LATEST NEWS
ಚಂಡೀಗಡ ವಿವಿಯ 60 ವಿದ್ಯಾರ್ಥಿನಿಯರ ಸ್ನಾನದ ವೀಡಿಯೋ ಲೀಕ್: ಪ್ರತಿಭಟನೆ
Published
2 years agoon
By
Adminಚಂಡೀಗಡ: ಚಂಡೀಗಡದ ವಿವಿಯ ಹಾಸ್ಟೆಲ್ನಲ್ಲಿ 60 ಯುವತಿಯರು ಸ್ನಾನ ಮಾಡುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಲೀಕ್ ಆದ ಘಟನೆ ಬೆಳಕಿಗೆ ಬಂದಿದೆ. ಇದನ್ನು ವಿದ್ಯಾರ್ಥಿನಿಯೊಬ್ಬಳೇ ಚಿತ್ರೀಕರಿಸಿ ಸೋರಿಕೆ ಮಾಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ವಿದ್ಯಾರ್ಥಿನಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಬಂಧಿಸಲಾಗಿದೆ.
ವಿದ್ಯಾರ್ಥಿನಿಯರು ಸ್ನಾನ ಮಾಡುವ ವಿಡಿಯೋ ಮಾಡಿದ ಯುವತಿ ಅದನ್ನು ಇನ್ನೋರ್ವ ಯುವಕನಿಗೆ ವಿಡಿಯೋವನ್ನು ಕಳಿಸಿಕೊಟ್ಟಿದ್ದಾಳೆ. ಆ ಯುವಕ ಈ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟು ವೈರಲ್ ಮಾಡಿದ್ದಾನೆ. ಹಾಸ್ಟೆಲ್ ವಿಡಿಯೋ ಲೀಕ್ ಬೆನ್ನಲ್ಲೇ ವಿವಿ ಕ್ಯಾಂಪಸ್‌ನಲ್ಲಿ ಮಧ್ಯರಾತ್ರಿ ಬೃಹತ್ ಪ್ರತಿಭಟನೆ ನಡೆದಿದೆ.
ಪೊಲೀಸರ ಸ್ಪಷ್ಟನೆ
ವಿದ್ಯಾರ್ಥಿನಿಯೊಬ್ಬಳು ತನ್ನ ಖಾಸಗಿ ವಿಡಿಯೊಗಳನ್ನು ತನ್ನ ಪ್ರಿಯಕರನಿಗೆ ಕಳುಹಿಸಿದ್ದಳು. ಈ ವಿಡಿಯೊ ಒಂದು ಮಾತ್ರ ಸೋರಿಕೆ ಆಗಿದೆ. ಆದರೆ, 60 ವಿದ್ಯಾರ್ಥಿನಿಯರಿಗೆ ಸಂಬಂಧಿಸಿದ ವಿಡಿಯೊಗಳು ಪತ್ತೆಯಾಗಿಲ್ಲ. ವಿದ್ಯಾರ್ಥಿನಿಯರು ಆತಂಕ ಪಡುವ ಅವಶ್ಯಕತೆ ಇಲ್ಲ’ ಎಂದು ಮೋಹಾಲಿ ಎಸ್‌ಪಿ ವಿವೇಕ್ ಸೋನಿ ತಿಳಿಸಿದ್ದಾರೆ.
‘ಬಂಧಿತ ಯುವತಿ ತನ್ನ ಪ್ರಿಯಕರನಿಗೆ ಕಳಿಸಲು ಬಾತ್‌ರೂಮ್‌ನಲ್ಲಿ ತನ್ನ ಖಾಸಗಿ ವಿಡಿಯೊವನ್ನು ಶೂಟ್ ಮಾಡುವಾಗ ಅದನ್ನು ಇತರ ಕೆಲ ವಿದ್ಯಾರ್ಥಿನಿಯರು ನೋಡಿದ್ದಾರೆ. ಈ ಹಿನ್ನೆಲೆಯಲ್ಲಿ ಈಕೆ ಉಳಿದವರ ಸ್ನಾನದ ವೀಡಿಯೋ ಮಾಡಿ ದ್ವೇಷದಿಂದ ಪ್ರಿಯಕರನ ಜೊತೆ ಸೇರಿಕೊಂಡು ವೈರಲ್ ಮಾಡಿರಬಹುದು’ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಯುವತಿಯ ವಿಚಾರಣೆ
ಇನ್ನು ಹಾಸ್ಟೆಲ್ ವಿದ್ಯಾರ್ಥಿನಿಯರ ಖಾಸಗಿ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಪ್ರಕರಣಕ್ಕೆ ಸಂಬಂಧಿಸಿ ಉನ್ನತ ಮಟ್ಟದ ತನಿಖೆ ನಡೆಸಲು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಆದೇಶಿಸಿದ್ದಾರೆ.
