Connect with us

    DAKSHINA KANNADA

    ಕುಕ್ಕೆ ಸುಬ್ರಹ್ಮಣ್ಯನಿಗೆ ಚಂಪಾ ಷಷ್ಠಿಯ ಸಂಭ್ರಮ ರಥಯಾತ್ರೆ

    Published

    on

    ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಕೊಪ್ಪರಿಗೆ ಏರುವುದರೊಂದಿಗೆ ಆರಂಭವಾಗಿದ್ದ ಉತ್ಸವಗಳು ನಿನ್ನೆ ರಾತ್ರಿ ಪಂಚಮಿ ರಥೋತ್ಸವ ಹಾಗೂ ಇಂದು ಮುಂಜಾನೆ ನಡೆದ ಬ್ರಹ್ಮ ರಥೋತ್ಸವದೊಂದಿಗೆ ಚಂಪಾ ಷಷ್ಠಿ ಸಂಪನ್ನಗೊಂಡಿದೆ.

    6.57 ರ ವೃಶ್ಚಿಕ ಲಗ್ನದಲ್ಲಿ ಚಂಪಾ ಷಷ್ಟಿ ಮಹೋತ್ಸವ ನಡೆಯಿತು. ಚಂಪಾ ಷಷ್ಠಿಯ ಹಿನ್ನಲೆಯಲ್ಲಿ ಕ್ಷೇತ್ರದಲ್ಲಿ ಹಲವು ಉತ್ಸವಾದಿಗಳು ನಡೆದಿದ್ದು, ರಾಜ್ಯದ ಮೂಲೆ ಮೂಲೆಯಿಂದ ಭಕ್ತರು ಅಸಾಂಖ್ಯಾತ ಸಂಖ್ಯೆಯಲ್ಲಿ ಹರಿದು ಬಂದಿದ್ದಾರೆ. ಚರ್ಮ ರೋಗ ನಿವಾರಕ ಕ್ಷೇತ್ರವಾಗಿ ಜ್ಯೋತಿಷ್ಯ ಪರಿಹಾರ ಕ್ಷೇತ್ರವಾಗಿ ಜನರ ಸಂಕಷ್ಟ ಪರಿಹಾರ ಕೇಂದ್ರವಾಗಿರುವ ಕುಕ್ಕೆ ಕ್ಷೇತ್ರದಲ್ಲಿ ಷಷ್ಠಿಯ ಸಂದರ್ಭದಲ್ಲಿ ನಡೆಯುವ ಎಡೆ ಮಡೆಸ್ನಾನದಲ್ಲಿ ಹಲವಾರು ಭಕ್ತರು ಭಾಗವಹಿಸಿ ತಮ್ಮ ಹರಿಕೆ ತೀರಿಸಿಕೊಂಡಿದ್ದಾರೆ.

    ಚಂಪಾ ಷಷ್ಠಿಯ ಇಂದು ಎಡೆ ಮಡೆಸ್ನಾನ ವಿಶೇಷವಾಗಿದ್ದು, ಸಾಕಷ್ಟು ಭಕ್ತರು ದೇವಾಲಯದ ಅಂಗಣದಲ್ಲಿ ಈ ಸೇವೆ ನಡೆಸಲಿದ್ದಾರೆ. ನಿನ್ನೆ ರಾತ್ರಿ ಮತ್ತು ಇಂದು ಮುಂಜಾನೆ ನಡೆದ ಉತ್ಸವಾದಿಗಳು ಹೇಗಿತ್ತು ಎಂಬ ಜಲಕ್ ಇಲ್ಲಿದೆ.

    DAKSHINA KANNADA

    ತುಳುವರ ಬದುಕು, ಸಂಸ್ಕೃತಿ, ಸಂಘರ್ಷದ ಕಥಾನಕದ ದಸ್ಕತ್‌ ಚಲನಚಿತ್ರ ತೆರೆಗೆ !!

    Published

    on

    ಉಡುಪಿ: ಮಾಜಿ ಸಚಿವ ಕೃಷ್ಣ ಜೆ ಪಾಲೇಮಾರ್ ಅರ್ಪಿಸುವ ತುಳು ಚಲನಚಿತ್ರ ‘ದಸ್ಕತ್’ ಡಿಸೆಂಬರ್ 13ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಿರ್ದೇಶಕ ಕಾಮಿಡಿ ಕಿಲಾಡಿಗಳು ಖ್ಯಾತಿಯ ಅನೀಶ್ ಪೂಜಾರಿ ವೇಣೂರು ತಿಳಿಸಿದ್ದಾರೆ.

