Connect with us

ಸಮೃದ್ಧ ಕರ್ನಾಟಕ ನಿರ್ಮಾಣಕ್ಕಾಗಿ ನಮ್ಮ ಬಜೆಟ್: ರಾಜ್ಯಾಧ್ಯಕ್ಷ ನಳಿನ್ ಉವಾಚ

Published

on

ಸಮೃದ್ಧ ಕರ್ನಾಟಕ ನಿರ್ಮಾಣಕ್ಕಾಗಿ ನಮ್ಮ ಬಜೆಟ್: ರಾಜ್ಯಾಧ್ಯಕ್ಷ ನಳಿನ್ ಉವಾಚ

ಬೆಂಗಳೂರು: ಗ್ರಾಮ ಮಟ್ಟದಿಂದ ಬೆಂಗಳೂರಿನವರೆಗಿನ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು 2020 ಮುಂಗಡ ಪತ್ರವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಂಡಿಸಿದ್ದಾರೆ’ ಎಂದು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಮಹಾದಾಯಿ ಯೋಜನೆಗೆ 500 ಕೋಟಿ ಮತ್ತು ಇತರೆ ನೀರಾವರಿ ಯೋಜನೆಗಳಿಗೆ ಅತೀ ಹೆಚ್ಚು ಹಣವನ್ನು ನೀಡುವ ಮೂಲಕ ರಾಜ್ಯ ಸರ್ಕಾರವು ನೀರಾವರಿ ಯೋಜನೆಗೆ ನೀಡಿರುವ ಆದ್ಯತೆಯನ್ನು ಎತ್ತಿ ಹಿಡಿದಿದೆ. ಕೃಷಿ, ಮೂಲಸೌಕರ್ಯ, ಪ್ರವಾಸೋದ್ಯಮ ಮತ್ತು ಬೆಂಗಳೂರು ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಕೈಗಾರಿಕಾ ಹೂಡಿಕೆದಾರರ ಬಹುಮುಖ್ಯ ಬೇಡಿಕೆಯಾದ ಕೈಗಾರಿಕಾ ಸ್ಥಾಪನೆಗೆ ನೇರವಾಗಿ ರೈತರಿಂದ ಜಮೀನು ಖರೀದಿ ಮಾಡಲು ಇದ್ದ ಸಮಸ್ಯೆಗೆ ಪರಿಹಾರವನ್ನು ಒದಗಿಸಲಾಗಿದೆ. ಇದರಿಂದ ವಿಶ್ವದ ಕೈಗಾರಿಕೋದ್ಯಮಿಗಳು ಕರ್ನಾಟಕದಲ್ಲಿ ಹೂಡಿಕೆ ಮಾಡಲು ಸಹಕಾರಿಯಾಗಿದೆ. ಅಲ್ಲದೇ ಇದರಿಂದ ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಅತೀ ಹೆಚ್ಚು ಉದ್ಯೋಗ ನಿರ್ಮಾಣವಾಗಲಿದೆ.

ಇಷ್ಟೇ ಅಲ್ಲದೇ ರಾಜ್ಯದಲ್ಲೇ ಮೊಟ್ಟ ಮೊದಲ ಬಾರಿಗೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ವಿವಿಧ ಇಲಾಖೆಗಳ ಸಮನ್ವಯ ಸಾಧಿಸಲು ಇಲಾಖಾವಾರು ವಿಂಗಡಿಸದೆ 6 ವಲಯಗಳನ್ನಾಗಿ ವಿಂಗಡಿಸಿ ಆಯವ್ಯಯ ಮಂಡನೆ ಮಾಡಿ ಹೊಸ ದಿಕ್ಕನ್ನು, ಮುಖ್ಯಮಂತ್ರಿ ಯಡಿಯೂರಪ್ಪ ಬಜೆಟ್ ಮೂಲಕ ನೀಡಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಸಂತಸ ವ್ಯಕ್ತಪಡಿಸಿದ್ದಾರೆ.

ಸದ್ಯ ಇತ್ತೀಚೆಗೆ ಸಿಎಂ ಮಂಡಿಸಿರುವ ಬಜೆಟ್ ನಲ್ಲಿ ಸಮೃದ್ಧ ಕರ್ನಾಟಕ ನಿರ್ಮಾಣಕ್ಕಾಗಿ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

LATEST NEWS

ಮೊಸಳೆ ತಲೆ ಬುರುಡೆ ಕಳ್ಳ ಸಾಗಣೆ ಯತ್ನ; ಕೆನಡಾ ಮೂಲದ ವ್ಯಕ್ತಿ ಅರೆಸ್ಟ್

Published

on

ಮಂಗಳೂರು/ನವದೆಹಲಿ : ಮೊಸಳೆಯ ತಲೆಬುರುಡೆ ಕಳ್ಳಸಾಗಣೆಗೆ ಯತ್ನಿಸಿದ ಆರೋಪದಲ್ಲಿ ಕೆನಡಾ ಮೂಲದ ವ್ಯಕ್ತಿಯನ್ನು ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಟರ್ಮಿನಲ್ 3ರಲ್ಲಿ ಕೆನಡಾ ಮೂಲದ ವ್ಯಕ್ತಿ ಮಾಂಟ್ರಿಯಲ್‌ಗೆ ವಿಮಾನ ಹತ್ತಲು ಯತ್ನಿಸುತ್ತಿದ್ದಾಗ ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಮೊಸಳೆಯ ಮರಿಯನ್ನು ಹೋಲುವ ಸುಮಾರು 770 ಗ್ರಾಂ ತೂಕದ ಚೂಪಾದ ಹಲ್ಲುಗಳನ್ನು ಹೊಂದಿರುವ ತಲೆಬುರುಡೆ ಪತ್ತೆಯಾಗಿದೆ.

