Thursday, October 21, 2021

ಮಂಗಳೂರಿನಿಂದ ತೆರಳುತ್ತಿದ್ದ ಕೆಮಿಕಲ್‌ ಟ್ಯಾಂಕರ್‌ ಸ್ಫೋಟ: ಹೊತ್ತಿ ಉರಿದ ಹಳ್ಳ, ಭತ್ತದ ಗದ್ದೆ

ಉತ್ತರಕನ್ನಡ: ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಇಂದು ಬೆಳಗಿನ ಜಾವ ಕೆಮಿಕಲ್ ಟ್ಯಾಂಕರ್ ಸ್ಫೋಟಗೊಂಡಿದ್ದು, ಸುಮಾರು ದೂರದವರೆಗೂ ಬೆಂಕಿ ಆವರಿಸಿದೆ.


ಪೇಂಟ್‌ಗೆ ಬಳಸುವ ‘ಪೆಂಜೈನ್’ ರಾಸಾಯನಿಕವನ್ನು ಮಂಗಳೂರಿನಿಂದ ಮುಂಬೈಗೆ ಟ್ಯಾಂಕರ್‌ನಲ್ಲಿ ಸಾಗಿಸಲಾಗುತ್ತಿತ್ತು.

ಕಡಿದಾದ ತಿರುವಿನಲ್ಲಿ ಟ್ಯಾಂಕರ್ ಪಲ್ಟಿಯಾಗಿ ಸೋರಿದ ರಾಸಾಯನಿಕವು ಪಕ್ಕದ ಹಳ್ಳ ಹಾಗೂ ಕಾಲುವೆಗಳಲ್ಲಿ ಹರಿದಿದೆ.

ಯಾವುದೋ ಕಾರಣಕ್ಕೆ ಇದಕ್ಕೆ ಬೆಂಕಿ ತಗುಲಿದ್ದು ಹಳ್ಳವೇ ಹೊತ್ತಿ ಉರಿದಿದೆ.

ಬೆಂಕಿ ಟ್ಯಾಂಕರ್‌ಗೂ ತಗುಲಿದೆ. ಹಳ್ಳದ ಭತ್ತದ ಗದ್ದೆ, ಪಂಪ್ ಸೆಟ್ ಸುಟ್ಟು ಕರಕಲಾಗಿವೆ.

ತೋಟದಲ್ಲಿದ್ದ ಗಿಡಗಳಿಗೂ ಬೆಂಕಿ ತಗುಲಿದೆ.

ಟ್ಯಾಂಕರ್ ಚಾಲಕ, ಸಹ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಟ್ಯಾಂಕರ್ ಅಪಘಾತವಾಗುತ್ತಿದ್ದಂತೆ, ಸೋರಿದ ರಾಸಾಯನಿಕಕ್ಕೆ ಬೆಂಕಿ ತಗುಲಿದ ಸದ್ದು ಒಂದೆರಡು ಕಿಲೋಮೀಟರ್‌ವರೆಗೂ ಕೇಳಿಸಿದೆ.

ಮನೆಗಳಲ್ಲಿದ್ದ ಜನ ಗಾಬರಿಯಿಂದ ಹೊರ ಬಂದು ನೋಡಿದರೆ ಹಳ್ಳ ಹೊತ್ತಿ ಉರಿಯುತ್ತಿರುವ ದೃಶ್ಯ ಕಂಡು ಬಂದು ಕಂಗಾಲಾಗಿದ್ದಾರೆ ಅಪಘಾತ ಸ್ಥಳಕ್ಕೆ ಶಿರಸಿ ಡಿ.ಎಸ್.ಪಿ. ರವಿ ನಾಯ್ಕ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಯಲ್ಲಾಪುರ ಪಿ.ಐ. ಸುರೇಶ್ ಯಳ್ಳೂರ್ ಮಾರ್ಗದರ್ಶನದಲ್ಲಿ, ಪಿ.ಎಸ್.ಐ ಪ್ರಿಯಾಂಕಾ ನ್ಯಾಮಗೌಡ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ಅಗ್ನಿಶಾಮಕ ಸಿಬ್ಬಂದಿ ಪರಿಸ್ಥಿತಿ ತಹಬದಿಗೆ ತರಲು ನೆರವಾದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...