Connect with us

DAKSHINA KANNADA

ಮಂಗಳೂರು: ಕಾಶೀ ಮಠಾಧೀಶರ ಚಾತುರ್ಮಾಸ ವ್ರತಾರಂಭ

Published

on

ಮಂಗಳೂರು: ಕಾಶೀ ಮಠಾಧೀಶರಾದ ಶ್ರೀಸಂಯಮಿಂದ್ರ ತೀರ್ಥ ಸ್ವಾಮೀಜಿಯವರಿಂದ ಮಂಗಳೂರಿನ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಚಾತುರ್ಮಾಸ ವ್ರತಾರಂಭ ಆಗಲಿದೆ.


ವೆಂಕಟರಮಣ ದೇವರ ಪುನಃ ಪ್ರತಿಷ್ಠೆಯಾಗಿ ಈ ಬಾರಿ 10 ನೇ ವರ್ಷ (ದಶಮಾನೋತ್ಸವ ಸಂಭ್ರಮ ). ತಮ್ಮ ಊರಿಗೆ ದೇವತಾ ಉಪಾಸನೆ, ಭಜನೆ ಹಾಗೂ ದೇವರ ಮೇಲಿನ ಭಕ್ತಿ ಶ್ರದ್ಧೆಗಳನ್ನು ವ್ಯಕ್ತಪಡಿಸಲು ಅನುಕೂಲವಾದ ಒಂದು ದೇವರ ಮಂದಿರ ಬೇಕು ಎಂಬ ಗೌಡಸಾರಸ್ವತ ಬ್ರಾಹ್ಮಣ ಸಮಾಜದವರ ಆರಾಧ್ಯದೇವರಾದ ವೆಂಕಟರಮಣ ದೇವಸ್ಥಾನ ಯತಿವರೇಣ್ಯ ಶ್ರೀಸುಧೀಂದ್ರ ತೀರ್ಥ ಸ್ವಾಮೀಜಿ ಹಾಗೂ ಪಟ್ಟ ಶಿಷ್ಯ ಪ್ರಸ್ತುತ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಗಳವರ ಕರಕಮಲಗಳಿಂದ ಪುನಃ ಪ್ರತಿಷ್ಠಾಪಿತಗೊಂಡ ಶ್ರೀ ವೀರ ವೆಂಕಟೇಶ ದೇವರು . ದೇವಾಲಯಗಳ ಘಂಟಾನಾದ,ಭಜನೆ,ಕೀರ್ತನೆ,ಮಂತ್ರೋಚ್ಚಾರ ಗಳ ದಿವ್ಯನಿನಾದದಿಂದ ಊರ ಪರಿಸರವಿಡೀ ಅಲೌಕಿಕ ಕಾಂತಿಯಿಂದ ತುಂಬಿಹೋಯಿತು.


ಶ್ರೀಕಾಶೀಮಠದ ವಿದ್ಯಮಾನ ಪೀಠಾಧಿಪತಿಗಳಾದ ಪರಮ ಪೂಜ್ಯ ಶ್ರೀ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರು ಮಂಗಳೂರಿನ ಸಮಾಜಬಾಂಧವರಿಗೆ ನೀಡಿದ ಅಪೂರ್ವ ಕೊಡುಗೆ. ಸ್ವಾಮೀಜಿಯವರ ಚಾತುರ್ಮಾಸ ವೃತಾಚರಣೆಯನ್ನು ಮಂಗಳೂರಿನ ವೆಂಕಟರಮಣ ದೇವಸ್ಥಾನದಲ್ಲಿ ಕೈಗೊಳ್ಳುವುದಾಗಿ ನಿರ್ಧರಿಸಿ ಸಮಾಜಬಾಂಧವರಿಗೆ ಅಮಿತ ಆನಂದವನ್ನು ದಯಪಾಲಿಸಿರುತ್ತಾರೆ.


ಪರಮ ಪೂಜ್ಯರು ಶ್ರೀ ಕಾಶೀಮಠದ ಗುರುಪರಂಪರೆಯ 21ನೇ ಯತಿವರ್ಯರಾಗಿ ೨೦೧೬ರ ಜನವರಿ ೨೮ ರಂದು ಪಟ್ಟಭಿಷಿಕ್ತರಾದ ಬಳಿಕ ಪೂರ್ಣ ಪ್ರಮಾಣದಲ್ಲಿ ನಡೆಯುತ್ತಿರುವ ಚಾತುರ್ಮಾಸವೂ ಇದಾಗಿರುವುದರಿಂದ ಸಮಾಜ ಭಾಂದವರ ಸಂಭ್ರಮಕ್ಕೆ ಮೇರೆಯೇ ಇಲ್ಲವಾಗಿದೆ.

