Saturday, August 20, 2022

ಅಡಕೆ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸಚಿವರ ಒಪ್ಪಿಗೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಅಡಕೆ ಆರೋಗ್ಯಕ್ಕೆ ಹಾನಿಕಾರಕ ಅಲ್ಲ ಎನ್ನುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅಧ್ಯಯನ ನಡೆಸಲು ಸಮಿತಿ ರಚನೆಗೆ ಕೇಂದ್ರ ಕೃಷಿ ಸಚಿವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.


ವಿಧಾನಸೌಧದಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಅಡಕೆ ನಿಷೇಧ ಮಾಡುವ ಬಗ್ಗೆ ಸಾಕಷ್ಟು ಸುದ್ದಿಯಾಗಿತ್ತು. ಇದೇ ವಿಚಾರವಾಗಿ ಸಂಸದರು ಮತ್ತು ಸಚಿವರೊಬ್ಬರು ಹೇಳಿಕೆ ಸಹ ಕೊಟ್ಟಿದರು.

ಕರ್ನಾಟಕದ ಅಡಕೆ ಟಾಸ್ಕ್ ಫೋರ್ಸ್‌ನವರು ದೆಹಲಿಗೆ ತೆರಳಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ಮಾಡಿ ಅಡಕೆ ಬಳಕೆಯಿಂದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತೆ ಎಂಬ ಬಗ್ಗೆ ಹೇಳಿಕೆ ನೀಡದಂತೆ ಮನವಿ ಮಾಡಿದ್ದಾರೆ.

ಇದರಿಂದ ಅಡಕೆ ಮಾರುಕಟ್ಟೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಮನವರಿಕೆ ಮಾಡಿದ್ದು, ಇದಕ್ಕೆ ಅವರು ಒಪ್ಪಿಕೊಂಡಿದ್ದಾರೆ ಎಂದರು.

ಯಾರೂ ಅಡಿಕೆ ಕುರಿತು ಇಲ್ಲ ಸಲ್ಲದ ಹೇಳಿಕೆ ನೀಡಬಾರದು. ಇದರಿಂದ ಅಡಕೆ ಬೆಳೆಗಾರರಿಗೆ ತೊಂದರೆಯಾಗಲಿದೆ. ಅಡಕೆ ಮಾರುಕಟ್ಟೆಯಲ್ಲಿ ಬೆಲೆ ವ್ಯತ್ಯಾಸವಾಗಲಿದೆ.

ಇದರಿಂದ ಅಡಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಅಡಕೆ ಬೆಳೆಗಾರರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ ಎಂದರು.

LEAVE A REPLY

Please enter your comment!
Please enter your name here

Hot Topics