Thursday, December 2, 2021

ಕೃಷಿ ಕಾಯಿದೆ ವಾಪಸ್: ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೇ ತೆರಳಿದ ಕೃಷಿ ಸಚಿವೆ ಶೋಭಾ ಕರಂದ್ಲಾಜೆ

ಉಡುಪಿ: ದೇಶದಲ್ಲಿ ವಿವಾದ ಸೃಷ್ಟಿಸಿದ್ದ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆಗೆ ಆಗಮಿಸಿದ ಮಾಧ್ಯಮದವರನ್ನು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಒಂದು ಗಂಟೆ ಕಾಯಿಸಿ ಪ್ರತಿಕ್ರಿಯೆ ನೀಡದೆ ತೆರಳಿದ ಘಟನೆ ಉಡುಪಿಯಲ್ಲಿ ನಡೆದಿದೆ.


ಕಾರ್ಯಕ್ರಮಕ್ಕೆ ಉಡುಪಿಗೆ ಆಗಮಿಸಿದ್ದ ಕೇಂದ್ರ ಸಚಿವೆ ಕೃಷ್ಣಮಠಕ್ಕೆ ಭೇಟಿ ನೀಡಿದ್ದರು.

ಈ ವೇಳೆ ಪ್ರತಿಕ್ರಿಯೆಗಾಗಿ ಮಾಧ್ಯಮದವರು ಬಂದಿರುವುದನ್ನು ಅರಿತುಕೊಂಡ ಸಚಿವೆ ಒಂದು ಗಂಟೆಗೂ ಹೆಚ್ಚು ಕಾಲ ಕಾಯಿಸಿದ್ದಾರೆ.

ಬಳಿಕ ಭತ್ತ ಕೃಷಿಕರ ಸಮಸ್ಯೆ, ಬಿಟ್ ಕಾಯಿನ್ ಮತ್ತು ಪರಿಷತ್ ಚುನಾವಣೆ ಬಗ್ಗೆ ಮಾತನಾಡಿದ ಶೋಭಾ,

ಕೃಷಿ ಕಾಯಿದೆ ವಾಪಸ್ ಬಗ್ಗೆ ಪ್ರಶ್ನೆ ಕೇಳಿದಾಗ ನೇರ ಕಾರಿನತ್ತ ತೆರಳಿ ಪ್ರಯಾಣ ಬೆಳೆಸಿದ ಪ್ರಸಂಗ ನಡೆಯಿತು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...