ಇಂದು ಆಷಾಢ ಬಹುಳ ಪಂಚಮಿಯಂದು ಶ್ರೀ ಸಂಸ್ಥಾನದ ದೇವರುಗಳಿಗೆ ಪಂಚಾಮೃತ ಅಭಿಷೇಕ, ಊಧ್ವರ್ಜನ, ಶತಕಲಶಾಭಿಷೇಕ, ಪವಮಾನಾಭಿಷೇಕ, ಕನಕಾಭಿಷೇಕ, ಮೃತಿಕಾನಯನ, ತಪ್ತ ಮುದ್ರಾಪ್ರಧಾನ ,ಮಹಾಪೂಜೆ, ಮೃತಿಕಾ ಪೂಜೆಗಳ ಬಳಿಕ ಪರಮಪೂಜ್ಯ ಶ್ರೀ ಸಂಯಮಿಂದ್ರ ತೀರ್ಥ ಶ್ರೀ ಪಾದರು ಚಾತುರ್ಮಾಸ ವೃತ ಸ್ವೀಕಾರ ಮಾಡಿದರು. ಬಳಿಕ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.


ಪರಮಪೂಜ್ಯರ ಚಾತುರ್ಮಾಸ ವೃತಾಚರಣೆಯ ಸಂದರ್ಭದಲ್ಲಿ ದೇಶ ವಿದೇಶಗಳಿಂದ ಸಾವಿರಾರು ಭಜಕರು ಆಗಮಿಸಿದರು . ಮಠದಲ್ಲಿ ಈ ಚಾತುರ್ಮಾಸ ವೃತಾಚರಣೆಯ ಕಾಲಾವಧಿಯ ಉದ್ದಕ್ಕೂ ಬರುವ ವಿವಿಧ ಹಬ್ಬ,ಹರಿದಿನ,ವಿಶೇಷ ಪರ್ವಾದಿಗಳ ಸಂದರ್ಭದ ವಿವಿಧ ಧಾರ್ಮಿಕ ವಿಧಿ,ಹೋಮ ಹವನಾದಿಗಳಲ್ಲದೆ ಭಜನಾ ಸಪ್ತಾಹ ನಡೆಯಲಿದೆ.

ಪ್ರತಿ ಶುಕ್ರವಾರ ,ಶನಿವಾರ ಹಾಗೂ ಭಾನುವಾರ ಸಂಜೆ ಯಿಂದ ರಾತ್ರಿ ವರೆಗೆ ಗೌಡಸಾರಸ್ವತ ಸಮಾಜದ ಉದಯೋನ್ಮುಖ ಹಾಗೂ ಖ್ಯಾತ ಸಂಗೀತ ಕಲಾವಿದರಿಂದ ಭಕ್ತಿ ಸಂಗೀತ,ನಾಟಕ,ಭರತನಾಟ್ಯಾದಿ ಕಾರ್ಯಕ್ರಮಗಳಿರುತ್ತವೆ.


ಅಷ್ಠಮಿಯ ಸಂದರ್ಭದಲ್ಲಿ ಮಕ್ಕಳಿಗೆ ಕೃಷ್ಣವೇಷ ಸ್ಪರ್ಧೆಯನ್ನು ಆಯೋಜಿಸಲಾಗುವುದು ಮಾತ್ರವಲ್ಲ ಸ್ವಚ್ಚತಾ ಅಭಿಯಾನ,ಉದ್ಯೋಗ ಮಾಹಿತಿ ವೈದ್ಯಕೀಯ ಶಿಭಿರ,ಯುವ ಜನರಿಗೆ ಸಾಂಪ್ರದಾಯಿಕ ಕ್ರೀಡಾ ಸ್ಪರ್ಧೆ,ಭಜನೆ,ಸ್ತೋತ್ರ ಹಾಗೂ ಚಿತ್ರ ರಚನಾ ಸ್ಪರ್ಧೆ,ರಂಗವಲ್ಲಿ ಸ್ಪರ್ಧೆ,ಸಂಗೀತ ಸ್ಪರ್ಧೆ, ಉದ್ಯೋಗ ಮೇಳ, ಗೋಸಂರಕ್ಷಣೆ, ಸಂಧ್ಯಾ ವಂದನ ಶಿಬಿರ ,ಭಾಗವತ ಸಪ್ತಾಹ,ನಗರ ಭಜನೆ ಕಾರ್ಯಕ್ರಮ ಇವೆಲ್ಲವನ್ನು ಪರಮ ಪೂಜ್ಯ ಗುರುವರ್ಯರ ಆದೇಶಾನುಸಾರ ಅವರ ಮಾರ್ಗದರ್ಶನದಲ್ಲಿ ಕಾಲಕಾಲಕ್ಕೆ ಸರಿಯಾಗಿ ಆಯೋಜಿಸಲಾಗುವುದು.