ದೆಹಲಿ ಸರ್ಕಾರದ ಅಧೀನದಲ್ಲಿರುವ ಅರಣ್ಯ ಮತ್ತು ವನ್ಯಜೀವಿ ಇಲಾಖೆಯು ನಡೆಸಿದ ಶೋಧ ಕಾರ್ಯದಲ್ಲಿ ಅದು ಮೊಸಳೆ ಮರಿಯ ತಲೆಬುರುಡೆ ಎಂಬುದಾಗಿ ದೃಢಪಟ್ಟಿದೆ. 1972ರ ವನ್ಯ ಜೀವಿ ಕಾಯ್ದೆಯಡಿಯಲ್ಲಿ ಸಂರಕ್ಷಿತ ಜಾತಿಗೆ ಸೇರಿದ ತಲೆಬುರುಡೆ ಇದಾಗಿದೆ. ಹೆಚ್ಚಿನ ವೈಜ್ಞಾನಿಕ ತಪಾಸಣೆಗಾಗಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.

 

Continue Reading

LATEST NEWS

ಶರಣಾದ ನಕ್ಸಲರನ್ನು NIA ವಿಶೇಷ ಕೋರ್ಟ್ ಗೆ ಹಾಜರುಪಡಿಸಿದ ಪೊಲೀಸರು!

Published

on

ಬೆಂಗಳೂರು: ಸಮಾಜದ ಮುಖ್ಯ ವಾಹಿನಿಗೆ ಬರಲು ನಿರ್ಧರಿಸಿ ನಿನ್ನೆ ಮೋಸ್ಟ್ ವಾಂಟೆಡ್ 6 ಜನ ನಕ್ಸಸಲರು ಬೆಂಗಳೂರಿನ ಗೃಹಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾದರು. ಬಳಿಕ ಅವರನ್ನ ವಶಕ್ಕೆ ಪಡೆದ ಪೊಲೀಸರು ಇಂದು ಅವರನ್ನು ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟಿಗೆ ಹಾಜರುಪಡಿಸಿದ್ದಾರೆ.

ಹೌದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಸಂಕಿರಣದ ಎನ್ಐಐ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ನಕ್ಸಲರನ್ನು ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಪೊಲೀಸರು ಇದೀಗ ಹಾಜರುಪಡಿಸಿದ್ದಾರೆ. ಇದಕ್ಕೂ ಮೊದಲು 6 ಜನರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಬಳಿಕ ಎನ್ಐಎ ವಿಶೇಷ ಕೋರ್ಟ್ ಮುಂದೆ ಇದೀಗ ಹಾಜರುಪಡಿಸಿದ್ದಾರೆ.

Continue Reading

LATEST NEWS

ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

Published

on

ಮಂಗಳೂರು/ಬೆಂಗಳೂರು : ಅತ್ಯಾ*ಚಾರ, ಅಶ್ಲೀ*ಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್ ನೀಡಿದೆ. ಈ ಮೂಲಕ ಹಲವು ತಿಂಗಳುಗಳ ಬಳಿಕ ಪ್ರಜ್ವಲ್ ರೇವಣ್ಣಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲಾಯಿತು.

ಈ ಸಂದರ್ಭ ಆರೋಪ ನಿಗದಿ ಮಾಡದಂತೆ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಡೆ ನೀಡಿದೆ. ಮುಂದಿನ ಆದೇಶದ ವರೆಗೆ ಆರೋಪ ನಿಗದಿ ಮಾಡದಂತೆ ಹೈಕೋರ್ಟ್ ಸೂಚನೆ ನೀಡಿ, ಜ.16ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ಅ*ತ್ಯಾಚಾರ ಆರೋಪ ಹಾಗೂ ಪೆನ್ ಡ್ರೈವ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಜನವರಿ 13ಕ್ಕೆ ವಿಚಾರಣಾಧೀನ ಕೋರ್ಟ್‌ನಲ್ಲಿ ಆರೋಪ ನಿಗದಿ ಮಾಡುವುದಕ್ಕೆ ನಿಗದಿಯಾಗಿತ್ತು. ಇದನ್ನು ಪ್ರಶ್ನಿಸಿ ಪ್ರಜ್ವಲ್ ಪರ ವಕೀಲರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ಪ್ರಜ್ವಲ್‌ಗೆ ಸ್ವಲ್ಪ ರಿಲೀಫ್ ಕೊಟ್ಟಿದೆ.

ಇದನ್ನೂ ಓದಿ : ಫ್ರಿಡ್ಜ್‌ನಲ್ಲಿ ನಿಂಬೆಹಣ್ಣಿನ ತುಂಡನ್ನು ಇಟ್ಟರೆ ಏನಾಗುತ್ತೆ ಗೊತ್ತಾ..?

2024ರಲ್ಲಿ ಲೋಕಸಭೆ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದಂತೆ ಅಶ್ಲೀ*ಲ ವೀಡಿಯೋಗಳು ವೈರಲ್ ಆಗಿದ್ದವು. ಇದು ದೇಶವನ್ನೇ ಬೆಚ್ಚಿ ಬೀಳಿಸಿತ್ತು. ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿತ್ತು.

 

Continue Reading

LATEST NEWS

Trending

Exit mobile version