Monday, August 15, 2022

ಸಿಎಂ ಬೊಮ್ಮಾಯಿ ಹಾಗೂ ಮಗನಿಗೆ ಕೋವಿಡ್ ಪಾಸಿಟಿವ್: ಆಸ್ಪತ್ರೆಗೆ ದಾಖಲು-ಆರೋಗ್ಯ ವಿಚಾರಿಸಿದ ಸಿದ್ದು

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೋವಿಡ್ 19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕ್ವಾರಂಟೈನ್​ನಲ್ಲಿದ್ದು ನಾನು ಆರೋಗ್ಯವಾಗಿದ್ದೇನೆಂದು ತಿಳಿಸಿ ಟ್ವೀಟ್ ಮಾಡಿದ್ದಾರೆ. ಹಾಗೂ ಇವರ ಪುತ್ರ ಭರತ್ ಬೊಮ್ಮಾಯಿಗೂ ಕೂಡ ಕೊರೋನಾ ಸೋಂಕು ದೃಢಪಟ್ಟಿದೆ.

 

 

ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಟ್ವೀಟ್​ ಮೂಲಕ ಮಾಹಿತಿ ನೀಡಿ ಮನವಿ ಮಾಡಿಕೊಂಡಿದ್ದಾರೆ. ಇವರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಸ್ವಯಂ ಐಸೊಲೇಶನ್‌ಗೆ ಒಳಗಾಗಿದ್ದಾರೆ.

ಬೆಂಗಳೂರಿನ ಹಳೆ ಮದ್ರಾಸ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಹಾಗೂ ಚಿಕಿತ್ಸೆಗೆ ಒಳಪಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಿಎಂ ಬಸವರಾಜ ಬೊಮ್ಮಾಯಿಗೆ ಕೊರೊನಾ ದೃಢ ಪಟ್ಟ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರು ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದರು.

ಮುಖ್ಯಮಂತ್ರಿಯ ಅಧಿಕೃತ ಕಾರ್ಯಕ್ರಮಗಳನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ. ನಾಳೆಯಿಂದ ಮೂರು ದಿನಗಳ ಕಾಲ ನಿಗದಿಯಾಗಿದ್ದ ಕಾವೇರಿ ಕಾಮಗಾರಿ ಪರಿಶೀಲನಾ ಸಭೆಗಳು ಕೂಡಾ ರದ್ದುಗೊಂಡಿವೆ.

ನಿನ್ನೆ ಮುಖ್ಯಮಂತ್ರಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು.

ಸಾಹಿತಿ ಡಾ. ಚಂದ್ರಶೇಖರ ಪಾಟೀಲ ಅಂತ್ಯಕ್ರಿಯೆಯಲ್ಲಿ ಭಾಗಿ ಆಗಿದ್ದರು. ಬೂಸ್ಟರ್​ ಡೋಸ್ ಕೊರೊನಾ ಲಸಿಕೆ ಕಾರ್ಯಕ್ರಮವನ್ನು ಕೂಡ ಉದ್ಘಾಟಿಸಿದ್ದರು.

ಆಡಳಿತ ಸುಧಾರಣೆ ಕುರಿತು ಸಭೆ ನಡೆಸಿದ್ದರು. ವಿಶ್ರಾಂತ ಕುಲಪತಿಗಳ ನಿಯೋಗದ ಜತೆ ಸಭೆಯಲ್ಲಿ ಭಾಗಿಯಾಗಿದ್ದರು. ಈ ಮಧ್ಯೆ, ಬಸವರಾಜ ಬೊಮ್ಮಾಯಿ ಕೊರೊನಾ ಪಾಸಿಟಿವ್ ಆಗಿದ್ದಾರೆ ಎಂದು ತಿಳಿದುಬಂದಿದೆ

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಬಾಲಕಿಯ ಅತ್ಯಾಚಾರ ಪ್ರಕರಣ ಸಾಬೀತು- ಅಪರಾಧಿಗೆ 7 ವರ್ಷ ಕಠಿಣ ಶಿಕ್ಷೆ

ಮಂಗಳೂರು: ಪರಿಶಿಷ್ಟ ಜಾತಿಯ ಅಪ್ರಾಪ್ತೆಯನ್ನು ಅತ್ಯಾಚಾರ ಮಾಡಿದ ಆರೋಪ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೋಕ್ಸೋ) ಎಫ್.ಟಿ.ಎಸ್.ಸಿ-1 ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಅಪರಾಧಿ ಮಂಗಳೂರಿನ ಸುಧಾಕರ ಪೂಜಾರಿ ಎಂಬಾತನಿಗೆ 7 ವರ್ಷ ಕಠಿಣ...

ದ.ಕ.ಜಿಲ್ಲಾ ಮಡಿವಾಳರ ಸಂಘ, ರಜಕ ಯೂತ್‌ : ಸ್ವಾತಂತ್ರ್ಯ ಸಂಭ್ರಮ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಮಡಿವಾಳರ ಸಂಘ (ರಿ) ಮಂಗಳೂರು ಮತ್ತು ರಜಕ ಯೂತ್ ಮಂಗಳೂರು ಸಹಭಾಗಿತ್ವದಲ್ಲಿ ಆಝಾದಿ ಕಾ ಅಮೃತ್ ಮಹೋತ್ಸವದ ಹಿನ್ನೆಲೆಯಲ್ಲಿ ಸಂಘದ ಜಿಲ್ಲಾ ಕಚೇರಿಯಲ್ಲಿ ಸ್ವಾತಂತ್ರ್ಯ ಸಂಭ್ರಮದ...

“ಇಂದು ಸೂರ್ಯಾಸ್ತದೊಳಗೆ ನಿಯಮಬದ್ಧವಾಗಿ ಧ್ವಜವನ್ನು ಸುರಕ್ಷಿತವಾಗಿ ಮಡಚಿಡಿ”

ಮಂಗಳೂರು: ಸ್ವಾತಂತ್ರ್ಯದ ಆಚರಣೆಯು ಈಗಾಗಲೇ ಮುಗಿದಿದ್ದು, ಇಂದು ಸಂಜೆ ಸೂರ್ಯಾಸ್ತಮಾನದೊಳಗೆ ನಿಯಮಬದ್ಧವಾಗಿ ತ್ರಿವರ್ಣ ಧ್ವಜವನ್ನು ಸುರಕ್ಷಿತವಾಗಿ ಮಡಚಿಡುವಂತೆ ಎಲ್ಲಾ ಸಾರ್ವಜನಿಕರಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚನೆ ನೀಡಿದ್ದಾರೆ.ಈ ಬಗ್ಗೆ...