ದೇವಳದಲ್ಲಿ ಈ ಬಾರಿ ನಡೆಯುತ್ತಿರುವ ಪರಮ ಪೂಜ್ಯ ಶ್ರೀ ಸಂಯಮಿಂದ್ರ ಸ್ವಾಮೀಜಿಯವರ ಈ ಐತಿಹಾಸಿಕ ಚಾತುರ್ಮಾಸವು ಭಕ್ತಿ,ಜ್ಞಾನ,ವೈರಾಗ್ಯಗಳು ಮುಪ್ಪುರಿಗೊಂಡ ಅದ್ವಿತೀಯ ಚಾತುರ್ಮಾಸವಾಗಿ ಪರಿಣಮಿಸಲಿದ್ದು ಗುರುವರ್ಯರ ಚಿತ್ತ ಪ್ರಬೋಧಕ ಮಾರ್ಗದರ್ಶನ ,ಪ್ರವಚನ ಹಾಗೂ ಆಶೀರ್ವಾದಗಳಿಗಾಗಿ ಸಮಸ್ತ ಸಮಾಜವು ನತಮಸ್ತಕವಾಗಿ ಕಾದಿದೆ,ತಮ್ಮ ಸೇವಾಕೈಂಕರ್ಯವನ್ನು ಪದತಲದಲ್ಲಿ ಸಲ್ಲಿಸಲು ಅಣಿಯಾಗಿದೆ.

ಈ ಸಂದರ್ಭದಲ್ಲಿ ದೇವಳದ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ, ಸಾಹುಕಾರ್ ಎಂ ಕಿರಣ್ ಪೈ ,ಎಂ ಸತೀಶ್ ಪ್ರಭು ,ಕೆ ಗಣೇಶ್ ಕಾಮತ್ ,ಎಂ ಜಗನ್ನಾಥ್ ಕಾಮತ್ ಚಾತುರ್ಮಾಸ ಸಮಿತಿ ಗೌರವಾಧ್ಯಕ್ಷ ಮುಂಡ್ಕುರ್ ರಾಮದಾಸ್ ಕಾಮತ್ ,ಅಧ್ಯಕ್ಷ ಶ್ರೀ ಎಂ . ಪದ್ಮನಾಭ ಪೈ ಮುಖ್ಯ ಸಂಯೋಜಕ ಜಿ ಸುರೇಶ ವಿ ಕಾಮತ್ ಕಾರ್ಯದರ್ಶಿ ತೋನ್ಸೆ ಗಣಪತಿ ಪೈ ಯು ಸುದರ್ಶನ್ ಮಲ್ಯ ಕೆ ಗುರುದತ್ ಕಾಮತ್ ಕೋಶಾಧಿಕಾರಿ ಬಿ ಆರ್ ಭಟ್ ಮಾ ಮಾರೂರ್ ಶಶಿಧರ್ ಪೈ,

ಕೊಚ್ಚಿನ್ದ ತಿರುಮಲ ದೇವಳದ ಮೊಕ್ತೇಸರರು , ಮುಂಬೈ ಜಿ ಯಸ್ ಬಿ ಸೇವಾಮಂಡಳ ದ ಪದಾಧಿಕಾರಿಗಳು , ದೆಹಲಿ ಸಾರಸ್ವತ ಸಮಾಜದ ಪದಾಧಿಕಾರಿಗಳು , ದಕ್ಷಿಣ ಕನ್ನಡದ ನೂರಾರು ದೇವಳಗಳ ಮೊಕ್ತೇಸರರು ,ಶಾಖಾ ಮಠದ ಪದಾಧಿಕಾರಿಗಳು , ಹಾಗೂ ಸಾವಿರಾರು ಭಜಕರು ಉಪಸ್ಥಿತರಿದ್ದರು

