ಬಂಟ್ವಾಳ : ಆರ್ ಎಸ್‌ಎಸ್ ವಿರುದ್ದ ಪ್ರತಿಭಟನೆ ನಡೆಸಲು ಯತ್ನಿಸಿದ ಕ್ಯಾಂಪಸ್ ಫ್ರಂಟ್ ಕಾರ್ಯಕರ್ತರನ್ನು ವಿಟ್ಲ ಪೊಲೀರು ಬಂಧಿಸಿದ್ದಾರೆ.
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯ ಹುತಾತ್ಮ ದಿನವಾದ ಇಂದು ಗಾಂಧಿಯನ್ನು ಕೊಂದ ಆರ್ ಎಸ್ ಎಸ್ ಎಂಬ ಘೋಷ ವಾಕ್ಯದಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ವಿಟ್ಲದಲ್ಲಿ ಪ್ರತಿಭಟನೆ ಹಮ್ಮಿಕೊಂಡಿತ್ತು.
ವಿಟ್ಲ ಪೇಟೆಯಲ್ಲಿ ಪ್ರತಿಭಟನೆಗೆ ಮುಂದಾಗುತ್ತಿದ್ದಂತೆ ಕ್ಯಾಂಪಸ್ ಫ್ರಂಟ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ವಿಟ್ಲದ ಹಳೆ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಪ್ರತಿಭಟನೆಗೆ ಪೊಲೀಸ್ ಅನುಮತಿ ಕೂಡ ಸಿಎಫ್ ಐ ಪಡೆದಿರಲಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