Connect with us

DAKSHINA KANNADA

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾಷಷ್ಢಿ ಮಹೋತ್ಸವ ಸಂಪನ್ನ; ಉತ್ಸವದಲ್ಲಿ ಪಾಲ್ಗೊಂಡ ಭಕ್ತ ಸಾಗರ..!

Published

on

  ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾಷಷ್ಢಿ ಮಹೋತ್ಸವ ಸಂಪನ್ನ; ಉತ್ಸವದಲ್ಲಿ ಪಾಲ್ಗೊಂಡ ಭಕ್ತ ಸಾಗರ

ಸುಬ್ರಹ್ಮಣ್ಯ: ಹದಿನೈದು ದಿನಗಳ ಕಾಲ ನಡೆಯುವ ಚಂಪಾಷಷ್ಠಿ ಮಹೋತ್ಸವದಲ್ಲಿ ಕ್ಷೇತ್ರದ ಅಧಿಪತಿಯಾದ ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ರೀತಿಯ‌ ಸೇವೆಗಳೂ ನಡೆಯುತ್ತದೆ.

ಷಷ್ಠಿಯ ದಿನ ದೇವರ ಬ್ರಹ್ಮರಥ ನೆರವೇರುತ್ತದೆ. ಈ ಬ್ರಹ್ಮರಥ ಕಟ್ಟುವುದರಲ್ಲಿ ಬಹಳ ವಿಶೇಷತೆಯಿದೆ.  ಸಾಮಾನ್ಯವಾಗಿ ರಥವನ್ನು ನೈಲಾನ್ ಹಗ್ಗವೋ ಅಥವಾ ಇತರ ಹಗ್ಗವನ್ನು ಬಳಸಿಕೊಂಡೋ  ಕಟ್ಟಲಾಗುತ್ತದೆ.

ಆದರೆ ಸುಬ್ರಹ್ಮಣ್ಯದ ಬ್ರಹ್ಮರಥಕ್ಕೆ ಈ ರೀತಿಯ ಹಗ್ಗವನ್ನು ಬಳಸುವಂತಿಲ್ಲ. ಇದಕ್ಕೆ ದಟ್ಟ ಕಾಡಿನಿಂದ ಆರಿಸಿ ತರುವ ಬಿದಿರು ಹಾಗೂ‌ ನಾಗರ ಬೆತ್ತವನ್ನೇ ಹಗ್ಗವನ್ನಾಗಿ ಬಳಸಲಾಗುತ್ತದೆ.

ಸಹಸ್ರಾರು ವರ್ಷಗಳ ಹಿಂದಿನಿಂದಲೇ ಈ ರಥವನ್ನು ಇಲ್ಲಿನ ಮೂಲ ನಿವಾಸಿಗಳಾದ ಮಲೆಕುಡಿಯರೇ ಸಿದ್ದಪಡಿಸಿಕೊಂಡು ಬರುತ್ತಿದ್ದಾರೆ. ಹುಣ್ಣಿಮೆಯ ದಿನ ರಥ ಕಟ್ಟಲು ಮೂಹೂರ್ತ ಇಡಲಾಗುತ್ತದೆ.

ಈ ನಡುವೆ ದೇವರ ಪ್ರಸಾದ, ಅಕ್ಕಿ ಸಾಮಾಗ್ರಿಗಳೊಂದಿಗೆ ಬಿದಿರನ್ನು ತರಲು ಈ ಜನಾಂಗ ಕಾಡಿಗೆ ತೆರಳಿ ನಾಲ್ಕೈದು ದಿನಗಳನ್ನು ಅಲ್ಲಿಯೇ ಕಳೆದು ಬಿದಿರನ್ನು ಆರಿಸಿ ತರುತ್ತಾರೆ.