DAKSHINA KANNADA

ಮಂಡ್ಯದಲ್ಲಿ ಅವಳಿ ಮಕ್ಕಳ ಸಾ*ವಿನ ಪ್ರಕರಣಕ್ಕೆ ಟ್ವಿಸ್ಟ್..! ತಾಯಿಯಿಂದ ಕೃತ್ಯ..!

Published

on

ಮಂಗಳೂರು,(ಮಂಡ್ಯ): ಮಂಡ್ಯದಲ್ಲಿ ಐಸ್‌ ಕ್ರೀಮ್‌ ತಿಂದು ಅವಳಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌ ಸಿಕ್ಕಿದೆ. ಬುಧವಾರ ಅವಳಿ ಮಕ್ಕಳು ಸಾವನ್ನಪ್ಪಿದ್ದರು. ಐಸ್ ಕ್ರೀಂ ತಿಂದು ಮಕ್ಕಳು ಇಹಲೋಕ ತ್ಯಜಿಸಿವೆ ಎನ್ನಲಾಗಿತ್ತು. ಆದರೆ, ಮರಣೋತ್ತರ ಪರೀಕ್ಷೆ ಬಳಿಕ ಸತ್ಯಾಂಶ ಬಯಲಾಗಿದೆ. ತಾಯಿಯೇ ಮಕ್ಕಳಿಗೆ ವಿಷ ಹಾಕಿ ಸಾಯಿಸಿದ್ದಾಳೆ ಎನ್ನುವುದು ಖಚಿತವಾಗಿದೆ.

ಹೆತ್ತ ಮಕ್ಕಳಿಗೆ ವಿಷವಿಕ್ಕಿದ ತಾಯಿ!

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ಪೂಜಾ ಹಾಗೂ ಪ್ರಸನ್ನ ದಂಪತಿಗಳ ಒಂದೂವರೆ ವರ್ಷದ ಅವಳಿ ಕಂದಮ್ಮಗಳು ಸಾವನ್ನಪ್ಪಿದ್ದವು.

ಪೊಲೀಸ್‌ ತನಿಖೆಯ ಬಳಿಕ ತಾಯಿ ಪೂಜಾಳೇ ಮೂವರು ಮಕ್ಕಳಿಗೆ ವಿಷ ಹಾಕಿದ್ದಾಳೆಂಬುದು ಗೊತ್ತಾಗಿದೆ.

ತ್ರಿಶುಲ್, ತ್ರಿಶ ಅವಳಿ ಮಕ್ಕಳು ಹಾಗೂ ಮಗಳು ಬೃಂದಾಗೆ ಪೂಜಾ ಹಾಕಿದ್ದಳು. ಬಳಿಕ ಐಸ್ ಕ್ರೀಂ ತಿಂದು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಬಿಂಬಿಸಲಾಗಿತ್ತು. ಇದೀಗ ಪೊಲೀಸ್ ವಿಚಾರಣೆ ವೇಳೆ ಸತ್ಯಾಂಶ ಬಯಲಾಗಿದೆ.

ಪೂಜಾ ಪತಿ ಪ್ರಸನ್ನ ಪದೇ ಪದೇ ಜಗಳವಾಡುತ್ತಿದ್ದರು. ಈ ಜಗಳದಿಂದ ಬೇಸತ್ತು ಬುಧವಾರ ಮಕ್ಕಳಿಗೆ ತಾಯಿ ವಿಷ ಉಣಿಸಿದ್ದಾಳೆ. ಬಳಿಕ ತಾನೂ ಸೇವಿಸಿದ್ದಳು. ಕೂಡಲೇ ಮಕ್ಕಳು ಹಾಗೂ ಪೂಜಾಳನ್ನು ಮಂಡ್ಯ‌ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿ, ಆಸ್ಪತ್ರೆಯಲ್ಲಿ ಅವಳಿ ಜವಳಿ ಕಂದಮ್ಮಗಳು ಕೊನೆಯುಸಿರೆಳೆದಿದ್ದವು.

