Monday, January 24, 2022

ತಮಿಳುನಾಡಿನಲ್ಲಿ ರಣಭೀಕರ ಮಳೆ: ನಿರಾಶ್ರಿತ ಯುವಕನನ್ನು ಹೆಗಲ ಮೇಲೆ ಹೊತ್ತೊಯ್ದ ರಿಯಲ್‌ ಲೇಡಿ ಸಿಂಗಂ..!

ಚೆನ್ನೈ: ತಮಿಳುನಾಡಿನಲ್ಲಿ ಎಡಬಿಡದೆ ಧಾರಾಕಾರ ಮಳೆಯಾಗುತ್ತಿದೆ. ಧಾರಾಕಾರ ಮಳೆಗೆ ಇದುವರೆಗೂ 14 ಮಂದಿ ಜೀವ ಕಳೆದುಕೊಂಡಿದ್ದಾರೆ. ಈ ಮಧ್ಯೆ

ರಾಜಧಾನಿ ಚೆನ್ನೈನಲ್ಲಂತೂ ಭಾರೀ ಮಳೆ ರಸ್ತೆಗಳು ಜಲಾವೃತಗೊಂಡಿವೆ. ವಾಹನ ಸಂಚಾರ ಸ್ಥಗಿತಗೊಂಡಿದೆ. ಹೀಗಿರುವಾಗಲೇ ಸುಮಾರು 11 ಎನ್​ಡಿಆರ್​ಎಫ್​ ಮತ್ತು 7 ಎಸ್​ಡಿಆರ್​ಎಫ್​ ತಂಡಗಳು ಜನರ ರಕ್ಷಣಾ ಕಾರ್ಯ ಮುಂದುವರಿಸಿದ್ದಾರೆ.


ಇನ್ನು, ಚೆನ್ನೈನಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದ ನಿರಾಶ್ರಿತ ವ್ಯಕ್ತಿಯೋರ್ವನನ್ನು ಮಹಿಳಾ ಪೊಲೀಸ್ ಅಧಿಕಾರಿ ರಾಜೇಶ್ವರಿ ಎಂಬುವರು ಹೆಗಲ ಮೇಲೆ ಹೊತ್ತುಕೊಂಡು ಬಂದು ರಕ್ಷಿಸಿದ್ದಾರೆ.

ಹೆಗಲ ಮೇಲೆ ಹೊತ್ತುಕೊಂಡು ನಿರಾಶ್ರಿತ ವ್ಯಕ್ತಿಯನ್ನು ರಕ್ಷಿಸಿದ ಮಹಿಳಾ ಪೊಲೀಸ್​​ ಅಧಿಕಾರಿ ವಿಡಿಯೋ ಈಗ ಸೋಷಿಯಲ್​​ ಮೀಡಿಯಾದಲ್ಲಿ ಭಾರೀ ವೈರಲ್​​ ಆಗಿದೆ.


ಈ ವಿಡಿಯೋ ಟ್ವೀಟ್​​ ಮಾಡಿರುವ ಐಎಎಸ್​​ ಅಧಿಕಾರಿ ಸುಪ್ರಿಯಾ ಸಾಹು, ಮಹಿಳಾ ಪೊಲೀಸ್​​ ಅಧಿಕಾರಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಡಿಯೋ ಸಿಕ್ಕಾಪಟೆ ವೈರಲ್ ಆಗಿದ್ದು, ನೆಟ್ಟಿಗರು ರಾಜೇಶ್ವರಿ ಅವರನ್ನು ಭಾರೀ ಕೊಂಡಾಡಿದ್ದಾರೆ.

ಮಹಿಳಾ ಅಧಿಕಾರಿ ತನ್ನ ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಆಟೋದಲ್ಲಿ ಮಲಗಿಸಿ ಆತನನ್ನು ಆಸ್ಪತ್ರೆಗೆ ಕರೆದೊಯ್ಯುವ ದೃಶ್ಯ ಇದಾಗಿದೆ.

Hot Topics

‘ಸುಳ್ಳುಗಳ ಮೂಲಕ ನಾರಾಯಣಗುರುವಿಗೆ ಮಾಡಿದ ಅಪಚಾರವನ್ನು ಮುಚ್ಚಿಟ್ಟುಕೊಳ್ಳಲಾಗದು’

ಮಂಗಳೂರು: ಸುಳ್ಳುಗಳ ಮೂಲಕ ಸಾಮಾಜಿಕ ಸುಧಾರಣೆಯ ಹರಿಕಾರ  ನಾರಾಯಣ ಗುರು ಅವರಿಗೆ ಮಾಡಿದ ಅಪಚಾರವನ್ನು ಬಿಜೆಪಿ ಮುಚ್ಚಿಟ್ಟುಕೊಳ್ಳಲಾಗದು ಎಂದು ಸಿಪಿಐಎಂ ಹೇಳಿದೆ.ಕೇರಳ ರಾಜ್ಯ ಸರಕಾರ ಸೂಚಿಸಿದ ನಾರಾಯಣಗುರು ಇರುವ ಸ್ಥಬ್ದ ಚಿತ್ರವನ್ನು ಪರಿಗಣಿಸದೇ...

‘ಪುಷ್ಪ’ ಸಿನಿಮಾ ನೋಡಿ ಅಪ್ರಾಪ್ತರಿಂದ ಯುವಕನ ಬರ್ಬರ ಹತ್ಯೆ- ಕೃತ್ಯದ ವೀಡಿಯೋ ಚಿತ್ರೀಕರಣ

ನವದೆಹಲಿ: ಟಾಲಿವುಡ್‌ನ ಅಲ್ಲು ಅರ್ಜುನ್‌ ನಟನೆಯ ಸೂಪರ್‌ ಹಿಟ್‌ 'ಪುಷ್ಪ' ಸಿನಿಮಾ ನೋಡಿ ಅದರಿಂದ ಪ್ರಭಾವಿತರಾಗಿ ಯುವಕನನ್ನು ಮೂವರು ಆರೋಪಿಗಳು ಬರ್ಬರವಾಗಿ ಥಳಿಸಿ ಹತ್ಯೆ ಮಾಡಿದ ಆಘಾತಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ.ಕೊಲೆಗೀಡಾದ ಯುವಕ...

ಮಲಗಿದ್ದ ಅತ್ತೆಯನ್ನು ಸುತ್ತಿಗೆಯಿಂದ ಹೊಡೆದು ಕೊಂದ ಸೊಸೆ

ಚಿತ್ರದುರ್ಗ: ಅತ್ತೆ-ಸೊಸೆ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರೋ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ರಾಮಜೋಗಿಹಳ್ಳಿಯಲ್ಲಿ ನಡೆದಿದೆ.ರುದ್ರಮ್ಮ(60) ಹತ್ಯೆಗೀಡಾದ ದುರ್ದೈವಿಯಾಗಿದ್ದು, ಆರೋಪಿ ಸೊಸೆ ಮುದ್ದಕ್ಕ (38)ಳನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ. ಅತ್ತೆ-ಸೊಸೆ ನಡುವೆ ಹೊಂದಾಣಿಕೆ...