Connect with us

    LATEST NEWS

    ಲವ್ ಜಿಹಾದ್ ನಮ್ಮ ಹೆಣ್ಣುಮಕ್ಕಳನ್ನು ನರಕದ ಕೂಪಕ್ಕೆ ತಳ್ಳುವ ಪ್ರಕ್ರಿಯೆ-ಶೋಭಾ ಕರಂದ್ಲಾಜೆ

    Published

    on

    ಉಡುಪಿ: ‘ಲವ್ ಜಿಹಾದ್ ನಮ್ಮ ಹೆಣ್ಣುಮಕ್ಕಳನ್ನು ನರಕದ ಕೂಪಕ್ಕೆ ತಳ್ಳುವ ಪ್ರಕ್ರಿಯೆ. ಪ್ರೀತಿಯ ಹೆಸರಲ್ಲಿ ಮದುವೆಯಾಗುತ್ತಾರೆ ಅಥವಾ ಮದುವೆಯಾಗದೆ ಮೋಸ ಮಾಡುತ್ತಾರೆ. ಕೈಗೊಂದು ಮಗುವನ್ನು ಕೊಟ್ಟು ಓಡಿ ಹೋಗುತ್ತಾರೆ. ನಂತರ ತಲಾಖ್ ಎಂದು ಹೇಳಿ ಇನ್ನೊಬ್ಬರನ್ನು ಮದುವೆಯಾಗುತ್ತಾರೆ’ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.


    ಲವ್ ಜಿಹಾದ್ ಎನ್ನುವಂತದ್ದು ಸಮಾಜದ ಪಿಡುಗು ಕೊನೆಯಾಗಬೇಕು. ಹೆಣ್ಣು ಮಕ್ಕಳು ಕೂಡಾ ಇದನ್ನು ಅರಿತುಕೊಳ್ಳಬೇಕು. ಮಕ್ಕಳ ಪೋಷಕರು ಇದರಲ್ಲಿ ವ್ಯತ್ಯಾಸ ಆದಾಗ ಯಾವ ರೀತಿ ವ್ಯಥೆ ಪಡುತ್ತಾರೆ ಎಂಬುದನ್ನು ನಾವು ಮನಗಾಣಬೇಕು. ನಮ್ಮ ಮಕ್ಕಳು ಅದನ್ನು ಅರಿತುಕೊಳ್ಳಬೇಕು. ಲವ್ ಜಿಹಾದ್ ತಡೆಗೆ ಬಲವಾದ ಕಾನೂನು ಜಾರಿ ಮಾಡುವ ಅಗತ್ಯ ಇದೆ. ಹಿಂದಿನಿಂದಲೂ ಈ ಬಗ್ಗೆ ವಾದ ಮಾಡಿಕೊಂಡು ಬಂದಿದ್ದೇನೆ’ ಎಂದು ಹೇಳಿದರು.

    ಇನ್ನು ಮಳಲಿ ದರ್ಗಾ ವಿವಾದದ ಬಗ್ಗೆ ಎಸ್ ಡಿಪಿಐ ಎಚ್ಚರಿಕೆಗೆ ಪ್ರತಿಕ್ರಿಯಿಸಿ ‘ ಹಿಂದೂಗಳಿಗೆ ಈ ಜಾಗ ಸೇರಬೇಕು. ಇದನ್ನು ಇತಿಹಾಸತಜ್ಞರು ಉತ್ಖನನ ಮಾಡಿ ಸರಿ ಮಾಡಬೇಕು. ಎರಡೂ ಧರ್ಮದವರು ಒಟ್ಟಿಗೆ ಕೂತು ಸಹರ್ಷದಿಂದ ಯೋಚನೆ ಮಾಡಿದ್ರೆ ಇದಕ್ಕೆ ಉತ್ತರ ಸಿಗಬಹುದು.

    ಹಲವಾರು ದೇವಸ್ಥಾನಗಳನ್ನು ಕೆಡವಿ ಮಸೀದಿಗಳನ್ನು ನಿರ್ಮಾಣ ಮಾಡಲಾಗಿದೆ. ಆದರೆ ನಾವ್ಯಾರೂ ಇದಕ್ಕೆ ಸಾಕ್ಷಿ ಗಳಲ್ಲ. ನಮ್ಮ ಹಿರಿಯರ ಕಾಲದಲ್ಲಿ ಕೆಲವೊಂದು ತಪ್ಪುಗಳಾಗಿವೆ. ಎರಡು ಧರ್ಮದವರು ಒಟ್ಟಿಗೆ ಕುಳಿತು ಬಗೆಹರಿಸಿಕೊಳ್ಳಲು ಪ್ರಯತ್ನಿಸಬೇಕು. ಎಲ್ಲರೂ ಈ ಬಗ್ಗೆ ಒಟ್ಟಾಗಿ ಯೋಚನೆ ಮಾಡಿದರೆ ಖಂಡಿತ ಈ ಸಮಸ್ಯೆ ಬಗೆಹರಿಸಬಹುದು’ ಎಂದು ಹೇಳಿದರು.

