Connect with us

  LATEST NEWS

  ಮಹತ್ವಾಕಾಂಕ್ಷೆಯ ಚಂದ್ರಯಾನ-3- ಗಗನನೌಕೆ ಉಡಾವಣೆಗೆ ಕ್ಷಣಗಣನೆ..!

  Published

  on

  ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ನ ಮಹತ್ವಾಕಾಂಕ್ಷೆಯ ಚಂದ್ರಯಾನ-3 (Chandrayaan-3) ಗಗನನೌಕೆ ಉಡಾವಣೆಗೆ ಕೌಂಟ್ ಡೌನ್ ಶುರುವಾಗಿದೆ.

  ಶ್ರೀಹರಿಕೋಟಾ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ನ ಮಹತ್ವಾಕಾಂಕ್ಷೆಯ ಚಂದ್ರಯಾನ-3 (Chandrayaan-3) ಗಗನನೌಕೆ ಉಡಾವಣೆಗೆ ಕೌಂಟ್ ಡೌನ್ ಶುರುವಾಗಿದೆ.

  ಇಂದು ಮಧ್ಯಾಹ್ನ 2:35ಕ್ಕೆ ಗಗನನೌಕೆ ನಭಕ್ಕೆ ಚಿಮ್ಮಲಿದೆ. ಚಂದ್ರಯಾನ-3 ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಲಾಂಚ್ ವೆಹಿಕಲ್ ಮಾರ್ಕ್-111 ಮೂಲಕ ಉಡಾವಣೆ ಮಾಡಲಾಗುವುದು.

  ಅತ್ಯಂತ ಸೂಕ್ಷ್ಮ ತಂತ್ರಜ್ಞಾನ ಬಳಸಿ ಚಂದ್ರನ ದಕ್ಷಿಣ ಧ್ರುವದ ಮೇಲೆ ಗಗನನೌಕೆಯನ್ನು ಇಳಿಸಲಾಗುವುದು.

  ಚಂದ್ರಯಾನ-2 ವೈಫಲ್ಯವನ್ನು ಗಮನದಲ್ಲಿಟ್ಟುಕೊಂಡು ಚಂದ್ರಯಾನ-3 ಯಶಸ್ಸಿಗೆ ಇಸ್ರೋ ಅಡಿಯಿಟ್ಟಿದೆ. ಜು.14 ರ ಮಧ್ಯಾಹ್ನ 2:35ಕ್ಕೆ ಚಂದ್ರಯಾನ-3 ಅನ್ನು ಎಲ್‌ವಿಎಂ3 ಮೂಲಕ ಉಡಾವಣೆಗೆ ಇಸ್ರೋ ವಿಜ್ಞಾನಿಗಳು ಸಜ್ಜಾಗಿದ್ದಾರೆ.

  ಚಂದ್ರಯಾನ-3 ಯೋಜನೆ ಚಂದ್ರಯಾನ-2ರ ಮುಂದುವರಿದ ಭಾಗವಾಗಿದ್ದು, ಚಂದ್ರನ ದಕ್ಷಿಣ ಧ್ರುವದ ಮೇಲೆ ಚಂದ್ರಯಾನ-3 ಗಗನನೌಕೆ ಇಳಿಸಲಾಗುವುದು.

  ಪ್ರೊಪಲ್ಷನ್‌ ಮಾಡ್ಯೂಲ್‌, ಲ್ಯಾಂಡರ್‌ ಮತ್ತು ರೋವರ್‌ ಕಾನ್ಫಿಗರೇಶನ್‌ ಅನ್ನು ಚಂದ್ರನ ಕಕ್ಷೆಯಲ್ಲಿ 100 ಕಿಮೀವರೆಗೆ ಸಾಗಿಸುತ್ತದೆ.

  ಚಂದ್ರಯಾನ-3 ಗಗನನೌಕೆಯನ್ನು ಇಳಿಸಲು ಚಂದ್ರನ ಮೇಲ್ಮೈನಲ್ಲಿ ಜಾಗವನ್ನು ಗುರುತಿಸಲಾಗಿದೆ. ಚಂದ್ರನ ದಕ್ಷಿಣ ಧ್ರುವದ ಬಳಿಯ 4 ಕಿಮೀ ಉದ್ದ ಹಾಗೂ 2 ಕಿಮೀ ಅಗಲದ ಪ್ರದೇಶದಲ್ಲಿ ಗಗನನೌಕೆಯನ್ನು ಇಳಿಸಲಾಗುವುದು ಎಂದು ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌ ತಿಳಿಸಿದ್ದಾರೆ.

