ಮಂಗಳೂರು/ಪಂಜಾಬ್: ಜಾಬಿ ’95’ ಚಿತ್ರಕ್ಕೆ ಹನಿ ಟ್ರೆಹಾನ್ ನಿರ್ದೇಶನ ಮಾಡಿದ್ದು, ಸೆನ್ಸಾರ್ ಮಂಡಳಿಯವರು 85 ಕಡೆ ಕಟ್ ಮಾಡುವಂತೆ ಹೇಳಿದ್ದರು. ಈಗ ಪರಿಷ್ಕರಣಾ ಸಮಿತಿ ಕೂಡ ಸಿನಿಮಾ ವೀಕ್ಷಣೆ ಮಾಡಿದ್ದು, 120 ದೃಶ್ಯಗಳ ಬಗ್ಗೆ ಅಪಸ್ವರ ತೆಗೆದಿದೆ.
ಸಿನಿಮಾ ನೋಡಿದ ಬಳಿಕ ಸೆನ್ಸಾರ್ ಮಂಡಳಿಯವರು 10 ಕಡೆ ಕತ್ತರಿ ಹಾಕಲು ಹೇಳಿರುವುದು ಸಾಕಷ್ಟು ಚರ್ಚೆ ಆಗುತ್ತಿದೆ. ದಿಲ್ಜಿತ್ ದೋಸಾಂಜ್ ನಟನೆಯ ‘ಪಂಜಾಬ್ ’95’ ಚಿತ್ರದ ಬಗ್ಗೆ ಸೆನ್ಸಾರ್ ಮಂಡಳಿಯವರು ವಿರೋಧ ವ್ಯಕ್ತ ಪಡಿಸಿದ್ದಾರೆ.
‘ಪಂಜಾಬಿ ’95’ ಚಿತ್ರಕ್ಕೆ ಹನಿ ಟ್ರೆಹಾನ್ ನಿರ್ದೇಶನ ಮಾಡಿದ್ದಾರೆ. ರೋನಿ ಸ್ಕ್ರೂವಾಲಾ ನಿರ್ಮಿಸಿದ್ದಾರೆ. ನೈಜ ಘಟನೆಗಳನ್ನು ಇದು ಆಧರಿಸಿದ್ದು, ಮಾನವ ಹಕ್ಕುಗಳ ಕಾರ್ಯಕರ್ತ ಜಸ್ವಂತ್ ಸಿಂಗ್ ಖಲ್ರಾ ಅವರ ಕಥೆಯಾಧರಿತ ಸಿನಿಮಾವಾಗಿದೆ. ಪಂಜಾಬ್‌ನ ದಂಗೆಯ ಅವಧಿಯಲ್ಲಿ ನಡೆದ ಕೊಲೆ ಹಾಗೂ ಭ್ರಷ್ಟಾಚಾರವನ್ನು ಬಹಿರಂಗಪಡಿಸಲು ಜಸ್ವಂತ್ ಪ್ರಯತ್ನಿಸಿದ್ದರು.
ಜಸ್ವಂತ್ ಸಿಂಗ್ ಖಲ್ರಾ ಎಂದು ಬಿಂಬಿಸಲಾದ ನಾಯಕನ ಮರುನಾಮಕರಣ ಮಾಡಲು ಸೆನ್ಸಾರ್ ಮಂಡಳಿ ಸೂಚಿಸಿದೆ. ಇದು ಸಾಕಷ್ಟು ಚರ್ಚೆ ಹುಟ್ಟು ಹಾಕಿದ್ದು, ಈ ಪಾತ್ರಕ್ಕೆ ಸಟ್ಲೆಜ್ ಎಂದು ಹೆಸರು ಇಡುವಂತೆ ಮಂಡಳಿ ಸೂಚಿಸಿದೆ. ‘ಖಲ್ರಾ ಅವರು ಸಿಖ್ ಸಮುದಾಯದಲ್ಲಿ ಪೂಜ್ಯ ವ್ಯಕ್ತಿಯಾಗಿದ್ದಾರೆ. ಅವರ ಹೆಸರನ್ನು ಮರುನಾಮಕರಣ ಮಾಡುವುದು ಅವರ ಪರಂಪರೆಗೆ ಅಗೌರವವಾಗುತ್ತದೆ’ ಎಂದು ತಂಡದವರು ವಾದಿಸಿದ್ದಾರೆ.