ಸದ್ಯ ತಾಯಿ ಹಾಗೂ ಮೊದಲ ಮಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Continue Reading

DAKSHINA KANNADA

ಕಾರ್ಪೋರೇಟರ್ ಮಗಳ ಹ*ತ್ಯೆ..! ಒಂಬತ್ತು ಬಾರಿ ಇರಿದ ಪಾಪಿ…!

Published

on

ಮಂಗಳೂರು (ಹುಬ್ಬಳ್ಳಿ) : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ. ನೇಹಾ ಹಿರೇಮಠ ಕೊಲೆಗೀಡಾದಾಕೆ. ಕಾಲೇಜ್ ಕ್ಯಾಂಪಸ್​ನಲ್ಲಿರುವ ಕ್ಯಾಂಟೀನ್​ನಲ್ಲಿ ಫೈಜಲ್ ಎಂಬಾತ 9 ಬಾರಿ ಚಾಕುವಿನಿಂದ ಇರಿದಿದ್ದಾನೆ. ತಕ್ಷಣ ನೇಹಾಳನ್ನು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನೇಹಾ ಮೃತಪಟ್ಟಿದ್ದಾಳೆ.

                  ತಂದೆ ನಿರಂಜನ್ ಹಿರೇಮಠ ಜೊತೆಗೆ ನೇಹಾ

ಪ್ರೀತಿ ನಿರಾಕರಣೆಗೆ ಪಾಪಿಯಿಂದ ಹೇಯ ಕೃತ್ಯ..!

ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿರುವ ನೇಹಾ ಹಿರೇಮಠಗೆ ಆರೋಪಿ ಫೈಜಲ್ ಎಂಬಾತ ಪ್ರೀತಿಸುವಂತೆ ಪೀಡಿಸಿದ್ದಾನೆ. . ಆದರೆ, ನೇಹಾ ಇದನ್ನು ನಿರಾಕರಿಸುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ.
ಆರೋಪಿ ಫೈಜಲ್ ಕೊಂಡಿಕೊಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಠಾಣೆ‌ ಪೊಲೀಸರಿಂದ ಆರೋಪಿಯ ವಿಚಾರಣೆ ನಡೆಸಲಾಗಿದೆ.ಇನ್ನು ನೇಹಾ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

 

Continue Reading

DAKSHINA KANNADA

“ಸೆಕ್ಸ್‌” ನನ್ನ ಸಾಮರ್ಥ್ಯದ ರಹಸ್ಯ…! ಮಾಜಿ ಸಂಸದೆಯ ಹೇಳಿಕೆ ವೈರಲ್‌..!

Published

on

ಮಂಗಳೂರು ( ಪಶ್ಚಿಮ ಬಂಗಾಳ ) : ಮಾಜಿ  ಸಂಸದೆ ಮಹುವಾ ಮೋಯಿತ್ರಾ ( Mahua Moitra ) ವಿವಾದದ ಕಾರಣದಿಂದ ಸಂಸತ್‌ನಿಂದ ಉಚ್ಚಾಟಿತರಾಗಿದ್ದರು. ಕೇಂದ್ರ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದಿದ್ದರು ಎಂಬ ಆರೋಪ ಅವರ ಮೇಲಿತ್ತು. ಈಗ ಅವರು ಮತ್ತೊಂದು ವಿವಾದಕ್ಕೆ ಸಿಲುಕಿದ್ದು ಅವರ ಹೇಳಿಕೆ ಬಾರಿ ವೈರಲ್ ಆಗಿದೆ. ಕೃಷ್ಣ ನಗರ ಲೋಕಸಭಾ ಕ್ಷೇತ್ರದಿಂದ ಟಿಎಂಸಿ ಅಭ್ಯರ್ಥಿಯಾಗಿ ಅವರು ಕಣಕ್ಕೆ ಇಳಿದಿದ್ದಾರೆ. ಭರ್ಜರಿ ಪ್ರಚಾರ ನಡೆಸುತ್ತಿರುವ ಅವರನ್ನ ಪತ್ರಕರ್ತರೊಬ್ಬರು ಸಂದರ್ಶನ ನಡೆಸಿದ್ದಾರೆ. ಈ ವೇಳೆ ಪತ್ರಕರ್ತ ನಿಮ್ಮ ಸಾಮಾರ್ಥ್ಯದ ರಹಸ್ಯ ಏನು ಎಂಬ ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ಮೊಯಿತ್ರಾ ಅವರು “ಸೆಕ್ಸ್‌” ಎಂದು ಹೇಳಿರುವ ವಿಡಿಯೋವನ್ನು ಮೋದಿ ಕಾ ಪರಿವಾರ ವೈರಲ್ ಮಾಡಿದೆ. ವಿಡಿಯೊ ವೈರಲ್‌ ಆಗುತ್ತಲೇ ಜನ ಟೀಕೆ ವ್ಯಕ್ತಪಡಿಸಿದ್ದಾರೆ. ಒಬ್ಬ ಸಂಸದೆಯಾಗಿ ಬಹಿರಂಗವಾಗಿ ಹೀಗೆ ಹೇಳುವುದು ತಪ್ಪು ಎಂದು ಖಂಡಿಸಿದ್ದಾರೆ.