  ಚಂದ್ರಯಾನ-1 ಮತ್ತು 2ರಲ್ಲಿ ಇದ್ದಂತೆ ಚಂದ್ರಯಾನ-3ರಲ್ಲಿ ಆರ್ಬಿಟರ್‌ ಇರುವುದಿಲ್ಲ. ಲ್ಯಾಂಡರ್‌ ಮತ್ತು ರೋವರ್‌ ಹೊತ್ತ ಗಗನನೌಕೆಯು ಆಗಸ್ಟ್‌ 23 ರ ಸುಮಾರಿಗೆ ಚಂದ್ರನ ಕಕ್ಷೆಗೆ ತಲುಪಲಿದೆ. ನಂತರ 15 ದಿನಗಳಲ್ಲಿ ನೌಕೆ ಚಂದ್ರನಲ್ಲಿ ಇಳಿಯಲಿದೆ.

  ಲ್ಯಾಂಡರ್ ಮತ್ತು ರೋವರ್ ಚಂದ್ರನ ಮೇಲ್ಮೈಯಲ್ಲಿ ಕಾರ್ಯನಿರ್ವಹಿಸಲು ಮತ್ತು ಡೇಟಾವನ್ನು ಸಂಗ್ರಹಿಸಲು ಉದ್ದೇಶಿಸಲಾಗಿದೆ.

  ನೌಕೆ ಚಂದ್ರನಲ್ಲಿ ಇಳಿದಾಗ ಲ್ಯಾಂಡರ್‌ನಿಂದ ರೋವರ್ ಬೇರ್ಪಟ್ಟು ಪ್ರಯೋಗ ನಡೆಸಿ, ಡೇಟಾವನ್ನು ಸಂಗ್ರಹಿಸಲು ಚಂದ್ರನ ಮೇಲ್ಮೈಯಲ್ಲಿ ಸಂಚರಿಸುತ್ತದೆ.

  ಚಂದ್ರನನ್ನು ಆವರಿಸಿರುವ ಶಿಲಾ ಪದರದ ಮೇಲಿನ ಗಟ್ಟಿಗೊಂಡಿಲ್ಲದ ಘನಪದಾರ್ಥ ಅಧ್ಯಯನ ನಡೆಸುವ ಲೂನಾರ್‌ ರಿಗೊಲಿತ್‌, ಅಲ್ಲಿ ಭೂಕಂಪನ ಅಧ್ಯಯನ ಮಾಡುವ ಲೂನಾರ್‌ ಸೆಸಿಮಿಸಿಟಿ, ಹೊರ ಆವರಣದಲ್ಲಿನ ಪ್ಲಾಸ್ಮಾ, ಬಾಹ್ಯಾಕಾಶ ನೌಕೆ ಇಳಿದ ಪ್ರದೇಶದಲ್ಲಿನ ಧಾತುರೂಪದ ಸಂಯೋಜನೆ ಮುಂತಾದವುಗಳ ಅಧ್ಯಯನ ನಡೆಸಲಾಗುವುದು.

  ನೇರಾ ಪ್ರಸಾರ :

  LATEST NEWS

  ಕಾಸರಗೋಡು: ಗ್ರೈಂಡರ್ ಗೆ ಶಾಲ್‌ ಸಿಲುಕಿ ಮಹಿಳೆ ಸಾ*ವು

  Published

  on

  ಕಾಸರಗೋಡು: ಗ್ರೈಂಡರ್ ಗೆ ಶಾಲ್ ಸಿಲುಕಿ ಗೃಹಿಣಿ ಮೃ*ತಪಟ್ಟ ದಾರುಣ ಘಟನೆ ಕುಂಬಳೆ ಸಮೀಪದ ಪೆರುವಾಡ್ ನಲ್ಲಿ ನಡೆದಿದೆ.

