Thursday, August 11, 2022

ಬಂಟ್ವಾಳ: ಜೀವನ್ಮರಣ ಹೋರಾಟದಲ್ಲಿದ್ದ ಚಿರತೆಯೊಂದರ ರಕ್ಷಣೆ-ಪಿಲಿಕುಳ ನಿಸರ್ಗಧಾಮಕ್ಕೆ ಹಸ್ತಾಂತರ

ಬಂಟ್ವಾಳ: ಉರುಳಿಗೆ ಬಿದ್ದು ಜೀವನ್ಮರಣ ಹೋರಾಟದಲ್ಲಿದ್ದ ಚಿರತೆಯೊಂದನ್ನು ಅರಣ್ಯ ಇಲಾಖೆಯ ಅಧಿಕಾರಿ ರಾಜೇಶ್ ನೇತೃತ್ವದಲ್ಲಿ ಸ್ಥಳೀಯರ ಸಹಕಾರದೊಂದಿಗೆ ಅರಣ್ಯ ಇಲಾಖೆಯವರು ರಕ್ಷಿಸಿ ಪಿಲಿಕುಳ ನಿಸರ್ಗಧಾಮಕ್ಕೆ ಹಸ್ತಾಂತರ ಮಾಡಿದ್ದಾರೆ.


ಬಂಟ್ವಾಳದ ಅಲ್ಲಿಪಾದೆ ಸಮೀಪದ ದೇವಶ್ಯಪಡೂರು ಗ್ರಾಮದ ಬೀಜಪ್ಪಾಡಿ ಎಂಬಲ್ಲಿ ಕಾಡಿನಲ್ಲಿ ಯಾರೋ ಇಟ್ಟಿದ್ದ ಉರುಳಿಗೆ ಸುಮಾರು 6 ವರ್ಷ ಪ್ರಾಯದ ಗಂಡು ಚಿರತೆಯೊಂದು ಉರುಳಿಗೆ ಬಿದ್ದಿರುವುದನ್ನು ಸ್ಥಳೀಯರು ಗಮನಿಸಿ ಅರಣ್ಯ ಇಲಾಖೆಯವರ ಗಮನಕ್ಕೆ ತಂದಿದ್ದರು.

ಕೂಡಲೇ ಸ್ಥಳಕ್ಕೆ ಧಾವಿಸಿದ ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್ ನೇತೃತ್ವದಲ್ಲಿ ರಾತ್ರಿ ಸುಮಾರು 9 ಗಂಟೆಯಿಂದ ಮುಂಜಾನೆ 4 ಗಂಟೆವರೆಗೆ ಕಾರ್ಯಚರಣೆ ನಡೆಸಿ ಚಿರತೆಯನ್ನು ರಕ್ಷಣೆ ಮಾಡಿದ್ದರು.

ಅದನ್ನು ಪಿಲಿಕುಳ ನಿಸರ್ಗಧಾಮಕ್ಕೆ ಕೊಂಡೊಯ್ಯುವಾಗ ದಾರಿ ಮಧ್ಯೆ ಚಿರತೆಯ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ವಾಪಾಸು ಚಿರತೆಯನ್ನು ವಗ್ಗ ವೈದ್ಯಾಧಿಕಾರಿ ಅವಿನಾಶ್ ಅವರ ಬಳಿಗೆ ಬಂದು ತೋರಿಸಿದಾಗ ಚಿಂತಾಜನಕ ಸ್ಥಿತಿಯಲ್ಲಿದ್ದ ಚಿರತೆ ಸಾವನ್ನಪ್ಪಿದ ಬಗ್ಗೆ ದೃಢಪಡಿಸಿದರು.

ಚಿರತೆ ಉರುಳಿಗೆ ಸಿಕ್ಕ ಗಾಯಗೊಂಡು ಸಾವನ್ನಪ್ಪಿದ ಕಾರಣ ಬಂಟ್ವಾಳ ಅರಣ್ಯ ಇಲಾಖೆಯ ಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಆರೋಪಿಗಳ ಪತ್ತೆಗಾಗಿ ಅರಣ್ಯ ಇಲಾಖೆ ಮುಂದಾಗಿದೆ.

