DAKSHINA KANNADA
ಮಂಗಳೂರು ಬಂಟ್ಸ್ ಹಾಸ್ಟೆಲ್ ನಲ್ಲಿರುವ ಸಭಾಂಗಣದಲ್ಲಿ ಚತುರ್ಥಿ ಸಂಭ್ರಮ
ಮಂಗಳೂರಿನ ಬಂಟ್ಸ್ ಹಾಸ್ಟಲ್ ನಲ್ಲಿರುವ ಓಂಕಾರ ನಗರದ ಸಭಾಂಗಣದಲ್ಲಿ 17ನೇ ವರ್ಷದ ಸಾರ್ವಜನಿಕ ಗಣೇಶ ಚತುರ್ಥಿ ಸಂಭ್ರಮ ಇಂದು ನಡಿತಾ ಇದೆ.
ಮಂಗಳೂರು: ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನದ ವತಿಯಿಂದ ಬಂಟರ ಯಾನೆ ನಾಡವರ ಮಾತೃ ಸಂಘ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಎಲ್ಲ ಬಂಟರ ಸಂಘಗಳು ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಂಟ್ಸ್ ಹಾಸ್ಟೆಲ್ ನ ಸಹಯೋಗದಲ್ಲಿ 17 ನೇ ವರ್ಷದ ಗಣೇಶೋತ್ಸವ ಬಂಟ್ಸ್ ಹಾಸ್ಟೆಲ್ ನಲ್ಲಿ ನಡೆಯುತ್ತಿದೆ.
ಈ ನಿಟ್ಟಿನಲ್ಲಿ ಇಂದು ಬೆಳಗ್ಗೆ ಬಾಳಂಭಟ್ ಮನೆತನದ ಪುರೋಯಿತರು ಮತ್ತು ಸರ್ವರ ಉಪಸ್ಥಿತಯಲ್ಲಿ ಪೂಜೆ -ಪುನಸ್ಕಾರವನ್ನು ನೆರವೇರಿಸಿ ಪ್ರಾರ್ಥಿಸಿದರು.
ಶಶಧರ ಆಳ್ವ ಮತ್ತು ಶರ್ಮಿಳಾ ಎಸ್. ಆಳ್ವ ಅವರು ಗಣೇಶೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ಶ್ರೀ ಸಿದ್ದಿವಿನಾಯಕ ದೇವೆರ ಮೂರ್ತಿ ಯನ್ನು ಪ್ರತಿಷ್ಠಾಪನೆ ಮಾಡಿ ಪೂಜೆ ಸಲ್ಲಿಕೆ ಮಾಡಲಾಯಿತು.
ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಮತ್ತು ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನದ ಡಾ. ಆಶಾಜ್ಯೋತಿ ರೈಯವರ ಉಪಸ್ಥಿತಿಯಲ್ಲಿ ತನೆಹಬ್ಬದ ಕಟ್ಟಕ್ಕೆ ಆರತಿ ಬೆಳಗಿ ಮಾಲಾಡಿ ತಲೆಯಲ್ಲಿ ಹೊತ್ತುಕೊಂಡು ಬಂದು ಶ್ರೀ ಸಿದ್ದಿವಿನಾಯಕ ದೇವರ ಮುಂದೆ ಇಟ್ಟರು.
ರಾಮಕೃಷ್ಣ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಕೆ. ಜಯರಾಜ್ ಬಿ. ರೈ ಮತ್ತು ಸೌಮ್ಯ ಜೆ. ರೈ ಶ್ರೀ ಗಣೇಶೋತ್ಸವ ಕಾರ್ಯಕ್ರಮ ಉದ್ಘಾಟಿಸಿದರು.
ಇದೇ ವೇಳೆ ಜಯರಾಜ್ ಬಿ. ರೈ, ಬಿ. ಜಯರಾಜ್ ಹೆಗ್ಡೆ , ನಿವೃತ್ತ ಸುಬೆದಾರ್ ಮೇಜರ್ ಶಶಿಧರ ಆಳ್ವ ಅವರು ಸಂದರ್ಭೋಚಿತವಾಗಿ ಮಾತನಾಡಿದರು.
ಗಣಪತಿ ದೇವರಿಗೆ, ಹಾಗು ಭತ್ತದ ತೆನೆಗೆ ಪೂಜೆ ಮಾಡಿ ದೇವರ ಮಂಟಪಕ್ಕೆ ತೆನೆ ಕಟ್ಟಿದ ನಂತರ ಬಿ. ಜಯರಾಮ ಹೆಗ್ಡೆ, ಅಮ್ಮಣ್ಣಿ ಜೆ. ಹೆಗ್ಡೆ ಮಣಿಪಾಲ ಅವರು ಭಕ್ತರಿಗೆ ತೆನೆಗಳನ್ನು ವಿತರಿಸಿದರು.