    ಉಡುಪಿ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ತುಳುವರ ಬದುಕು, ಸಂಸ್ಕೃತಿ, ಸಂಘರ್ಷದ ಕಥಾನಕವನ್ನು ಚಿತ್ರಿಸುವ ‘ದಸ್ಕತ್’ ನೈಜ ಘಟನೆಯನ್ನಾಧರಿಸಿದ ಚಿತ್ರವಾಗಿದ್ದು, ಬೆಳ್ತಂಗಡಿ ತಾಲೂಕಿನ ವೇಣೂರು, ನಾರಾವಿ, ಅಂಡಿಂಜೆ, ಕೊಕ್ರಾಡಿ ಮುಂತಾದ ಪ್ರದೇಶಗಳಲ್ಲಿ ಚಿತ್ರಿತವಾಗಿದೆ ಎಂದು ಚಿತ್ರಕಥೆಯನ್ನು ಬರೆದಿರುವ ಅನೀಶ್ ಪೂಜಾರಿ ತಿಳಿಸಿದರು. ರಾಘವೇಂದ್ರ ಕುಡ್ವ ಚಿತ್ರದ ನಿರ್ಮಾಪಕರಾಗಿದ್ದು, ಸಂತೋಷ್ ಆಚಾರ್ಯ ಗುಂಪಲಾಜಿ ಅವರ ಛಾಯಾಗ್ರಹಣವಿದೆ. ಸಮರ್ಥನ ಎಸ್.ರಾವ್ ಚಿತ್ರದ ಸಂಗೀತ ನಿರ್ದೇಶಕರಾಗಿದ್ದಾರೆ.

    ಚಿತ್ರದ ತಾರಾಗಣದಲ್ಲಿ ದೀಕ್ಷಿತ್ ಕೆ.ಅಂಡಿಂಜೆ, ನೀರಜ್ ಕುಂಜರ್ಪ, ಮೋಹನ್ ಶೇಣಿ, ಮಿಥುನ್ ರಾಜ್, ಭವ್ಯ ಪೂಜಾರಿ, ಚಂದ್ರಹಾಸ ಉಲ್ಲಾಳ್, ನವೀನ್ ಬೋಂದೇಲ್, ಯೋಗೀಶ್ ಶೆಟ್ಟಿ ಚೇತನ್ ಪೀಲಾರ್, ತಿಮ್ಮಪ್ಪ ಕುಲಾಲ್ ಮುಂತಾದವರು ನಟಿಸಿದ್ದಾರೆ ಎಂದರು. ಡಿ.13ರಂದು ಉಡುಪಿ, ಮಂಗಳೂರು, ಪುತ್ತೂರು, ಕಾರ್ಕಳ, ಬೆಳ್ತಂಗಡಿಗಳ ಸುಮಾರು 15 ಸಿಂಗಲ್ ಥಿಯೇಟರ್ ಹಾಗೂ ಮಲ್ಟಿಫ್ಲೆಕ್ಸ್ ಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ನಟ ಅರ್ಜುನ್ ಕಾಪಿಕಾಡ್, ಚಿತ್ರ ವಿತರಕ ಸಚಿನ್ ಉಪ್ಪಿನಂಗಡಿ, ನಿರ್ಮಾಫಕ ರಾಘವೇಂದ್ರ ಪುತ್ರ ರಾಹುಲ್ ಕುಡ್ವ, ನಟ ದೀಕ್ಷಿತ್‌ , ನಟಿ ಭವ್ಯಾ ಪೂಜಾರಿ, ಕಾರ್ಯಕಾರಿ ನಿರ್ಮಾಪಕ ಪ್ರಜ್ಞೇಶ್‌ ಶೆಟ್ಟಿ ಮೊದಲಾದವರಿದ್ದರು.

    Continue Reading

    DAKSHINA KANNADA

    ಅನುಪಮ್ ಅಗರ್ವಾಲ್ ವರ್ಗಾವಣೆಗೆ ಒತ್ತಾಯಿಸಿ ಕಾವೂರಿನಲ್ಲಿ ಪ್ರತಿಭಟನೆ !!