ಸಾವನ್ನಪ್ಪಿದ ಚಿರತೆಯನ್ನು ವಗ್ಗ ಆಸ್ಪತ್ರೆಯ ಲ್ಲಿ ಪೋಸ್ಟ್‌ ಮಾರ್ಟಮ್ ಮಾಡಿ ಬಳಿಕ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತದೆ ಎಂದು ಅರಣ್ಯ ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್ ತಿಳಿಸಿದರು.

ಈ ಸಂದರ್ಭ ವೈದ್ಯಾಧಿಕಾರಿ ಯಶಸ್ವಿ, ಇಲಾಖೆಯ ಅಧಿಕಾರಿಗಳಾದ ಪ್ರೀತಂ, ಅರಣ್ಯ ರಕ್ಷಕರಾದ ಲಕ್ಮೀನಾರಾಯಣ, ಜಿತೇಶ್, ವಾಚರ್ ಪ್ರವೀಣ್, ಚಾಲಕ ಜಯರಾಮ ಸಂಕೇತ ಹಾಗೂ ಸ್ನೇಕ್ ಕಿರಣ್ ಸಹಾಯದಲ್ಲಿ ರಕ್ಷಣೆ ಮಾಡಲಾಯಿತು.

 

LEAVE A REPLY

Please enter your comment!
Please enter your name here

Hot Topics

ಪ್ರವೀಣ್ ಹತ್ಯೆ ಪ್ರಕರಣ: ಪ್ರಮುಖ ಮೂವರು ಆರೋಪಿಗಳ ಬಂಧನ-ಗೌಪ್ಯ ಸ್ಥಳದಲ್ಲಿ ತೀವ್ರ ವಿಚಾರಣೆ

ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಕೊನೆಗೂ ಪೊಲೀಸರು ಬಂಧಿಸಿದ್ದು, ಗೌಪ್ಯ ಸ್ಥಳದಲ್ಲಿ ಅವರನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.ಶಿಯಾಬ್, ಬಶೀರ್, ರಿಯಾಝ್ ಎಂದು...

ಕೃಷಿಕರೇ ಗಮನಿಸಿ: ಕಿಸಾನ್ ಸಮ್ಮಾನ್ ನಿಧಿಯ ಪರಿಹಾರಕ್ಕಾಗಿ ಆ. 15 ರೊಳಗೆ ಇ-ಕೆವೈಸಿ ಕಡ್ಡಾಯ

ಮಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ನಾಗರಿಕರ ಸೇವಾ ಕೇಂದ್ರದಲ್ಲಿ ಬಯೋಮೆಟ್ರಿಕ್ ಆಧಾರಿತವಾಗಿ ಅಥವಾhttp://pmkisan.gov.in ಪೋರ್ಟಲ್‌ನ ಫಾರ್ಮರ್ಸ್ ಕೋರ್ನರ್ ಮೂಲಕ ಆಧಾರ್ ಸಂಖ್ಯೆ ಹಾಗೂ ಮೊಬೈಲ್...

ಕಾಲು ಜಾರಿ ಹೊಳೆಗೆ ಬಿದ್ದ ಸನ್ನಿಧಿಯ ಅಂತ್ಯಕ್ರಿಯೆ: ಮುಗಿಲು ಮುಟ್ಟಿದ ಕುಟುಂಬಸ್ಥರು-ಸ್ನೇಹಿತರ ಆಕ್ರಂದನ

ಬೈಂದೂರು: ಕಾಲು ಜಾರಿ ಹೊಳೆಗೆ ಬಿದ್ದು ಮೃತಪಟ್ಟ ಬಾಲಕಿ ಸನ್ನಿಧಿ ಮೃತದೇಹ ಎರಡು ದಿನಗಳ ಬಳಿಕ ಪತ್ತೆಯಾಗಿದ್ದು, ಈಕೆ ಅಂತ್ಯ ಕ್ರಿಯೆಯನ್ನು ಮನೆ ಸಮೀಪದಲ್ಲೇ ನಿನ್ನೆ ನೆರವೇರಿಸಲಾಗಿದೆ. ಸರ್ಕಾರಿ‌ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ...