Saturday, February 4, 2023

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ನಿಯೋಗದಿಂದ ಮುಖ್ಯಮಂತ್ರಿ ಭೇಟಿ..

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ನಿಯೋಗದಿಂದ ಮುಖ್ಯಮಂತ್ರಿ ಭೇಟಿ..!

ಬೆಂಗಳೂರು: ಹೊಸ ಶಿಕ್ಷಣ ನೀತಿಯಲ್ಲಿ ಒಂದನೆಯ ತರಗತಿಯಿಂದ ಐದನೆಯ ತರಗತಿಯವರೆಗೆ ಕೊಂಕಣಿ ಮಾತೃಭಾಷಾ ಮಾಧ್ಯಮದಲ್ಲಿ ಶಿಕ್ಷಣದ ಸಹಿತ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿತು.

ಡಿಸೆಂಬರ್ 10, ಗುರುವಾರದಂದು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ನಿಯೋಗವು ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಬಿ.ಎಸ್.ಯಡಿಯೂರಪ್ಪನವರನ್ನು ಬೇಟಿ ಮಾಡಿತು. ಆರನೆಯ ತರಗತಿಯಿಂದ ಸ್ನಾತಕೋತ್ತರ ಪದವಿಯವರೆಗೆ ಕೊಂಕಣಿ ಭಾಷೆಯಲ್ಲಿ ಕಲಿಕೆ, ಡಿ.ಎಡ್, ಬಿ.ಎಡ್, ಎಂ.ಎಡ್. ತರಗತಿಗಳಲ್ಲಿ ಕೊಂಕಣಿ ಭಾಷೆ ಅಳವಡಿಕೆ, ವಿವಿಧ ಹಂತಗಳಲ್ಲಿ ಕೊಂಕಣಿ ಭಾಷಾ ಶಿಕ್ಷಕರ ನೇಮಕಾತಿಯೇ ಮೊದಲಾದ ಬೇಡಿಕೆಗಳನ್ನು ಮುಖ್ಯ ಮಂತ್ರಿ ಯಡಿಯೂರಪ್ಪ ನವರು ಸಹಾನುಭೂತಿಯಿಂದ ಆಲಿಸಿದರು. ಹೊಸ ಶಿಕ್ಷಣ ನೀತಿಯನ್ವಯ ಮಾತೃಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣದ ಬೇಡಿಕೆ ಸಮಂಜಸವಾದುದು ಎಂದು ತಿಳಿಸಿದರು.

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಡಾಕ್ಟರ್ ಕೆ. ಜಗದೀಶ್ ಪೈಯವರ ನೇತೃತ್ವದ ಮುಖ್ಯಮಂತ್ರಿಗಳನ್ನು ಭೇಟಿಯಾದ ನಿಯೋಗದಲ್ಲಿ, ಅಕಾಡೆಮಿಯ ಸದಸ್ಯರಾದ ಸಾಣೂರು ನರಸಿಂಹ ಕಾಮತ್, ಅರುಣ್ ಶೇಟ್, ನವೀನ್ ನಾಯಕ್ ಮತ್ತು ಗುರುಮೂರ್ತಿ ಶೇಟ್ ರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Hot Topics

ಮಂಗಳೂರು : ಸುರತ್ಕಲಿನಿಂದ ಕೆಲಸಕ್ಕೆ ತೆರಳಿದ್ದ ಯುವತಿ ಕಾವೇರಿ ಮಿಸ್ಸಿಂಗ್..!

ಮಂಗಳೂರು: ಯುವತಿಯೊಬ್ಬಳು ನಾಪತ್ತೆಯಾಗಿರುವ ಕುರಿತು ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಯುವತಿ ತಡಂಬೈಲ್‌ ಗ್ರಾಮದ ಜಯಶ್ರೀ ಶೆಟ್ಟಿ ಎಂಬವರ ಮಗಳು ಕಾವೇರಿ(19) ಎಂದು ತಿಳಿದು ಬಂದಿದೆ.ಜ.27ರಂದು ಮನೆಯಿಂದ ಕೆಲಸಕ್ಕೆಂದು ತೆರಳಿದವರು...

ಮುಲ್ಕಿ : ಇಬ್ಬರ ಸಾವಿಗೆ ಕಾರಣರಾದ ತುಳು ಕಾಮಿಡಿಯನ್ ಅರ್ಪಿತ್ ಅರೆಸ್ಟ್..!

ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ಮಂಗಳವಾರ ಮಧ್ಯರಾತ್ರಿ ಕಾರುಡಿಕ್ಕಿ ಹೊಡೆದು ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು ಓರ್ವ ಗಂಭೀರ ಗಾಯಗೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ...

ಮಂಗಳೂರು ಮುಸ್ಲಿಂ ಯುವಕನನ್ನು ವರಿಸಿದ ನೆದರ್ಲೆಂಡ್ ಕ್ರೈಸ್ತ ಕನ್ಯೆ..!

ಪ್ರೀತಿ ಎಂಬ ಮಾಯೆಗೆ ಅಂತರವಿಲ್ಲ,ಜಾತಿ - ಪಂಗಡವಿಲ್ಲ, ಭಾಷೆ ಬೇಕಿಲ್ಲ ಪ್ರೀತಿಸುವ ಮನಸ್ಸುಗಳಿದ್ದರೆ ಸಾಕು, ಯಾರಿಗೆ, ಯಾವಾಗ, ಯಾರಮೇಲಾದರೂ ಎಲ್ಲಿ ಬೇಕಾದರೂ ಪ್ರೀತಿ ಹುಟ್ಟಬಹುದು. ಮಂಗಳೂರು: ಪ್ರೀತಿ ಎಂಬ ಮಾಯೆಗೆ ಅಂತರವಿಲ್ಲ,ಜಾತಿ - ಪಂಗಡವಿಲ್ಲ,...