ತಂದ‌ ಬಿದಿರನ್ನು ಹಗ್ಗದ ರೂಪದಲ್ಲಿ ಬಳಸಿ ಹಿರಿಯರ ಮಾರ್ಗದರ್ಶನದಂತೆ ರಥ ಕಟ್ಟುವ ಕೆಲಸದಲ್ಲಿ ತೊಡಗುತ್ತಾರೆ. ಅನಾದಿಕಾಲದಿಂದಲೂ ಹಿರಿಯರು ಪಾಲಿಸಿಕೊಂಡು ಬಂದ ಸಂಪ್ರದಾಯವನ್ನು ಮೂಲ ನಿವಾಸಿಗಳು ಇಂದಿಗೂ ಮುಂದುವರೆಸಿಕೊಂಡು ಬರುತ್ತಿದ್ದಾರೆ.

 

ಬಿದಿರಿನಿಂದ ತಯಾರಿಸಲು ಸ್ಪಷ್ಠ ಕಾರಣವೇನೆಂದು ತಿಳಿಯದಿದ್ದರೂ ಕ್ಷೇತ್ರದ ಆರಾಧ್ಯ ದೈವ ನಾಗರಾಜನಿಗೂ, ಬಿದಿರಿಗೂ ಅವಿನಾಭಾವ ಸಂಭಂಧವಿದೆ. ಈ ಕಾರಣದಿಂದಲೇ ಬಿದಿರಿನಿಂದಲೇ ರಥವನ್ನು ಕಟ್ಟಲಾಗುತ್ತಿದೆ.

ರಥವನ್ನು ಎಳೆಯಲೂ ಬಿದಿರಿನ ಬೆತ್ತವನ್ನೇ ಬಳಸುತ್ತಾರೆ. ರಥೋತ್ಸವದ ಬಳಿಕ ಇದೇ ರಥದಲ್ಲಿ ಉಪಯೋಗಿಸುವ ಬಿದಿರಿನ ತುಂಡುಗಳನ್ನು ಭಕ್ತರು ಮನೆಗೆ ಪ್ರಸಾದದಂತೆ ಒಯ್ಯುತ್ತಾರೆ.

ಈ ತುಂಡನ್ನು ಮನೆಯಲ್ಲಿಡುವುದರಿಂದ ನಾಗಭಾದೆ ಕಾಡುವುದಿಲ್ಲ ಎಂಬ ನಂಬಿಕೆ ಭಕ್ತರದ್ದಾಗಿದೆ.
ಹಲವು ಆಧುನಿಕ ದಾರಗಳು ಇಂದು ಮಾರುಕಟ್ಟೆಯಲ್ಲಿದ್ದರೂ ಸುಬ್ರಹ್ಮಣ್ಯದ ರಥ ಮಾತ್ರ ಇಂದಿಗೂ ಬಿದಿರಿನಿಂದಲೇ ಕಟ್ಟಲ್ಪಡುತ್ತಿದೆ.

 

ಮಾರ್ಗಶಿರ ಮಾಸದ ಶುದ್ಧ ಷಷ್ಠಿಯೇ ಸುಬ್ರಹ್ಮಣ್ಯ ಷಷ್ಠಿ, ಕರಾವಳಿಗರಿಗೆ ಇದೊಂದು ವಿಶೇಷ ಹಬ್ಬವೂ ಹೌದು. ಶಿವ ಹಾಗೂ ಪಾರ್ವತಿಯರ ಮಗನಾದ ಕಾರ್ತಿಕೇಯನು ಕುಮಾರಧಾರಾ ತಟದಲ್ಲಿ ನೆಲೆಯಾದ ಸ್ಥಳ ಕುಕ್ಕೆ ಸುಬ್ರಹ್ಮಣ್ಯ. ಈ ಸುಬ್ರಹ್ಮಣ್ಯ ಷಷ್ಠಿಯ ಹಿಂದೆಯೂ ಒಂದು ಪೌರಾಣಿಕ ಹಿನ್ನಲೆ ಇದೆ.

