ನಟ ಸುಶಾಂತ್ ಆತ್ಮಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಬಿಹಾರ ಸರ್ಕಾರದಿಂದ ಶಿಫಾರಸು..!
ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ ಸಿಬಿಐಗೆ ವಹಿಸಲು ಬಿಹಾರ ಸರ್ಕಾರ ಶಿಫಾರಸು ಮಾಡಿದೆ. ಬಿಹಾರ ಸರ್ಕಾರದ ಶಿಫಾರಸನ್ನು ಕೇಂದ್ರ ಸರ್ಕಾರ ಒಪ್ಪಿದೆ.
ಸುಶಾಂತ್ ಕುಟುಂಬದ ವಕೀಲ ವಿಕಾಸ್ ಸಿಂಗ್ ಬಿಹಾ ಸಿಎಂ ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಿ ಪ್ರಕರಣವನ್ನು ಮುಂಬೈ ಪೊಲೀಸರಿಂದ ಸಿಬಿಗೆ ವರ್ಗಾವಣೆ ಮಾಡುವಂತೆ ಕೋರಿದ್ದರು.
ಈ ಹಿನ್ನೆಲೆಯಲ್ಲಿ ಮತ್ತು ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಯಬೇಕು ಆನೇಕ ನಟ ನಟಿಯರು ಆಗ್ರಹ ಮಾಡಿದ್ದರು.
ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ಕಕರಣಕ್ಕೆ ಸಂಬಂಧಿಸಿದಂತೆ ಅವರ ತಂದೆ ಕೆ.ಕೆ ಸಿಂಗ್, ಸುಶಾಂತ್ ಪ್ರೇಯಸಿ ರಿಯಾ ಚಕ್ರವರ್ತಿ ವಿರುದ್ಧ ದೂರು ಸಲ್ಲಿಸಿದ್ದರು.
ರಿಯಾ ಆತನ ಹಣವನ್ನು ತಾನು ದುರುಪಯೋಗಪಡಿಸಿಕೊಂಡಿರುವ ಬಗ್ಗೆಯೂ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದರು. ಇದಲ್ಲದೆ, ಸುಶಾಂತ್ಗೆ ಅವಕಾಶ ತಪ್ಪಲು ಬಾಲಿವುಡ್ ದಿಗ್ಗಜರು ಕಾರಣ ಎನ್ನಲಾಗಿತ್ತು.
ಈ ಮಧ್ಯೆ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರು ಸಾವು ಪ್ರಕರಣವನ್ನು ಕೇಂದ್ರೀಯ ತನಿಖಾ ದಳ ಸಿಬಿಐಕ್ಕೆ ಒಪ್ಪಿಸಿರುವ ಬಿಹಾರ ಸರ್ಕಾರದ ಶಿಫಾರಸನ್ನು ಒಪ್ಪಿದ್ದೇವೆಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್’ ತಿಳಿಸಿದೆ.
ಬಾಲಿವುಡ್ ನಟಿ ರಿಯಾ ಚಕ್ರವರ್ತಿಯವರು ಸುಶಾಂತ್ ಆತ್ಮಹತ್ಯೆ ಪ್ರಕರಣದ ಎಫ್ಐಆರ್’ನ್ನು ಪಾಟ್ನಾದಿಂದ ಮುಂಬೈಗೆ ವರ್ಗಾಯಿಸುವಂತೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ಈ ಬಗ್ಗೆ ಇಂದು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೃಶಿಕೇಶ್ ರಾಯ್ ಅವರಿದ್ದ ನ್ಯಾಯಪೀಠ, ನಟನ ಸಾವಿನ ಹಿಂದಿರುವ ಸತ್ಯಾಸತ್ಯತೆ ಗೊತ್ತಾಗಬೇಕಿದೆ ಎಂದು ತಿಳಿಸಿದೆ.
ಮಂಗಳೂರು/ಮುಂಬೈ : ಕೆಲವು ನಟಿಯರು ನೋ ಕಿಸ್ಸಿಂಗ್ ನೀತಿಯನ್ನು ಅನುಸರಿಸುತ್ತಾರೆ. ಈ ಬಗ್ಗೆ ಸಿನಿಮಾ ಒಪ್ಪಿಕೊಳ್ಳುವ ಮೊದಲೇ ಮಾತುಕತೆ ನಡೆಸಿರುತ್ತಾರೆ. ಇದನ್ನು ಬಾಲಿವುಡ್‌ನ ಈ ಸ್ಟಾರ್ ನಟಿ ಕೂಡ ಅನುಸರಿಸುತ್ತಿದ್ದರು.
