DAKSHINA KANNADA
ಚಾರ್ಮಾಡಿ ಘಾಟ್ ರಸ್ತೆ ಓಪನ್ : ಆದರೆ ಲಘು ವಾಹನಗಳಿಗೆ ಮಾತ್ರ 24 ಗಂಟೆ ಸಂಚಾರಕ್ಕೆ ಅವಕಾಶ..!
Published
4 years agoon
By
Adminಚಾರ್ಮಾಡಿ ಘಾಟ್ ರಸ್ತೆ ಓಪನ್ : ಆದರೆ ಲಘು ವಾಹನಗಳಿಗೆ ಮಾತ್ರ 24 ಗಂಟೆ ಸಂಚಾರಕ್ಕೆ ಅವಕಾಶ..!
ಮಂಗಳೂರು : ಚಾರ್ಮಾಡಿ ಘಾಟಿಯಲ್ಲಿ ಮಂಗಳವಾರದಿಂದ ದಿನದ ಇಪ್ಪತ್ತನಾಲ್ಕು ಗಂಟೆಯೂ ಲಘು ವಾಹನಗಳ ಜೊತೆ ಕೆ.ಎಸ್.ಆರ್.ಟಿ.ಸಿ. ಮಿನಿ ಬಸ್ ಗಳಿಗೂ ಅವಕಾಶ ನೀಡಲಾಗಿದೆ.
ಮಳೆ-ಗುಡ್ಡ ಕುಸಿತದಿಂದ ಕಾರಣದಿಂದ ಚಾರ್ಮಾಡಿ ಘಾಟಿನಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಆದರೆ ಜಿಲ್ಲಾಧಿಕಾರಿಗಳು ಸದ್ಯ 24 ಗಂಟೆಗಳ ಕಾಲ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಿ ಆದೇಶ ನೀಡಿದ್ದಾರೆ.
ಈ ಕುರಿತು ಸ್ಪಷ್ಟನೆ ನೀಡಿದ ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಕಳೆದ ಕೆಲವು ದಿನಗಳ ಹಿಂದೆ ಸುರಿದ ಮಳೆಗೆ ಗುಡ್ಡ ಕುಸಿತ ಸಂಭವಿಸಿದ ಪರಿಣಾಮ ಈ ಘಾಟಿಯಲ್ಲಿ ವಾಹನ ಸಂಚಾರಕ್ಕೆ ಬೆಳಗ್ಗೆ 7 ರಿಂದ ಸಂಜೆ 7 ವರೆಗೆ ಮಾತ್ರ ಅವಕಾಶ ನೀಡಲಾಗಿತ್ತು.
ಆದರೆ ಇಂದು ಜಿಲ್ಲಾಧಿಕಾರಿಗಳು ದಿನದ ಇಪ್ಪತ್ತನಾಲ್ಕು ಗಂಟೆಯೂ ಲಘು ವಾಹನ ಸಂಚಾರಕ್ಕೆ ಅನುಮತಿಯನ್ನು ನೀಡಿದ್ದಾರೆ.
ಚಿಕ್ಕಮಗಳೂರಿಂದ ಮೂಡಿಗೆರೆ ತಾಲೂಕು ಮೂಲಕ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್ ಮಾರ್ಗ ಇದಾಗಿದ್ದು, ಭಾರೀ ಮಳೆಗೆ ಗುಡ್ಡ ಕುಸಿತ, ರಸ್ತೆಗಳಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಿಷೇಧ ವಿಧಿಸಲಾಗಿತ್ತು.
ಕಳೆದ ಎರಡು ದಿನಗಳ ಹಿಂದೆ ಚಿಕ್ಕಮಗಳೂರು ಪ್ರವಾಸಿ ತಾಣಗಳ ಭೇಟಿಗೆ ಪ್ರವಾಸಿಗರಿಗೆ ವಿಧಿಸಲಾಗಿದ್ದ ನಿರ್ಬಂಧವನ್ನು ತೆಗೆದುಹಾಕಿತ್ತು.
