Connect with us

LATEST NEWS

ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಗೆ ಕೈಹಾಕಿ ಕರಿಮಣಿ ಸರ ಎಗರಿಸಿದ ಖದೀಮರು

Published

on

ಕೋಟ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ ಕುತ್ತಿಗೆಗೆ ಕೈಹಾಕಿ ಸುಮಾರು 1.25 ಲಕ್ಷ ಮೌಲ್ಯದ ಚಿನ್ನದ ಕರಿಮಣಿ ಸರವನ್ನು ಸುಲಿಗೆ ಮಾಡಿದ ಘಟನೆ ಬ್ರಹ್ಮಾವರದ ಚಿತ್ರಪಾಡಿ ಗ್ರಾಮದಲ್ಲಿ ನಡೆದಿದೆ.


ಚಿತ್ರಪಾಡಿ ಗ್ರಾಮದ ಸುವರ್ಣ ರೆಸಿಡೆನ್ಸಿ ಅಪಾರ್ಟ್‌ಮೆಂಟ್‌ ಬಳಿ ವಾಸವಾಗಿರುವ ಸುಮಿತ್ರಾ ಉಪಾಧ್ಯ (64) ಮಾಂಗಲ್ಯ ಕಳೆದುಕೊಂಡ ವ್ಯಕ್ತಿಯಾಗಿದ್ದಾರೆ.

ಇವರು ನಿನ್ನೆ ಮದ್ಯಾಹ್ನ ಸಂಬಂಧಿಕರ ಮನೆಯಲ್ಲಿನ ವೈಕುಂಠ ಸಮಾರಾಧನೆ ಕಾರ್ಯಕ್ರಮಕ್ಕೆಂದು ಹೋಗಿದ್ದರು.

ನಂತರ ವಾಪಾಸು ತನ್ನ ಮನೆಗೆ ಹಿಂತಿರುಗುವ ವೇಳೆ ಅವರ ಹಿಂದಿನಿಂದ ರಸ್ತೆಯಲ್ಲಿ ಒಂದು ಬೈಕಿನಲ್ಲಿ ಇಬ್ಬರು ಅಪರಿಚಿತ ಸವಾರರು ಬಂದಿಳಿದಿದ್ದು, ಸುಮಿತ್ರಾ ಉಪಾಧ್ಯ ರವರು ಅಲ್ಲಿಂದ ಮುಂದೆ ನಡೆದುಕೊಂಡು ಹೋಗುತ್ತಿರುವಾಗ ಆ ಬೈಕಿನಲ್ಲಿದ್ದವರ ಪೈಕಿ ಹಿಂಬದಿ ಕುಳಿತವನು ಇವರನ್ನು ಅವರ ಮನೆಯವರೆಗೂ ಹಿಂಬಾಲಿಸುತ್ತಾ ಬಂದಿದ್ದಾರೆ.

ನಂತರ ಅವರ ಮನೆಯ ಬಳಿ ಬಂದು ಅವರಲ್ಲಿ ಹಿಂದಿ ಭಾಷೆಯಲ್ಲಿ ಅಕ್ಕಪಕ್ಕದ ಜಾಗದ ಬಗ್ಗೆ ವಿಚಾರಿಸಿದ್ದು, ಅದೇ ಸಮಯ ಆ ವ್ಯಕ್ತಿಯು ಏಕಾಏಕಿ ಸುಮಿತ್ರಾರವರ ಮಾಂಗಲ್ಯವನ್ನು ಎಗರಿಸಿ ಬೈಕಿನಲ್ಲಿ ಪರಾರಿಯಾಗಿದ್ದಾರೆ.

ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

DAKSHINA KANNADA

ಮಂಗಳೂರು: 14.33% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 14.33 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

DAKSHINA KANNADA

ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ

Published

on

ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.

Continue Reading

DAKSHINA KANNADA

ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ

Published

on

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಮಂಗಳೂರಿನಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ಮಂಗಳೂರಿನ ಕಪಿತಾನಿಯೋ ಶಾಲೆಯ ಮತಗಟ್ಟೆಗೆ ತನ್ನ ಪತ್ನಿ ಹಾಗೂ ಮಗಳ ಜೊತೆ ಆಗಮಿಸಿ ಮತ ಚಲಾಯಿಸಿದ್ದಾರೆ.

ಮುಂಜಾನೆ ಏಳುಗಂಟೆಗೆ ಮತಗಟ್ಟೆಗೆ ಆಗಮಿಸಿದ ಪದ್ಮರಾಜ್ ಅವರು ಬರುವ ವೇಳೆಗೆ ಜನರು ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದರು. ಹೀಗಾಗಿ ಪದ್ಮರಾಜ್ ಹಾಗೂ ಅವರ ಪತ್ನಿ ಮತ್ತು ಮಗಳು ಸರತಿ ಸಾಲಿನಲ್ಲಿ ನಿಂತೇ ಮತ ಚಲಾಯಿಸಿದ್ದಾರೆ. ಪದ್ಮರಾಜ್ ಆಗಮಿಸುವ ವೇಳೆ ಅವರ ಸಾಕಷ್ಟು ಅಭಿಮಾನಿಗಳು ಮತಗಟ್ಟೆಯ  ಹೊರಗೆ ನಿಂತು ಅವರಿಗೆ ಶುಭ ಕೋರಿದ್ದಾರೆ.

 

ಮತದಾನ ಮಾಡಿದ ಪದ್ಮರಾಜ್ ಬಳಿಕ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆ ವೀಕ್ಷಣೆಗೆ ತೆರಳಿದ್ದಾರೆ.

Continue Reading

LATEST NEWS

Trending