FILM
ಲೈಂಗಿಕವಾಗಿ ಸಹಕರಿಸುವಂತೆ ಕೋಡ್ಯಾನ್ಸರ್‌ಗೆ ಕಿರುಕುಳ: ನೃತ್ಯ ಸಂಯೋಜಕ ಗಣೇಶ್ ಆಚಾರ್ಯ ವಿರುದ್ಧ ಚಾರ್ಜ್ ಶೀಟ್
Published
3 years agoon
By
Adminಮುಂಬಯಿ: ಸಹ ನೃತ್ಯಗಾತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಾಲಿವುಡ್‌ನ ಖ್ಯಾತ ನೃತ್ಯ ಸಂಯೋಜಕ ಗಣೇಶ್ ಆಚಾರ್ಯ ವಿರುದ್ಧ ಮುಂಬೈ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಮುಂಬೈ ನಗರದ ಓಶಿವಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಇತ್ತೀಚೆಗೆ ಆರೋಪಪಟ್ಟಿ ಸಲ್ಲಿಸಲಾಗಿದೆ ಎಂದು ತಿಳಿಯಲಾಗಿದೆ.
ಈ ವರದಿಯ ಪ್ರಕಾರ,
ಗಣೇಶ್ ಆಚಾರ್ಯ ಮತ್ತು ಅವರ ಸಹಾಯಕರ ವಿರುದ್ಧ ಸೆಕ್ಷನ್ 354-ಎ (ಲೈಂಗಿಕ ಕಿರುಕುಳ), 354-ಸಿ, 354-ಡಿ (ಹಿಂಬಾಲಿಸುವಿಕೆ), 509 (ಮಹಿಳೆಗೆ ಅವಮಾನ), 323 (ನೋವು), 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಅವಮಾನ), 506 (ಅಪರಾಧ ಬೆದರಿಕೆ)ದ ಅಡಿಯಲ್ಲಿ ಆರೋಪ ಹೊರಿಸಲಾಗಿದೆ ಎಂದು ಮಾಹಿತಿ ತಿಳಿಯಲಾಗಿದೆ.
ಈ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಲು ಬಾಲಿವುಡ್ ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯ ನಿರಾಕರಿಸಿದ್ದಾರೆ ಎಂದು ತಿಳಿದು ಬಂದಿದೆ.
ಗಣೇಶ್ ಆಚಾರ್ಯ ವಿರುದ್ಧ ಸಹ ಡ್ಯಾನ್ಸರ್ ಒಬ್ಬರು ಲೈಂಗಿಕ ಕಿರಕುಳ ಆರೋಪ ಮಾಡಿದ್ದರು.”ಲೈಂಗಿಕವಾಗಿ ಸಹಕರಿಸುವಂತೆ ಗಣೇಶ್ ಕೋರಿದ್ದರು. ಆದರೆ, ಇದನ್ನು ನಿರಾಕರಿಸಿದೆ. ಚಿತ್ರರಂಗದಲ್ಲಿ ಯಶಸ್ಸು ಸಿಗಬೇಕಾದರೆ ದೈಹಿಕವಾಗಿ ಸಹಕರಿಸುವಂತೆ ಹೇಳಿದ್ದರು. ಆದರೆ ನಾನು ವಿರೋಧಿಸಿದ್ದೆ. ಹೀಗಾಗಿ ಭಾರತೀಯ ಸಿನಿಮಾ ಮತ್ತು ದೂರದರ್ಶನ ನೃತ್ಯ ನಿರ್ದೇಶಕರ ಸಂಘದಿಂದ ನಾನು ಸದಸ್ಯತ್ವ ಕಳೆದುಕೊಂಡೆ” ಎಂದು ಆಕೆ ಆರೋಪಿಸಿದ್ದರು
ಸಮಂತಾ ರುತ್ ಪ್ರಭು ವಿಚ್ಛೇದನದ ಬಳಿಕ ಸಾಕಷ್ಟು ನೋವು ಅನುಭವಿಸಿದ್ದರು. ನಾಲ್ಕು ವರ್ಷಗಳ ಕಾಲ ನಾಗ ಚೈತನ್ಯ ಜೊತೆ ಸಂಸಾರ ನಡೆಸಿದ ಸಂಸಾರ ಈಗ ಕೊನೆಯಾಗಿ ಕೆಲವು ವರ್ಷಗಳೇ ಕಳೆದು ಹೋಗಿವೆ. ನಾಗ ಚೈತನ್ಯ ಮತ್ತೊಂದು ಮದುವೆ ಆಗುತ್ತಿದ್ದಾರೆ. ವಿಚ್ಛೇದನದ ಬಳಿಕ ಸಮಂತಾ ಸಾಕಷ್ಟು ನೋವು ಅನುಭವಿಸಿದ್ದರು. ಸಮಂತಾ ಎದುರಿಸಿದ ತೊಂದರೆಗಳ ಬಗ್ಗೆ, ಕೇಳಿದ ಪದಗಳ ಬಗ್ಗೆ ಬಹಳ ದುಖದಿಂದ ಹೇಳಿಕೊಂಡಿದ್ದಾರೆ.
