Monday, May 17, 2021

ಸ್ವಾಮಿ ಕೊರಗಜ್ಜನ ದರ್ಶನ ಪಡೆದ ಚಾಲೆಂಜಿಂಗ್ ಸ್ಟಾರ್ ದರ್ಶನ್..!

ಸ್ವಾಮಿ ಕೊರಗಜ್ಜನ ದರ್ಶನ ಪಡೆದ ಚಾಲೆಂಜಿಂಗ್ ಸ್ಟಾರ್ ದರ್ಶನ್..!

ಮಂಗಳೂರು : ತುಳುನಾಡಿನ ಅತ್ಯಂತ ಕಾರ್ಣಿಕ ಹಾಗೂ ಪ್ರಸಿದ್ಧ ದೈವಗಳಲ್ಲಿ ಒಂದಾದ ಕೊರಗಜ್ಜನ ದರ್ಶನವನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಪಡೆದಿದ್ದಾರೆ.

ಕೆಲ ತಿಂಗಳ ಹಿಂದೆ ಮಂಗಳೂರಿಗೆ ಭೇಟಿ ಮಾಡಿದ್ದ ದರ್ಶನ್ ಕೊರಗಜ್ಜನ ಗುಡಿಗೆ ತೆರಳಿ ಆಶೀರ್ವಾದ ಪಡೆದುಕೊಂಡಿದ್ದಾರೆ. ದೇವರ ಮುಂದೆ ಕೈ ಮುಗಿಯುತ್ತಾ ನಿಂತಿರುವ ದರ್ಶನ್ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ಇತ್ತೀಚೆಗೆ ನಟ ದರ್ಶನ್ ಮಂಗಳೂರಿಗೆ ಭೇಟಿ ನೀಡಿದ್ದು, ಈ ವೇಳೆ ತನ್ನ ಸ್ನೇಹಿತರ ಜೊತೆಗೂಡಿ, ಕೊರಗಜ್ಜನ ಗುಡಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿ, ದೇವರ ಆಶೀರ್ವಾದ ಪಡೆದಿದ್ದಾರೆ. ಕೊರಗಜ್ಜನ ಮುಂದೆ ಕೈಮುಗಿದು ನಿಂತಿರುವ ಡಿ ಬಾಸ್ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತುಳುನಾಡ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿವೆ.

ಮಹಾಮಾರಿ ಕೊರೊನಾ ವೈರಸ್ ಹಿನ್ನಲೆ ಇಡೀ ದೇಶದಲ್ಲಿ ಲಾಕ್ ಡೌನ್ ಹೇರಲಾಗಿತ್ತು. ಈ ಸಂದರ್ಭ ದರ್ಶನ ತಮ್ಮ ಸಾಕು ಪ್ರಾಣಿಗಳ ಜೊತೆ ಕಾಲ ಕಳೆದಿದ್ದಾರೆ. ಇದೇ ವೇಳೆ ಸ್ವಲ್ಪ ಬಿಡುವು ಮಾಡಿಕೊಂಡು ಕ್ಷೇತ್ರ ಭೇಟಿ ಮಾಡಿದ್ದರು.

ಹೀಗೆ ಕ್ಷೇತ್ರ ಭೇಟಿಯಲ್ಲಿದ್ದ ಡಿ ಬಾಸ್ ತನ್ನ ಸ್ನೇಹಿತರೊಂದಿಗೆ ಮಂಗಳೂರಿಗೆ ಕೂಡ ಭೇಟಿ ಕೊಟ್ಟರು. ಮೊದಲೇ ತಮ್ಮ ಸ್ನೇಹಿತರ ಮೂಲಕ ಕೊರಗಜ್ಜನ ಪವಾಡ ಅರಿತಿದ್ದ ಡಿಬಾಸ್, ಇದೇ ಸಂದರ್ಭದಲ್ಲಿ ಕೊರಗಜ್ಜನ ಕ್ಷೇತ್ರಕ್ಕೆ ತೆರಳಿ ಅಜ್ಜನ ಮುಂದೆ ತಮ್ಮ ಕೋರಿಕೆಯನ್ನು ಇರಿಸಿದ್ದರು.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...