ಸ್ಕಂದ ಷಷ್ಠಿ ಅಥವಾ ಸುಬ್ರಹ್ಮಣ್ಯ ಷಷ್ಠಿ. ಮಾರ್ಗಶಿರ ಮಾಸದಲ್ಲಿ ಬರುವ ಈ ಷಷ್ಠಿ ಕುಕ್ಕೆ ಸುಬ್ರಹ್ಮಣ್ಯ ಷಷ್ಠಿ ಎಂದೂ ಪ್ರಸಿದ್ಧಿಯನ್ನು ಪಡೆದಿದೆ. ಶುಕ್ಲಪಕ್ಷದ ಆರನೇ ದಿನ ಆಚರಿಸಲ್ಪಡುವ ಷಷ್ಠಿ ತುಳುನಾಡಿನ ಪ್ರಾಧಾನ್ಯ ದಿನವೂ ಹೌದು

ಕಾರ್ತಿಕೇಯ, ಮುರುಗನ್‌, ಸ್ಕಂದ, ವೇಲನ್‌, ಕುಮಾರನ್‌ ಹೀಗೆ ನಾನಾ ಹೆಸರುಗಳಿಂದ ಕರೆಯಲ್ಪಡುವ ಸುಬ್ರಹ್ಮಣ್ಯ ಶಿವ ಹಾಗೂ ಪಾರ್ವತಿಯರ ಪುತ್ರ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಚರಿಸಲ್ಪಡುವ ಪ್ರಸಿದ್ಧ ಚಂಪಾಷಷ್ಠಿಯ ಹಿಂದೆ ಪುರಾಣ ಕಥೆಯೊಂದಿದೆ.

ಋಷಿ ಕಶ್ಯಪ ಮಹಾಮುನಿಗೆ ಹದಿಮೂರು ಜನ ಪತ್ನಿಯರು. ಇವರೆಲ್ಲ ದಕ್ಷನ ಮಕ್ಕಳು . ಅದರಲ್ಲಿ ಕದ್ರು ಮತ್ತು ವಿನುತಾ ಕೂಡಾ ಕಶ್ಯಪ ಮುನಿಯ ಪತ್ನಿಯರು  ಒಂದು ದಿನ ಕದ್ರು ತನ್ನ ಸಹೋದರಿ ವಿನುತಾಳೊಂದಿಗೆ ಮೋಸದ ಪಂಥ ಕಟ್ಟಿ ತನ್ನ ಚರಣದಾಸಿಯನ್ನಾಗಿ ಮಾಡಿಕೊಳ್ಳುತ್ತಾಳೆ.

ಇದಕ್ಕೆ ತನ್ನ ಮಕ್ಕಳಾದ ಸರ್ಪಗಳ ಸಹಾಯವನ್ನು ಪಡೆಯುತ್ತಾಳೆ. ಅವರು ಒಪ್ಪದಾಗ ಅವರಿಂದ ವಚನವನ್ನು ಪಡೆದು ಗೆಲುವು ಪಡೆದುಕೊಳ್ಳುತ್ತಾಳೆ.

ಇದು ವಿನುತಾಳ ಮಗನಾದ ಗರುಡನಿಗೆ ತಿಳಿದು ಹೋಗುತ್ತದೆ. ಆದರೆ ಕದ್ರು ತನ್ನ ತಾಯಿಗೆ ಸಮಾನಳಾಗಿದ್ದುದರಿಂದ ಅವಳಿಗೆ ಏನೂ ಮಾಡಲಾಗದ ಕಾರಣದಿಂದ ಆಕೆಯ ದ್ವೇಷ ಸರ್ಪಗಳ ಮೇಲೆ ತಿರುಗುತ್ತದೆ. ದ್ವೇಷದಿಂದ ಸಹಸ್ರ ಸಹಸ್ರ ಹಾವುಗಳನ್ನು ಕುಕ್ಕಿ ಕುಕ್ಕಿ ತಿನ್ನತೊಡಗುತ್ತಾನೆ.