ಆದರೆ ಆ ಒಬ್ಬ ನಟ ಬಲವಂತವಾಗಿ ಕಿಸ್ ಮಾಡಿದಕ್ಕೆ ವಾಂತಿ ಮಾಡಿ 100 ಸಲ ಮುಖ ತೊಳೆದಿದ್ದೆ ಎಂದು ಸ್ಟಾರ್ ನಟಿ ಹೇಳಿದ್ದಾರೆ.
ಬಾಲಿವುಡ್ ನಟಿ ರವೀನಾ ಟಂಡನ್ ಮೂರು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿದ್ದಾರೆ. ರವಿನಾ ಟಂಡನ್ ನೋ ಕಿಸ್ಸಿಂಗ್ ನೀತಿಯನ್ನು ಅನುಸರಿಸಿದ ನಟಿಯರಲ್ಲಿ ರವೀನಾ ಟಂಡನ್ ಕೂಡ ಒಬ್ಬರು.
ಆದರೆ ಸಿನಿಮಾವೊಂದರ ಶೂಟಿಂಗ್ ವೇಳೆ ಸಹ ನಟರೊಬ್ಬರು ಆಕಸ್ಮಿಕವಾಗಿ ರವೀನಾ ಟಂಡನ್ ತುಟಿಗಳಿಗೆ ಮುತ್ತಿಟ್ಟ ಘಟನೆ ನಡೆದಿತ್ತು. ಆ ನಂತರ ಏನಾಯಿತು ಎಂಬುದನ್ನು ಸ್ವತಃ ರವೀನಾ ಅವರೇ ಹೇಳಿದ್ದಾರೆ.
ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ ಈ ಬಗ್ಗೆ ರವೀನಾ ಮಾತನಾಡಿದ್ದಾರೆ. ರವೀನಾ ಟಂಡನ್ ಅವರೊಂದಿಗೆ ಒಂದು ಘಟನೆ ನಡೆದಿತ್ತಂತೆ. ಅವರ ಸಹ ನಟರೊಬ್ಬರು ತಪ್ಪಾಗಿ ಅವರನ್ನು ಚುಂಬಿಸಿದ್ದರಂತೆ. ಈ ದೃಶ್ಯವು ಸ್ಕ್ರಿಪ್ಟ್ ನ ಭಾಗವೂ ಆಗಿರಲಿಲ್ಲ. ಇದಾದ ನಂತರ ರವೀನಾ ಟಂಡನ್ ತುಂಬಾ ಅನ್‌ಕಂಫರ್ಟ್ ಫೀಲ್ ಮಾಡಿಕೊಂಡರಂತೆ.
ಆ ಬಳಿಕ ವಾಂತಿ ಕೂಡ ಮಾಡಿದರಂತೆ. 100 ಸಲ ತಮ್ಮ ಬಾಯಿ ತೊಳೆದುಕೊಂಡಿದ್ದಾರಂತೆ. ನಂತರ ಆ ನಟ ರವೀನಾ ಟಂಡನ್ ಅವರ ಬಳಿಕ ಕ್ಷಮೆಯಾಚಿಸಿದರಂತೆ. ಸಂದರ್ಶನ ಸಮಯದಲ್ಲಿ ರವೀನಾ ಟಂಡನ್ ಈ ವಿಚಾರ ಹೇಳಿದ್ದಾರೆ. ಸಿನಿಮಾಗಳಲ್ಲಿ ಕಿಸ್ ಮಾಡದಿರುವುದು ನನ್ನ ಆಯ್ಕೆ ಎಂದು ರವೀನಾ ಟಂಡನ್ ಹೇಳಿದ್ದಾರೆ.
ಮಂಗಳೂರು/ಮುಂಬೈ : ಸೈಫ್ ಅಲಿ ಖಾನ್ ಮೇಲೆ ನಡೆದ ಚೂ*ರಿ ಇ*ರಿತ ಪ್ರಕರಣ ಇಡೀ ಬಾಲಿವುಡನ್ನೇ ಬೆಚ್ಚಿ ಬೀಳಿಸಿದೆ. ಆರು ಕಡೆಗಳಿಗೆ ಚೂ*ರಿ ಇರಿ*ತಕ್ಕೊಳಗಾಗಿ ತೀ*ವ್ರ ರ*ಕ್ತಸ್ರಾವವಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಪ್ರಾ*ಣಾಪಾಯದಿಂದ ಅವರು ಪಾರಾಗಿದ್ದಾರೆ. ಘಟನೆ ಸಂಬಂಧ ಓರ್ವನನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಇದೆ.
ಆಟೋದಲ್ಲಿ ಆಸ್ಪತ್ರೆಗೆ ಹೋದ್ರಾ ಸೈಫ್?
