Wednesday, May 18, 2022

ಕೇಂದ್ರ ಸಚಿವರಿಗೆ ಷರತ್ತುಬದ್ಧ ಜಾಮೀನು ನೀಡಿದ ಕೋರ್ಟ್

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿಗೆ ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ಹೇಳಿ ಬಂಧಿತರಾಗಿದ್ದ ಕೇಂದ್ರ ಸಚಿವ, ಬಿಜೆಪಿ ನಾಯಕ ನಾರಾಯಣ ರಾಣೆಯವರಿಗೆ ಮಹದ್​ ಮ್ಯಾಜಿಸ್ಟ್ರೇಟ್​ ಕೋರ್ಟ್​ ಜಾಮೀನು ನೀಡಿದೆ.


ನಿನ್ನೆ ರಾತ್ರಿ 11.30ರ ಹೊತ್ತಿಗೆ ಅವರಿಗೆ ಜಾಮೀನು ಸಿಕ್ಕಿದೆ. ಜಾಮೀನು ಬಾಂಡ್​​ 15,000 ರೂ.ನೀಡಬೇಕು ಮತ್ತು ಆಗಸ್ಟ್​ 30 ಮತ್ತು ಸೆಪ್ಟೆಂಬರ್​ 6ರಂದು ರಾಯಗಡ್​ನಲ್ಲಿ ವಿಚಾರಣೆಗೆ ಹಾಜರಾಗಬೇಕು ಎಂದು ಕೋರ್ಟ್ ಸೂಚನೆ ನೀಡಿದೆ.

ಪ್ರಕರಣವನ್ನು ನ್ಯಾಯಾಧೀಶ ಶೇಖಬಾಬಾಸೊ ಎಸ್. ಪಾಟೀಲ್ ವಿಚಾರಣೆ ನಡೆಸಿದ್ದಾರೆ. ಇಂಥ ತಪ್ಪನ್ನು ಮತ್ತೆ ಮಾಡಬೇಡಿ ಎಂದು ರಾಣೆಯವರಿಗೆ ಕೋರ್ಟ್ ಸೂಚಿಸಿದೆ.

ಅಷ್ಟೇ ಅಲ್ಲ, ನಾರಾಯಣ ರಾಣೆಯವರ ಧ್ವನಿ ಮಾದರಿಯನ್ನು ಸಂಗ್ರಹಿಸುವುದಕ್ಕೂ ಏಳು ದಿನ ಮುಂಚೆ ಅವರಿಗೆ ನೋಟಿಸ್​ ಕೊಡಿ ಎಂದೂ ಪೊಲೀಸರಿಗೆ ಹೇಳಿದೆ.

ನಿನ್ನೆ ರಾಣೆಯವರನ್ನು ಬಂಧಿಸಿ ಕೋರ್ಟ್​ಗೆ ಹಾಜರುಪಡಿಸಿದ್ದ ಪೊಲೀಸರು, ರಾಣೆಯವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಬೇಕು ಎಂದು ಕೋರ್ಟ್​ಗೆ ಮನವಿ ಸಲ್ಲಿಸಿದ್ದರು.

ಅದರ ವಿರುದ್ಧವಾಗಿ ರಾಣೆ ಪರ ವಕೀಲರು ಜಾಮೀನು ನೀಡಬೇಕು ಎಂದು ಕೇಳಿದ್ದರು. ಪೊಲೀಸರ ಮನವಿಯನ್ನು ತಿರಸ್ಕರಿಸಿದ ಕೋರ್ಟ್, ಷರತ್ತುಬದ್ಧ ಜಾಮೀನು ನೀಡಿದೆ.

LEAVE A REPLY

Please enter your comment!
Please enter your name here

Hot Topics

ವಿಟ್ಲ: ಭಾರೀ ಮಳೆಗೆ ರಸ್ತೆಗೆ ಬಿದ್ದ ವಿದ್ಯುತ್ ಕಂಬ-ಸಂಚಾರ ಸ್ಥಗಿತ

ವಿಟ್ಲ: ಸುರಿದ ಭಾರೀ ಗಾಳಿ ಮಳೆಯಿಂದಾಗಿ ವಿದ್ಯುತ್ ಕಂಬ ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾದ ಘಟನೆ ವಿಟ್ಲ- ಕಲ್ಲಡ್ಕ ರಸ್ತೆಯಲ್ಲಿ ನಡೆದಿದೆ.- ನಿನ್ನೆ ಸುರಿದ ಮಳೆಗೆ ಇಂದು ಮುಂಜಾನೆ...

ಛೀ ಅಸಹ್ಯ: ಮಂಗಳೂರಿನಲ್ಲಿ ಗುದನಾಳದಲ್ಲಿಟ್ಟು ಸಾಗಿಸುತ್ತಿದ್ದ ಚಿನ್ನ ವಶಕ್ಕೆ

ಮಂಗಳೂರು: ಬೈಂದೂರಿನ ಪ್ರಯಾಣಿಕನೋರ್ವ ಬಹರೈನ್‌ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಸೋಮವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ.ಪ್ರಯಾಣಿಕನೋರ್ವ 736 ಗ್ರಾಂ ಚಿನ್ನವನ್ನು ಗುದನಾಳದಲ್ಲಿಟ್ಟು ಸಾಗಿಸುತ್ತಿದ್ದ ವೇಳೆ ಅಧಿಕಾರಿಗಳು ಪತ್ತೆ...

ರಾಜ್ಯ ಸರ್ಕಾರ ನಮ್ಮ ಅಧಿಕಾರ ಕಸಿದುಕೊಂಡಿದೆ: ಹೈಕೋರ್ಟ್‌ ಮುಂದೆ ಚುನಾವಣಾ ಆಯೋಗ ಅಳಲು

ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯತ್‌ಗಳಿಗೆ ಚುನಾವಣೆ ನಡೆಸಲು ಸಾಧ್ಯವಾಗದ ರೀತಿಯಲ್ಲಿ ರಾಜ್ಯ ಸರ್ಕಾರ ನಮ್ಮ ಅಧಿಕಾರ ಕಸಿದುಕೊಂಡಿದೆ ಎಂದು ರಾಜ್ಯ ಚುನಾವಣಾ ಆಯೋಗವು ಹೈಕೋರ್ಟ್‌ ಮುಂದೆ ತನ್ನ ಅಸಹಾಯಕತೆ...