    ಇತ್ತೀಚೆಗೆ ಕರಾವಳಿಯಲ್ಲಿ ಮತ್ತೆ ಭುಗಿಲೆದ್ದ ಹಿಜಾಬ್ ಕುರಿತು ಮಾತನಾಡಿದ ಅವರು ‘ಕಾನೂನನ್ನು ಉಲ್ಲಂಘನೆ ಮಾಡಿದ್ರೆ ಅವರ ಮೇಲೆ ಕಠಿಣವಾದ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಏಕೆಂದರೆ ಕಾನೂನನ್ನು ಗೌರವಿಸದೆ ಇರುವವರು ಮುಂದೆ ದೇಶದ್ರೋಹ ಚಟುವಟಿಕೆಗೆ ದಾರಿಯಾಗುತ್ತಾರೆ.

    ಹೈಕೋರ್ಟ್ ಆದೇಶ ಸ್ಪಷ್ಟವಾಗಿದೆ. ತರಗತಿಯ ಒಳಗೆ ಹಿಜಾಬ್ ಗೆ ಅವಕಾಶ ಇಲ್ಲ ಎಂದು ಹೇಳಿದೆ. ಈ ನೆಲದಲ್ಲಿ ಬದುಕುವಂಥ ಕಾನೂನಿಗೆ ಗೌರವ ಕೊಡುವಂತ ಎಲ್ಲರೂ ಈ ಆದೇಶ ಪಾಲಿಸಬೇಕು. ಹೈಕೋರ್ಟ್ ಕಾನೂನು ಉಲ್ಲಂಘನೆ ಮಾಡುತ್ತೇವೆ ಅನ್ನೋದು ಸರಿಯಲ್ಲ. ಅಂಥವರ ಮೇಲೆ ಕಠಿಣವಾದ ಕ್ರಮ ಕೈಗೊಳ್ಳಬೇಕು. ಹೈಕೋರ್ಟ್ ಆದೇಶವನ್ನು ಎಲ್ಲರೂ ಪಾಲಿಸಬೇಕು’ ಎಂದು ಹೇಳಿದರು.

    ಇನ್ನು ಹತ್ತನೇ ತರಗತಿ ಪಠ್ಯ ಪರಿಷ್ಕರಣೆ ಬಗ್ಗೆ ಮಾತನಾಡಿ ‘ನಮ್ಮ ಮಕ್ಕಳು ನಮ್ಮ ಚರಿತ್ರೆಯನ್ನು ಕಲಿಯಬೇಕು. ನಮ್ಮ ಮಕ್ಕಳು ನಮ್ಮ ದೇಶದ ಇತಿಹಾಸವನ್ನು ಕಲಿಯಬೇಕು. ನಮ್ಮ ಇತಿಹಾಸದಲ್ಲಿ ಆಗಿರುವ ಲೋಪದೋಷಗಳನ್ನು ತಿಳಿದುಕೊಳ್ಳಬೇಕು.

    ಬ್ರಿಟಿಷರು ದೇಶಕ್ಕೆ ಯಾಕೆ ಬಂದರು? ಮೊಘಲರು ಈ ದೇಶಕ್ಕೆ ಯಾಕೆ ಬಂದರು? ಘಜ್ನಿ ಮಹಮ್ಮದ್ 18 ಬಾರಿ ದಾಳಿ ಮಾಡಿದ್ದು ಯಾಕೆ? ನಮ್ಮ ಸಮಸ್ಯೆ ನಮ್ಮ ಕೊರತೆ ಏನು? ಎಲ್ಲವನ್ನು ನಮ್ಮ ಮಕ್ಕಳು ಅಧ್ಯಯನ ಮಾಡಬೇಕು. ನಮ್ಮ ಮಕ್ಕಳು ಡಿಗ್ರಿ ಮಾಡಿದರೂ ದೇಶದ ಚರಿತ್ರೆ ಗೊತ್ತಿರುವುದಿಲ್ಲ.