ಪಂಜಾಬ್ ’95’ ಟೈಟಲ್ ತೆಗೆಯುವಂತೆಯೂ ಸೂಚಿಸಲಾಗಿದೆ. ಈ ಟೈಟಲ್ ಸಾರ್ವಜನಿಕರ ಮೇಲೆ ಸಾಕಷ್ಟು ಪ್ರಭಾವ ಬೀರಬಹುದು ಎಂದು ಸೆನ್ಸಾರ್ ಮಂಡಳಿ ಅಭಿಪ್ರಾಯಪಟ್ಟಿದೆ. ಸಿನಿಮಾ ಉದ್ದಕ್ಕೂ ಪಂಜಾಬ್ ಹಾಗೂ ಜಿಲ್ಲೆಗಳ ಹೆಸರನ್ನು ಉಲ್ಲೇಖ ಮಾಡಬಾರದು ಎಂದು ಮಂಡಳಿ ಹೇಳಿದೆ. ಕೆನಡಾ ಮತ್ತು ಯುಕೆ ಉಲ್ಲೇಖಗಳು ಸೂಕ್ತವಲ್ಲವೆಂದು ಪರಿಗಣಿಸಲಾಗಿದ್ದು, ತೆಗೆದುಹಾಕುವಂತೆ ತಿಳಿಸಿದ್ದಾರೆ.
ಮಂಗಳೂರು/ಬೆಂಗಳೂರು: ವೃತ್ತಿಯಲ್ಲಿ ಫ್ಯಾಷನ್ ಡಿಸೈನರ್ ಹಾಗೂ ಮಾಡೆಲ್ ಆಗಿರುವ ಪವಿ ಪೂವಪ್ಪ ಅವರು ‘ಬಿಗ್ ಬಾಸ್ ಸೀಸನ್ 10’ರಲ್ಲಿ ವೈಲ್ಡ್ ಕಾರ್ಡ್ ಮೂಲಕ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದರು. ಸದ್ಯ ಇವರ ಬ್ರೇಕಪ್ ವಿಚಾರ ಸಾಕಷ್ಟು ಚರ್ಚೆಯಲ್ಲಿದೆ.
ನಾನು ಏಕೆ ಬ್ರೇಕಪ್ ಮಾಡಿಕೊಂಡೆ ಅನ್ನುವ ವಿಚಾರವನ್ನು ಅವರು ತಿಳಿಸಿದ್ದಾರೆ. ಯುಟ್ಯೂಬ್ ಚಾನಲ್ ವೊಂದಕ್ಕೆ ನೀಡಿರುವ ಸಂದರ್ಶನವಿಗ ಸಖತ್ ವೈರಲ್ ಆಗುತ್ತಿದೆ. ಬಿಗ್ ಬಾಸ್ ಸಮಯದಲ್ಲಿ ತಮ್ಮ ಪ್ರೀತಿ ಬಗ್ಗೆ ಮಾತನಾಡಿದ್ದ ಪವಿ,’ನನ್ನ ಬಾಯ್ ಫ್ರೆಂಡ್ ಐರ್ ಲ್ಯಾಂಡ್ ನಲ್ಲಿ ಕೆಲಸ ಮಾಡುತ್ತಿದ್ದಾರೆ. ಶೀಘ್ರವೇ ನಾವಿಬ್ಬರು ಮದುವೆಯಾಗುತ್ತಿದ್ದೇವೆ’ ಅಂತಾ ಹೇಳಿದ್ದರು.
ಹೌದು, ಡಿಜೆ ಮ್ಯಾಡಿ ಎಂಬುವವರ ಜೊತೆ ಪವಿ ಪೂವಪ್ಪ ಕಳೆದ ಐದು ವರ್ಷಗಳಿಂದ ರಿಲೇಷನ್ ಶಿಪ್ ನಲ್ಲಿದ್ದರು. ಈ ಜೋಡಿ ಶೀಘ್ರವೇ ಮದುವೆ ಆಗಲಿದೆ ಅಂತಾ ಅನೇಕರು ಅಂದುಕೊಂಡಿದ್ದರಂತೆ. ಆದರೆ ಇದು ಹುಸಿಯಾಗಿದ್ದು, ‘ನಮ್ಮಿಬ್ಬರ ನಡುವೆ ಬ್ರೇಕಪ್ ಆಗಿದೆ’ ಅಂತಾ ಸ್ವತಃ ಪವಿ ಅವರೇ ಯೂಟ್ಯೂಬ್ ಚಾನೆಲ್ ನ ಸಂದರ್ಶನದಲ್ಲಿ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿರುವ ಪವಿ,”ನಾವು ಐದು ವರ್ಷಗಳಿಂದ ಜೊತೆಗಿದ್ದೇವೆ. ನಮ್ಮಿಬ್ಬರ ನಡುವೆ ಒಳ್ಳೆಯ ಹೊಂದಾಣಿಕೆ ಇತ್ತು. ಆದರೆ ಬರುಬರುತ್ತಾ ನನ್ನ ನಾಯಿ ಬಗ್ಗೆ ಅವರಿಗೆ ಸಮಸ್ಯೆ ಶುರುವಾಯಿತು. ಮದುವೆಯಾದ ಮೇಲೆ ಮನೆಯಲ್ಲಿ ನಾಯಿಯನ್ನು ಬಿಡುವುದಿಲ್ಲ ಅಂತಾ ಹೇಳಿದರು. ಇದರಿಂದಲೇ ನಮ್ಮಿಬ್ಬರ ನಡುವೆ ಸಮಸ್ಯೆ ಶುರುವಾಯ್ತು. ಸಣ್ಣಪುಟ್ಟ ವಿಚಾರಗಳಿಗೆ ಕಾರಣ ಕೊಡಲು ಶುರು ಮಾಡಿದರು. ಹೀಗಾಗಿ ನಾನು ಬ್ರೇಕಪ್ ತೀರ್ಮಾನಕ್ಕೆ ಬಂದೆ. ಇದರಿಂದ ನಾನೇ ಹಿಂದೆ ಸರಿದರೆ ಒಳ್ಳೆದು ಅನಿಸಿತು” ಅಂತಾ ಅವರು ಹೇಳಿಕೊಂಡಿದ್ದಾರೆ.