‘ನಾನು ವಿಚ್ಛೇದನ ಪಡೆದಾಗ ಜನರು ಸೆಕೆಂಡ್ ಹ್ಯಾಂಡ್, ಬಳಕೆ ಆದವಳು ಎಂದು ಕರೆಯುತ್ತಿದ್ದರು. ಈ ರೀತಿಯ ಸಾಕಷ್ಟು ಕಮೆಂಟ್ಗಳು ಬರುತ್ತಿದ್ದವು. ವಿಚ್ಛೇದನ ಪಡೆದ ಬಳಿಕ ಮಹಿಳೆಯರು ಹಾಗೂ ಕುಟುಂಬದವರು ತುಂಬಾನೇ ಕಷ್ಟ ಅನುಭವಿಸಬೇಕಾಗುತ್ತದೆ’ ಎಂದಿದ್ದಾರೆ ಸಮಂತಾ.
‘ಆರಂಭದಲ್ಲಿ ಇದು ಸಾಕಷ್ಟು ನೋವುಂಟು ಮಾಡಿತ್ತು. ನಾನು ವಿಚ್ಛೇದನ ಪಡೆದಿರುವುದು ಕಾಲ್ಪನಿಕ ಕಥೆಯಲ್ಲ. ಹಾಗೆಂದು ನಾನು ಮೂಲೆಯಲ್ಲಿ ಕುಳಿತು ಅಳುತ್ತಾ ಇರುತ್ತೇನೆ ಎಂದರ್ಥವಲ್ಲ. ಅದನ್ನು ಮರೆ ಮಾಚುವ ಅಗತ್ಯವಿಲ್ಲ. ನನ್ನ ಜೀವನ ಇಲ್ಲಿಗೆ ಕೊನೆಯಾಗಿದೆ ಎಂದರ್ಥವಲ್ಲ. ಎಲ್ಲಿ ಕೊನೆಯಿದೆಯೋ ಅಲ್ಲಿಂದಲೇ ಆರಂಭವಿರುತ್ತದೆ’ ಎಂದಿದ್ದಾರೆ ಸಮಂತಾ. ಈ ಮೂಲಕ ನಡೆದ ಘಟನೆಯನ್ನು ಒಪ್ಪಿ ಮುಂದೆ ಸಾಗಿರುವುದಾಗಿ ತಿಳಿಸಿದ್ದಾರೆ.
ಸಿನಿಮಾ ವಿಚಾರದಲ್ಲಿ ಸಮಂತಾ ಗುಡ್ನ್ಯೂಸ್ ನೀಡಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. 2017ರಲ್ಲಿ ನಾಗ ಚೈತನ್ಯ ಜೊತೆ ಸಮಂತಾ ಮದುವೆ ಗೋವಾದಲ್ಲಿ ಅದ್ದೂರಿಯಾಗಿ ನೆರವೇರಿತ್ತು. 2021ರಲ್ಲಿ ವಿಚ್ಚೇಧನವಾಗಿತ್ತು. ಸದ್ಯ ನಾಗ ಚೈತನ್ಯ ಅವರು ಶೋಭಿತಾ ದುಲಿಪಾಲ್ನ ವಿವಾಹ ಆಗುತ್ತಿದ್ದಾರೆ.
