ ಪ್ರಕರಣ; ಹುತಾತ್ಮ ಯೋಧ ದಿವಿನ್ ಅಂತ್ಯಕ್ರಿಯೆ
Trending
- DAKSHINA KANNADA5 days ago
ದಿ।ಮನಮೋಹನ್ ಸಿಂಗ್ ಸಹಿ ಇರುವ ರೂ 1ರ ನೋಟು ರೂ.100 ಕ್ಕೆ ಮಾರಾಟ…!
- BIG BOSS4 days ago
ಎಂಟು ಮಂದಿ ನಾಮಿನೇಟ್; ಈ ವಾರ ಮನೆಯಿಂದ ಹೊರ ಬರೋದು ಇವರೇ ?
- DAKSHINA KANNADA4 days ago
‘ದಿ ಅಕ್ಸಿಡೆಂಟಲ್ PM’ ಸುಳ್ಳಿನ ಕಂತೆ..! ಕ್ಷಮಿಸಿ ಎಂದ ಚಿತ್ರ ನಿರ್ಮಾಪಕ..!
- BIG BOSS3 days ago
ಈ ವಾರ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆದ ಸ್ಪರ್ಧಿ ಇವರೇ ನೋಡಿ..!