ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದಿಢೀರ್ ಕರ್ನಾಟಕ ಪ್ರವಾಸ ಕೈಗೊಂಡಿದ್ದು, ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ.
ಅಗಸ್ಟ್ 3 ಹಾಗೂ 4ರಂದು ಇವರು ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆ ಗಲಾಟೆ ಮಧ್ಯೆ ಅಮಿತ್ ಶಾ ಪ್ರವಾಸ ತೀವ್ರ ಕುತೂಹಲ ಮೂಡಿಸಿದೆ.
ಪ್ರವೀಣ್ ನೆಟ್ಟಾರು ಹತ್ಯೆಯ ನಂತರ ಬಿಜೆಪಿ ಕಾರ್ಯಕರ್ತರೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದು ಬೇಜವಾಬ್ದಾರಿ ಸಿಎಂ, ಕೈಲಾಗದ ಗೃಹ ಸಚಿವ ಎಂದು ಬಿಜೆಪಿ ಕಾರ್ಯಕರ್ತರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದರ ಮಧ್ಯೆ ಶಾ ಕರ್ನಾಟಕಕ್ಕೆ ಬರುತ್ತಿರುವುದು ಸಾಕಷ್ಟು ಚರ್ಚೆಗಳಿಗೆ ಕಾರಣವಾಗಿದೆ. ಆಗಸ್ಟ್ 3 ಮತ್ತು 4 ಕರ್ನಾಟಕದಲ್ಲಿ ಇರುವ ಅಮಿತ್ ಶಾ ಅವರು ಸರ್ಕಾರದ ನಡೆ ಹಾಗೂ ನಾಯಕರ ಕಾರ್ಯಚಟುವಟಿಕೆಗಳ ಬಗ್ಗೆ ಸಮಲೋಚನೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಪ್ರವೀಣ್ ಹತ್ಯೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗಿದ್ದು, ಅದನ್ನು ಕಂಟ್ರೋಲ್ ಮಾಡಲು ರಾಜ್ಯ ಪ್ರವಾಸ ಕೈಗೊಂಡಿದ್ದಾರೆ ಎಂದು ಎನ್ನಲಾಗುತ್ತಿದೆ.
ಅಲ್ಲದೇ ಬೆಳ್ಳಾರೆಯಲ್ಲಿ ಹತ್ಯೆಯಾದ ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ನಿವಾಸಕ್ಕೂ ಭೇಟಿ ನೀಡುವ ಸಾಧ್ಯತೆಗಳಿವೆ.