‘ಚಂಡೀಗಡ ವಿಶ್ವವಿದ್ಯಾನಿಲಯದಲ್ಲಿ ನಡೆದ ಅಹಿತಕರ ಘಟನೆಯ ಬಗ್ಗೆ ಕೇಳಿ ಬೇಸರವಾಗಿದೆ. ಘಟನೆಯ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ. ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.
ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇನೆ. ವದಂತಿಗಳಿಗೆ ಕಿವಿ ಕೊಡದಂತೆ ಎಲ್ಲರಿಗೂ ಮನವಿ ಮಾಡುತ್ತೇನೆ’ ಎಂದು ತಿಳಿಸಿದ್ದಾರೆ.
ವಿವಿಯಲ್ಲಿ ಪ್ರತಿಭಟನೆ
ಸ್ಥಳೀಯ ವರದಿಗಳ ಪ್ರಕಾರ, ಆನ್‌ಲೈನ್‌ನಲ್ಲಿ ವಿಡಿಯೋ ಸೋರಿಕೆಯಾದ ನಂತರ ಕೆಲವು ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಲಾಗಿದೆ. ಆರೋಪಿ ಎಂಬಿಎ ಪ್ರಥಮ ವರ್ಷದ ವಿದ್ಯಾರ್ಥಿನಿ ಎಂದು ಪೊಲೀಸರು ತಿಳಿಸಿದ್ದಾರೆ.
LATEST NEWS
ಮಕರ ಸಂಕ್ರಾಂತಿ ಪ್ರಯುಕ್ತ ಬೆಂಗಳೂರು – ಕರಾವಳಿ ವಿಶೇಷ ರೈಲು ಸಂಚಾರ
Published
6 minutes agoon
10/01/2025ಕುಂದಾಪುರ: ವಾರಾಂತ್ಯದ ಸರಣಿ ರಜೆ ಹಾಗೂ ಮಕರ ಸಂಕ್ರಮಣದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಉಡುಪಿ-ಕುಂದಾಪುರ ಮತ್ತು ಕಾರವಾರಕ್ಕೆ ಇಂದು (ಜ.10) ಮಧ್ಯಾಹ್ನ ಬೆಂಗಳೂರಿನಿಂದ ವಿಶೇಷ ರೈಲು ಸಂಚರಿಸಲಿದೆ.
ಸಂಸದ ಕೋಟ ಶ್ರೀನಿವಾಸ ಪೂಜಾರಿ ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣ ಸಮಿತಿ ಮನವಿಯಂತೆ ವಿಶೇಷ ರೈಲಿನ ವ್ಯವಸ್ಥೆ ಮಾಡಿದ್ದಾರೆ.
ಇದನ್ನೂ ಓದಿ : ಮಂಗಳೂರು : ಖಾಸಗಿ ಬಸ್ ಪ್ರಯಾಣ ದರ ಏರಿಕೆ
ಬೆಂಗಳೂರಿನ ಬೈಯ್ಯಪ್ಪನಹಳ್ಳಿಯ ವಿಶ್ವೇರಯ್ಯ ಟರ್ಮಿನಲ್‌ನಿಂದ ಜ.10ರ ಮಧ್ಯಾಹ್ನ 1ಕ್ಕೆ ಹೊರಡಲಿದ್ದು, ಪಡೀಲ್ ಬೈಪಾಸ್ ಮೂಲಕ ರಾತ್ರಿ 12ಕ್ಕೆ ಉಡುಪಿ, 1 ಗಂಟೆಗೆ ಕುಂದಾಪುರಕ್ಕೆ ಬಂದು, ಬಳಿಕ ಕಾರವಾರ ಕಡೆಗೆ ಸಂಚರಿಸಲಿದೆ. ಈ ರೈಲು ಜ. 11ರಂದು ಮಧ್ಯಾಹ್ನ 12 ಗಂಟೆಗೆ ಕಾರವಾರದಿಂದ ಬೆಂಗಳೂರಿಗೆ ಸಂಚರಿಸಲಿದೆ.
ಉಡುಪಿ : ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣೆಯ ಮುಂದೆ ಗುರುವಾರ ಎರಡು ದೋಣಿಗಳು ಪ್ರತ್ಯಕ್ಷವಾಗಿ ಜನರಿಗೆ ಅಚ್ಚರಿ ಮೂಡಿಸಿದೆ.