ಸದ್ಯ ಈ ಪ್ರಕರಣ ಹಲವು ಅನುಮಾನ ಹುಟ್ಟು ಹಾಕಿದೆ. ಏನೇನೋ ವದಂತಿಗಳು ಹರಿದಾಡುತ್ತಿವೆ. ಈ ನಡುವೆ ಗಮನಕ್ಕೆ ಬಂದ ಮತ್ತೊಂದು ವಿಚಾರವಂದ್ರೆ ಅದು ಸೈಫ್ ಆಸ್ಪತ್ರೆ ಸೇರಿದ್ದು ಹೇಗೆ ಎಂಬುದು.
ಹೇಳಿ ಕೇಳಿ ಸಿನಿಮಾ ನಟ. ಅದರಲ್ಲೂ ಶ್ರೀಮಂತ ಮನೆತನದ ನಟ. ಭವ್ಯವಾದ ಮನೆ, ಆಳು ಕಾಳು ಇದ್ದಾರೆ. ಸಿನಿಮಾ ಮಂದಿಗೆ ಕಾರಿನ ಕ್ರೇಜ್ ಇದ್ದೇ ಇದೆ. ಸೈಫ್ ಬಳಿಯೂ ಕೋಟಿಗಟ್ಟಲೆ ಬೆಲೆ ಬಾಳುವ ಕಾರುಗಳಿವೆ. ಆದ್ರೆ, ಹ*ಲ್ಲೆಗೊಳಗಾದ ವೇಳೆ ಅವರು ಆಟೋದಲ್ಲಿ ಆಸ್ಪತ್ರೆಗೆ ಹೋಗಿದ್ದಾರೆ ಎನ್ನಲಾಗಿದೆ.
ಸದ್ಯ ವೀಡಿಯೋವೊಂದು ವೈರಲ್ ಆಗಿದ್ದು, ಅದರಲ್ಲಿ ಆಟೋ ಹಾಗೂ ಅದರ ಪಕ್ಕದಲ್ಲಿ ಕರೀನಾ ಕಪೂರ್ ನಿಂತಿರೋದನ್ನು ಕಾಣಬಹುದಾಗಿದೆ. ವರದಿಗಳ ಪ್ರಕಾರ, ಸೈಫ್ ಅಲಿ ಖಾನ್ ದಾ*ಳಿಗೊಳಗಾದಾಗ ಕಾರು ರೆಡಿ ಇರಲಿಲ್ಲ. ತೀವ್ರ ರ*ಕ್ತಸ್ರಾವದಿಂದ ಪರದಾಡುತ್ತಿದ್ದಾಗ ಆಟೋ ಹಿಡಿದು ಆಸ್ಪತ್ರೆಗೆ ಹೋಗಿದ್ದಾರೆ ಎನ್ನಲಾಗಿದೆ.
ಸೈಫ್ ಹಿರಿಯ ಪುತ್ರ ಇಬ್ರಾಹಿಂ ಸೈಫ್ ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದು, ಕಾರಿನಲ್ಲಿ ಹೋದ್ರೆ ಹೆಚ್ಚು ಸಮಯವಾಗುತ್ತೆ ಎಂಬ ಕಾರಣಕ್ಕೆ ಈ ನಿರ್ಧಾರ ತಳೆಯಲಾಗಿತ್ತು ಎಂದೂ ಹೇಳಲಾಗಿದೆ.
ಸೈಫ್ ಔಟ್ ಆಫ್ ಡೇಂ*ಜರ್ :
ಸದ್ಯ ಲೀಲಾವತಿ ಆಸ್ಪತ್ರೆಯಲ್ಲಿ ಸೈಫ್ ಚೇತರಿಸಿಕೊಳ್ಳುತ್ತಿದ್ದಾರೆ. ಖಾನ್ ಅವರ ದೇಹಕ್ಕೆ 6 ಬಾರಿ ಇರಿಯಲಾಗಿದೆ. ಎರಡು ಕಡೆ ಆಳವಾದ ಗಾ*ಯಗಳಾಗಿದ್ದು, ತುರ್ತು ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. ಜೀ*ವಕ್ಕೆ ಯಾವುದೇ ಅ*ಪಾಯವಿಲ್ಲ.
ಬೆನ್ನು ಮೂಳೆಯಿಂದ ಚಾ*ಕುವಿನ ತುದಿಯನ್ನು ಹೊರತೆಗೆಯಲಾಗಿದೆ. ಖಾನ್ ಆರೋಗ್ಯ ಸ್ಥಿರವಾಗಿದೆ. ನಾಳೆ ಬೆಳಿಗ್ಗೆ ಐಸಿಯುವಿನಿಂದ ಹೊರತರುತ್ತೇವೆ ಎಂದು ಆಸ್ಪತ್ರೆಯ ವೈದ್ಯ ನಿತಿನ್ ಡಾಂಗೆ ಮಾಹಿತಿ ನೀಡಿದ್ದಾರೆ.