    ದೇಶದ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿದವರ ಬಗ್ಗೆ ಗೊತ್ತಿರುವುದಿಲ್ಲ. ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ವ್ಯಕ್ತಿ ಅಥವಾ ಸಮಿತಿಯ ಬಗ್ಗೆ ನಾನು ಮಾತನಾಡಲ್ಲ. ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ರಾಜ್ಯ ನಮ್ಮದು. ನಮ್ಮ ಕನ್ನಡ ಸಾಹಿತ್ಯ ಸತ್ವಯುತವಾಗಿದೆ, ಕನ್ನಡದ ಸಾಹಿತಿ ಕವಿಗಳಲ್ಲಿ ಅಷ್ಟೊಂದು ತಾಕತ್ತು ಇದೆ. ನಮ್ಮ ರಾಜ್ಯದ ಏಕೀಕರಣ ದಂತಹ ವಿಚಾರಗಳು ಕೂಡ ಮಕ್ಕಳಿಗೆ ತಿಳಿಯುವಂತಾಗಬೇಕು.

    ವಿವಾದ ಇಲ್ಲದಂತಹ ವ್ಯಕ್ತಿಗಳನ್ನು ಸಮಿತಿಯಲ್ಲಿ ಜೋಡಿಸುವ ಕೆಲಸವನ್ನು ಸರ್ಕಾರ ಮಾಡಬೇಕು. ಎಲ್ಲರಿಗೂ ಪ್ರಿಯವಾದ ವಿಚಾರಗಳನ್ನು ಹೇಳಬೇಕು. ಎಲ್ಲರನ್ನೂ ಖುಷಿಪಡಿಸುವುದು ಕಷ್ಟ, ಎಲ್ಲರೂ ಸಮಾನ ಎನ್ನುವ ರೀತಿಯಲ್ಲಿ ಪರಿಷ್ಕರಣೆಯಾಗಬೇಕು. ಮಕ್ಕಳ ಮನಸ್ಸನ್ನು ಪುಳಕಗೊಳಿಸುವ , ವಿಕಸಿತ ಗೊಳಿಸುವ ಪಠ್ಯಗಳು ಬರಬೇಕು’ ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

    ನಿನ್ನೆ ತಾನೇ ಮಾಧ್ಯಮಗೋಷ್ಠಿಯಲ್ಲಿ ರೈತ ನಾಯಕ ಟಿಕಾಯತ್‌ರ ಮೇಲೆ ಮಸಿ ಬಳಿದ ಘಟನೆಗೆ ಸಂಬಂಧಿಸಿ ‘ಯಾವುದೇ ಹೋರಾಟಗಾರರ ಮೇಲೆ ಈ ರೀತಿ ಮಾಡುವುದು ಸರಿಯಲ್ಲ. ಪ್ರಜಾತಂತ್ರದಲ್ಲಿ ಹೋರಾಟಕ್ಕೆ ಬಲವಿದೆ. ಲೋಕಸಭೆ ರಾಜ್ಯಸಭೆ, ವಿಧಾನಸಭೆ, ವಿಧಾನ ಪರಿಷತ್ ಗಳಲ್ಲಿ ಪ್ರತಿಪಕ್ಷಕ್ಕೆ ದೊಡ್ಡ ತಾಕತ್ತು ಇದೆ. ಸರಕಾರದ ಲೋಪದೋಷಗಳನ್ನು ಸರಿಪಡಿಸಿ ಎಚ್ಚರಗೊಳಿಸುವ ಕೆಲಸ ಹೋರಾಟದಿಂದಲೇ ಸಾಧ್ಯ.

    ಟಿಕಾಯತ್ ತನ್ನದೇ ಒಂದು ವಿಚಾರ ಇಟ್ಟು ಹೋರಾಟ ನಡೆಸುತ್ತಿದ್ದಾರೆ. ಅದರಿಂದ ರೈತರಿಗೆ ಎಷ್ಟು ಲಾಭ ಆಯ್ತು ನಷ್ಟ ಆಯ್ತು ? ಅನ್ನೋದನ್ನು ಅವರೇ ಅವಲೋಕನ ಮಾಡಲಿ. ಆದರೆ ಯಾವುದೇ ವ್ಯಕ್ತಿಯ ಮೇಲೆ ಈ ರೀತಿ ವೈಯಕ್ತಿಕ ದ್ವೇಷ ಕಾರುವುದು ಸರಿಯಲ್ಲ. ಮಸಿಬಳಿಯುವ ಕೆಲಸ ಯಾರು ಕೂಡ ಮಾಡಬಾರದು, ಶೋಭೆ ತರುವಂತದ್ದಲ್ಲ’ ಎಂದು ಹೇಳಿದರು.

     

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?

    Published

    on

    ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
    ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.

    ಸೀಟ್ ಗಾಗಿ ಎಡವಟ್ಟು :
    ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.

    ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್‌ಗೆ 60 ರೂ., ಹಾಲ್ಫ್‌ಗೆ 40 ರೂ.
    ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.

    ರೋಹಿತ್‌ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

    ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.

    Continue Reading

    LATEST NEWS

    Trending