ಇದರ ಬೆನ್ನಲ್ಲೇ ಚಾರ್ಮಾಡಿ ಘಾಟ್ ಮಾರ್ಗದಲ್ಲಿ 24 ಗಂಟೆಗಳ ಕಾಲ ಲಘು ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ.
DAKSHINA KANNADA
ತುಳು ಸಿನೆಮಾಗೆ ‘ಜೈ’ ಅಂದ ಸುನೀಲ್ ಶೆಟ್ಟಿ; ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ
Published
6 hours agoon
14/01/2025ಮಂಗಳೂರು : ರೂಪೇಶ್ ಶೆಟ್ಟಿ ನಿರ್ದೇಶನದ ‘ಜೈ’ ಎಂಬ ತುಳು ಸಿನೆಮಾದಲ್ಲಿ ನಟಿಸಲು ಬಾಲಿವುಡ್ ನಟ ಸುನಿಲ್ ಶೆಟ್ಟಿ ಅವರು ಇಂದು ಮಂಗಳೂರಿಗೆ ಆಗಮಿಸಿದ್ದಾರೆ. ಸುನಿಲ್ ಶೆಟ್ಟಿ ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ರೂಪೇಶ್ ಶೆಟ್ಟಿ ಅವರು ಹಾರ್ದಿಕವಾಗಿ ಸ್ವಾಗತಿಸಿದರು.
‘ಜೈ’ ಸಿನೆಮಾ ಬಿಗ್ ಬಜೆಟ್ ಸಿನೆಮಾ ಆಗಿದ್ದು, ಕರಾವಳಿಯ ಬಹುತೇಕ ಕಡೆಗಳಲ್ಲಿ ಚಿತ್ರೀಕರಣ ಮುಗಿಸಲಾಗಿದೆ. ಜಿಲ್ಲೆಯ ಹಲವು ಖ್ಯಾತ ನಟರು ಸಿನೆಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಇದೀಗ ಜನವರಿ 15 ರಿಂದ ನಡೆಯಲಿರುವ ಸಿನೆಮಾದ ಕೊನೆಯ ಹಂತದ ಚಿತ್ರೀಕರಣದಲ್ಲಿ ಸುನಿಲ್ ಶೆಟ್ಟಿ ಅವರು ಭಾಗಿಯಾಗಲಿದ್ದಾರೆ. ಗಿರಿಗಿಟ್ , ಗಮ್ಜಾಲ್, ಸರ್ಕಸ್ ಚಿತ್ರದ ಯಶಸ್ಸಿನ ಬಳಿಕ ರೂಪೇಶ್ ಶೆಟ್ಟಿ ಅವರ ಬಿಗ್ ಬಜೆಟ್ ಸಿನೆಮಾ ‘ಜೈ’. ಆರ್ ಎಸ್ ಸಿನೆಮಾಸ್ ಶೂಲಿನ್ ಫಿಲಮ್ಸ್ , ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ಸಿನೆಮಾ ನಿರ್ಮಾಣವಾಗುತ್ತಿದೆ.