    Published

    on

    ಕಾವೂರು: ಜನಪರ ಹೋರಾಟಗಳಿಗೆ ಅವಕಾಶ ನಿರಾಕರಣೆ, ಪ್ರತಿಭಟನಕಾರರ ಮೇಲೆ‌ ಕೇಸು ದಾಖಲಿಸುವ ಸರ್ವಾಧಿಕಾರಿ ಪ್ರವೃತ್ತಿಯ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ರನ್ನು ವರ್ಗಾಯಿಸಬೇಕೆಂದು ಒತ್ತಾಯಿಸಿ ಕಾವೂರು ಜಂಕ್ಷಣ್‌ನಲ್ಲಿ ಸಮಾನ ಮನಸ್ಕ ಸಂಘಟನೆಗಳ ವೇದಿಕೆಯಿಂದ ಪ್ರತಿಭಟನಾ ಪ್ರದರ್ಶನ ನಡೆಯಿತು.

    ಸಭೆಯನ್ನು ಉದ್ದೇಶಿಸಿ ಸುರತ್ಕಲ್ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕರಾದ ಮಾಜಿ‌ ಉಪಮೇಯರ್ ಕೆ. ಮಹಮ್ಮದ್ ಮಾತನಾಡಿ ಪೋಲಿಸ್ ಆಯುಕ್ತ ಅನುಪಮ್ ಅಗರ್ವಾಲ್‌ಗೆ ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ಹೋರಾಡುವವರ ಬಗ್ಗೆ ಅಲರ್ಜಿ ಇದೆ. ಒಬ್ಬ ಉನ್ನತ ಮಟ್ಟದ ಪೋಲೀಸ್ ಅಧಿಕಾರಿಗೆ ಇಂತಹ ಮನಸ್ಥಿತಿ ಸರಿಯಲ್ಲ, ಜನಪರ ಹೋರಾಟಗಳಿಗೆ ಕಡಿವಾಣ ಹಾಕುವ ಹೊಸ ಸಂಪ್ರದಾಯ ಪೋಲೀಸ್ ಇಲಾಖೆ ಸೃಷ್ಟಿಸುತ್ತಿರುವುದು ಖಂಡನೀಯ ಕಮಿಷನರ್ ವರ್ಗಾವಣೆ ಆಗುವವರೆಗೆ ಸಮಾನ ಮನಸ್ಕ ಹೋರಾಟಗಾರರು ನಿರಂತರ ಪ್ರತಿಭಟನೆ ಮುಂದುವರಿಸುವುದಾಗಿ ಎಚ್ಚರಿಸಿದರು.

    ಮಾಜಿ ಕಾರ್ಪೊರೇಟರ್ ದಯಾನಂದ ಶೆಟ್ಟಿ ಮಾತನಾಡಿ ಬಂಡವಾಳಶಾಹಿ ಆಡಳಿತ ವ್ಯವಸ್ಥೆಯಲ್ಲಿ ಜನಸಾಮಾನ್ಯರ ಸಮಸ್ಯೆಗಳು ಹೆಚ್ಚಳವಾಗುತ್ತಿವೆ. ಇವುಗಳ ಪರಿಹಾರಕ್ಕೆ ಹೋರಾಟವಲ್ಲದೆ ಬೇರೆ ದಾರಿಯಿಲ್ಲ. ಪೋಲೀಸ್ ಆಯುಕ್ತರು ಇಂತಹ ಅನಿವಾರ್ಯ ಹೋರಾಟಗಳಿಗೆ ಕಡಿವಾಣ ಹಾಕಲು ಹೊರಟಿರಿವುದು ಸಂವಿಧಾನ ಬದ್ದ ಹಕ್ಕನ್ನು ಕಿತ್ತುಕೊಂಡಂತೆ.ಆಯುಕ್ತರ ಗೊಡ್ಡು ಬೆದರಿಕೆಗಳಿಗೆ ನಾವು ಹಿಂಜರಿಯುವುದಿಲ್ಲ. ಜೈಲಿಗೆ ಹೋದರೂ ಸರಿ ಹೋರಾಟ ನಿಲ್ಲುವುದಿಲ್ಲ ಎಂದು ಹೇಳಿದರು.