  ಪೆರುವಾಡ್ ಕೆ .ಕೆ ನಗರದ ಇಸ್ಮಾಯಿಲ್ ರವರ ಪತ್ನಿ ನಫೀಸಾ ( ೫೨) ಮೃ*ತಪಟ್ಟವರು. ಗ್ರೈಂಡರ್ ನಲ್ಲಿ ಅಕ್ಕಿ ಅರೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಇದನ್ನು ಗಮನಿಸಿದ ಪತಿ ಇಸ್ಮಾಯಿಲ್ ಕೂಡಲೇ ಕುಂಬಳೆ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ . ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

  Continue Reading

  LATEST NEWS

  ಶಿರೂರು ಗುಡ್ಡ ಕುಸಿ*ತ ಪ್ರಕರಣ : ನೀರುಪಾಲಾಗಿದ್ದ ವೃದ್ಧೆಯ ಶ*ವಕ್ಕೆ ಹೆಗಲು ಕೊಟ್ಟ ಮಂಗಳೂರಿನ ಪತ್ರಕರ್ತರು!

  Published

  on

  ಅಂಕೋಲಾ : ಶಿರೂರು ಗುಡ್ಡ ಕುಸಿತ ದುರಂತದಲ್ಲಿ ನೀರುಪಾಲಾಗಿದ್ದ ಉಳವರೆ ಗ್ರಾಮದ ನಿವಾಸಿ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃ*ತದೇಹ ಮಂಗಳವಾರ ಬೆಳಗ್ಗೆ ಗಂಗಾವಳಿ ನದಿಯ ತೀರದಲ್ಲಿ ಪತ್ತೆಯಾಗಿದ್ದು, ಪೋಸ್ಟ್ ಮಾರ್ಟಂ ನಡೆಸಿದ ಬಳಿಕ ಕುಟುಂಬಿಕರಿಗೆ ಹಸ್ತಾಂತರ ಮಾಡಲಾಯಿತು.
  ದುರಂತದಲ್ಲಿ ಉಳವರೆ ಗ್ರಾಮದ 6 ಮನೆಗಳು ಸಂಪೂರ್ಣ ನಾಮಾವಶೇಷವಾಗಿದೆ. 18ರಷ್ಟು ಮನೆಗಳು ಭಾಗಶ: ಹಾ*ನಿಗೊಳಗಾಗಿದೆ.

  ಬೇಸರದ ಸಂಗತಿ ಎಂದರೆ, ಮೃ*ತದೇಹವನ್ನು ಕುಟುಂಬಿಕರಿಗೆ ಹಸ್ತಾಂತರ ಮಾಡುವ ಸಂದರ್ಭದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು, ಕಂದಾಯ ಇಲಾಖೆ, ಸ್ಥಳೀಯ ಆಡಳಿತ, ಶಾಸಕರು ಹೀಗೆ ಯಾರೆಂದರೆ ಯಾರೂ ಇರಲಿಲ್ಲ. ಗ್ರಾಮದ ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಮಹಿಳೆಯರು ಕಾಳಜಿ ಕೇಂದ್ರದಲ್ಲಿದ್ದಾರೆ.

  ಹೆಗಲಾದ ಪತ್ರಕರ್ತರು :
  ಹೊರುವವರಿಲ್ಲದೆ ರಸ್ತೆಯೂ ಸರಿಯಿಲ್ಲದೇ ವೃದ್ಧೆಯ ಶ*ವ ಆಂಬುಲೆನ್ಸ್ ನಲ್ಲಿ ಉಳಿದಿದ್ದು, ಕೊಳೆತ ವಾಸನೆಯಿಂದಾಗಿ ಯಾರೂ ಹೊರಲು ಸಿದ್ಧರಿರಲಿಲ್ಲ. ಈ ವೇಳೆ ಸ್ಥಳದಲ್ಲಿದ್ದ ಮಂಗಳೂರಿನ ಪತ್ರಕರ್ತರು ಮೃ*ತದೇಹವನ್ನು ತಾವೇ ಹೊತ್ತುಕೊಂಡು ಸಾಗಿ ಮನೆಯವರಿಗೆ ಒಪ್ಪಿಸಿ ಮುಂದಿನ ಅಂತಿಮ ಸಂ*ಸ್ಕಾರ ನಡೆಸಲು ನೆರವಾಗಿ ಮಾನವೀಯತೆ ಮೆರೆದಿದ್ದಾರೆ.