ನ್ಯೂಸ್‌ ದಿ ಟ್ರುತ್‌ ಎಂಬ ಮಾದ್ಯಮ ಮಾಡಿದ ಸಂದರ್ಶನ

ಸ್ಪಷ್ಟನೆ ನೀಡಿದ ಸಂದರ್ಶನ ನೀಡಿದ ವರದಿಗಾರ..!

“ಮಹುವಾ ಮೊಯಿತ್ರಾ ಅವರನ್ನು ಸಂದರ್ಶನ ಮಾಡಿದ್ದು ನಾನೇ. ನಿಮ್ಮ ಸಾಮರ್ಥ್ಯದ ಗುಟ್ಟೇನು ಎಂಬುದಾಗಿ ಕೇಳಿದೆ. ಅದಕ್ಕೆ ಅವರು, ಎಗ್ಸ್‌ (ಮೊಟ್ಟೆಗಳು) ಎಂಬುದಾಗಿ ಎರಡು ಬಾರಿ ಉತ್ತರಿಸಿದರು. ಆದರೆ, ಭಕ್ತ ಮಂಡಳಿಯು ಎಗ್ಸ್‌ ಎಂಬುದನ್ನು ಸೆಕ್ಸ್‌ ಎಂಬುದಾಗಿ ತಿರುಚಿದೆ” ಎಂಬುದಾಗಿ ನ್ಯೂಸ್‌ ದಿ ಟ್ರುತ್‌ ಎಂಬ ಮಾಧ್ಯಮ ಸಂಸ್ಥೆ ವರದಿಗಾರ ತಮಲ್‌ ಸಾಹ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಆದರೆ, ವರದಿಗಾರ ಸ್ಪಷ್ಟನೆ ನೀಡುವ ಹೊತ್ತಿಗೆ ವಿಡಿಯೊ ಭಾರಿ ವೈರಲ್‌ ಆಗಿದ್ದು, ಟೀಕೆಗಳು ವ್ಯಕ್ತವಾಗಿವೆ.

49 ವರ್ಷದ ಮಹುವಾ ಮೊಯಿತ್ರಾ ಅವರು ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುವ ಪ್ರಶ್ನೆಗಳನ್ನು ಕೇಳಲು 2 ಕೋಟಿ ರೂ. ನಗದು ಸೇರಿದಂತೆ ಲಂಚ ಪಡೆದ ಆರೋಪ ಹೊತ್ತಿದ್ದಾರೆ. ಮೊಯಿತ್ರಾ ಅವರು ತಮ್ಮ ಸಂಸತ್ತಿನ ಲಾಗ್-ಇನ್ ವಿವರಗಳನ್ನು ಉದ್ಯಮಿ ದರ್ಶನ್ ಹಿರಾನಂದಾನಿಗೆ ನೀಡಿದ್ದನ್ನು ಮೋಯಿತ್ರಾ ಒಪ್ಪಿಕೊಂಡಿದ್ದರು.  ಈ ಹಿನ್ನೆಲೆಯಲ್ಲಿ ಅವರನ್ನು ಡಿಸೆಂಬರ್ 8, 2023ರಂದು ಲೋಕಸಭೆಯಿಂದ ಉಚ್ಚಾಟಿಸಲಾಗಿತ್ತು.

 

Continue Reading

LATEST NEWS

Trending