ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಈ ಹೈಡ್ರಾಮಾ ನಡೆದಿದೆ.
ಮೂಡಿಗೆರೆಯಲ್ಲಿ ಶಾಸಕ ಎಂ.ಪಿ. ಕುಮಾರಸ್ವಾಮಿ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಷ್ಟೇ ಅಲ್ಲದೇ ಕುಮಾರಸ್ವಾಮಿ ಬೇಡವೇ ಬೇಡ. ಹೊಸ ಮುಖಕ್ಕೆ ಟಿಕೆಟ್ ಕೊಡಿ ಅಂತಾ ಕೂಗಾಟ ನಡೆಸಿದ ನೂರಾರು ಕಾರ್ಯಕರ್ತರು ನಡುರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು.
ಈ ವೇಳೆ ಅದೇ ಮಾರ್ಗದಲ್ಲಿ ಬರುತ್ತಿದ್ದ ಬಿಎಸ್‍ವೈ ಅವರನ್ನು ಅಡ್ಡಗಟ್ಟಿ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆ ವೇಳೆ 1,000ಕ್ಕೂ ಅಧಿಕ ಬಿಜೆಪಿ ಮುಖಂಡರು ಹಾಗೂ ನಾಯಕರು ಭಾಗಿಯಾಗಿದ್ದರು.
ಈ ವೇಳೆ ಶಾಸಕ ಕುಮಾರಸ್ವಾಮಿಯನ್ನು ಪೊಲೀಸರು ಬೇರೆ ಕಡೆ ಕರೆದೊಯ್ದಿದ್ದಾರೆ. ಘಟನೆ ಬೆನ್ನಲ್ಲೇ ಸಿಟ್ಟಾದ ಮಾಜಿ ಸಿಎಂ ಬಿಎಸ್‍ವೈ ರೋಡ್ ಶೋ ರದ್ದುಗೊಳಿಸಿ, ಹೆಲಿಪ್ಯಾಡ್‍ಗೆ ಹೋಗಿದ್ದಾರೆ.
ಸಿಟಿ ರವಿ ವಿರುದ್ದವೂ ಆಕ್ರೋಶ..
ಪದೇಪದೇ ಮಾಜಿ ಬಿಎಸ್ ಯಡಿಯೂರಪ್ಪ ಮತ್ತು ಅವರ ಪುತ್ರ ವಿಜಯೇಂದ್ರ ಹೇಳಿಕೆಗಳಿಗೆ ಪರೋಕ್ಷವಾಗಿ ಟಾಂಗ್ ಕೊಡುತ್ತಿರುವುದಕ್ಕೆ ವೀರಶೈವ ಲಿಂಗಾಯತ ಸಂಘಟನೆ ಕೋಪಗೊಂಡಿದ್ದು, ಸಿಟಿ ರವಿ ಚುನಾವಣೆ ಪ್ರಚಾರದಲ್ಲಿ ಕಂಡು ಬಂದರೆ ಮುತ್ತಿಗೆ ಹಾಕಬೇಕು. ‘ಕಿತ್ತೋದ ಸಿ.ಟಿ ರವಿ’ ಎಂದು ಘೋಷಣೆ ಕೂಗಬೇಕು ಪತ್ರಿಕಾ ಪ್ರಕಟಣೆ ಮೂಲಕ ಕರೆ ಕೊಟ್ಟಿದೆ.
ಅಲ್ಲದೇ ಲಿಂಗಾಯತ ಸಮಾಜಕ್ಕೆ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಒಂದು ವಾರದಲ್ಲಿ ನಿಮ್ಮ ಮನೆಗೆ ಬಂದು ಹೋರಾಟ ಮಾಡುತ್ತೇವೆ ಎಂದು ಸಿಟಿ ರವಿಗೆ ಎಚ್ಚರಿಕೆ ನೀಡಿದೆ.
ಈ ಮಧ್ಯೆ ಸಿಟಿ ರವಿ ಹೇಳಿಕೆ ಬಗ್ಗೆ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ಅವರು ಹಾಗೆಲ್ಲ ಹೇಳಿಕೆ ನೀಡಬಾರದು.
ಅವರನ್ನು ಕರೆಸಿ ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.
ಆ ರಿತಿಯ ಯಾರೂ ಮಾತನಾಡಬಾರದು. ಪಕ್ಷವನ್ನು ಅಧಿಕಾರಕ್ಕೆ ತರಬೇಕಾದರೆ ಎಲ್ಲರ ಸಹಕಾರವೂ ಮುಖ್ಯ. ಸಿಟಿ ರವಿ ಆ ರೀತಿಯ ಹೇಳಿಕೆ ನೀಡಿದ್ದಾರೆ ಎಂದಾದರೆ ಅದು ತಪ್ಪು.
ಅವರನ್ನು ಕರೆಸಿಕೊಂಡು ಮಾತನಾಡುವೆ ಎಂದು ಬಿಎಸ್‍ವೈ ಹೇಳಿದ್ದಾರೆ.