ಗರುಡನಿಂದಾಗಿ ಪ್ರಾಣ ಭಯದಿಂದ ಶೇಷ ಪಾತಾಳವನ್ನು ಸೇರಿಕೊಳ್ಳುತ್ತಾನೆ. ಅನಂತನು ವೈಕುಂಠದಲ್ಲಿ ಹರಿಗೆ ಶರಣಾಗುತ್ತಾನೆ. ನಾಗಗಳು ಶಿವನ ಕೊರಳು ಕೈ ಕಾಲುಗಳನ್ನು ಸುತ್ತಿಕೊಳ್ಳುತ್ತವೆ. ಕಾಳೀಯ ಅನ್ನುವ ಹಾವು ನಂದ ಗೋಕುಲದ ಯಮುನೆಯಲ್ಲಿ ಅಡಗಿಕೊಳ್ಳುತ್ತದೆ.

ಹಾಗೆಯ ಶಂಕಪಾಲ, ಭೂಧರ, ಅನಘಾದಿ ಸರ್ಪಗಳು ಒಂದೊಂದು ಕಡೆಯಲ್ಲಿ ಅಡಗಿಕೊಳ್ಳುತ್ತವೆ.ವಾಸುಕಿ ಅನ್ನುವ ಮಹಾಸರ್ಪವೊಂದು ಗರುಡ ಭಯದಿಂದ ತುಳುನಾಡಿಗೆ ಓಡಿಬರುತ್ತದೆ.

ತುಳುನಾಡಿನ ತಪ್ಪಲಿನ ಸಹ್ಯಾದ್ರಿಯ ಮಡಿಲಿನಲ್ಲಿ, ಧಾರಾ ನದಿಯ ಪಕ್ಕದಲ್ಲಿ ಇರುವ ಬಿಲದ್ವಾರ ಅನ್ನುವ ಗುಹೆಯಲ್ಲಿ ಅಡಗಿಕೊಳ್ಳುತ್ತದೆ. ಇದು ಹೇಗೋ ಗರುಡನಿಗೆ ತಿಳಿದು ಹೋಗುತ್ತದೆ. ಘನಘೋರ ಯುದ್ಧವಾಗುತ್ತದೆ.

ವಿಷಯ ತಿಳಿದ ಇವರೀರ್ವರ ಅಪ್ಪನಾದ ಕಶ್ಯಪ ಓಡೋಡಿ ಬಂದು ಯುದ್ಧವನ್ನು ತಡೆಯುತ್ತಾನೆ.ಮಹಾ ಶಿವ ಭಕ್ತನಾದ ವಾಸುಕಿಯಿಂದ ಹಲವು ಲೋಕ ಕಲ್ಯಾಣ ಕೆಲಸವೂ ನಡೆಯಬೇಕಿರುವುದನ್ನು ಗರುಡನಿಗೆ ಹೇಳುತ್ತಾನೆ.

ಗರುಡ ತನ್ನ ಹಸಿವನ್ನು ಇಂಗಿಸುವಂತೆ ಕೇಳಿಕೊಂಡಾಗ ಮನಿಲಾ ದ್ವೀಪದಲ್ಲಿ ದುಷ್ಟ ಬೇಡರು ಮತ್ತು ಹಾವುಗಳನ್ನು ತಿಂದು ಹಸಿವನ್ನು ಇಂಗಿಸಿಕೊಳ್ಳುವಂತೆ ಹೇಳುತ್ತಾನೆ.

ವಾಸುಕಿಯು ತನ್ನ ಪ್ರಾಣ ಭಯವನ್ನು ಹೋಗಲಾಡಿಸಲು ಅಪ್ಪನನ್ನು ಮೊರೆಯಿಡುತ್ತಾನೆ. ಅಪ್ಪ ಶಿವನನ್ನು ಕುರಿತು ತಪಸ್ಸನ್ನು ಆಚರಿಸಲು ಹೇಳುತ್ತಾನೆ. ವಾಸುಕಿಯು ತಪಸ್ಸಿನ ಮೂಲಕ ಶಿವನನ್ನು ಒಲಿಸಿಕೊಂಡು ತನ್ನ ಪ್ರಾಣ ಭಯವನ್ನು ಹೋಗಲಾಡಿಸಲು ಕೇಳಿಕೊಳ್ಳುತ್ತಾನೆ.

ಅದಕ್ಕೆ ಶಿವನು ” ವಾಸುಕಿ ಚಿಂತಿಸಬೇಡ ಮುಂದಿನ ಕಲ್ಪದಲ್ಲಿ ಸರ್ಪ ಕುಲದ ರಕ್ಷಣೆಗಾಗಿ ಸುಬ್ರಮಹ್ಮಣ್ಯ ಸ್ವಾಮಿಯು ನನ್ನ ಮಗನಾಗಿ ಜನಿಸುತ್ತಾನೆ.

ಆ ದಿನವು ಬೇಗ ಸನ್ನಿಹಿತವಾಗುವಂತೆ ಇಲ್ಲೇ ಇದ್ದುಕೊಂಡು ತಪಸ್ಸನ್ನು ಆಚರಿಸು’ ಎಂದು ಹೇಳುತ್ತಾನೆ
ಹೀಗೆ ಹಲವು ವರ್ಷಗಳು ಕಳೆಯಲು ಸುಬ್ರಮಣ್ಯ ಸ್ವಾಮಿಯು ತಾರಕಾಸುರನನ್ನು ಕೊಂದು ತನ್ನ ರಕ್ತ ಸಿಕ್ತ ಆಯುಧವನ್ನು ಧಾರಾ ನದಿಗೆ ಬಂದು ತೊಳೆಯುತ್ತಾನೆ. ಅಂದಿನಿಂದ ಆ ನದಿಯು ಕುಮಾರಧಾರ ಅನ್ನುವ ಹೊಸ ಹೆಸರಿನಿಂದ ಕರೆಯಲ್ಪಡುತ್ತದೆ.

ಇಂದ್ರ ತನ್ನ ಮಗಳಾದ ದೇವಸೇನೆಯೊಂದಿಗೆ ಓಡೋಡಿ ಬಂದು ವಿವಾಹವಾಗುವಂತೆ ಪ್ರಾರ್ಥಿಸಿಕೊಳ್ಳುತಾನೆ. ಷಣ್ಮುಖನ ಒಪ್ಪಿಗೆಯನ್ನು ಪಡೆದು ಸಕಲ ದೇವತೆಗಳ ಮುಂದೆ ಕುಮಾರಧಾರಾ ತಟದಲ್ಲಿ ಚಂಪಾ ಷಷ್ಟಿಯ ದಿನದ ಸುಘಳಿಗೆಯಲ್ಲಿ ಮದುವೆ ನಡೆಯುತ್ತದೆ .

ಮುಂದೆ ವಾಸುಕಿಯ ಇಚ್ಚೆಯಂತೆ ತನ್ನ ಪತ್ನಿಯಾದ ದೇವಸೇನೆ ಮತ್ತು ವಾಸುಕಿಯ ಜೊತೆಯಲ್ಲಿ ಕುಕ್ಕೆಯಲ್ಲಿ ನೆಲೆಸಲು ಸುಬ್ರಹ್ಮಣ್ಯನು ಇಚ್ಛಿಸಿದಾಗ, ವಿಶ್ವಕರ್ಮನು ಮೂರ್ತಿಯನ್ನು ಮಾಡಿಕೊಡುತ್ತಾನೆ.

ಬ್ರಹ್ಮ ದೇವನು ಎಲ್ಲ ದೇವರ ಸಮ್ಮುಖದಲ್ಲಿ ಪ್ರತಿಷ್ಠಾಪಿಸುತ್ತಾನೆ.ಸುಬ್ರಮಣ್ಯ ದೇವರನ್ನು ಧರೆಗೆ ಇಳಿಸಿದ ವಾಸುಕಿಯನ್ನು ತುಳುನಾಡಿನ ಮನೆ ಮನೆಗಳಲ್ಲಿ ನಾಗಬ್ರಹ್ಮ ಅನ್ನುವ ನಾಮಧೇಯದಿಂದ ಪೂಜಿಸಲಿ ಎಂದು ಸಕಲ ದೇವತೆಗಳು ವಾಸುಕಿಯನ್ನು ಹರಸುತ್ತಾರೆ.

ಹಾಗಾಗಿ ಸುಬ್ರಮಣ್ಯ ನೆಲೆಸಲು ಕಾರಣನಾದ ಗರುಡ ಬರದೆ ಕೆಲವು ಕಡೆ ಚಂಪಾ ಷಷ್ಟಿಯ ರಥವನ್ನು ಎಳೆಯುವ ಕ್ರಮವಿಲ್ಲ  ಇದೊಂದು ಸಂಪ್ರದಾಯವಾಗಿ, ಹಬ್ಬವಾಗಿ ಇಂದಿಗೂ ವೈಭವದಿಂದ ಎಲ್ಲೆಡೆ ಆಚರಿಸಲ್ಪಡುತ್ತದೆ.

ಚಂಪಾಷಷ್ಠಿ ವಾರ್ಷಿಕ ಜಾತ್ರೆ ಪ್ರಯುಕ್ತ ಮಾರ್ಗಶಿರ ಶುದ್ಧ ಪಂಚಮಿಯ ದಿನದಂದು ಪಲ್ಲಕ್ಕಿ ಪೂಜೆ, ರಾತ್ರಿ ತೈಲಾಭ್ಯಂಜನ ಮತ್ತು ಮಧ್ಯರಾತ್ರಿ ಪಂಚಮಿ ರಥೋತ್ಸವ ಹಾಗೂ ಆಕರ್ಷಕ ಬೆಡಿ ಉತ್ಸವ ಜರುಗಿತು. ಇಂದು ಬೆಳಗ್ಗೆ ಬ್ರಹ್ಮರಥ ಮಹೋತ್ಸವ ನೆರವೇರಿತು.

ಆಧುನಿಕ ಕಾಲಘಟ್ಟದಲ್ಲಿ ಹಿಂದಿನ ಸಂಪ್ರದಾಯವನ್ನು ಇಂದಿಗೂ ಉಳಿಸಿ ಬೆಳೆಸುವ ಪ್ರಯತ್ನ ಕುಕ್ಕೆ ಸುಬ್ರಹ್ಮಣ್ಯದಿಂದ ನಡೆಯುತ್ತಿರುವುದು ನಿಜಕ್ಕೂ ಮೆಚ್ಚುವಂಥದ್ದು

 

DAKSHINA KANNADA

ಹೊತ್ತಿ ಉರಿದು ಭಸ್ಮ*ವಾದ ಸ್ವೀಟ್ ಕಾರ್ನ್ ಸ್ಟಾಲ್‌..!! ಓಡಿ ಜೀವ ಉಳಿಸಿಕೊಂಡ ಸ್ಟಾಲ್ ಮಾಲೀಕ, ಗ್ರಾಹಕರು

Published

on

ಉಳ್ಳಾಲ: ರಸ್ತೆಯ ಬದಿಯಲ್ಲಿ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಸ್ಟಾಲ್ ಒಂದರಲ್ಲಿ ಆಕಸ್ಮಿ*ಕ ಬೆಂಕಿಯಿಂದಾಗಿ ಸ್ಟಾಲ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಉಳ್ಳಾಲದ ದೇರಳಕಟ್ಟೆಯಲ್ಲಿ ನಡೆದಿದೆ.

sweet corn burn

ಗ್ಯಾಸ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದೆ. ರಸ್ತೆಯ ಬದಿಯಲ್ಲೇ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಅಂಗಡಿ ಮಾಲೀಕ ಕಾರ್ನ್ ತಯಾರಿಸುವಾಗ ಈ ಅವಘಡ ಸಂಭವಿಸಿದೆ. ತಕ್ಷಣ ಅಂಗಡಿ ಮಾಲೀಕ ಹಾಗೂ ಸ್ವೀಟ್ ಕಾರ್ನ ತಿನ್ನಲು ಬಂದಿದ್ದ ಗ್ರಾಹಕರು ಓಡಿ ತಪ್ಪಿಸಿಕೊಂಡಿದ್ದಾರೆ. ಸ್ಥಳೀಯರು ತಕ್ಷಣ ಮರಳು ಹಾಗೂ ನೀರನ್ನ ಹಾಕಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದ್ರೆ ಅಷ್ಟರಲ್ಲಾಗಲೇ ಸ್ಟಾಲ್ ಉರಿದು ಭಸ್ಮವಾಗಿ ಹೋಗಿದೆ.

Read More..; ಬೆಂಕಿ ಹಚ್ಚಿ ಯುವತಿಯ ಬರ್ಬ*ರ ಹ*ತ್ಯೆ..!! ಕತ್ತು ಕೊಯ್ದು ಸು*ಟ್ಟು ಹಾಕಿರುವ ಶಂಕೆ

sweet corn burn 2

Continue Reading

DAKSHINA KANNADA

ಮಂಡ್ಯದಲ್ಲಿ ಅವಳಿ ಮಕ್ಕಳ ಸಾ*ವಿನ ಪ್ರಕರಣಕ್ಕೆ ಟ್ವಿಸ್ಟ್..! ತಾಯಿಯಿಂದ ಕೃತ್ಯ..!

Published

on

ಮಂಗಳೂರು,(ಮಂಡ್ಯ): ಮಂಡ್ಯದಲ್ಲಿ ಐಸ್‌ ಕ್ರೀಮ್‌ ತಿಂದು ಅವಳಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌ ಸಿಕ್ಕಿದೆ. ಬುಧವಾರ ಅವಳಿ ಮಕ್ಕಳು ಸಾವನ್ನಪ್ಪಿದ್ದರು. ಐಸ್ ಕ್ರೀಂ ತಿಂದು ಮಕ್ಕಳು ಇಹಲೋಕ ತ್ಯಜಿಸಿವೆ ಎನ್ನಲಾಗಿತ್ತು. ಆದರೆ, ಮರಣೋತ್ತರ ಪರೀಕ್ಷೆ ಬಳಿಕ ಸತ್ಯಾಂಶ ಬಯಲಾಗಿದೆ. ತಾಯಿಯೇ ಮಕ್ಕಳಿಗೆ ವಿಷ ಹಾಕಿ ಸಾಯಿಸಿದ್ದಾಳೆ ಎನ್ನುವುದು ಖಚಿತವಾಗಿದೆ.

ಹೆತ್ತ ಮಕ್ಕಳಿಗೆ ವಿಷವಿಕ್ಕಿದ ತಾಯಿ!

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ಪೂಜಾ ಹಾಗೂ ಪ್ರಸನ್ನ ದಂಪತಿಗಳ ಒಂದೂವರೆ ವರ್ಷದ ಅವಳಿ ಕಂದಮ್ಮಗಳು ಸಾವನ್ನಪ್ಪಿದ್ದವು.

ಪೊಲೀಸ್‌ ತನಿಖೆಯ ಬಳಿಕ ತಾಯಿ ಪೂಜಾಳೇ ಮೂವರು ಮಕ್ಕಳಿಗೆ ವಿಷ ಹಾಕಿದ್ದಾಳೆಂಬುದು ಗೊತ್ತಾಗಿದೆ.