FILM
ಉಡುಪಿ: ಕಾಲಿವುಡ್ ಸ್ಟಾರ್ ನಟ ಸೂರ್ಯ ದಂಪತಿ ಕೊಲ್ಲೂರಿನ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ
Published
13 hours agoon
26/11/2024By
NEWS DESK2ಉಡುಪಿ: ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆಯಲು ನಾನಾ ಕಡೆಗಳಿಂದ ಭಕ್ತರು ಆಗಮಿಸುತ್ತಾರೆ. ಕೇವಲ ಸಾಮಾನ್ಯರು ಮಾತ್ರವಲ್ಲದೆ, ಸೆಲೆಬ್ರಿಟಿಗಳು ಕೂಡ ಇಲ್ಲಿಗೆ ಆಗಮಿಸಿ ದರ್ಶನ ಪಡೆಯುತ್ತಾರೆ. ಕಾಲಿವುಡ್ ನ ಸ್ಟಾರ್ ನಟ ಸೂರ್ಯ ದಂಪತಿ ಕೊಲ್ಲೂರಿನ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಬಳಿಕ ದೇವಾಲಯದಲ್ಲಿ ನಡೆದ ಚಂಡಿಕಾಯಾಗದಲ್ಲಿ ಪತ್ನಿ ನಟಿ ಜ್ಯೋತಿಕಾ ಜೊತೆ ಭಾಗಿಯಾದರು. ನಿನ್ನೆ ರಾತ್ರಿ ಕೊಲ್ಲೂರಿಗೆ ಆಗಮಿಸಿದ ಕಾಲಿವುಡ್ ದಂಪತಿ ಇಂದು ಪೂರ್ಣಾಹುತಿಯಲ್ಲಿ ಭಾಗಿಯಾದರು.
ನಟ ಸೂರ್ಯ ಹಾಗೂ ಜ್ಯೋತಿಕಾ ಸೆಲೆಬ್ರಿಟಿ ದಂಪತಿಯನ್ನು ನೋಡಲು ಅಭಿಮಾನಿಗಳು ಮುಗಿ ಬಿದ್ದಿದ್ದರು. ಕರ್ನಾಟಕದಲ್ಲೂ ಸಹ ಸೂರ್ಯ ಹಾಗೂ ಜ್ಯೋತಿಕಾಗೆ ಸಾಕಷ್ಟು ಅಭಿಮಾನಿಗಳಿದ್ದಾರೆ.
bangalore
ಬಿಗ್ ಬಾಸ್ ನಿಂದ ಧರ್ಮ ಎಲಿಮಿನೆಟ್ ಆಗಿದ್ದು ಯಾಕೆ ಗೊತ್ತಾ ?
Published
2 days agoon
25/11/2024By
NEWS DESK3ಮಂಗಳೂರು/ಬೆಂಗಳೂರು: ‘ಕನ್ನಡದ ಬಿಗ್ ಬಾಸ್ ಸೀಸನ್ 11’ರ ರಿಯಾಲಿಟಿ ಶೋ 119ನೇ ದಿನಕ್ಕೆ ಕಾಲಿಡುತ್ತಿದೆ. ಅದರ ನಡುವೆ ವಾರ ವಾರ ಎಲಿಮಿನೇಟ್ ಪ್ರಕ್ರಿಯೆ ತೀವ್ರ ಕೂತುಹಲ ಕೆರಳಿಸಿದೆ. ಈ ವಾರ ಬಿಗ್ ಬಾಸ್ ನಿಂದ ಧರ್ಮ ಕೀರ್ತಿರಾಜ್ ಎಲಿಮೀನೆಟ್ ಆಗಿ ಹೊರಬಂದಿದ್ದಾರೆ.
ಸದಾ ನಗುಮುಖದಲ್ಲೇ ಕಾಣಿಸಿಕೊಳ್ಳುವ ಧರ್ಮ, ಯಾರ ತಂಟೆಗೂ ಹೊಗುತ್ತಿರಲಿಲ್ಲ. ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಧರ್ಮ ಹಾಗೂ ಅನುಷಾ ಒಟ್ಟಿಗೆ ದೊಡ್ಮನೆ ಸೇರಿದ್ದರು. ಆದರೆ ಧರ್ಮ ಮತ್ತು ಅನುಷಾ ಬಿಗ್ ಬಾಸ್ ಮನೆಯಲ್ಲಿ ಕ್ಲೋಸ್ ಆಗಿದ್ದರು. ಆದರೆ ಅನುಷಾ ಈ ಮೊದಲೇ ಎಲಿಮಿನೇಟ್ ಆಗಿದ್ದರು. ಇದು ಧರ್ಮ ಅವರಿಗೆ ಬೇಸರ ಮೂಡಿಸಿತ್ತು.
ಈ ವಾರ ಬಿಗ್ ಬಾಸ್ ಮನೆಯಿಂದ ಆಚೆ ಹೋಗಲು 7 ಮಂದಿ ನಾಮಿನೇಟ್ ಆಗಿದ್ದರು. ಕೊನೆಯ ಹಂತದಲ್ಲಿ ಧರ್ಮ ಹಾಗೂ ಚೈತ್ರಾ ಉಳಿದುಕೊಂಡಿದ್ದರು. ಫೈನಲ್ ಆಗಿ ಧರ್ಮ ಮನೆಯಿಂದ ಹೊರಬಂದರು. ಧರ್ಮ ಬೇಸರದಿಂದಲೇ ಹೊರನಡೆದರು.