ಮಂಗಳೂರು : ಚಂದನವನದಲ್ಲಿ ಸಿನಿಮಾ ನಿರ್ಮಾಣ ಮಾಡಿ ಗೆದ್ದಿರುವ ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರ ಪತ್ನಿ ಶಿಲ್ಪಾ ಗಣೇಶ್ ಕೋಸ್ಟಲ್‌ವುಡ್‌ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಅವರ ಗೋಲ್ಡನ್ ಮೂವೀಸ್ ಸಂಸ್ಥೆ ತುಳು ಸಿನೆಮಾ ಇಂಡಸ್ಟ್ರಿಗೆ ಕಾಲಿಟ್ಟಿದೆ. ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ಈ ಪ್ರೊಡಕ್ಷನ್‌ನ ಮೊದಲ ತುಳು ಸಿನಿಮಾ ಪ್ರೊಡಕ್ಷನ್ ನಂ 1ಗೆ ಮುಹೂರ್ತ ನೆರವೇರಿಸಲಾಗಿದೆ.
ಉದ್ಯಮಿ ಎಂ ಆರ್ ಜಿ ಗ್ರೂಪ್ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಅವರು ಮೊದಲ ಕ್ಲ್ಯಾಪ್ ಮಾಡಿದ್ದು, ಕುದ್ರೋಳಿ ಕ್ಷೇತ್ರದ ನವ ನಿರ್ಮಾಣದ ರೂವಾರಿ ಜನಾರ್ದನ ಪೂಜಾರಿ ಅವರ ಆಶೀರ್ವಾದೊಂದಿಗೆ ನಟ ಗಣೇಶ್ ಕ್ಯಾಮೆರಾ ರೋಲ್ ಮಾಡಿದ್ದಾರೆ.
ಕಾರ್ಯಕ್ರಮದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ್ ಕಾಮತ್, ರಾಜೇಶ್ ನಾಯಕ್, ಉದ್ಯಮಿ ರೋಹನ್ ಮೊಂತೆರೋ, ಲೀಲಾಕ್ಷ ಕರ್ಕೇರ , ತುಳು ಸಿನೆಮಾದ ಕಲಾವಿದರು ಸೇರಿದಂತೆ ಹಲವು ಗಣ್ಯರು ಭಾಗಿಯಾಗಿ ಶುಭ ಹಾರೈಸಿದ್ದಾರೆ.
ಗಣೇಶ್ ಹೇಳಿದ್ದೇನು?
ಈ ಬಗ್ಗೆ ಮಾಹಿತಿ ನೀಡಿದ ನಟ ಗಣೇಶ್ , ನಾಲ್ಕು ವರ್ಷದ ಹಿಂದೆ ಮಂಗಳೂರಿಗೆ ಬಂದಾಗ ತುಳು ಸಿನೆಮಾ ಮಾಡಬೇಕು ಅಂತ ಯೋಚನೆ ಬಂದಿತ್ತು. ಉತ್ತಮ ಕಥೆಗಾಗಿ ಕಾಯುತ್ತಿದ್ದು, ಈಗ ಅಂತಹ ಒಂದು ಉತ್ತಮ ಕಥೆ ಸಿಕ್ಕಿದೆ. ಹೀಗಾಗಿ ಶಿಲ್ಪಾ ಈ ಸಿನೆಮಾ ಮಾಡಲು ಮುಂದಾಗಿದ್ದಾಳೆ. ನನ್ನ ನಂಟು ತುಳುನಾಡಿನ ಜೊತೆ ಜಾಸ್ತಿ ಇದ್ದ ಕಾರಣ ಅವಕಾಶ ಸಿಕ್ಕರೆ ಈ ಸಿನೆಮಾದಲ್ಲಿ ಹಾಡಿನ ಸೀನ್‌ನಲ್ಲಾದ್ರೂ ಕಾಣಸಿಕೊಳ್ಳುವುದಾಗಿ ಹೇಳಿದ್ದಾರೆ.
ಪ್ರೊಡಕ್ಷನ್ ನಂಬರ್ 1 ಸಿನಿಮಾ ತುಳುನಾಡಿನ ಸೊಗಡಿನೊಂದಿಗೆ ಸುಂದರ ಸಾಂಸಾರಿಕ ಕಥೆಯನ್ನು ಹೊಂದಿರುವ ಸಿನೆಮಾವಾಗಿದ್ದು, ನಾಯಕ ನಟನಾಗಿ ನಿತ್ಯ ಪ್ರಕಾಶ್ ಬಂಟ್ವಾಳ ಅವರು ಮೊದಲ ಬಾರಿಗೆ ಸಿನೆಮಾಗೆ ಎಂಟ್ರಿ ಕೊಟ್ಟಿದ್ದು, ಅಮೃತಾ ನಾಯಕ್ ಅವರು ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.