ಈ ಸಂದರ್ಭ ಮಾತೃ ಸಂಘದ ಉಪಾಧ್ಯಕ್ಷ ಹೇಮನಾಥ ಶೆಟ್ಟಿ ಕಾವು, ಪ್ರಧಾನ ಕಾರ್ಯದರ್ಶಿ ಕೆ.ಎಮ್ ಶೆಟ್ಟಿ, ಕೋಶಧಿಕಾರಿ ಅಧಿಕಾರಿ ರಾಮ್ ಮೋಹನ ರೈ, ಸಿದ್ದಿವಿನಾಯಕ ಪ್ರತಿಷ್ಠಾನದ ಮಂಜುನಾಥ ಭಂಡಾರಿ ಶೆಡ್ಯೇ, ರವಿರಾಜ್ ಶೆಟ್ಟಿ ನಿಟ್ಟೆ ಗುತ್ತು, ಬಾಲಕೃಷ್ಣ ಶೆಟ್ಟಿ ಬೊಳ್ಳಿಬೊಟ್ಟು ಗುತ್ತು, ಕೃಷ್ಣಪ್ರಸಾದ್ ರೈ ಬೊಳ್ಳಿಪಾಡಿ, ಗಣೇಶೋತ್ಸವ ಸಮಿತಿಯ 3 ಜಿಲ್ಲೆಗಳ ಸಂಚಾಲಕರು, ಪದಾಧಿಕಾರಿಗಳು, ಸದಸ್ಯರು ಜೊತೆಗಿದ್ದರು.
DAKSHINA KANNADA
ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀರ
ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್ ಹಾನಿಗೊಂಡಿದೆ.
ಮುಂದೆ ಓದಿ..; ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!
ಲಾರಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತದಿಂದ ನಜ್ಜುಗುಜ್ಜಾಗಿದೆ. ಇನ್ನು ಇದೇ ಭಾಗದಲ್ಲಿ ನಿತ್ಯವೂ ಮಹಿಳೆಯರು ಮೀನ ಮಾರಾಟ ಮಾಡುತ್ತಿದ್ದರು. ಅದೃಷ್ಟವಶಾತ್ ಇದೀಗ ಭಾರೀ ಅನಾಹುತ ತಪ್ಪಿದೆ.
DAKSHINA KANNADA
ದೊಡ್ಡವರ ಜಗಳದಲ್ಲಿ ಇಹಲೋಕ ತಜ್ಯಿಸಿದ 3 ರ ಕಂದಮ್ಮ…
ಮಂಗಳೂರು (ಬೆಳಗಾವಿ): ಅದು ಎರಡು ಕುಟುಂಬಗಳ ನಡುವೆ ನಡೆದಿರೋ ಜಗಳ . ಆದ್ರೆ ಆ ಜಗಳಕ್ಕೆ ಏನೂ ಅರಿಯದ ಮೂರು ವರ್ಷದ ಪುಟ್ಟ ಮಗು ಬಲಿಯಾಗಿದೆ. ಪಾಪಿಯೊಬ್ಬ ಮಗುವಿನ ಎದೆಗೆ ಕಾಲಿಟ್ಟು ಮಗುವಿನ ಉಸಿರು ನಿಲ್ಲಿಸಿದ್ದಾನೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಎಂಬ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ದೊಡ್ಡವರ ಜಗಳದಲ್ಲಿ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಎಂಬ ಮೂರು ವರ್ಷದ ಮಗು ಹತವಾಗಿದೆ. ಜೋತಿಭಾ ತುಕಾರಾಮ ಬಾಬಬರ ಎಂಬಾತ ಮಗುವಿನ ಜೀವಕ್ಕೆ ಕುತ್ತು ತಂದ ಆರೋಪಿಯಾಗಿದ್ದಾನೆ.
ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಜಗಳ ತಾರಕ್ಕೇರಿದಾಗ ಸಿಟ್ಟಿನಲ್ಲಿ ಜೋತಿಬಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ನಿಂತಿದ್ದಾನೆ. ಈ ವೇಳೆ ಮಗುವನ್ನು ಆತನ ಕಾಲಿನ ಅಡಿಯಿಂದ ತೆಗೆಯಲು ಮಗುವಿನ ತಾಯಿ ಯತ್ನಿಸಿದ್ದಾಳೆ . ಆ ವೇಳಗೆ ಇನ್ನಷ್ಟು ಗಟ್ಟಿಯಾಗಿ ಕಾಲಿನಿಂದ ಮಗುವಿನ ಎದೆಗೆ ಕಾಲಿನಿಂದ ಒತ್ತಿದ ಕಾರಣ ಮಗು ಉಸಿರು ನಿಲ್ಲಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.
DAKSHINA KANNADA
ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!
ನ್ಯೂಯಾರ್ಕ್ : ಅಮೇರಿಕಾದಲ್ಲಿ ನಡೆದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ಮಹಿಳೆಯರು ಇಹಲೋಕ ತ್ಯಜಿಸಿದ್ದಾರೆ. ಕೌಂಟಿಯ ಹೆದ್ದಾರಿಯ ಸೇತುವೆಯೊಂದರ ಮೇಲೆ ವೇಗವಾಗಿ ಕಾರು ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಉತ್ತರದ ಕಡೆಗೆ ಕಾರು ಪ್ರಯಾಣಿಸುತ್ತಿದ್ದು, ಎಲ್ಲಾ ಲೇನ್ಗಳನ್ನು ದಾಟಿ, ಹಂಪ್ ಮೇಲೆ ವೇಗವಾಗಿ ಏರಿತ್ತು. ಈ ಕಾರಣದಿಂದ ಕನಿಷ್ಟ 20 ಅಡಿಗಳಷ್ಟು ಮೇಲಕ್ಕೆ ಹಾರಿ ಸೇತುವೆಯ ಮುಂದೆ ಇದ್ದ ಮರಗಳಿಗೆ ಕಾರು ಅಪ್ಪಳಿಸಿದೆ. ಗುಜಾರಾತ್ ಮೂಲದ ಮೂವರು ಮಹಿಳೆಯರು ಈ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗುಜರಾತ್ನ ಆನಂದ್ ಜಿಲ್ಲೆಯ ರೇಖಾಬೆನ್ ಪಟೇಲ್ , ಸಂಗೀತಾಬೆನ್ ಪಟೇಲ್ ಹಾಗೂ ಮನೀಶಾಬೆನ್ ಪಟೇಲ್ ಅವರು ಇಹಲೋಕ ತ್ಯಜಿಸಿದವರಾಗಿದ್ದಾರೆ.
ಕಾರು ನಿಗದಿಪಡಿಸಿದ ವೇಗದ ಮಿತಿಗಿಂತ ಹೆಚ್ಚು ವೇಗದಲ್ಲಿತ್ತು ಎಂದು ಅಲ್ಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಪಘಾತದ ಪ್ರಮಾಣ ಎಷ್ಟಿತ್ತು ಮತ್ತು ಕಾರು ಎಷ್ಟು ಎತ್ತರಕ್ಕೆ ಹಾರಿತ್ತು ಅನ್ನೋದಿಕ್ಕೆ ಮರದ ಮೇಲಿರುವ ಕಾರಿನ ಅವಶೇಷಗಳು ಸಾಕ್ಷಿ ಎಂದು ಅವರು ಹೇಳಿದ್ದಾರೆ. ಮರದ ಮೇಲೆ ಬಿದ್ದ ಕಾರು ಛಿದ್ರಗೊಂಡು ಕಾರಿನ ಅವಶೇಷಗಳು ಚೆಲ್ಲಾಪಿಲ್ಲಿಯಾಗಿತ್ತು.
ದಕ್ಷಿಣ ಕೆರೊಲಿನಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಕ್ಷಣ ಸ್ಥಳಕ್ಕೆ ರಕ್ಷಣಾ ತಂಡಗಳು, ಪೊಲೀಸರು ಆಗಮಿಸಿದ್ದಾರೆ. ಅಪಘಾತದಲ್ಲಿ ಓರ್ವ ಬದುಕಿ ಉಳಿದಿದ್ದು, ಆತನ ಸ್ಥಿತಿ ಗಂಭೀರವಾಗಿದ್ದು ಈಗಲೇ ಏನೂ ಹೇಳಲು ಆಗದ ಪರಿಸ್ಥಿತಿಯಲ್ಲಿದ್ದಾನೆ. ವಾಹನ ಅಪಘಾತವಾದ ತಕ್ಷಣ ಅದರಲ್ಲಿದ್ದ ತಾಂತ್ರಿಕ ವ್ಯವಸ್ಥೆಯ ಕಾರಣ ತಕ್ಷಣ ಕುಟುಂಬ ಸದಸ್ಯರಿಗೆ ಅಲರ್ಟ್ ಮೆಸೆಜ್ ರವಾನೆಯಾಗಿತ್ತು. ಹೀಗಾಗಿ ತಕ್ಷಣ ಕುಟುಂಬಸ್ಥರು ಕೂಡಾ ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ.
- FILM6 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM6 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- chikkamagaluru6 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!
- FILM7 days ago
ಶೈನ್ ಶೆಟ್ಟಿ, ಅಂಕಿತಾ ಜಸ್ಟ್ ಮ್ಯಾರೀಡ್..!! ಅಭಿಮಾನಿಗಳಿಗೆ ಖುಷಿ