Connect with us

BELTHANGADY

ಅಪಾಯದಂಚಿನಲ್ಲಿ ಚಾರ್ಮಾಡಿ ಘಾಟ್‌: ತಡೆಗೋಡೆ ಸಹಿತ ಭೂಕುಸಿತ

Published

on

ಬೆಳ್ತಂಗಡಿ: ಕಳೆದೊಂದು ವಾರದಿಂದ ಧಾರಾಕಾರವಾಗಿ ಸುರಿಯುತ್ತಿರುವ ಭಾರೀ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿಯಲ್ಲಿ ತಡೆಗೋಡೆ ಸಹಿತ ಭೂ ಕುಸಿತ ಉಂಟಾಗಿದೆ.


ವಾಹನ ಹಾಗೂ ಪಾದಾಚಾರಿಗಳ ಸಂಚಾರಕ್ಕೆ ಕೂಡಾ ಸಮಸ್ಯೆ ಉಂಟಾಗಿದ್ದು ಸದ್ಯ ಈ ರಸ್ತೆಯಲ್ಲಿ ಏಕ ಮುಖವಾಗಿ ಚಾಲನಕ್ಕೆ ಅವಕಾಶ ಮಾಡಿಕೊಡಲಾಗಿದೆ.


ಇದರಿಂದಾಗಿ ಘನವಾಹನ ಮತ್ತು ಪ್ರವಾಸಿಗರಿಗೆ ತೊಂದರೆ ಉಂಟಾಗಿದೆ.

ಅನೇಕ ಸಮಯದಿಂದಲೂ ಚಾರ್ಮಾಡಿ ಘಾಟ್‌ನಲ್ಲಿ ತೊಂದರೆಗಳಾಗುತ್ತಿದ್ದು ಇದೀಗ ಪ್ರವಾಸಿಗರಿಗೆ ಕೂಡಾ ಎಚ್ಚರಿಕೆ ನೀಡಲಾಗಿದೆ.

ಏಕಮುಖ ಸಂಚಾರದಿಂದಾಗಿ ಪ್ರಯಾಣಿಕರು ಸುತ್ತುಬಳಸಿ ಹೋಗುವ ಅನಿವಾರ್ಯತೆ ಎದುರಾಗಿದೆ. ಕುಸಿತ ಉಂಟಾಗಿರುವ ಜಾಗದಲ್ಲಿ ಪ್ಲಾಸ್ಟಿಕ್‌ ಹೊದಿಕೆಗಳನ್ನು ಮುಚ್ಚಿ ಇನ್ನಷ್ಟು ಕುಸಿಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದ್ದು, ಬ್ಯಾರಿಕೇಡ್ ಅಳವಡಿಸಿ ವಾಹನ ಸವಾರರಿಗೆ ಎಚ್ಚರಿಕೆ ನೀಡಲಾಗಿದೆ.

ಎಚ್ಚರಿಕೆ ಫಲಕಗಳನ್ನು ರಸ್ತೆ ಪಕ್ಕದಲ್ಲಿ ಇಡಲಾಗಿದೆ. ವಾಹನಗಳು ಆಮೆಗತಿಯಲ್ಲಿ ಸಾಗುತ್ತಿರುವುದರಿಂದ ನಿತ್ಯ ಟ್ರಾಫಿಕ್ ಜಾಂ ಉಂಟಾಗುತ್ತಿದೆ. ರಾತ್ರಿಯಾಗುತ್ತಿದ್ದಂತೆ ಈ ಹಾದಿ ಸಂಚಾರ ಅಪಾಯಕಾರಿಯಾಗುತ್ತಿದೆ.

ಮಳೆಗಾಲದಲ್ಲಿ ಪ್ರತೀ ವರ್ಷವೂ ಇಲ್ಲಿ ಭೂಕುಸಿತ ಉಂಟಾಗುತ್ತಿದ್ದು, ಸಂಚಾರಕ್ಕೆ ಅಡಚಣೆ ಉಂಟಾಗುತ್ತಲೇ ಇದೆ. ರಸ್ತೆಯ ಇಕ್ಕೆಲಗಳಲ್ಲಿ ನೀರು ಹರಿದು ಹೋಗಲು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದಿರುವ ಕಾರಣ ರಸ್ತೆ ಪಕ್ಕ ನಿರಂತರ ಕುಸಿತ ಉಂಟಾಗುತ್ತಿದೆ ಎಂದು ಪ್ರಯಾಣಿಕರೂ ದೂರುತ್ತಿದ್ದಾರೆ.

ಒಟ್ಟಿನಲ್ಲಿ ಮಳೆ ಬಂದಾಗ ಚಾರ್ಮಾಡಿ ಸಂಚಾರ ಪ್ರಯಾಣಿಕರಿಗೆ ನಿತ್ಯ ನರಕ ಎಂಬಂತಾಗಿದೆ.

BELTHANGADY

ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು

Published

on

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು(59 ವ) ಅವರು ಹೃದಯಾಘಾತದಿಂದ ಮೇ.1ರಂದು ರಾತ್ರಿ ನಿಧನರಾಗಿದ್ದಾರೆ.

gangadhar

ಮುಂದೆ ಓದಿ..;ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ

ಕೋಟದಲ್ಲಿ ಮೇ.1ರಂದು ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಕುಕ್ಕಿತ್ತಾಯನ ವೇಷ ಹಾಕಿದ್ದರು. ಮೇಳದ ಬಳಿಕ ಚೌಕಿಯಲ್ಲಿ ಬಣ್ಣ ತೆಗೆಯುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.

gangadhar

ನಾರಾಯಣ ಮಯ್ಯು ಹಾಗೂ ಲಕ್ಷ್ಮೀ ದಂಪತಿ ಪುತ್ರನಾಗಿದ್ದು 1964ರಲ್ಲಿ ಪುತ್ತೂರಿನ ಸೇಡಿಯಾಪಿನಲ್ಲಿ ಜನಿಸಿದರು. ತನ್ನ 18 ನೇ ವಯಸ್ಸಿನಲ್ಲಿ ಯಕ್ಷಗಾನದಲ್ಲಿ ಬಣ್ಣ ಹಚ್ಚಲು ಆರಂಭಿಸಿದ ಇವರು ಸ್ತ್ರೀ ವೇಷ, ರಾಜ ವೇಷ, ಪುಂಡು ವೇಷಗಳಲ್ಲಿ ನಿಸ್ಸೀಮರಾಗಿದ್ದರು. ಇನ್ನು ಮಾಲಿನಿ, ಚಿತ್ರಾಂಗದೆ, ಮೋಹಿನಿ, ದಾಕ್ಷಾಯಿನಿ, ಪ್ರಮೀಳೆ, ಶ್ರೀ ದೇವಿ, ಸೀತೆ, ದೇವೆಂದ್ರ, ದುಶ್ಯಾಸನ ಮೊದಲಾದ ಪಾತ್ರಗಳ ಅಭಿನಯದಲ್ಲಿಯೂ ಸೈ ಎನಿಸಿಕೊಂಡಿದ್ದರು. ಮೃತರು  ಆರೋಗ್ಯ ಸಹಾಯಕಿಯಾಗಿರುವ ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.

Continue Reading

BELTHANGADY

ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

Published

on

ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್‌ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.

chitha

ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?

ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Continue Reading

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

LATEST NEWS

Trending