ತ್ರಿಶುಲ್, ತ್ರಿಶ ಅವಳಿ ಮಕ್ಕಳು ಹಾಗೂ ಮಗಳು ಬೃಂದಾಗೆ ಪೂಜಾ ಹಾಕಿದ್ದಳು. ಬಳಿಕ ಐಸ್ ಕ್ರೀಂ ತಿಂದು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಬಿಂಬಿಸಲಾಗಿತ್ತು. ಇದೀಗ ಪೊಲೀಸ್ ವಿಚಾರಣೆ ವೇಳೆ ಸತ್ಯಾಂಶ ಬಯಲಾಗಿದೆ.

ಪೂಜಾ ಪತಿ ಪ್ರಸನ್ನ ಪದೇ ಪದೇ ಜಗಳವಾಡುತ್ತಿದ್ದರು. ಈ ಜಗಳದಿಂದ ಬೇಸತ್ತು ಬುಧವಾರ ಮಕ್ಕಳಿಗೆ ತಾಯಿ ವಿಷ ಉಣಿಸಿದ್ದಾಳೆ. ಬಳಿಕ ತಾನೂ ಸೇವಿಸಿದ್ದಳು. ಕೂಡಲೇ ಮಕ್ಕಳು ಹಾಗೂ ಪೂಜಾಳನ್ನು ಮಂಡ್ಯ‌ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿ, ಆಸ್ಪತ್ರೆಯಲ್ಲಿ ಅವಳಿ ಜವಳಿ ಕಂದಮ್ಮಗಳು ಕೊನೆಯುಸಿರೆಳೆದಿದ್ದವು.

ಸದ್ಯ ತಾಯಿ ಹಾಗೂ ಮೊದಲ ಮಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Continue Reading

DAKSHINA KANNADA

ಕಾರ್ಪೋರೇಟರ್ ಮಗಳ ಹ*ತ್ಯೆ..! ಒಂಬತ್ತು ಬಾರಿ ಇರಿದ ಪಾಪಿ…!

Published

on

ಮಂಗಳೂರು (ಹುಬ್ಬಳ್ಳಿ) : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ. ನೇಹಾ ಹಿರೇಮಠ ಕೊಲೆಗೀಡಾದಾಕೆ. ಕಾಲೇಜ್ ಕ್ಯಾಂಪಸ್​ನಲ್ಲಿರುವ ಕ್ಯಾಂಟೀನ್​ನಲ್ಲಿ ಫಯಾಜ್ ಎಂಬಾತ 9 ಬಾರಿ ಚಾಕುವಿನಿಂದ ಇರಿದಿದ್ದಾನೆ. ತಕ್ಷಣ ನೇಹಾಳನ್ನು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನೇಹಾ ಮೃತಪಟ್ಟಿದ್ದಾಳೆ.

ತಂದೆ ನಿರಂಜನ್ ಹಿರೇಮಠ ಜೊತೆಗೆ ನೇಹಾ

ಪ್ರೀತಿ ನಿರಾಕರಣೆಗೆ ಪಾಪಿಯಿಂದ ಹೇಯ ಕೃತ್ಯ..!

ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿರುವ ನೇಹಾ ಹಿರೇಮಠಗೆ ಆರೋಪಿ ಫಯಾಜ್ ಎಂಬಾತ ಪ್ರೀತಿಸುವಂತೆ ಪೀಡಿಸಿದ್ದಾನೆ. . ಆದರೆ, ನೇಹಾ ಇದನ್ನು ನಿರಾಕರಿಸುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ.
ಆರೋಪಿ ಫಯಾಜ್ ಕೊಂಡಿಕೊಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಠಾಣೆ‌ ಪೊಲೀಸರಿಂದ ಆರೋಪಿಯ ವಿಚಾರಣೆ ನಡೆಸಲಾಗಿದೆ.ಇನ್ನು ನೇಹಾ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

 

Continue Reading

LATEST NEWS

Trending