ಸಾಮಾನ್ಯವಾಗಿ ಜಪ್ತಿ ಮಾಡಿದ ವಾಹನಗಳನ್ನು ನಿಲ್ಲಿಸುವ ಜಾಗದಲ್ಲಿ ಈ ದೋಣಿಗಳನ್ನು ನಿಲ್ಲಿಸಲಾಗಿರುವುದು ಜನರ ಕುತೂಹಲಕ್ಕೆ ಕಾರಣವಾಗಿತ್ತು. ಅಸಲಿ ವಿಚಾರ ಗೊತ್ತಾದ ಮೇಲೆ ಜನರು ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಅಸಲಿಗೆ ಮಣಿಪಾಲ ಠಾಣಾ ವ್ಯಾಪ್ತಿಯ ಹಿರೇಬೆಟ್ಟು ಎಂಬಲ್ಲಿ ಅಕ್ರಮ ಮರಳುಗಾರಿಕೆ ನಡೆಸುವ ಖಚಿತ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದರು. ಕವನ್ ಶೆಟ್ಟಿ ಎಂಬವರ ಮೇಲೆ ಅಕ್ರಮ ಮರಳುಗಾರಿಕೆ ಆರೋಪ ಇದ್ದು, ಹಿಟಾಚಿ ಬಳಸಿ ದೋಣಿಯ ಮೂಲಕ ಮರಳು ಸಂಗ್ರಹ ಮಾಡಲಾಗುತ್ತಿತ್ತು.
ಇದನ್ನೂ ಓದಿ: ಪುತ್ತೂರು : ಕಾಲೇಜು ವಿದ್ಯಾರ್ಥಿನಿ ನೇ*ಣಿಗೆ ಶರಣು; ಕಾರಣ ನಿಗೂಢ
ಸ್ಥಳಕ್ಕೆ ದಾಳಿ ನಡೆದ ಸಂದರ್ಭದಲ್ಲಿ ಆರೋಪಿಗಳು ಎಸ್ಕೇಪ್ ಆಗಿದ್ದು, ಪೊಲೀಸರು ಇಲ್ಲಿದ್ದ ಎಲ್ಲವನ್ನೂ ಜಪ್ತಿ ಮಾಡಿದ್ದಾರೆ. ಇದರಲ್ಲಿ ಹಿಟಾಚಿ ಹಾಗೂ ದೋಣಿ ಕೂಡಾ ಸೇರಿದ್ದು, ಅದನ್ನೂ ಕೂಡಾ ತಂದು ಠಾಣೆಯ ಮುಂದಿಟ್ಟಿದ್ದಾರೆ.
ಮಂಗಳೂರು : ರಾಜ್ಯ ಸರಕಾರ ಕೆಎಸ್‌ಆರ್‌ಟಿಸಿ ಬಸ್ಸುಗಳ ಟಿಕೆಟ್ ದರವನ್ನು ಏರಿಸಿದ ಬೆನ್ನಲ್ಲೇ ದ.ಕ.ಜಿಲ್ಲೆಯ ವಿವಿಧ ರೂಟ್‌ಗಳಲ್ಲಿ ಸಂಚರಿಸುವ ಖಾಸಗಿ ಬಸ್ಸುಗಳ ಪ್ರಯಾಣ ದರವನ್ನೂ ಏರಿಸಲಾಗಿದೆ.
ಸರಕಾರಿ ಬಸ್ ಪ್ರಯಾಣ ದರ ಏರಿಕೆ ಬೆನ್ನಲ್ಲೇ ಜಿಲ್ಲೆಯ ವಿವಿಧ ಬಸ್ಸು ಮಾಲಕರ ಸಂಘದವರಲ್ಲಿ ವಿಚಾರಿಸಿದಾಗ “ಸದ್ಯಕ್ಕೆ ದರ ಏರಿಕೆ ಮಾಡುತ್ತಿಲ್ಲ. ಮುಂದಿನ ದಿನಗಳಲ್ಲಿ ಮಾಡುವುದು ಅನಿವಾರ್ಯವಾದೀತು” ಎಂದು ತಿಳಿಸಿದ್ದರು. ಆದರೆ ಖಾಸಗಿ ಬಸ್‌ಗಳಲ್ಲಿ ಜ. 7ರಿಂದಲೇ ಟಿಕೆಟ್ ದರ ಏರಿಸಲಾಗಿದೆ.
