ನವದೆಹಲಿ: ಇಂದಿನಿಂದಲೇ ಜಾರಿಗೆ ಬರುವಂತೆ ಕೇಂದ್ರ ಸರ್ಕಾರವು ಪಿಎಫ್‌ಐ ಸಂಘಟನೆ ಮತ್ತು ಅದರ ಅಂಗಸಂಸ್ಥೆಗಳನ್ನು ಮುಂದಿನ 5 ವರ್ಷಗಳ ಕಾಲ ನಿಷೇಧ ಮಾಡಿ ಮಹತ್ವದ ಆದೇಶ ಹೊರಡಿಸಿದೆ.
ಈ ಸಂಘಟನೆಗಳು ಕಾನೂನುಬಾಹಿರ ಎಂದು ತಕ್ಷಣದಿಂದಲೇ ಜಾರಿಗೆ ಬರುವಂತೆ ಮುಂದಿನ ಐದು ವರ್ಷಗಳವರೆಗೆ ನಿಷೇಧಿಸಿ ಕೇಂದ್ರ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಗೆ ಕೇಂದ್ರ ಸರ್ಕಾರ ಕೇಂದ್ರ ಇದೀಗ ಬ್ರೇಕ್ ಹಾಕಿದೆ. ಐದು ವರ್ಷಗಳ ಕಾಲ ಪಿಎಫ್‌ಐ ಬ್ಯಾನ್ ಮಾಡಿ ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದೆ.
ಎನ್ಐಎ ದಾಳಿ ಬೆನ್ನಲ್ಲೇ ಇಂತಹ ಮಹತ್ವದ ನಿರ್ಧಾರ ತೆಗೆದುಕೊಂಡ ಕೇಂದ್ರ ಸರ್ಕಾರ ಇಂದು ಮಹತ್ವದ ಆದೇಶವನ್ನು ಜಾರಿಗೊಳಿಸಿ ಈ ಸಂಘಟನೆಗೆ ಬಿಗ್ ಶಾಕ್ ನೀಡಿದೆ.
ಹಾಗು ಇದರ ಅಂಗ ಸಂಸ್ಥೆಯಾದ
1.ರಿಹಾಬ್ ಇಂಡಿಯಾ ಫೌಂಡೇಶನ್ RFI
2.ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ CFI
3.ನ್ಯಾಷನಲ್ ಕಾನ್ಸಫಡರೇಷನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್ NCHRO
4.ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್AIIC
5.ನ್ಯಾಷನಲ್ ವುಮನ್ ಫ್ರಂಟ್ NWF
6.ಜ್ಯೂನಿಯರ್ ಫ್ರಂಟ್.
7.ಎಂಪವರ್ ಇಂಡಿಯಾ ಫೌಂಡೇಶನ್.
8.ಕೇರಳದಲ್ಲಿ EIF & RF ಸಹ ಆ್ಯಕ್ಟೀವ್ ಆಗಿರುವ ಒಂದು ಸಂಘಟನೆ.
ಈ ಅಂಗಸಂಸ್ಥೆಗಳ ಮೇಲೆ ಕೂಡಾ ಈ ಬಾರಿ ಕೇಂದ್ರ ಹಿಡಿತ ಸಾಧಿಸಿದೆ.
ಇದು ಕಾನೂನು ಬಾಹಿರ ಸಂಘಟನೆ ಎಂದು ಘೋಷಣೆ ಮಾಡಿದೆ. ಪಿಎಫ್‌ಐ ನಿಷೇಧಕ್ಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ತನ್ನ ಅಧಿಸೂಚನೆಯಲ್ಲಿ ನೀಡಿರುವ ವಿವರಣೆಯಲ್ಲಿ ಕರ್ನಾಟಕ ಸರ್ಕಾರದ ಶಿಫಾರಸು ಹಾಗೂ ಪ್ರವೀಣ್ ನೆಟ್ಟಾರು ಕೊಲೆಯನ್ನು ಉಲ್ಲೇಖಿಸಲಾಗಿದೆ.
ಮುಂದಿನ ಬೆಳವಣಿಗೆಯ ಬಗ್ಗೆ ಇನ್ನಷ್ಟೇ ಕಾದುನೋಡಬೇಕಾಗಿದೆ.