ಐದು ವರ್ಷಗಳ ಕಾಲ ರಿಲೇಷನ್ ಶಿಪ್ ನಲ್ಲಿದ್ದ ಜೋಡಿ ಇದೀಗ ಬ್ರೇಕಪ್ ಮಾಡಿಕೊಂಡಿರುವುದು ಸಾಕಷ್ಟು ಚರ್ಚೆಯಲ್ಲಿದೆ.
ಶಿವರಾಜ್ ಕುಮಾರ್ ಅವರಿಗೆ ಅನಾರೋಗ್ಯ ಉಂಟಾಗಿದ್ದು ಪ್ರಮುಖ ಶಸ್ತ್ರಚಿಕಿತ್ಸೆಯೊಂದಕ್ಕಾಗಿ ಅಮೆರಿಕಕ್ಕೆ ತೆರಳುತ್ತಿದ್ದಾರೆ. ಇಂದು ಶಿವಣ್ಣ ತೆರಳಲಿದ್ದು, ಸುದೀಪ್ ಸೇರಿದಂತೆ ಹಲವು ಗಣ್ಯರು ಶಿವಣ್ಣನ ಭೇಟಿಯಾಗಿ ಶುಭ ಹಾರೈಸಿದ್ದಾರೆ.
ಕಿಚ್ಚ ಸುದೀಪ್ ಅವರು ಶಿವಣ್ಣ ಅವರ ನಿವಾಸಕ್ಕೆ ತೆರಳಿ ಅವರಿಗೆ ಶುಭ ಹಾರೈಸಿದ್ದಾರೆ. ಧೈರ್ಯ ತುಂಬವ ಕಾರ್ಯ ಮಾಡಿದ್ದಾರೆ. ಶಿವರಾಜ್ ಕುಮಾರ್ ಮತ್ತು ಸುದೀಪ್ ಹಲವು ವರ್ಷಗಳಿಂದ ಅಣ್ಣ ತಮ್ಮಂದಿರಂತೆ ಇದ್ದಾರೆ.
ಮಾಜಿ ಸಚಿವ, ನಟ ಬಿಸಿ ಪಾಟೀಲ್ ಸಹ ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ತೆರಳಿ ಅವರಿಗೆ ಹೂಗುಚ್ಛ ನೀಡಿ ಶೀಘ್ರ ಗುಣಮುಖವಾಗಿ ಮರಳುವಂತೆ ಶುಭ ಹಾರೈಸಿದ್ದಾರೆ.
ಸಚಿವ ಮಧು ಬಂಗಾರಪ್ಪ ಅವರು ಸಹ ಶಿವರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿ ಅವರಿಗೆ ಶುಭ ಹಾರೈಸಿದ್ದಾರೆ. ಮಧು ಬಂಗಾರಪ್ಪ ಅವರು ಶಿವಣ್ಣ ಅವರ ಆಪ್ತ ಸಂಬಂಧಿ. ಗೀತಾ ಶಿವರಾಜ್ ಕುಮಾರ್ ಅವರ ಸಹೋದರ ಸಹ.
ನಟ ವಿನೋದ್ ರಾಜ್ ಕುಮಾರ್ ಅವರು ಸಹ ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ತೆರಳಿ ಅವರೊಟ್ಟಿಗೆ ಕೆಲ ಸಮಯ ಕಳೆದಿದ್ದಾರೆ. ಹಳೆಯ ಗೆಳೆಯರಾದ ಇಬ್ಬರೂ ತುಸು ಸಮಯ ಹರಟೆ ಹೊಡೆದಿದ್ದಾರೆ. ವಿನೋದ್ ತಮ್ಮ ತೋಟದಿಂದ ಹಣ್ಣು-ತರಕಾರಿಗಳನ್ನು ಶಿವಣ್ಣನಿಗೆ ನೀಡಿದ್ದಾರೆ.