ರೂಪೇಶ್ ಶೆಟ್ಟಿ ಸಿನೆಮಾಗೆ ಅ್ಯಕ್ಷನ್ ಕಟ್ ಹೇಳಿದ್ದು, ಕತೆ ಹಾಗೂ ಸಂಭಾಷಣೆಯನ್ನು ಪ್ರಸನ್ನ ಶೆಟ್ಟಿ ಬೈಲೂರು ಬರೆದಿದ್ದಾರೆ. ಕ್ಯಾಮೆರಾದಲ್ಲಿ ವಿನುತ್ ಕೆ. ಸಂಗೀತ ಲೋಯ್ ವೆಲೆಂಟಿನ್ ಸಲ್ಡಾನ್ಹಾ ಹಾಗೂ ಸಂಕಲನ ರಾಹುಲ್ ವಸಿಷ್ಠ ಅವರದ್ದಾಗಿದೆ. ಅನಿಲ್ ಶೆಟ್ಟಿ , ಸುಧಾಕರ ಶೆಟ್ಟಿ ಮುಗ್ರೋಡಿ ಮಂಜುನಾಥ ಅತ್ತಾವರ ಅವರು ಚಿತ್ರ ನಿರ್ಮಾಪಕರಾಗಿದ್ದಾರೆ. ಸುನಿಲ್ ಶೆಟ್ಟಿ ಮೊದಲ ಬಾರಿಗೆ ತುಳು ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ತುಳು ನಮ್ಮ ತುಳುನಾಡಿನ ಭಾಷೆ. ತುಳು ಭಾಷೆಯಲ್ಲಿ ಚಿತ್ರ ನಿರ್ಮಾಣ ಮಾಡ ಬೇಕೆಂಬುದು ಬಹು ಕಾಲದ ಕನಸು. ಉತ್ತಮ ವಿಷಯದ ತುಳು ಚಿತ್ರ ಬಂದರೆ ನಟಿಸ ಬೇಕೆಂದು 2- 3 ವರ್ಷಗಳ ಹಿಂದೆ ಇಂಗಿತ ವ್ಯಕ್ತ ಪಡಿಸಿದ್ದೆ. ಇದೀಗ ಒಂದು ಅವಕಾಶ ಸಿಕ್ಕಿದೆ. ಇದು ನಾನು ಅಭಿನಯಿಸುವ ಮೊದಲ ತುಳು ಚಿತ್ರ ಎಂದರು. ತುಳುವಿನಲ್ಲಿ ಇತ್ತೀಚೆಗೆ ಉತ್ತಮ ಸಿನೆಮಾಗಳು ಬರುತ್ತಿವೆ. ಇತರ ಎಲ್ಲಾ ಭಾಷೆಗಳ ಸಿನೆಮಾಗಳಿಗೆ ಸಮಾನವಾದ ಚಿತ್ರಗಳು ತುಳುವಿನಲ್ಲಿ ಬರುತ್ತಿವೆ. ಇದು ತುಂಬಾ ಖುಷಿಯ ವಿಚಾರ ಎಂದರು.
ಸುರತ್ಕಲ್ : ನಿಲ್ಲಿಸಿರುವ ಟ್ಯಾಂಕರ್‌ಗಳಿಂದ ಟ್ಯಾಂಕರ್‌ಯಾರ್ಡ್‌ನಲ್ಲಿ ಡೀಸೆಲ್ ಕಳ್ಳತನ ಮಾಡುವ ಗ್ಯಾಂಗ್ ಒಂದನ್ನು ಸುರತ್ಕಲ್ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಕುಳಾಯಿಗುಡ್ಡೆ ನಿವಾಸಿ ಸಂತೋಷ್(42), ಕಾಟಿಪಳ್ಳ ನಿವಾಸಿ ಐರನ್ ರಿತೇಶ್ ಮಿನೇಜ್(36), ಬೆಳ್ತಂಗಡಿ ನಿವಾಸಿ ನಾರಾಯಣ್(23), ಉಡುಪಿಯ ಹೆಜಮಾಡಿ ನಿವಾಸಿ ರವಿ ಜನಾರ್ದನ ಪುತ್ರನ್ (59) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ : ನಾಲ್ಕು ಮಕ್ಕಳಿರಲಿ, 1 ಲಕ್ಷ ರೂ. ಪಡೆಯಿರಿ !