ಮಂಗಳೂರಿನಿಂದ ಪ್ರತ್ಯೇಕ ರೂಟ್‌ಗಳಲ್ಲಿ ಪುತ್ತೂರು, ಉಪ್ಪಿನಂಗಡಿ, ವಿಟ್ಲ ಭಾಗಕ್ಕೆ ಈ ಬಸ್ಸುಗಳು ಓಡುತ್ತಿದ್ದು, ಇದೇ ರೂಟ್‌ನಲ್ಲಿ ಹೆಚ್ಚಿನ ಕೆಎಸ್‌ಆರ್‌ಟಿಸಿ ಬಸ್ಸುಗಳೂ ಸಂಚರಿಸುತ್ತಿವೆ. ರಾಷ್ಟ್ರೀಕೃತ ರೂಟ್‌ಗಳಲ್ಲಿ ಸರಕಾರಿ ಬಸ್ಸುಗಳ ಓಡಾಟ ವ್ಯವಸ್ಥೆ ಸರಿ ಇಲ್ಲ ಎಂಬ ಕಾರಣಕ್ಕೆ 2003ರಲ್ಲಿ ಅಂದಿನ ಸರಕಾರ ಖಾಸಗಿ ಬಸ್ಸುಗಳ ಓಡಾಟಕ್ಕೆ ಕಾಂಟ್ರಾಕ್ಟ್ ಕ್ಯಾರೇಜ್ ಪರವಾನಿಗೆ ನೀಡಿತ್ತು.ದರ ಏರಿಕೆ ಕುರಿತು ಕಾಂಟ್ರಾಕ್ಟ್ ಕ್ಯಾರೇಜ್ ಬಸ್ಸು ಮಾಲಕರ ಸಂಘದ ಅಧ್ಯಕ್ಷ ಜಯರಾಮ್ ಶೇಖ ಪ್ರತಿಕ್ರಿಯಿಸಿ, ನಾವು ಉಳಿದ ಬಸ್ಸುಗಳಿಗಿಂತ ಹೆಚ್ಚಿನ ಮೊತ್ತದ ತೆರಿಗೆಯನ್ನು ಪಾವತಿಸುತ್ತಿದ್ದು, ಹೀಗಾಗಿ ದರ ಏರಿಕೆ ಅನಿವಾರ್ಯವಾಗಿದೆ ಎಂದಿದ್ದಾರೆ.
ಕೇರಳದ ಬಸ್‌ಗಳಲ್ಲೂ ದರ ಏರಿಕೆ ??
ಕರ್ನಾಟಕಕ್ಕೆ ಕೇರಳ ರಾಜ್ಯ ಸಾರಿಗೆ ಬಸ್ (ಕೆಎಸ್ಸಾರ್ಟಿಸಿ) ಸೇವೆಗಳ ಟಿಕೆಟ್ ದರವನ್ನೂ ಜ. 7ರಿಂದ ಹೆಚ್ಚಿಸಲಾಗಿದೆ. ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಟಿಕೆಟ್ ದರವನ್ನು ಹೆಚ್ಚಿಸಿದ ಹಿನ್ನೆಲೆಯಲ್ಲಿ ಕೇರಳವೂ ಟಿಕೆಟ್ ದರ ಹೆಚ್ಚಳಗೊಳಿಸಿದೆ. ಅಂತಾರಾಜ್ಯ ಒಪ್ಪಂದದ ಪ್ರಕಾರ ಎರಡು ರಾಜ್ಯಗಳ ನಡುವೆ ಟಿಕೆಟ್ ದರ ಏಕರೂಪವಾಗಿರಬೇಕೆಂದು ಈ ಹಿಂದೆ ತೀರ್ಮಾನಿಸಲಾಗಿದ್ದು, ಆ ಹಿನ್ನೆಲೆಯಲ್ಲಿ ಹೆಚ್ಚಳ ಮಾಡಲಾಗಿದೆ.
ಪ್ರಸ್ತುತ ಕಾಸರಗೋಡು-ಮಂಗಳೂರು ಟಿಕೆಟ್ ದರ 74 ರೂ.ಯಿಂದ 81 ರೂ.ಗೇರಿದೆ. ಪುತ್ತೂರಿಗೆ 74 ರೂ. ಇದ್ದುದು 85 ರೂ., ಸುಳ್ಯಕ್ಕೆ 73 ರೂ. ಇದ್ದುದು 80 ರೂ.ಗೆ ಏರಿಕೆಯಾಗಿದೆ.