ಶಿವರಾಜ್ ಕುಮಾರ್ ಅವರಿಗೆ ಅನಾರೋಗ್ಯ ಉಂಟಾಗಿದ್ದು, ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಅಮೆರಿಕಕ್ಕೆ ಹೋಗುತ್ತಿದ್ದಾರೆ. ಇಂದು ರಾತ್ರಿ 8:30ಗೆ ಶಿವಣ್ಣ ತೆರಳಲಿದ್ದು, ಅವರೊಟ್ಟಿಗೆ ಪತ್ನಿ ಗೀತಾ ಮತ್ತು ಮಗಳು ನಿವೇದಿತಾ ಸಹ ತೆರಳುವ ಸಾಧ್ಯತೆ ಇದೆ.
ಮಂಗಳೂರು/ಬೆಂಗಳೂರು: ಕಳೆದ ಶುಕ್ರವಾರ ರೇಣುಕಾಸ್ವಾಮಿ ಕೊ*ಲೆ ಪ್ರಕರಣದಲ್ಲಿ ದರ್ಶನ್, ಪವಿತ್ರ ಗೌಡ ಸೇರಿ ಒಟ್ಟು 7 ಮಂದಿಗೆ ಹೈಕೋರ್ಟ್ ಪೂರ್ಣಾವಧಿಯ ಜಾಮೀನು ಮಂಜೂರು ಮಾಡಿದೆ. ಆದರೆ ನಾಲ್ಕನೇ ಆರೋಪಿಯಾಗಿರುವ ಜಗದೀಶ್ ಗೆ ಜಾಮೀನು ಸಿಕ್ಕಿಲ್ಲ.
ಈ ಬಗ್ಗೆ ಮಾತನಾಡಿರುವ ಜಗದೀಶ್ ತಾಯಿ ಸುಲೋಚನಮ್ಮ, ಇಡೀ ದಿನ ನಮ್ಮವರು ತಮ್ಮವರು ಎನ್ನುವವರ ಬಳಿ ಹೋಗಿ ಕೇಳಿದ್ವಿ, ಯಾರೂ ಶ್ಯೂರಿಟಿ ಕೊಡಲು ಮುಂದೆ ಬರುತ್ತಿಲ್ಲ ಅಂತ ಹೇಳಿದ್ದಾರೆ.
ನಮಗೆ ಆತ್ಮೀಯರು ಒಬ್ಬರು ಶ್ಯೂರಿಟಿ ಹಾಕಲು ಮುಂದೆ ಬಂದಿದ್ದಾರೆ. ಆದ್ರೆ ಶ್ಯೂರಿಟಿ ಹಾಕಲು ಇಬ್ಬರು ಬೇಕು ಹಾಗಾಗಿ ಇನ್ನೊಬ್ಬರಿಗಾಗಿ ಹುಡುಕುತ್ತಿದ್ದೇವೆ. ಊಟ, ನೀರು ಬಿಟ್ಟು ಊರೂರು ಅಲೆದಾಟ ಮಾಡ್ತಿದ್ದೇವೆ. ದರ್ಶನ್ ಅವರು ಈ ಸಮಯದಲ್ಲಿ ಕೈ ಹಿಡಿಯಬೇಕಿದೆ. 6 ತಿಂಗಳು ನಂತರವಾದರೂ ಮಗ ಮನೆಗೆ ಬರುತ್ತಾರೆಂದು ಖುಷಿಯಾಗಿದೆ.
ಈಗ ನೋಡಿದ್ರೆ ಸಮಸ್ಯೆಗಳು ಒಂದರ ಮೇಲೆ ಒಂದು ಬರುತ್ತಿವೆ. ದರ್ಶನ್ ಅವರೇ ಶ್ಯೂರಿಟಿ ವ್ಯವಸ್ಥೆ ಮಾಡಬೇಕು ಅಂತ ಆರೋಪಿ ಜಗದೀಶ್ ತಾಯಿ ಮನವಿ ಮಾಡಿದ್ದಾರೆ. ಹೇಗೋ ನಮ್ಮ ಮಗ ಮನೆಗೆ ಬಂದರೆ ನಮಗೆ ಅನುಕೂಲವಾಗುತ್ತದೆ. ಆರು ತಿಂಗಳು ನಂತರವಾದರೂ ಮಗ ಮನೆಗೆ ಬರುತ್ತಾರೆಂದು ಖುಷಿಯಾಗಿದೆ. ಈಗ ನೋಡಿದ್ರೆ ಸಮಸ್ಯೆಗಳು ಒಂದರ ಮೇಲೆ ಒಂದು ಬರುತ್ತಿವೆ ಎಂದು ಕಣ್ಣಿರು ಹಾಕುತ್ತಿದ್ದಾರೆ.