ಇದನ್ನೂ ಓದಿ: ಗೂಗಲ್ ಮ್ಯಾಪ್ ನಂಬಿ ಎಡವಟ್ಟು; 50 ಅಡಿ ಆಳಕ್ಕೆ ಕಾರು ಬಿದ್ದು ಮೂವರ ದುರ್ಮ*ರಣ
ಧರ್ಮ ಸದಾ ಕೂಲ್ ಆಗಿಯೇ ಇರುತ್ತಾರೆ. ಅವರು ಯಾವುದೇ ಕಿತ್ತಾಟಕ್ಕೂ ಹೋಗುತ್ತಿರಲಿಲ್ಲ. ತಾಳ್ಮೆ ಕಳೆದುಕೊಂಡು ಒಂದು ದಿನ ಕೂಗಾಡಿದವರಲ್ಲ. ಇನ್ನೊಂದು ಕಡೆ, ಧರ್ಮ ಎಲ್ಲಿಯೂ ಕೂಡ ಹೈಲೈಟ್ ಆಗುತ್ತಿರಲಿಲ್ಲ. ಇವರಿಗಿಂತ ನಂತರ ವೈಲ್ಡ್ ಕಾರ್ಡ್ ನಲ್ಲಿ ಬಂದ ಹನುಮಂತ, ರಜತ್ ಹಾಗೂ ಶೋಭಾ ಶೆಟ್ಟಿ ಈಗಗಾಲೇ ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ.
ಧರ್ಮ ಶಾಂತತೆಯ ಸ್ವರೂಪವನ್ನು ಹೊಂದಿರುವ ವ್ಯಕ್ತಿತ್ವ. ಈ ಮೊದಲು ಎಲಿಮಿನೇಟ್ ಆಗಿರುವ ಲಾಯರ್ ಜಗದೀಶ್ ವಿರುದ್ದ ಇಡೀ ಮನೆಯೇ ತಿರುಗಿ ಬಿದ್ದಾಗಲೂ ಧರ್ಮ ಫೈಟ್ ಗೆ ಹೋಗಿರಲಿಲ್ಲ. ಇದು ಅವರ ಮುಗ್ದತೆ ಮತ್ತು ತಾಳ್ಮೆಯ ಸ್ವರೂಪವನ್ನು ತೋರಿಸುತ್ತದೆ.
ಬಿಗ್ ಬಾಸ್ ಮನೆ ಎಂದರೆ ನೆನಪಾಗುವುದೇ ಜಗಳ, ಕೋಪ ಮತ್ತು ಮಾತುಗಾರಿಕೆ. ಎಲ್ಲೋ ಒಂದು ಕಡೆ ಧರ್ಮ ಅವರಿಗೆ ತಮ್ಮ ತಾಳ್ಮೆಯೇ ಮುಳುವಾಗಿ ಎಲಿಮಿನೇಟ್ ಆಗಲು ಕಾರಣವಾಯಿತು ಎಂದು ಹೇಳಬಹುದು.
LATEST NEWS
ಮದುವೆ ಮಂಟಪದಿಂದ ಫೋಟೊಗ್ರಾಫರ್ ಕಿಡ್ನ್ಯಾಪ್ ಪ್ರಕರಣ – 8 ಜನರ ಬಂಧನ
ಉಡುಪಿ: ಕಾಲಿವುಡ್ ಸ್ಟಾರ್ ನಟ ಸೂರ್ಯ ದಂಪತಿ ಕೊಲ್ಲೂರಿನ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ
ಇಂದಿನಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ
ಏಲಿಯನ್ಗಳು ನಿಜಕ್ಕೂ ಇದೆಯಾ? ಡಾ.ಸೋಮನಾಥ್ರಿಂದ ಅಚ್ಚರಿಯ ಮಾಹಿತಿ !!
ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು
ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ: ಮುಂದಿನ ಸಿಎಂ ಇವರೇ ?
Trending
- LATEST NEWS7 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- Baindooru5 days ago
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
- LIFE STYLE AND FASHION6 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ
- BIG BOSS3 days ago
BBK11: ಕಿಚ್ಚನ ಪಂಚಾಯ್ತಿಯಲ್ಲಿ ರಜತ್ಗೆ ಫುಲ್ ಕ್ಲಾಸ್; ಹೊರ ಹೋಗೋಕೆ ಬಾಗಿಲು ಓಪನ್ ಇದೆ ಎಂದ ಬಾದ್ ಷಾ!