ಈ ಗ್ಯಾಂಗ್ ಮಂಗಳೂರಿನ ಹೊರವಲಯದ ಬಾಳ ಗ್ರಾಮದ ಬಳಿ ಇರುವ ಟ್ಯಾಂಕರ್‌ಯಾರ್ಡ್‌ನಲ್ಲಿ ನಿಲ್ಲಿಸಿರುವ ಟ್ಯಾಂಕರ್‌ಗಳಿಂದ ಡೀಸೆಲ್ ಕಳವು ಮಾಡುತ್ತಿತ್ತು. ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಡೀಸೆಲ್ ಕಳವುಗೈದು ದಾಸ್ತಾನು ಇರಿಸಿದ್ದ ಶೆಡ್ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿಗಳು ದಾಸ್ತಾನು ಇರಿಸಿಟ್ಟಿದ್ದ 1685 ಲೀಟರ್ ಡಿಸೇಲ್ ಮತ್ತು 20 ಲೀಟರ್ ಪೆಟ್ರೋಲ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
DAKSHINA KANNADA
ಮೂಡುಬಿದಿರೆ : ಗೂಡಂಗಡಿ ಕಳವು ಪ್ರಕರಣ ಭೇದಿಸಿದ ಪೊಲೀಸರು; ಮೂವರು ಅರೆಸ್ಟ್
Published
9 hours agoon
14/01/2025By
NEWS DESK4ಮೂಡುಬಿದಿರೆ : ಮೂಡುಬಿದಿರೆ ಹೊರವಲಯದ ಪುತ್ತಿಗೆ ಗ್ರಾಮದ ಮೂಲ್ಕಿ ಕ್ರಾಸ್ ಬಳಿ ಜನವರಿ 9 ರಂದು ರಾತ್ರಿ ಜಯಶ್ರೀ ಸ್ಟೋರ್ ಎಂಬ ಗೂಡಂಗಡಿಯಿಂದ ನಗದು ಮತ್ತು ಸೊತ್ತುಗಳನ್ನು ಕಳವು ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮೂಡುಬಿದಿರೆ ತಾಲೂಕು ನಿಡ್ಡೋಡಿ ನೀರುಡೆಯ ರೋಷನ್ ಕ್ವಾಡ್ರಸ್ (37), ಕೊಂಪದವು ನೆಲ್ಲಿತೀರ್ಥದ ನಿಶಾಂಕ್ ಪೂಜಾರಿ (18) ಮತ್ತು ನೀರುಡೆ 5 ಸೆಂಟ್ಸ್‌ನ ರೋಹಿತ್ ಮಸ್ಕರೇನ್ಹಸ್ (21) ಬಂಧಿತರು.
ಬಂಧಿತರಿಂದ ಕೃ*ತ್ಯಕ್ಕೆ ಬಳಸಿದ ಕಾರು, ಸ್ಕೂಟರ್ ಮತ್ತು 5,000 ರೂ. ನಗದು ಹಣ ಸಹಿತ ಒಟ್ಟು 3.55 ಲಕ್ಷ ರೂಪಾಯಿ ಮೌಲ್ತದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪುತ್ತಿಗೆಯ ಗೂಡಂಗಡಿಯಿಂದ ಛಾವಣಿ ಶೀಟ್‌ಗಳನ್ನು ತೆರೆದು 20,000 ರೂ. ನಗದು, 48,000 ರೂ. ಮೌಲ್ಯದ ಸಿಗರೇಟು, ಪಾನೀಯ, ತಿಂಡಿತಿನಿಸು ಮೊದಲಾದ ಸೊತ್ತುಗಳನ್ನು ಕಳವು ಮಾಡಲಾಗಿತ್ತು.
ಇದನ್ನೂ ಓದಿ : ನಾಲ್ಕು ಮಕ್ಕಳಿರಲಿ, 1 ಲಕ್ಷ ರೂ. ಪಡೆಯಿರಿ !