    ಸಿಪಿಐಎಂ ಜಿಲ್ಲಾ ಮುಖಂಡ ಸುನೀಲ್ ಕುಮಾರ್ ಬಜಾಲ್, ಡಿವೈಎಫ್‌ಐ ಮುಖಂಡರಾದ ನವೀನ್ ‌ಕೊಂಚಾಡಿ, ಸಾಮಾಜಿಕ ಮುಂದಾಳು ರಿಯಾಝ್ ಹುಸೈನ್ ಮಾತನಾಡಿದರು. ಅನಿಲ್‌ ಡಿಸೋಜ, ನೌಶಾದ್, ರೆಹೆಮಾನ್ ಕುಂಜತ್ತಬೈಲ್, ಮುಸ್ತಾಫ, ಪ್ರಮೀಳಾ, ಆಶಾ ಗಣೇಶ್, ಚರಣ್ ಶೆಟ್ಟಿ, ಸೌಮ್ಯ ಮುಂತಾದವರು ಹೋರಾಟದ ಸಮಯ ಉಪಸ್ಥಿತರಿದ್ದರು.

     

    Continue Reading

    DAKSHINA KANNADA

    ಕಡಬ: ಪ್ಯಾಚ್‌ ವರ್ಕ್‌ ಮಾಡಿ ಜನತೆ ಕಣ್ಣಿಗೆ ಮಣ್ಣೆರೆಚುವ ತಂತ್ರ

    Published

    on

    ಕಡಬ: ಬರೇ ಪ್ಯಾಚ್‌ ವರ್ಕ್‌ ಮಾಡಿ ಜನರ ಕಣ್ಣೀಗೆ ಮಣ್ಣೇರೆಚುತ್ತಿರುವ, ಹಲವಾರು ವರ್ಷಗಳಿಂದ ಕುಂಟು ನೆಪ ಹೇಳಿ ರಸ್ತೆ ದುರಸ್ತಿ ಮಾಡದಿರುವ ಲೋಕೋಪಯೋಗಿ ಇಲಾಖೆ ವಿರುದ್ಧ ಸಾರ್ವಜನಿಕರು ತಮ್ಮ ಆಕ್ರೋಶವನ್ನು ಬಹಿರಂಗವಾಗಿ ಹೊರಹಾಕಿದ್ದಾರೆ.

    ಕಡಬ – ಕೋಡಿಂಬಾಳ ರಾಜ್ಯ ಹೆದ್ದಾರಿಗೆ ರಸ್ತೆ ತೇಪೆ ಹಚ್ಚುವ ಕಾಮಗಾರಿಯನ್ನು ಗ್ರಾಮಸ್ಥರು ತಡೆದಿದ್ದಾರೆ. ಕಳೆದ ವರ್ಷವೂ ಬರೇ ಪ್ಯಾಚ್‌ವರ್ಕ್ ಕಾಮಗಾರಿಯನ್ನು ನಡೆಸಲಾಗಿತ್ತು. ಆದರೆ ಆ ಕಾಮಗಾರಿ ಅದೇ ವರ್ಷ ಕಿತ್ತು ಹೋಗಿದೆ. ಈ ವರ್ಷವೂ ಮತ್ತೆ ಕಳಪೆ ಕಾಮಗಾರಿ ನಡೆಸಲಾಗುತ್ತಿದೆ. ದಿನಂಪ್ರತಿ ಸುಳ್ಯ ಎಂಎಲ್‌ಎ ಸಂಚರಿಸುವ ಪ್ರಮುಖ ರಸ್ತೆ ಇದಾಗಿದ್ದು, ಕಡಬ ತಾಲೂಕಿನ ಕೋಡಿಂಬಾಳ ಕಲ್ಲಂತಡ್ಕ ಎಂಬಲ್ಲಿ ರಸ್ತೆಯನ್ನು ದುರಸ್ತಿ ಪಡಿಸಲಾಗಿದೆ.

    ಸ್ಥಳಕ್ಕೆ ಲೋಕೋಪಯೋಗಿ ಇಂಜಿನಿಯರ್, ಗುತ್ತಿಗೆದಾರರು ಬರಬೇಕೆಂದು ಗ್ರಾಮಸ್ಥರು ಪಟ್ಟು ಹಿಡಿದರು.

     

    Continue Reading

    LATEST NEWS

    Trending