  ನಿರಾಶ್ರಿತರು ಮತ್ತು ಘಟನೆಯಲ್ಲಿ ಸಂತ್ರಸ್ತರಾದವರಿಗೆ ಸಾಂತ್ವನ ನೀಡಲು ಮಂಗಳೂರಿನಿಂದ ತೆರಳಿದ್ದ ಪತ್ರಕರ್ತರ ಚಾರಣ ತಂಡದ ಸದಸ್ಯರಾದ ಮೋಹನ್ ಕುತ್ತಾರ್, ಶಶಿ ಬೆಳ್ಳಾಯರು, ಆರಿಫ್ ಯು.ಆರ್.ಕಲ್ಕಟ್ಟ, ಗಿರೀಶ್ ಮಳಲಿ, ಶಿವಶಂಕರ್ ಅವರು ಶ*ವಸಂಸ್ಕಾರದಲ್ಲಿ ಸಹಕರಿಸಿದರು.

  ಇದನ್ನೂ ಓದಿ : 4 ವರ್ಷದ ಬಾಲಕಿ ಕಿಡ್ನಾ*ಪ್, ಅತ್ಯಾ*ಚಾರ ಮಾಡಿ ಕೊ*ಲೆ.. ಮೃ*ತದೇಹ ಏನು ಮಾಡಿದ್ದ ಗೊತ್ತಾ?
  ಟ್ಯಾಂಕರ್ ಸ್ಫೋಟವೇ ಘಟನೆಗೆ ಕಾರಣ!
  ಶಿರೂರು ಗುಡ್ಡ ಕು*ಸಿತ ಉಂಟಾದಾಗ ಹೆದ್ದಾರಿಯಲ್ಲಿದ್ದ ಗ್ಯಾಸ್ ಟ್ಯಾಂಕರ್ ನೀರಿಗೆ ಬಿದ್ದು ಭಾರಿ ಸದ್ದಿನೊಂದಿಗೆ ಸ್ಫೋ*ಟ ಸಂಭವಿಸಿತ್ತು. ಇದರಿಂದಲೇ ಉಳವರೆ ಗ್ರಾಮ ನಾಶಗೊಂಡು ಹಲವರು ಪ್ರಾ*ಣ ಕಳೆದುಕೊಳ್ಳುವಂತಾಯ್ತು ಎನ್ನುವ ಅಭಿಪ್ರಾಯ ಸ್ಥಳೀಯರಿಂದ ವ್ಯಕ್ತವಾಗಿದೆ.

  ನೀರು‌ ಚಿಮ್ಮುತ್ತಿದ್ದಂತೆ ಬಾಂ*ಬ್‌ನಂತೆ ಸ್ಫೋ*ಟದ ಸದ್ದು ಕೇಳಿದ್ದಾಗಿ ಸ್ಥಳೀಯರು ಮಾಹಿತಿ ನೀಡಿರುವುದರಿಂದ ಈ ಸಂಶಯ ಬಲವಾಗಿದೆ. ಈ ನಡುವೆ ಕೇರಳ ಟ್ಯಾಂಕರ್ ಡ್ರೈವರ್ ಅರ್ಜುನಗಾಗಿ ಶೋಧ ಮುಂದುವರಿದಿದೆ.

  Continue Reading

  DAKSHINA KANNADA

  ಸರ್ಕಾರಿ ಬಸ್ ಮತ್ತು ಟ್ಯಾಂಕರ್ ಮಧ್ಯೆ ಅಪ*ಘಾತ; ಹಲವರಿಗೆ ಗಾ*ಯ

  Published

  on

  ಚಿಕ್ಕಮಗಳೂರು: KSRTC ಹಾಗೂ ಟ್ಯಾಂಕರ್ ಮಧ್ಯೆ ಭಯಾನಕ ಡಿ*ಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಬಸ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಹಲವರಿಗೆ ಗಂಭೀರ ಗಾ*ಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

  ಮೂಡಿಗೆರೆ ತಾಲೂಕಿನ ಕಡೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರವಳಲು ಬಳಿ ಈ ಅಪ*ಘಾತ ಸಂಭವಿಸಿದೆ. ಅಪ*ಘಾತದಲ್ಲಿ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾ*ಯಗಳಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾ*ನಿ ಸಂಭವಿಸಿಲ್ಲ.

  KSRTC, ಟ್ಯಾಂಕರ್ ಅಪ*ಘಾತದಿಂದ ಕಡೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಬಂದ್ ಆಗಿದೆ. ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  Continue Reading

  LATEST NEWS

  Trending