Wednesday, September 30, 2020

ಚಾರ್ಮಾಡಿಯಲ್ಲಿ ಪಲ್ಟಿಯಾದ ಕಾರು – ಪ್ರಾಣಾಪಾಯದಿಂದ ಪಾರಾದ ಐವರು

ಮುಡಿಪು ಅಕ್ರಮ ಮಣ್ಣು ಗಣಿಗಾರಿಕೆ ಪ್ರದೇಶಕ್ಕೆ ಸಹಾಯಕ ಆಯುಕ್ತರ ನೇತೃತ್ವದ ತಂಡ ದಾಳಿ

ಮಂಗಳೂರು : ಅಕ್ರಮ ಮಣ್ಣು ಗಣಿಗಾರಿಕೆ ಪ್ರದೇಶಕ್ಕೆ ಸಹಾಯಕ ಆಯುಕ್ತರ ನೇತೃತ್ವದ ತಂಡ ದಾಳಿ ನಡೆಸಿ 28 ಲಾರಿ , 6 ಜೆಸಿಬಿ ಹಾಗೂ ಮೂರು ಹಿಟಾಚಿಯನ್ನು ವಶಕ್ಕೆ ತೆಗೆದುಕೊಂಡಿದೆ. ಸಹಾಯಕ ಆಯುಕ್ತ ಮದನ್...

ಕೌಡೂರಿನಲ್ಲಿ ನಾಗರಿಕರೊಂದಿಗೆ ಶಾಸಕ ಡಾ.ಭರತ್ ಶೆಟ್ಟಿ ಸಮಾಲೋಚನೆ, ಮೂಲಹಕ್ಕುಪತ್ರ ನೀಡಲು ಶೀಘ್ರ ಕ್ರಮ

ಮಂಗಳೂರು: ಹಕ್ಕುಪತ್ರ ಸಿಗದೆ ಭಾರಿ ಸಮಸ್ಯೆಯ ಉಂಟಾಗಿರುವ ಕಂದಾವರ ಗ್ರಾಮ ಪಂಚಾಯತ್ ಕೌಡೂರು ಪ್ರದೇಶಕ್ಕೆ ಮಂಗಳೂರು ನಗರ ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ ಭೇಟಿ ನೀಡಿ ಸ್ಥಳೀಯರೊಂದಿಗೆ ಸಮಾಲೋಚನೆ ನಡೆಸಿದರು. ನಂತರ ಸ್ಥಳೀಯ...

ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ವಿರೋಧಿಸಿ ಎಸ್ ಡಿಪಿಐ ಪ್ರತಿಭಟನೆ

ಮಂಗಳೂರು : ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ 32 ಆರೋಪಿಗಳಿಗೆ ಖುಲಾಸೆಗೊಳಿಸಿ ಕ್ಲೀನ್ ಚಿಟ್ ನೀಡಿರುವ ಲಕ್ನೋ ಸಿಬಿಐ ಕೋರ್ಟಿನ ತೀರ್ಪನ್ನು ಖಂಡಿಸಿ ಎಸ್ ಡಿಪಿಐ ದಕ್ಷಿಣಕನ್ನಡ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು. ಬಾಬರಿ...

ಸತ್ಯಮೇವ ಜಯತೆ ಎಂಬ ಮಾತು ನಿಜವಾಗಿದೆ – ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಉಡುಪಿ : ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಸೇರಿದಂತೆ ಎಲ್ಲಾ ನಾಯಕರುಗಳನ್ನು ದೋಷಮುಕ್ತ ಗೊಳಿಸಿದ ತೀರ್ಪನ್ನು ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸ್ವಾಗತಿಸಿದ್ದಾರೆ. ಸಿಪಿಐ...

ಬೆಳ್ಳಾರೆ ಬಾಲಕಿ ಸ್ನಾನ ಮಾಡುವ ಮೊಬೈಲ್ ನಲ್ಲಿ ವೀಡಿಯೋ ಚಿತ್ರೀಕರಣ

ಪುತ್ತೂರು: ಸ್ನಾನದ ಕೊಠಡಿಯಲ್ಲಿ ಸ್ನಾನ ಮಾಡುತ್ತಿದ್ದ ಅಪ್ರಾಪ್ತ ಬಾಲಕಿ ಸ್ನಾನ ಮಾಡುತ್ತಿರುವ ದೃಶ್ಯವನ್ನು ಮೊಬೈಲ್‌‌ನಲ್ಲಿ ಸೆರೆ ಹಿಡಿದಿದ್ದ ಯುವಕನ ವಿರುದ್ದ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಸುಳ್ಯ ಕಲ್ಮಡ್ಕ ಗ್ರಾಮದ ನಿವಾಸಿ ಶ್ಯಾಮ್...

ಚಿಕ್ಕಮಗಳೂರು ಸೆಪ್ಟೆಂಬರ್ 13: ಮಲೆನಾಡು ಕರಾವಳಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಚಾರ್ಮಾಡಿ ಘಾಟ್ ನಲ್ಲಿ ತೀವ್ರ ಮಂಜು ಕವಿದಿದ್ದು, ಇಂದು ಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಶಿಫ್ಟ್ ಕಾರು ಪಲ್ಟಿಯಾಗಿರೋ ಘಟನೆ ನಡೆದಿದೆ. ಈ ಘಟನೆಯಲ್ಲಿ ಕಾರಿನಲ್ಲಿದ್ದ ಐವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ದಾವಣಗೆರೆ ಮೂಲದ ಶಿಫ್ಟ್ ಕಾರಿನಲ್ಲಿ ಐವರು ಚಾರ್ಮಾಡಿ ಘಾಟ್ ಮುಖಾಂತರ ಧರ್ಮಸ್ಥಳಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಮಳೆಯಿಂದಾಗಿ ಚಾರ್ಮಾಡಿ ಘಾಟಿಯ ರಸ್ತೆಯಲ್ಲಿ ಭಾರೀ ಪ್ರಮಾಣದ ಮಂಜು ಕವಿದಿದ್ದು, ಚಾರ್ಮಾಡಿ ಘಾಟಿಯ ಸೋಮನಕಾಡು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಪಲ್ಟಿಯಾದ ಕಾರು ಜಲಪಾತದತ್ತ ಮುನ್ನಗ್ಗಿ ಮುಗುಚಿಕೊಂಡು ಬಿದ್ದಿದೆ. ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.


ಈ ಅಪಘಾತದಲ್ಲಿ ಕಾರಿನಲ್ಲಿದ್ದ ಐವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯಾದಿಂದ ಪಾರಾಗಿದ್ದಾರೆ. ಜಲಪಾತದ ಬಳಿ ಮಗುಚಿ ಬಿದ್ದ ಕಾರನ್ನ ಸ್ಥಳಿಯರು ಹಾಗೂ ಬಣಕಲ್ ಪೊಲೀಸರು ಸಹಕಾರದೊಂದಿಗೆ ಹಿಟಾಚಿ ಮೂಲಕ ಮೇಲೆತ್ತಿದ್ದಾರೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.