ಈ ಆರೋಪಿಗಳು ಈ ಹಿಂದೆ ಮೂಲ್ಕಿ, ಬಜಪೆ, ಕಾರ್ಕಳ ಮತ್ತು ವೇಣೂರು ಠಾಣೆಗಳ ವ್ಯಾಪ್ತಿಯಲ್ಲಿ ಮೂರು ವರ್ಷಗಳಿಂದ 25ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಗೂಡಂಗಡಿಗಳಲ್ಲಿ ಕಳವು ಮಾಡಿರುವ ಪ್ರಕರಣಗಳಲ್ಲಿ ಪಾಲ್ಗೊಂಡವರಾಗಿದ್ದಾರೆ. ಮೂಡುಬಿದಿರೆ ಸರ್ಕಲ್ ಪೊಲೀಸ್ ಇನ್ಸ್ ಪೆಕ್ಟರ್ ಸಂದೇಶ್ ಪಿ.ಜಿ. ನಡೆಸಿದ ಕಾರ್ಯಾಚರಣೆಯಲ್ಲಿ ಪಿಎಸ್‌ಐ ನವೀನ್, ಎಎಸ್‌ಐ ರಾಜೇಶ್, ಅಪರಾಧ ವಿಭಾಗದ ಸಿಬ್ಬಂದಿ ಭಾಗವಹಿಸಿದ್ದರು.
LATEST NEWS
ಅಧಿಕಪ್ರಸಂಗದ ಪ್ರಶ್ನೆ ಕೇಳಿದ ಯೂಟ್ಯೂಬರನ್ನು ಹೊಡೆದ ನಾಗಾಸಾಧು
ತುಳು ಸಿನೆಮಾಗೆ ‘ಜೈ’ ಅಂದ ಸುನೀಲ್ ಶೆಟ್ಟಿ; ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ
ಮಕರ ಜ್ಯೋತಿ ಯಾವ ಹೊತ್ತಲ್ಲಿ ಕಾಣುತ್ತದೆ ಗೊತ್ತಾ ?
ನಟ ದರ್ಶನ್ ಸಂಕ್ರಾಂತಿ ಆಚರಣೆ…ಪತ್ನಿ ಮಾಡಿರುವ ಪೋಸ್ಟ್ ವೈರಲ್!
ಟೀಮ್ ಇಂಡಿಯಾ ಆಟಗಾರರಿಗೆ ಬಿಗ್ ಶಾಕ್; ಕಟ್ಟುನಿಟ್ಟಿನ ಕ್ರಮಕೈಗೊಂಡ ಬಿಸಿಸಿಐ
ಟ್ಯಾಂಕರ್‌ಗಳಿಂದ ಡಿಸೇಲ್ ಕಳ್ಳತನ; ಆರೋಪಿಗಳು ಅರೆಸ್ಟ್
Trending
- BIG BOSS3 days ago
BBK11: ಐವರು ನಾಮಿನೇಟ್, ಕಿಚ್ಚನ ಪಂಚಾಯ್ತಿಯಲ್ಲಿ ಗೇಟ್ಪಾಸ್ ಯಾರಿಗೆ..?
- LATEST NEWS4 days ago
ಹಲ್ಲು ಹುಳುಕಾಗಿದ್ಯಾ.? ಈ ಮನೆಮದ್ದು ಪ್ರಯತ್ನಿಸಿ, ತಕ್ಷಣ ಎಲ್ಲಾ ಹಲ್ಲಲ್ಲಿರುವ ಹುಳುಗಳು ಹೊರ ಬರುತ್ತವೆ.!
- FILM6 days ago
ಗೋವಾದಲ್ಲಿ ಕೇಕ್ ಕತ್ತರಿಸಿ ಯಶ್ ಬರ್ತ್ಡೇ ಸಂಭ್ರಮ
- BIG BOSS1 day ago
ಕಣ್ಣೀರು ಒರೆಸಿದ ಸುದೀಪ್.. ಕಿಚ್ಚನ ಈ ದೊಡ್ಡ ಗುಣಕ್ಕೆ ಸೆಲ್ಯೂಟ್ ಹೊಡೆದ ಫ್ಯಾನ್ಸ್..!